Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೊಡ್ಲಾಡಿ ಮಾರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಅಂಗವಾಗಿ ಏರ್ಪಡಿಸಿದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಎಮ್. ಆನಂದ ಶೆಟ್ಟಿ ಉದ್ಘಾಟಿಸಿದರು. ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್‌ಕಾರ್ಸ್ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಶುಭಕರ ಆಚಾರಿ, ಆಜ್ರಿ ಗ್ರಾಪಂ ಅಧ್ಯಕ್ಷ ಅಶೋಕ್ ಕುಲಾಲ್, ಗುರಿಕಾರ ಅಣ್ಣಯ್ಯ ನಾಯ್ಕ್ ಮರ್ಜಿ, ಮುಖ್ಯೋಪಾಧ್ಯಾಯನಿ ಗೌರಿ ಬಾಯ್, ಗ್ರಾಪಂ ಸದಸ್ಯ ಪ್ರವೀಣ ಕುಮಾರ್ ಶೆಟ್ಟಿ, ರತ್ನಾಕರ ನಾಯ್ಕ್, ಗಾಯತ್ರಿ, ಗ್ರಾಪಂ ಮಾಜಿ ಅಧ್ಯಕ್ಷ ಕೊಡ್ಲಾಡಿ ಶುಭಾಶ್ಚಂದ್ರ ಶೆಟ್ಟಿ, ರಾಮ ಮೊಗವೀರ ಹೊಲದಮನೆ, ಚಂದ್ರಶೇಖರ ಶೆಟ್ಟಿ, ಶಶಿಕಾಂತ್ ಹತ್ವಾರ್, ಎಸ್ಡಿಎಂಸಿ ಅಧ್ಯಕ್ಷ ಗಜೇಂದ್ರ ನಾಯ್ಕ್ ಹಳೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರಿನ ಒಳ ಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದಲೇ ಇದರ ನಿರ್ವಹಣೆ ಮಾಡಲಾಗುತ್ತಿದೆ. ಕೊಲ್ಲೂರು ಪರಿಸರದ ಶೇ.90 ರಷ್ಟು ವಾಣಿಜ್ಯ ಹಾಗೂ ಗೃಹ ಬಳಕೆಗಾಗಿ ನೀರಿನ ಸಂಪರ್ಕ ನೀಡಲಾಗಿದ್ದು, ಪ್ರಸ್ತುತ ಯಾವುದೇ ಕಲುಷಿತ ನೀರು ಸೌಪರ್ಣಿಕ ನದಿಯನ್ನು ಸೇರುತ್ತಿಲ್ಲ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹೇಳಿದ್ದಾರೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಬೇಸಿಗೆ ಕಾಲ ಹಾಗೂ ವರ್ಷದ ಇತರ ದಿನಗಳಲ್ಲಿ ಕಾಣಿಸಿಕೊಳ್ಳುವ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ರೂಪಿಸಿರುವ ಯೋಜನೆಯೂ ಪೂರ್ಣಗೊಂಡಿದ್ದು, ಯೋಜನೆಯ ಶೇ.90 ರಷ್ಟು ಫಲಾನುಭವಿಗಳು ಈಗಾಗಲೇ ಇದರ ಸಂಪರ್ಕ ಪಡೆದುಕೊಂಡಿದ್ದಾರೆ. ಅಂದಾಜು 2 ಕೋಟಿ ವೆಚ್ಚದಲ್ಲಿ ಹೈದರ್‌ಬಾದ್ ಹೋಟೇಲ್ ಉದ್ಯಮಿ ಕೃಷ್ಣಮೂರ್ತಿ ಮಂಜರು ವೀರಭಧ್ರ ಗುಡಿಯ ನಿರ್ಮಾಣ ಕಾರ್ಯ ಮಾಡುತ್ತಿದ್ದು, ಸಂಪೂರ್ಣ ವಾಸ್ತುಶಿಲ್ಪದೊಂದಿಗೆ ನಿರ್ಮಿಸುವ ಈ ಗುಡಿಯ ಕಾರ್ಯಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎನ್ನುವ ವೈಶಿಷ್ಟ್ಯ ಹೊಂದಿದೆ. ಸಂವಿಧಾನ ಅನುಷ್ಠಾನ ಹಾಗೂ ಸಾಗಿಬಂದ ಹಾದಿ ಸ್ಮರಿಸುವ, ನಾಳೆಗಳ ಯೋಚಿಸುವ ಸಂದರ್ಭದ ಪುಣ್ಯದಿನ ಗಣರಾಜ್ಯೋತ್ಸವ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ನವ ನಿರ್ಮಾಣ ಮಾಡುವ ನಮ್ಮ ಹಿರಿಯರ ಆಶಯಕ್ಕೆ ಚಾಲನೆ ನೀಡಿದ ದಿನವೂ ಗಣರಾಜ್ಯೋತ್ಸವ ದಿನವಾಗಿದೆ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಕಚೇರಿ, ತಾಲೂಕು ಪಂಚಾಯಿತಿ, ಪುರಸಭೆ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಸಂವಿಧಾನವು, ಜನತೆ ಹಕ್ಕುಗಳ ಮೂಲವಾಗಿ ಸಮರ್ಪಿತವಾಗಿದ್ದು, ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಬದುಕಿನಲ್ಲಿ ಸಮಾನತೆ ಇದ್ದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎನ್ನುವ ತತ್ವದ ಮೇಲೆ ಆಧಾರಿತವಾಗಿದೆ ಎಂದರು. ಕರೋನಾ ನಡುವೆಯೇ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಲಯಗಳಿಗೆ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ಕರಾವಳಿ ಭೌಗೋಳಿಕ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬುಧವಾರ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಜರುಗಿತು. ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯವಾದುದು, ಹಿಂದುಳಿದ ವರ್ಗಗಳ ಮುಖ್ಯಮಂತ್ರಿಗಳನ್ನು ಕರ್ನಾಟಕಕ್ಕೆ ನೀಡಿದ ಪಕ್ಷ ನಮ್ಮದು, ಹಿಂದುಳಿದ ವರ್ಗಗಳು ನಮ್ಮ ಪಕ್ಷದ ಆಸ್ತಿ ಎಂದರು. ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಣಿಕಂಠ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ, ಬ್ಲಾಕ್ ಕಾರ್ಯದರ್ಶಿ ಜಗದೀಶ್ ದೇವಾಡಿಗ, ಅರವಿಂದ ಪೂಜಾರಿ, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಸುಬ್ರಹ್ಮಣ್ಯ ಪೂಜಾರಿ, ಜಿಲ್ಲಾ ಘಟಕದ ರಾಮಚಂದ್ರ ಖಾರ್ವಿ, ಮೋಹನ್ ಪೂಜಾರಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಹಾಗೂ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಗಣೇಶ ಪೂಜಾರಿ ಅವರು ಸ್ವಾಗತಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ದೇಶ ಹಲವು ಭಾಷಾ ಸಂಸ್ಕ್ರತಿಯ ತವರೂರಾಗಿದೆ. ಈ ದೇಶದ ಸಂವಿಧಾನ ಜಾಗತಿಕ ಮಟ್ಟದಲ್ಲಿ ಗೌರವ ಪಡೆದುಕೊಂಡ ಹೆಗ್ಗಳಿಕೆ ಹೊಂದಿದ್ದು. ಪರಸ್ಪರ ಐಕ್ಯತೆ ಮೂಲಕ ಭವ್ಯ ಭಾರತ ನಿರ್ಮಿಸಲು ಪ್ರತಿಯೊಬ್ಬರು ಕಟಿಬದ್ದರಾಗಬೇಕಾಗಿದೆ ಎಂದು ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್. ಹೇಳಿದರು. ಇಲ್ಲಿನ ತಾಲೂಕು ಆಡಳಿತ ಕಛೇರಿ ವತಿಯಿಂದ ಬುಧವಾರ ಬೈಂದೂರು ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡ 73ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಉಪತಹಶೀಲ್ದಾರ ಭೀಮಪ್ಪ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ, ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್, ಬೈಂದೂರು ಠಾಣಾಧಿಕಾರಿ ಪವನ್ ನಾಯಕ್, ಯಡ್ತರೆ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ಬಿಲ್ಲವ, ಪ್ರಭಾಕರ ಟೀಚರ್, ಗ್ರಾಮ ಲೆಕ್ಕಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯ ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವದಂದು ನಡೆದ ಪಥಸಂಚಲನದಲ್ಲಿ ಭಾರತೀಯ ಕರಾವಳಿ ಕಾವಲು ಪಡೆಯ ಡೆಪ್ಯೂಟಿ ಕಮಾಂಡೆಂಟ್ ಹೆಚ್. ಟಿ. ಮಂಜುನಾಥ್ ಅವರು ತಮ್ಮ ತಂಡವನ್ನು ಮುನ್ನಡೆಸಿದ್ದಾರೆ. ಕುಂದಾಪರ ತಾಲೂಕಿನ ಕುಂಭಾಶಿಯವರಾದ ಹೆಚ್. ಟಿ ಮಂಜುನಾಥ್ ಅವರು ಕಳೆದ ಕೆಲವು ವರ್ಷಗಳಿಂದ ಭಾರತಿಯ ಕರಾವಳಿ ಕಾವಲು ಪಡೆಯ ಡೆಪ್ಯೂಟಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದು, ಗಣರಾಜ್ಯೋತ್ಸವದಂದು ನಡೆದ ಪಥ ಸಂಚಲನದ್ದಲ್ಲಿ ಭಾರತಿಯ ಕರಾವಳಿ ಕಾವಲು ಪಡೆಯ ನೇತೃತ್ವ ವಹಿಸಿ ಮುನ್ನೆಡೆಸಿದ್ದರು. ಅವರು ನಿವೃತ್ತ ಪಿ.ಎಸ್.ಐ ಟಿ. ಎನ್ ತಿಮ್ಮಪ್ಪ ಹಾಗೂ ವಿಜಯಲಕ್ಮ್ಷೀ ಅವರ ಪುತ್ರರಾಗಿದ್ದಾರೆ. ಹೆಚ್. ಟಿ. ಮಂಜುನಾಥ್ ಹಾಗೂ ವಿದ್ಯಾರಾಣಿ ಎ. ದಂಪತಿಗಳಿಗೆ ಒರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಮಾರು ಐದು ನೂರು ವರ್ಷಗಳ ಇತಿಹಾಸ ಹೊಂದಿರುವ ಬೈಂದೂರಿನ ಯಡ್ತರೆಯ ನಾಕಟ್ಟೆಯ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಗರ್ಭಗೃಹ ಸಮರ್ಪಣೆ ಹಾಗೂ ಇಲ್ಲಿನ ಪ್ರಧಾನ ಶಕ್ತಿಗಳಾದ ಶ್ರೀಬ್ರಹ್ಮ, ಶ್ರೀಯಕ್ಷೆ, ಕೋಟಿ ಚೆನ್ನಯ್ಯ, ದೇಯಿಬೈದೆದಿ, ಮಾಯಿಂದಾಲೆ, ಹಾಗುಳಿ ಸಹಿತ ಹಲವು ಶಕ್ತಿಗಳಿಗೆ ಸಾನಿಧ್ಯ ಪ್ರತಿಷ್ಠಾಪನೆ ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ, ಆಗಮ ಪಂಡಿತ ಕೇಂಜ ಶ್ರೀಧರ ತಂತ್ರಿಯವರ ಮಾರ್ಗದರ್ಶನದಲ್ಲಿ ಸೋಮವಾರ ವೈಭವದಿಂದ ಜರುಗಿತು. ಭಾನುವಾರ ಬೆಳಿಗ್ಗೆ ಪುಣ್ಯಾಹ, ದೇವನಾಂದಿ, ಮಹಾಸಂಕಲ್ಪ, ಜೀವ ಕಲಶ, ಶ್ರೀ ಬ್ರಹ್ಮಬದರ್ಕಳ ದೇವರ ಪುನ: ಪ್ರತಿಷ್ಠೆ, ಕಲಾತತ್ವ ಹೋಮ, ರಾತ್ರಿ ೭:೫೦ರ ಶುಭಮುಹೂರ್ತದಲ್ಲಿ ಜೀವಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. ಸಂಜೆ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರು ಕೋಟಿ ಚೆನ್ನಯ್ಯ ಯಕ್ಷಗಾನ ಪ್ರದರ್ಶಿಸಿದರು. ಸೋಮವಾರ ಬೆಳಿಗ್ಗೆ ಮೀನ ಲಗ್ನ ಸುಮೂಹೂರ್ತದಲ್ಲಿ ಬ್ರಹ್ಮಕುಂಭಾಭಿಷೇಕ, ಪಲ್ಲಪೂಜೆ, ಶ್ರೀ ಬ್ರಹ್ಮಬದರ್ಕಳ ದೇವರ ದರ್ಶನ ಸೇವೆ, ಹಾಲಾವಳಿ, ಮಹಾಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಸ್ವಾತಂತ್ರ್ಯ ಹೋರಾಟಗಾರ ವೀರಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಭೇಟಿ ನೀಡಿದರು. ಥೀಮ್ ಪಾರ್ಕ್ ಕೆರೆಯ ಮಧ್ಯದಲ್ಲಿರುವ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಭಾಷೆಗಳನ್ನು ಶ್ರೀಮಂತಗೊಳಿಸುವಲ್ಲಿ ಕವಿಗಳ ಪಾತ್ರ ಅಮೋಘವಾದದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ನೆನಪಿನಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣ ಶ್ಲಾಘನೀಯ, ಕಾರಂತರ ಸಾಧನೆಗಳು ಮುಂದಿನ ಜನಾಂಗಕ್ಕೆ ತಲುಪುವಂತಾಗಲಿ ಎಂದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು, ಪ್ರಕಾಶ್ ಮಲ್ಪೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಅರ್ಹ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಯೋಜನೆ ಮೂಲಕ ಪ್ರತಿ ತಿಂಗಳು ಸುಜ್ಞಾನನಿಧಿ ವೇತನ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲೂ ಮಕ್ಕಳ ನಿರಂತರ ಕಲಿಕೆಗಾಗಿ ಸುಜ್ಞಾನನಿಧಿ ವೇತನವನ್ನು ವಿತರಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಂಡ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದುಕೊಂಡು ಇದನ್ನು ಇನ್ನಷ್ಟು ಮಕ್ಕಳಿಗೆ ನೀಡಲು ಸಹಕರಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ರಘುರಾಮ ಪೂಜಾರಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೈಂದೂರು ತಾಲೂಕು ಇವರ ಆಶ್ರಯದಲ್ಲಿ ತ್ರಾಸಿಯಲ್ಲಿರುವ ತಾಲೂಕು ಯೋಜನಾ ಕಛೇರಿಯಲ್ಲಿ ಮಂಗಳವಾರ ಸುಜ್ಞಾನನಿಧಿ ವೇತನ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ಶುಭಾಶಂಸನೆಗೈದರು. ಬೈಂದೂರು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ನಾಗರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಯೂನಿಯನ್ ಬ್ಯಾಂಕ್ ಉಡುಪಿ ಡಿಜಿಎಂ ಡಾ. ಎಚ್.ಟಿ ವಾಸಪ್ಪ ಇವರು ಯೂನಿಯನ್ ಬ್ಯಾಂಕ್ ಗೋಪಾಡಿ ಶಾಖೆಯಲ್ಲಿ ಸಾಲ ಮಂಜೂರಾತಿ ಪತ್ರವನ್ನು ಶುಕ್ರವಾರ ವಿತರಣೆ ಮಾಡಿ ಶುಭ ಹಾರೈಸಿದರು. ಇದೇ ಸಂದರ್ಭ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ರಮೇಶ ಕಾಂಚನ್ ಮಾತನಾಡಿ, ಈಗಾಗಲೇ ಬ್ಯಾಂಕಿನಿಂದ ಪ್ರಸ್ತುತ ಮಹಿಳಾ ಮೀನುಗಾರರಿಗೆ ಸುಮಾರು 6 ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಸಂತಸ ತಂದಿದೆ. ಇದೇ ರೀತಿ ಮಹಿಳಾ ಮೀನುಗಾರರಿಗೆ ಬರಬೇಕಾದ ಬಾಕಿ ಇರುವ ಸಾಲ ಮನ್ನಾ ಮತ್ತು ಬಡ್ಡಿ ಸಹಾಯ ಧನವನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಬಗ್ಗೆ ಡಿಜಿಎಂ ಇವರಿಗೆ ಮನವಿ ಮಾಡಿದರು. ಯೂನಿಯನ್ ಬ್ಯಾಂಕ್ ಗೋಪಾಡಿ ಶಾಖೆಯ ಮ್ಯಾನೇಜರ್ ಪವನ್‌ಕುಮಾರ ತೆಗ್ಗಿನ್, ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರು, ಬ್ಯಾಂಕಿನ ಗ್ರಾಹಕರು ಮತ್ತಿತರರು ಉಪಸ್ಥಿತರಿದ್ದರು.

Read More