ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೊಡೇರಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ನಾಲ್ವರು ಮೀನುಗಾರರ ಮನೆಗಳಿಗೆ ಶುಕ್ರವಾರ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ರೂ. 6 ಲಕ್ಷ ಮೊತ್ತದ ತುರ್ತು ಪರಿಹಾರದ ಆದೇಶ ಪ್ರತಿಯನ್ನು ಕುಟುಂಬಿಕರಿಗೆ ಹಸ್ತಾಂತರಿಸಿದರು. ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೋಣಿ ದುರಂತದಲ್ಲಿ ಮೃತರಾದ ಮೀನುಗಾರರ ಕುಟುಂಬಗಳಿಗೆ ತುರ್ತು ಪರಿಹಾರದ ಚೆಕ್ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಹಾಗೂ ಎಲ್ಲಾ ಜನಪ್ರತಿನಿಧಿಗಳು ನಿರ್ಧರಿಸಿದ್ದರಿಂದ ಆರು ಲಕ್ಷ ರೂ. ನೀಡುವ ಬಗ್ಗೆ ಆದೇಶ ಪ್ರತಿ ನೀಡಿದ್ದೇವೆ. ಉಳಿದಂತೆ ಕುಟುಂಬಗಳಿಗೆ ಅವಶ್ಯವಿರುವ ಮನೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಗರಿಷ್ಠ ಪ್ರಯತ್ನ ಮಾಡಲಾಗುವುದು ಎಂದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ನಾಲ್ವರು ಮೀನುಗಾರರ ಕುಟುಂಬಕ್ಕೆ ಗರಿಷ್ಠ ಪರಿಹಾರ ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಬ್ರೇಕ್ ವಾಟರ್ ಕಾಮಗಾರಿ ವಿಸ್ತರಿಸುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯಮ ಹಾಗೂ ಸಹಕಾರಿ ಸಂಸ್ಥೆಗಳು ಕೋರೋನೊತ್ತರ ಆತಂಕವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನೂತನ ಶಾಖೆ ಆರಂಭಿಸಿ ಉತ್ತಮ ಠೇವಣಿ ಸಂಗ್ರಹಿಸಿರುವುದು ಶಾಘನೀಯ. ಸಂಸ್ಥೆಯಲ್ಲಿ ಮುಂದೆಯೂ ಉತ್ತಮ ವಹಿವಾಟು ನಡೆದು, ಸದಸ್ಯರು ಇದರ ಉಪಯೋಗ ಪಡೆಯುವಂತಾಗಲಿ ಎಂದು ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಶುಕ್ರವಾರ ತೆಕ್ಕಟ್ಟೆ ರಜತಾದ್ರಿ ಕಾಂಪ್ಲೆಕ್ಸ್ನಲ್ಲಿ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ 8ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ನ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಮಾತನಾಡಿ ತೆಕ್ಕಟ್ಟೆ ಶಾಖೆಗಾಗಿ ಸೂಕ್ತ ಜಾಗವನ್ನು ಗುರುತಿಸಿ, ಸುತ್ತಲಿನ ಗ್ರಾಮಕ್ಕೆ ಅನುಕೂಲವಾಗುವ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸಲಾಗಿದೆ. ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಂಸ್ಥೆಯ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಶ್ರಮಿಸಿದ್ದರಿಂದ ಎಂಟನೇ ಶಾಖೆ ಆರಂಭಿಸಲು ಸಾಧ್ಯವಾಗಿದ್ದು, ಸದಸ್ಯರ ಠೇವಣಿಗೆ ಉತ್ತಮ ಬಡ್ಡಿದರ ಹಾಗೂ ಅಗತ್ಯವುಳ್ಳವರಿಗೆ ಸಾಲಸೌಲಭ್ಯವನ್ನು ಕ್ಲಪ್ತ ಸಮಯದಲ್ಲಿ ಒದಗಿಸಿ ಸಂಸ್ಥೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ ಯಲ್ಲಿ ಸಾಲ ಮತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩ ಕೊನೆಯ ದಿನವಾಗಿದ್ದು, ಅರ್ಜಿ ಮತ್ತು ಅಗತ್ಯ ದಾಖಾಲಾತಿಗಳನ್ನು ಆನ್-ಲೈನ್ www.dbcdc.karnataka.gov.in ವೆಬ್ಸೈಟ್ ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ, ಅಥವಾ ವೆಬ್ ಸೈಟ್ ನ್ನು ಸಂಪರ್ಕಿಸುವಂತೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ದಿಂದ ಮಡಿವಾಳ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಅರಿವು ,ಶೈಕ್ಷಣಿಕ ಸಾಲ ಯೋಜನೆ ಮತ್ತು .ಗಂಗಾಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ ವಾಗಿದ್ದು, ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಆನ್-ಲೈನ್ www.dbcdc.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಕೋರಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು/ವಂಡ್ಸೆ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ನೀತಿಗಳು ರೈತರು, ಕಾರ್ಮಿಕರು ಹಾಗೂ ಬಡವರ್ಗಕ್ಕೆ ಶಾಪವಾಗಿದೆ. ದೇಶದ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಬದಲಿಗೆ, ಲಾಭದಾಯಕ ಸಂಸ್ಥೆಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮಾರಿರುವುದೇ ಮೋದಿ ಸರ್ಕಾರದ ಮಹಾನ್ ಸಾಧನೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ತಹಶೀಲ್ದಾರರ ಕಛೇರಿ ಎದುರು ಹಾಗೂ ವಂಡ್ಸೆ ಪೇಟೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತ್ಯೇಕವಾಗಿ ಆಯೋಜಿಸಿದ್ದ ಜನದ್ವನಿ – ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಸುಗ್ರಿವಾಜ್ಞೆಯ ಮೂಲಕ ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಕಾರ್ಮಿಕ ವಿರೋಧ ಕಾಯ್ದೆ ತಿದ್ದುಪಡಿ ಮಾಡಿ ರೈತರು ಹಾಗೂ ಕಾರ್ಮಿಕರನ್ನು ಬೀದಿ ತಳ್ಳುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ ಅವರು ಕೊರೋನಾ ನಿಯಂತ್ರಣದಲ್ಲಿ ವ್ಯಾಪಾಕ ಭ್ರಷ್ಟಾಚಾರ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ ಗಗನ್ನಕ್ಕೇರಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.20ರ ಗುರುವಾರ 349 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 100, ಉಡುಪಿ ತಾಲೂಕಿನ 162 ಹಾಗೂ ಕಾರ್ಕಳ ತಾಲೂಕಿನ 76ಮಂದಿಗೆ ಪಾಸಿಟಿವ್ ಬಂದಿದೆ. 11 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 159 ಸಿಂಥಮೇಟಿವ್ ಹಾಗೂ 190 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 192 ಪುರುಷರು, 157 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 130, ILI 137, ಸಾರಿ 12 ಪ್ರಕರಣವಿದ್ದು, 63 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ಅಂತರ್ಜಿಲ್ಲಾ, ಓರ್ವ ವ್ಯಕ್ತಿ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 184 ಮಂದಿ ಆಸ್ಪತ್ರೆಯಿಂದ ಹಾಗೂ 176 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 56 ವರ್ಷದ ಮಹಿಳೆ ಹಾಗೂ ಉಡುಪಿಯ 69 ವರ್ಷದ ಮಹಿಳೆ ಇಂದು ಮೃತರಾಗಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. 1,336ನೆಗೆಟಿವ್: ಈ ತನಕ ಒಟ್ಟು 61251 ಮಾದರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿ. ಕುಂದಾಪುರ ಶಾಖೆ ವತಿಯಿಂದ ಹಮ್ಮಿಕೊಂಡ ಕರೋನಾ ಜನ ಜಾಗೃತಿ ಅಭಿಯಾನಕ್ಕೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಆನಂದಪ್ಪ ನಾಯಕ್ ಹಾಗೂ ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್ ಚಾಲನೆ ನೀಡಿದರು. ಈ ಸಂದರ್ಭ ಕುಂದಾಪುರ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕುಂದಾಪುರ ಶಾಖಾ ವ್ಯವಸ್ಥಾಪಕ ಜಾನ್ಸನ್ ಮೇನೇಜಸ್, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಕುಂದಾಪುರ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿಗೆ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕೆಲವೆಡೆ ನಾಟಿಯಾದ ಭತ್ತದ ಗದ್ದೆಯ ಮೇಲೆ ನೀರಿನಲ್ಲಿ ತೇಲಿಬಂದ ಅಂತರಗಂಗೆ ಕಳೆ ಹರಡಿಕೊಂಡಿರುವುದು ರೈತರನ್ನು ಕಂಗಾಲು ಮಾಡಿದೆ. ಅಲ್ಲಿನ ಕಾಕ್ತೋಟ, ನೀರಕೆರೆ, ಚಾಟಗೋಳಿ ಪ್ರದೇಶದ ಸಾಧಮ್ಮ ಶೆಟ್ಟಿ, ಸೂಲ್ಯಣ್ಣ ಶೆಟ್ಟಿ, ಸುಖೇಶ ದೇವಾಡಿಗ ಸೇರಿದಂತೆ ಹಲವರ ಸುಮಾರು ಹತ್ತಾರು ಎಕ್ರೆ ವಿಸ್ತಾರದ ಗದ್ದೆಗಳಲ್ಲಿ ಇದು ಕಂಡುಬಂದಿದೆ. ಕಾಕ್ತೋಟದಲ್ಲಿ ಜೇಡಿ ಮಣ್ಣು ತೆಗೆದ ಸ್ಥಳದಲ್ಲಿ ಮಳೆನೀರು ತುಂಬಿಕೊಂಡಾಗ ಅಂತರಗಂಗೆ ಎಂಬ ನೀರಿನ ಮೇಲೆ ತೇಲುವ ಕಳೆ ಹುಟ್ಟಿಕೊಳ್ಳುತ್ತಿದೆ. ಹೆಚ್ಚು ಮಳೆಯಾದಾಗ ತೋಡುಗಳ ಮೂಲಕ ಹರಿಯುವ ನೀರಿನಲ್ಲಿ ಇವು ತೇಲಿಹೋಗುತ್ತವೆ ಮತ್ತು ತೋಡಿನ ಪಕ್ಕದ ಗದ್ದೆಗಳಿಗೆ ನುಗ್ಗುವ ನೆರೆ ನೀರಿನೊಂದಿಗೆ ಗದ್ದೆಯನ್ನು ಆವರಿಸುತ್ತವೆ. ಮೇಲಿನ ಮೂರೂ ಪ್ರದೇಶಗಳಲ್ಲಿ ನೀರು ಹರಿಯುವ ತೋಡಿನ ಒಂದು ಕಡೆ ಇರುವ ಹಲವು ಗದ್ದೆಗಳಲ್ಲಿ ಈಗ ಇದು ಹರಡಿಕೊಂಡಿದೆ. ಈಗ ರೈತರು ಈ ಕಳೆಯನ್ನು ಸಂಗ್ರಹಿಸಿ ಹತ್ತಿರದಲ್ಲಿ ಹರಿಯುವ ನದಿಗೆ ಎಸೆಯುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019 ನೇ ಸಾಲಿಗೆ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಮತ್ತು ಜಿಮ್ ಸ್ಥಾಪನೆಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://karunadu.karnataka.gov.in/dyes ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, 94808-86467ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಆರ್ಥಿಕ ಅಭಿವೃದ್ಧಿಗಾಗಿ , ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ-ಸೌಲಭ್ಯ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನ ಆಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಾಲಾತಿಗಳನ್ನು ನಿಗಮದ ವೆಬ್ಸೈಟ್ www.dbcdc.karnataka.gov.in ಮೂಲಕ ಸಲ್ಲಿಸಬಹುದು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಸೆಪ್ಟೆಂಬರ್ 5 ರೊಳಗೆ ಸಲ್ಲಿಸಬಹುದು .
