ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನಿಡಿದರು. ಪ್ರದಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವುಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಶ್ರೀನಿವಾಸ ಕುಮಾರ್, ಸತ್ಯ ಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಹಾಗೂ ಭಕ್ತಾದಿಗಳು ಹಾಜರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಹೆಬ್ರಿ : ಅಖಿಲ ಭಾರತ ತುಳುನಾಡ ದೈವರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಹೆಬ್ರಿ ಘಟಕದ ವತಿಯಿಂದ ಕೆರೆಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಮಹಾಸಭೆಯಲ್ಲಿ ಹೆಬ್ರಿ ಘಟಕದ ಮಾಧ್ಯಮ ಸಂಚಾಲಕರಾಗಿ ನೇಮಕಗೊಂಡ ಪತ್ರಕರ್ತ ಸುಕುಮಾರ್ ಮುನಿಯಾಲ್ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ ಅಖಿಲ ಭಾರತ ತುಳುನಾಡ ದೈವರಾಧಕರ ಒಕ್ಕೂಟ ಹೆಬ್ರಿ ಘಟಕದ ಅಧ್ಯಕ್ಷ ಮುದ್ರಾಡಿ ಸುಕುಮಾರ್ ಪೂಜಾರಿ ಮಾತನಾಡಿ, ದೈವರಾಧಕರ ಸಂಘಟನೆ ಇನ್ನಷ್ಟು ಬಲಗೊಳ್ಳಬೇಕಿದೆ, ಅತೀ ಹೆಚ್ಚು ಸದಸ್ಯರಾಗುವ ಮೂಲಕ ಸಂಘಟನೆಯ ಬಲವರ್ಧನೆಗೆ ಎಲ್ಲರೂ ಕೈಜೋಡಿಸಿ, ದೈವದ ಚಾಕ್ರಿಯವರ ಜೊತೆ ತಾನು ನಿರಂತರ ಇರುವುದಾಗಿ ಹೇಳಿದರು. ಗೌರವ ಸಲಹೆಗಾರ ಮಂಡಾಡಿಜಡ್ಡು ಅಣ್ಣಪ್ಪ ಕುಲಾಲ್ ಮಾತನಾಡಿ ದೈವರಾಧಕರು ಮತ್ತು ಚಾಕರಿಯವರ ಸಮಸ್ಯೆಗಳು ಸಂಘಟನೆಯ ಬಲವರ್ಧನೆಯ ಮೂಲಕ ಸರಿಯಾಗಬೇಕಿದೆ, ದೈವರಾಧಕರ ಸಹಕಾರಿ ಒಕ್ಕೂಟ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು. ಅಖಿಲ ಭಾರತ ತುಳುನಾಡ ದೈವರಾಧಕರ ಒಕ್ಕೂಟ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಅಖಿಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಏಳನೇ ದಿನದ ಕಾರಂತ ಚಿಂತನ ಮಂತನ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕಿ ಕೀರ್ತಿ ಭಟ್ ಬೈಂದೂರು ಮಾತನಾಡಿ, ಕಾರಂತರು ಬದುಕಿನುದ್ದಕ್ಕೂ ಬದುಕಿದ ರೀತಿ, ಅವರು ಅನುಸರಿಸುತ್ತಿದ್ದ ತತ್ವ ಸಿದ್ದಾಂತಗಳು ನಮ್ಮಂತಹ ಯುವ ಜನಾಂಗಕ್ಕೆ ಪ್ರೇರಕ ಶಕ್ತಿಯಾಗಿದ್ದಾರೆ, ಅಲ್ಲದೇ ಅವರು ತಮ್ಮ ಅನುಭವವನ್ನು ಬರವಣಿಗೆ ಮೂಲಕ ವ್ಯಕ್ತ ಪಡಿಸುತ್ತಿದ್ದರು ಅಂತಹ ಕಾರಂತ ನುಡಿಗಳು ಮುಂದೆ ಪಠ್ಯ ಪುಸ್ತಕದಲ್ಲಿ ಮುದ್ರಣವಾಗುವ ಕೆಲಸವಾಗಿ ವಿದ್ಯಾರ್ಥಿಗಳಲ್ಲಿ ಕಾರಂತರ ಅನುಭವಗಳು ಬದುಕಿನಲ್ಲಿ ಪಾಠವಾಗಲಿ ಎಂದು ಹೇಳಿದರು. ಕಾರಂತ ಚಿಂತನ ಕಾರ್ಯಕ್ರಮದ ಬಳಿಕ ಸುಶ್ಮಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 18 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ, ಮಿಲಾಗ್ರೀಸ್ ಯುನಿವರ್ಸಿಟಿ ಕಾಲೇಜು ಮತ್ತು ಪ್ರೀ – ಯುನಿವರ್ಸಿಟಿ ಕಾಲೇಜು ಕಲ್ಯಾಣಪುರ ಉಡುಪಿ, ಡಾ.ಜಿ.ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ, ಮಹಿಳಾ ಸರ್ಕಾರಿ ಪ್ರೀ – ಯುನಿವರ್ಸಿಟಿ ಮತ್ತುಸರ್ಕಾರಿ ಪ್ರೌಢ ಶಾಲೆ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಯುನಿವರ್ಸಿಟಿ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪ್ರೀ – ಯುನಿವರ್ಸಿಟಿ ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಮೆಮೋರಿಯಲ್ ಪ್ರೀ – ಯುನಿವರ್ಸಿಟಿ ಕಾಲೇಜು ಕುಂಜಿಬೆಟ್ಟು ಉಡುಪಿ, ಮಹಾತ್ಮ ಗಾಂಧೀ ಮೆಮೋರಿಯಲ್ ಯುನಿವರ್ಸಿಟಿ ಕಾಲೇಜು ಕುಂಜಿಬೆಟ್ಟು ಉಡುಪಿ, ವಿದ್ಯೋದಯ ಪ್ರೀ – ಯುನಿವರ್ಸಿಟಿ ಕಾಲೇಜು ವಾದಿರಾಜ ರೋಡ್ ಉಡುಪಿ, ಮೌಂಟ್ ರೋಸರಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಕಲ್ಯಾಣಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಅ. 17 ರಿಂದ 26ರವರೆಗೆ ಗುರುಪರಾಶಕ್ತಿ ಮಠ, ಮರಕಡದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಜರುಗಲಿದೆ. ಅ. 17 ರಂದು ಕಲಶ ಸ್ಥಾಪನೆ, ಅ. 24 ರಂದು ಗಣಪತಿ ಪೂಜೆ, ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಅ.25 ರಂದು ರಾತ್ರಿ ರಂಗ ಪೂಜೆ ಅ. 26 ರಂದು ಕಲಶ ವಿಸರ್ಜನೆ ನಡೆಯಲಿದೆ. ಪ್ರತಿದಿನ ಸಂಜೆ 7 ರಿಂದ ವಿವಿಧ ತಂಡಗಳಿಂದ ಭಜನೆ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀದೇವಿಯ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ತಾಯಿಯ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ವಿನಂತಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಒತ್ತಿನಣೆ ಬಳಿ ರಾತ್ರಿ ರೌಂಡ್ಸ್ನಲ್ಲಿದ್ದ ಬೈಂದೂರು ಸರ್ಕಲ್ ಇನ್ಸಪೆಕ್ಟರ್ ಜೀಪು ಪಲ್ಟಿಯಾಗಿ ಬೀಟ್ನಲ್ಲಿದ್ದ ಇನ್ಸ್ಪೆಕ್ಟರ್ ಸುರೇಶ್ ನಾಯ್ಕ್ ಹಾಗೂ ಜೀಪು ಚಾಲಕ ಹೇಮರಾಜ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶಿರೂರಿನಿಂದ ಬೈಂದೂರು ಕಡೆ ಬರುತ್ತಿದ್ದ ಸಂದರ್ಭ ರಾಘವೇಂದ್ರ ಸ್ವಾಮಿ ಮಠದ ಬಳಿ ಜೀಪು ನಿಯಂತ್ರಣ ತಪ್ಪಿ ಇನ್ನೊಂದು ರಸ್ತೆಯ ಬದಿಯ ಚರಂಡಿಗೆ ಅಡಿಮೇಲಾಗಿ ಬಿದ್ದಿತ್ತು. ಜೀಪ್ನಲ್ಲಿದ್ದ ವೃತ್ತ ನಿರೀಕ್ಷಕರಾದ ಸುರೇಶ್ ನಾಯ್ಕ್ ರವರ ಕಾಲಿಗೆ ಹಾಗೂ ಜೀಪ್ ಚಾಲಕ ಹೇಮರಾಜ್ ರವರ ತಲೆ, ಕೈ, ಕಾಲಿಗೆ ಪೆಟ್ಟಾಗಿದೆ. ಅಪಘಾತದ ರಭಸಕ್ಕೆ ಜೀಪು ಸಂಪೂರ್ಣ ನಜ್ಜುಗುಜ್ಜಾಗಿದ್ದು ಜೀಪ್ನಲ್ಲಿ ಸಿಕ್ಕಿಬಿದ್ದ ಇಬ್ಬರನ್ನು ಹೊರತೆಗೆಯಲು ಸುಮಾರು ಒಂದು ತಾಸು ಕಾರ್ಯಾಚರಣೆ ಮಾಡಿ ಬಳಿಕ ಕ್ರೇನ್ ಮೂಲಕ ಜೀಪ್ ಎತ್ತಿ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಕುಂದಾಪುರ ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಟ್ರಾಫಿಕ್ ಪಿಎಸ್ಐ ಸುದರ್ಶನ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಮೈಕ್ರೋಬಯಲಾಜಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು, ಅಕ್ಟೋಬರ್ 22 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರಸಭೆಯ ಡೇ – ನಲ್ಮ್ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ಡ್ರಾಫ್ಟ್ಮೆನ್ ಮೆಕ್ಯಾನಿಕಲ್, ಫ್ಯಾಷನ್ ಡಿಸೈನರ್, ಹ್ಯಾಂಡ್ ಎಂಬ್ರೋಯ್ಡರಿ, ಸೆಲ್ಫ್ ಎಂಪ್ಲೋಯಿಡ್ ಟೇಲರ್, ಎಡಿಟರ್ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಕಾರ್ಯಕ್ರಮದ ಆರನೇ ದಿನದ ಕಾರಂತ ಚಿಂತನ ಮಂತನ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ, ಕಲಾವಿದ ಸುಜಯೀಂದ್ರ ಹಂದೆ ಮಾತನಾಡಿ, ಕಾರಂತರರು ಕಲಾವಿದರಾಗಿ, ಸಾಹಿತಿಯಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಶಿಸ್ತು, ಸಮಯಪ್ರಜ್ಞೆ ನಮಗೆಲ್ಲ ಮಾದರಿಯಾಗಿದ್ದು, ಅವರು ಯಕ್ಷಗಾನದಲ್ಲಿ ಹಲವಾರು ಪ್ರಯೋಗ ಮಾಡಿ ಯಕ್ಷಗಾನ ಶ್ರೀಮಂತಗೊಳಿಸಿದ ಕಾರಂತರು ಅವರ ಕಾದಂಬರಿಯಲ್ಲಿ ಹಾಗೂ ನಿಜ ಜೀವನದಲ್ಲಿ ಅಳವಡಿಸಿಕೊಂಡಿರುವ ಪರಿಸರದ ಮೇಲಿರುವ ವಿಶೇಷ ಕಾಳಜಿ ನಮಗೆಲ್ಲಾ ಅನುಕರಣೀಯ ಎಂದು ತಿಳಿಸಿದರು. ಕಾರಂತ ಚಿಂತನ ಕಾರ್ಯಕ್ರಮದ ಬಳಿಕ ಸಾನಿಧ್ಯ ಮೆಲೋಡಿಸ್ ,ಹವರಾಲು ಇವರಿಂದ ಸಂಗೀತ ಸುಗಂಧ ಕಾರ್ಯಕ್ರಮ ನಡೆಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಲ್ಕೂರ ಪ್ರತಿಷ್ಠಾನ ಏರ್ಪಡಿಸಿದ್ದ ಕಾರಂತರ ಕುರಿತಾದ ಪ್ರಬಂಧ ಸ್ಪರ್ಧೆಯ ಮುಕ್ತ ವಿಭಾಗದಲ್ಲಿ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್. ಗಂಗೊಳ್ಳಿಗೆ ದ್ವಿತೀಯ ಬಹುಮಾನ ಮತ್ತು ಜನಶಕ್ತಿ ವೆಬ್ ಪತ್ರಿಕೆಯ ಲೋಕಾರ್ಪಣೆ ಸಂದರ್ಭದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
