ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸ್ಸಾಂನಲ್ಲಿ ನಡೆದ ನ್ಯಾಷನಲ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಇಲ್ಲಿನ ಕಶ್ಚಿ ಚೆಸ್ ಸ್ಕೂಲ್ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಹೊಸ ದಾಖಲೆ ಬರೆದಿದ್ದಾರೆ. ಸತತ ಒಂಬತ್ತು ಸುತ್ತುಗಳಲ್ಲಿ ಸೋಲರಿಯದೆ ಹೊಸ ವರ್ಷಕ್ಕೆ ಹೊಸ ಮುನ್ನುಡಿ ಬರೆದಿದ್ದಾರೆ. ಬಿಹಾರ, ಅಸ್ಸಾಂ, ಕೇರಳ, ತೆಲಂಗಾಣ, ರಾಜಸ್ತಾನ ರಾಜ್ಯಗಳ ರೇಟಿಂಗ್ ಚೆಸ್ ಕ್ರೀಡಾಪಟುಗಳನ್ನು ಸೋಲಿಸುವುದರ ಮೂಲಕ ಬೆಳ್ಳಿ ಪದಕ ಗಳಿಸಿ ಕರ್ನಾಟಕ ರಾಜ್ಯದ ಚೆಸ್ ಕ್ರೀಡಾಪಟುಗಳಲ್ಲಿ ಭರವಸೆಯ ಧ್ರುವತಾರೆಯಾಗಿಯಾಗಿ ಮೂಡಿಬಂದಿದ್ದಾರೆ ಎಂದು ಚೆಸ್ ಸ್ಕೂಲ್ನ ಪ್ರಕಟಣೆ ತಿಳಿಸಿದೆ. ಈಕೆ ತಾಲೂಕಿನ ಸಲ್ವಾಡಿಯ ಗ್ರಾಮದ ಶ್ರೀಕಾಂತ್ ಶೆಟ್ಟಿ ಹಾಗೂ ಉಷಾಲತಾ ಶೆಟ್ಟಿ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ 50 ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅದರ ಸೂಕ್ಷ್ಮ ಅಧ್ಯಯನವನ್ನು ಮಾಡಲಾಯಿತು. ಮಣಿಪಾಲದ ಉದಯವಾಣಿ ಮುದ್ರಣಾಲಯ ಮುಖ್ಯಸ್ಥರು ವಿದ್ಯಾರ್ಥಿಗಳ ಈ ಭೇಟಿಯಿಂದ ನೈಜ ಅಧ್ಯಯನ ಹಾಗೂ ಸಮಾಜಮುಖಿಗಳಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಉದಯ ಅಲ್ಯುಮೀನಿಯಂ ಘಟಕ ಮಣಿಪಾಲದ ವ್ಯವಸ್ಥಾಪಕರಾದ ಹೇಮಂತ್ ಕುಮಾರ್ ಅವರು ಅಲ್ಯುಮೀನಿಯಂ ಹಾಗೂ ಸ್ಟೀಲ್ನ ವಿವಿಧ ಪರಿಕರಗಳ ಉತ್ಪಾದನಾ ಹಂತಗಳನ್ನು ಸ್ಥೂಲವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕದಲ್ಲಿ ಅಲ್ಲಿಯ ಸಿಬ್ಬಂದಿಯವರು ಹಾಲು ಹಾಗೂ ಅದರ ಸಹ – ಉತ್ಪನ್ನಗಳ ಸಂಸ್ಕರಣೆಯ ವಿವಿಧ ಮಜಲುಗಳನ್ನು ವಿವರವಾಗಿ ತಿಳಿಸಿದರು. ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ. ಹಾಗೂ ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್. ಅವರು ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಮೆಸ್ಕಾಂ ಇಲಾಖೆ ಹೊಸ ವರ್ಷದಲ್ಲಿ ವಿದ್ಯುತ್ ಶಾಕ್ ನೀಡಿದೆ ಎಂದು ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈ ಹಿಂದೆ ಸಿಂಗಲ್ ಪೇಸ್ ಹಳೆಯ ಮೀಟರಿಗೆ 936 ರೂಪಾಯಿ ಇತ್ತು ಆದರೆ ಈಗ ಹೊಸ ಸ್ಮಾರ್ಟ್ ಮೀಟರ್ ನ್ನು ಖಾಸಗಿಯವರ ಮೂಲಕ ಖರೀದಿ ಮಾಡಿ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕಕ್ಕೆ ಬಳಸುವ ಸ್ಮಾರ್ಟ್ ಮೀಟರ್ ದರ 4,785 ರೂಪಾಯಿ. ಅದೇ ತ್ರೀ ಫೇಸ್ ವಿದ್ಯುತ್ ಸಂಪರ್ಕ ಪಡೆಯಲು ಹಿಂದೆ ಮೀಟರ್ ದರ 2300 ರೂಪಾಯಿ ಇತ್ತು ಅದೇ ಈಗ ಹೊಸ ಸ್ಮಾರ್ಟ್ ಮೀಟರ್ ದರ 8400 ರೂಪಾಯಿ. ಇದು ತಾತ್ಕಾಲಿಕ ಸಂಪರ್ಕ ಪಡೆಯುವ ಹಾಗೂ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ರೈತರು ಹಾಗೂ ಜನಸಾಮಾನ್ಯರಿಗೆ ಅನಗತ್ಯ ಹೊರೆಯಾಗಲಿದೆ. ಈ ಸ್ಮಾರ್ಟ್ ಮೀಟರ್ ನ ಮುಂದುವರಿದ ಭಾಗವಾಗಿ ಮುಂದೆ ಮೆಸ್ಕಾಂ ಇಲಾಖೆ ಪ್ರಿಪೆಯ್ಡ್ ವ್ಯವಸ್ಥೆ ವಿದ್ಯುತ್ ಬಿಲ್ ಜಾರಿಗೆ ತಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಗೋಳಿಯಂಗಡಿ ವಿ ಲೈಕ್ ಬ್ಯೂಟಿ ಪಾರ್ಲರ್ ಮಾಲಕಿ ವನಿತಾ ಅವರು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸಲಕರಣೆಗಳನ್ನು ವಿತರಿಸಿ, ಮಾತನಾಡಿ, ತಾನು ಇದೇ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದು, ಅನುಭವವನ್ನು ಪಡೆದುಕೊಂಡು ಇದೀಗ 2 ಪಾರ್ಲರ್ ಗಳನ್ನು ಹೊಂದಿ ಯಶಸ್ವಿಯಾಗಿ ಮುಂದುವರಿಯುತ್ತಿದ್ದೇನೆ. ಅವರು ಪಟ್ಟ ಶ್ರಮ ಹಾಗೂ ಕೆಲಸದ ಮೇಲಿನ ಆಸಕ್ತಿಯನ್ನು ಬಹಳ ವಿವರವಾಗಿ ಶಿಬಿರಾರ್ಥಿಗಳಿಗೆ ತಿಳಿಸಿದರು. ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಹೆಣ್ಣುಮಕ್ಕಳ ಆಸಕ್ತಿಯ ವಿಷಯವಾಗಿದೆ. ಈ ಉದ್ಯಮದಲ್ಲಿ ಬೇಡಿಕೆ ಎಂದಿಗೂ ಕಡಿಮೆಯಾಗುವುದಿಲ್ಲ. ಹಾಗಾಗಿ ಎಲ್ಲರಿಗೂ ಸೌಂದರ್ಯದ ಬಗ್ಗೆ ಕಾಳಜಿ ಇರುತ್ತದೆ. ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿ ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ 2025-2026ನೇ ಸಾಲಿನ ದೈಹಿಕವಾಗಿ ಅಶಕ್ತರಾಗಿರುವ 54 ಫಲಾನುಭವಿಗಳಿಗೆ ಸುಮಾರು ರೂ. ಐದೂವರೆ ಲಕ್ಷ ವೈದ್ಯಕೀಯ ನೆರವನ್ನು ಹಸ್ತಾಂತರಿಸಲಾಯಿತು. ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀರಮಣ ಉಪಾಧ್ಯಾಯರು ಮಾತನಾಡಿ, ಕಳೆದ ಮೂರು ದಶಕಗಳಿಂದಲೂ ಶ್ರೀದೇವಳವು ಸಮಾಜಮುಖಿಯಾಗಿ ತೆರೆದುಕೊಂಡಿದ್ದು, ಪ್ರತಿ ವರ್ಷವೂ ದೈಹಿಕ ಆಶಕ್ತರಿಗೆ, ದೇವಸ್ಥಾನದ ಜೀರ್ಣೋದ್ಧಾರ ಹಾಗೂ ವಿವಿಧ ಶಾಲೆಗಳು, ಸಂಘ ಸಂಸ್ಥೆಗಳಿಗೆ ಅನುದಾನವನ್ನು ಪ್ರಸಾದ ರೂಪವಾಗಿ ನೀಡುತ್ತಾ ಬಂದಿದೆ. ಪ್ರಸಾದ ರೂಪವಾಗಿ ವೈದ್ಯಕೀಯ ನೆರವನ್ನು ಪ್ರತಿ ವರ್ಷ ದೈಹಿಕ ಆಶಕ್ತರಿಗೆ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿವಿಧ ಶಾಲೆಗಳು, ಸಂಘ ಸಂಸ್ಥೆಗಳಿಗೆ ನೆರವು ಪಡೆದ ಅಶಕ್ತ ಫಲಾನುಭವಿಗಳು ಶ್ರೀ ವಿನಾಯಕನ ಅನುಗ್ರಹದಿಂದ ಶೀಘ್ರವಾಗಿ ಚೇತರಿಸಿಕೊಂಡು ಎಲ್ಲರಿಗೂ ಆಯುರಾರೋಗ್ಯ ಆನಂದ ಐಶ್ವರ್ಯವನ್ನು ಕೊಟ್ಟು ಇಷ್ಟಾರ್ಥವನ್ನು ಅನುಗ್ರಹಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ನಿವೃತ್ತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಹಾಗೂ ಸಹೋದರರು, ಕಚೇರಿಯ ಮ್ಯಾನೇಜರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸೃಷ್ಟಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದ್ದು, ಭಾರತ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿರುವುದು ಶಿಲ್ಪಕಲೆಗೆ ಅವರು ನೀಡಿರುವ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಹೊಯ್ಸಳ ಮತ್ತು ಕಲ್ಯಾಣಿ ಚಾಲುಕ್ಯ ಶೈಲಿಯ ಅದ್ಭುತ ದೇವಾಲಯಗಳನ್ನು ನಿರ್ಮಿಸಿದ ಪೌರಾಣಿಕ ಶಿಲ್ಪಿ. ಬೇಲೂರು ಮತ್ತು ಹಳೇಬೀಡಿನ ಕೆತ್ತನೆಗಳಿಗೆ ಹೆಸರುವಾಸಿಯಾದ ಇವರು, ಭಾರತೀಯ ಕಲೆಯ ಸುವರ್ಣಯುಗಕ್ಕೆ ಕೊಡುಗೆ ನೀಡಿದ್ದಾರೆ. ಇವರು ನಿರ್ಮಿಸಿದ ದೇವಾಲಯಗಳು ಅತ್ಯಂತ ಸೂಕ್ಷ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಕುಂದಾಪುರ ತಾಲೂಕಿನ ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ ಹಾಗೂ ಬ್ರಹ್ಮಾವರದ ಸಾಲಿಗ್ರಾಮ, ಕೋಟತಟ್ಟು, ಕೋಟ, ಮಣೂರು, ಪಾಂಡೇಶ್ವರ ಹಾಗೂ ಸಾಸ್ತಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಸಾರ್ವಜನಿಕ ಕುಡಿಯುವ ನೀರು ಸರಬರಾಜಿನ ಪೈಪ್ಲೈನ್ಗಳು ಹಾನಿಗೊಂಡು ಸಾರ್ವಜನಿಕರ…
