Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ, ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಇವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಎಂ ಟಿ ಪಬ್ಲಿಸಿಟಿ ಅಂಡ್ ಡೆವಲಪ್ಮೆಂಟ್ ವಿಭಾಗದ ಡೀನ್ ಪ್ರೊ. ಕಿಶೋರ್ ಕುಮಾರ್ ಆರೂರ್ ಹಾಗೂ ಎಕ್ಸಲೆಂಟ್ ಕಾಲೇಜಿನ ಅನೇಕ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಹಿಂಸೆ ಎನ್ನುವ ಪದ ಹಿಂಸೆಯನ್ನೇ ನೆನಪಿಸುತ್ತೆ. ಈ ಪದಕ್ಕೆ ಪರ್ಯಾಯವಾಗಿ ಬೇರೆ ಪದಗಳು ಕನ್ನಡಕ್ಕೆ ಬೇಕು. ಈ ಕುರಿತು ಪ್ರಾಜ್ಞರು ಹುಡುಕ ಬೇಕಾಗಿದೆ. ಕರಾವಳಿ ಭಾಗದಲ್ಲಿ ರಂಗ ಚಟುವಟಿಕೆಗಳು ಹೆಚ್ಚಳವಾಗಿ ನಡೆಯುತ್ತಿರುವುದು ಸಂತಸದ ವಿಷಯ. ಕಲೆ ವ್ಯವಹಾರಿಕವಾಗಿ ಇರಬಾರದು ಎಂದು ನಾಟ್ಯ ಶಾಸ್ತ್ರದಲ್ಲಿ ಪ್ರಸ್ತಾಪವಿದೆ. ಆದರೆ ಇಂದು ಹಣ ರಂಗ ಚಟುವಟಿಕೆಗೆ ಬೇಕೇ ಬೇಕಾಗಿದೆ. ಮಾಧವಿ ನಾಟಕ ಅತೀ ಕಡಿಮೆ ಹಣ ಬಳಕೆಯಿಂದ ರಂಗ ಪ್ರಯೋಗಗೊಳ್ಳುತ್ತಿರುವುದು ಗಮನಿಸಬೇಕಾದ ಸಂಗತಿ ಎಂದು ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ಹೇಳಿದರು. ಅವರು ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಹಾಗೂ ದಿಮ್ಸಾಲ್ ಮಕ್ಕಳ ನಾಟಕ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಕೈವಲ್ಯ ಕಲಾಕೇಂದ್ರ ಪ್ರಸ್ತುತಿಯ ದ್ವಿವ್ಯಕ್ತಿ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು. ನಿರ್ದೇಶಕ ಶ್ರೀಪಾದ ಭಟ್ ಮಾತನಾಡಿ, ಗಾಂಧಿಯನ್ನು ಅರ್ಧ ಹೆಣ್ಣು ಅಂತ ಕರೆದರು. ಮೌನ, ಉಪವಾಸ, ಸತ್ಯಕ್ಕಾಗಿ ಮಾಡುವ ಹಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ -ಹಸಿರು ಕೋಡಿ” 2022 ರ ಅಭಿಯಾನದ ಪ್ರಥಮ ಹಂತದ ಸ್ವಚ್ಛತಾ ಕಾರ್ಯಕ್ರಮ ಕೋಡಿಯಲ್ಲಿ ಭಾನುವಾರ ಜರುಗಿತು. ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಸ್ವಚ್ಛ ಮನಸ್ಸುಗಳಿಂದ ನೆರೆವೇರಿಸುತ್ತಿರುವ ಈ ಸ್ವಚ್ಚತಾ ಅಭಿಯಾನ, ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಯುವಕರಲ್ಲಿ ಪರಿಸರದ ಸದ್ಭಳಿಕೆ ಮತ್ತು ಸಂರಕ್ಷಣೆಯ ಕುರಿತು ಕೆಲಸ ಮಾಡುವ ಪ್ರವೃತ್ತಿಯನ್ನು ಹುಟ್ಟುಹಾಕುವದೆಂಬ ನಂಬಿಕೆ ಮತ್ತು ವಿಶ್ವಾಸವನ್ನು ಬ್ಯಾರೀಸ್ ವಿದ್ಯಾ ಸಂಸ್ಥೆಗಳ ಛೇರ್ಮನ್ ಸಯ್ಯದ್ ಮಹಮದ್ ಬ್ಯಾರಿಯವರು ವ್ಯಕ್ತಪಡಿಸಿದ್ದಾರೆ. ಈ ಕಾರ್ಯದಲ್ಲಿ ನಿರಂತರವಾಗಿ ನಮಗೆ ಸಹಕಾರವನ್ನು ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ, ಕೋಟೇಶ್ವರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಸೀತಾರಾಮ ಭಜನಾ ಮಂದಿರ ಬಳಿ ಶನಿವಾರ ಕಡಲಾಮೆ ಮೊಟ್ಟೆ ಪತ್ತೆಯಾಗಿದ್ದು, ಹ್ಯಾಚರ್ ಮೂಲಕ ರಕ್ಷಣೆ ಮಾಡಲಾಗಿದೆ. ಸೀತಾರಾಮ ಭಜನಾ ಮಂದಿರದ ಬಳಿ ಕಡಲಾಮೆ ಮೊಟ್ಟೆ ಸಿಕಿರುವುದು ಮೂರನೇ ಬಾರಿಯಾಗಿದೆ. ಮೊದಲೆರಡು ಕಡೆ ಮೊಟ್ಟೆ ಪತ್ತೆಮಾಡಿದ ಬಾಬು ಮೊಗವೀರ ಕಡಲಾಮೆ ಮೊಟ್ಟೆ ಪತ್ತೆ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ, ಆಮೆ ಮೊಟ್ಟೆ ಸಂರಕ್ಷಣೆ ಮಾಡುವ ಎಸ್‌ಎಫ್‌ಎಲ್ ಸದಸ್ಯರಿಗೆ ಹಾಗೂ ಕ್ಷೀನ್ ಕುಂದಾಪುರ ಪ್ರೊಜೆಕ್ಟ್ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಕೋಡಿ ಅರಣ್ಯ ಇಲಾಖೆ ಫಾರೆಸ್ಟ್ ರಂಜಿತ, ಎಸ್‌ಎಫ್‌ಎಲ್ ವೆಂಕಟೇಶ್, ದಿನೇಶ್ ಸಾರಂಗ, ರಾಘು ಮೊಗವೀರ, ಭರತ್ ಬಂಗೇರ, ಸಂತೋಷ ಕೋಡಿ, ಮೊಟ್ಟೆ ದೊರತ ಸ್ಥಳದ ಸುತ್ತಾ ಬಲೆ ಕಟ್ಟಿ ಹ್ಯಾಚರ್ ನಿರ್ಮಿಸಿ ರಕ್ಷಣೆ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮನಸುಗಳು ಸಂಸ್ಥೆಯಿಂದ ಹಮ್ಮಿಕೊಂಡ ‘ಸರಕಾರಿ ಶಾಲೆ ಉಳಿಸಿ ಅಭಿಯಾನ’ದ ಭಾಗವಾಗಿ ಯುವ ತಂಡವೊಂದು ಶ್ರಮದಾನದ ಮೂಲಕ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ ಬಣ್ಣ ಮಾಡಿ ಶಾಲೆಯ ಮೆರಗು ಹೆಚ್ಚಿಸಿದ್ದಾರೆ. ಜೊತೆಗೆ ಶಾಲೆಗೆ ಆಧುನಿಕ ಕಲಿಕಾ ಪರಿಕರ, ವಾಟರ್ ಫಿಲ್ಟರ್, ಫ್ಯಾನ್ ಮೊದಲಾದ ಅಗತ್ಯ ವಸ್ತುಗಳು, ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ನು, ಮಾಸ್ಕ್ ದೇಣಿಗೆಯಾಗಿ ನೀಡಿ ಸೇವಾ ಸಾರ್ಥಕ್ಯ ಮೆರೆದಿದ್ದಾರೆ. ವಿವಿಧೆಡೆ ನೌಕರರಾಗಿರುವ ತಂಡದ ಸದಸ್ಯರು ವೀಕೇಂಡ್ ರಜೆಯನ್ನು ಸದುಪಯೋಗಪಡಿಸಿಕೊಂಡು ಕನ್ನಡ ಶಾಲೆ ಉಳಿಸಿ ಅಭಿಯಾನ ನಡೆಸುತ್ತಿದೆ. ಅದರಂತೆ ಅದರಂತೆ ಕರ್ಕುಂಜೆ ಶಾಲೆಯ ಹಳೆ ವಿದ್ಯಾರ್ಥಿ ಗಣೇಶ್ ಕೊಡ್ಲಾಡಿ ಅವರ ಮನವಿ ಮೇರೆಗೆ ಕುಂದಾಪುರ ತಾಲೂಕಿನ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೂಡಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ 50ಕ್ಕೂ ಹೆಚ್ಚು ಮಂದಿಯ ತಂಡ ಶನಿವಾರ ಕರ್ಕುಂಜೆ ಶಾಲೆಯಲ್ಲಿ ಅಭಿಯಾನ ನಡೆಸಿತು. ಭಾನುವಾರದಂದು ಕೂಡಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.29: ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾನ್ ಸಿ.ಆರ್.ಝಢ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡಿದರೆ ಜಿಲ್ಲೆಯ ಜನತೆಗೆ ಕಡಿಮೆ ದರದಲ್ಲಿ ಸಾಕಷ್ಟು ಪ್ರಮಾಣದ ಉತ್ತಮ ಗುಣಮಟ್ಟದ ಮರಳು ದೊರೆಯುವ ಜೊತೆಗೆ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಸಚಿವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಸಂದರ್ಭ ಬಡಗುತಿಟ್ಟಿನ ಮೇರು ಕಲಾವಿದ ರಾಘವೇಂದ್ರ ಮಯ್ಯ ಹಾಲಾಡಿ ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್‌-2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಯ್ಯ ಅವರು, ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಕ್ಕೆ ಇದು ಸಿಕ್ಕ ಮಹಾನ್‌ ಗೌರವ. ಇದನ್ನು ನಾರ್ಣಪ್ಪ ಉಪ್ಪೂರರಿಗೆ ಅರ್ಪಿಸುತ್ತೇನೆ. ಬಡಗು ತೆಂಕು ಪರಿಭೇದ ಇಲ್ಲದೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಮಾದರಿ. ಮುಂದೆಯೂ ಕಲಾವಿದರಿಗೆ ಈ ರೀತಿಯ ಪ್ರೋತ್ಸಾಹ ಸಿಗುವ ಮೂಲಕ ಯಕ್ಷಗಾನಕ್ಕೆ ಮನ್ನಣೆ ದೊರಕಲಿ ಎಂದರು. ಶ್ರೀಕುಂದೇಶ್ವರ ದೇವರ ಕುರಿತಾದ ಪದ್ಯ ರಚಿಸಿ, ಹಾಡಿ ರಂಜಿಸಿದರು.‌ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದಿಸಿ ಮಾತನಾಡಿ, ಮಾಣಿಕ್ಯ ಮಣಿ ಬಿರುದಾಂಕಿತ, ಅಭಿನವ ಕಾಳಿಂಗ ನಾವಡ ಎಂದೇ ಪ್ರಸಿದ್ಧರಾದ ಮಯ್ಯ ಅವರು, ನಾಲ್ಕು ದಶಕಗಳ ಕಾಲ ಬಡಗು ತಿಟ್ಟಿನಲ್ಲಿ ಮೇರು ಭಾಗವತರಾಗಿ ಮೆರೆದವರು. ಅನೇಕ ಕಲಾವಿದರಿಗೆ ಪ್ರೇರಣೆಯಾಗಿರುವ ಮಹಾನ್‌ ಭಾಗವತರಿಗೆ ಸನ್ಮಾನಿಸುವ ಮೂಲಕ ಯಕ್ಷಗಾನಕ್ಕೆ ಗೌರವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಧರ್ಮದಲ್ಲಿ ಅರಿಶಿಣ ಕುಂಕುಮಕ್ಕೆ ವಿಶೇಷ ಸ್ಥಾನವಿದೆ. ಮಹಿಳೆಯ ಮುತ್ತೈದೆತನ ಅರಿಶಿಣ ಕುಂಕುಮದೊಂದಿಗೆ ಪೂರ್ಣಗೊಳ್ಳುತ್ತದೆ. ಈ ಕಾರ್ಯಕ್ರಮ ಆಯೋಜನೆಯ ಮೂಲಕ ಧರ್ಮ ಜಾಗೃತಿ, ಧಾರ್ಮಿಕ ಸಾಮರಸ್ಯದ ಜೊತೆಗೆ ಪಕ್ಷ ಸಂಘಟನೆಗೆ ಮಹಿಳೆಯರನ್ನು ಸಜ್ಜುಗೊಳಿಸಿದಂತಾಗಿದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಹೇಳಿದರು. ಅವರು ಇಲ್ಲಿನ ರೋಟರಿ ಭವನದಲ್ಲಿ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಆಯೋಜಿಸಿದ್ದ ಅರಶಿಣ ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಿಜೆಪಿ ಪಕ್ಷ ಧರ್ಮ ಹೆಸರಿನಲ್ಲಿ ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಧರ್ಮವೆನ್ನುವುದು ಯಾವುದೇ ಪಕ್ಷದ ಆಸ್ತಿಯಲ್ಲ. ಧರ್ಮ ಪಾಲನೆ ಎನ್ನುವುದು ವ್ಯಕ್ತಿಯ ವೈಯಕ್ತಿಯ ಸ್ವಾತಂತ್ರ್ಯ. ರಾಜಕೀಯ ಕಾರಣಕ್ಕೆ ಧರ್ಮವನ್ನು ಮಧ್ಯೆ ತರುವುದು ಸರಿಯಲ್ಲ ಎಂದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕೆಪಿಸಿಸಿ ಸದಸ್ಯ ರಘರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ, ವಿಕಲಚೇತನರ ಹಾಗೂ ನಾಗರಿಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಜಯಾನಂದ ಹೋಬಳಿದಾರ್, ರತ್ನ ರಮೇಶ್ ಕುಂದರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿಯವರಾದ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.27: ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ಇತ್ಯಾದಿ ವಿವರಗಳನ್ನು ಇದು ಒಳಗೊಂಡಿರುತ್ತದೆ. ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ನೋಂದಾಯಿಸಿ, ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಗುರುತಿಸಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಣಿಯಾಗಬಹುದಾಗಿದೆ. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿ ಮಾಡುವ ವಿಧಾನ: 16 ರಿಂದ 59 ವರ್ಷದೊಳಗಿನ, ಆದಾಯ ತೆರಿಗೆ ಪಾವತಿಸದೇ ಇರುವ, ಭವಿಷ್ಯನಿಧಿ ಹಾಗೂ…

Read More