ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಚ್ಯವನಪ್ರಾಶ, ಆಯುಷ್ ಕ್ವಾಥ ಚೂರ್ಣ ಮತ್ತು ರೋಗ ನಿರೋಧಕ ಮಾತ್ರೆಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಆಯುರ್ವೇದದಲ್ಲಿ ಅದ್ಭುತ ಶಕ್ತಿ ಇದೆ. ಗಿಡಮೂಲಿಕೆಗಳ ಮಹತ್ವವನ್ನು ಎಲ್ಲರೂ ಅರಿತುಕೊಂಡು ಯಾವುದೇ ದೇಹದ ಮತ್ತು ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರದ ಆಯುರ್ವೇದಿಕ್ ಔಷಧಿಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಹೇಳಿದರು. ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಉಮೇಶ ಪುತ್ರನ್ ಆಯುಷ್ ಕಿಟ್ ವಿತರಿಸಿದರು. ಜಿಪಂ ಮಾಜಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಗಂಗೊಳ್ಳಿ ಟೌನ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ಮಾಸಿಕ 15000 ರೂ. ವೇತನದಂತೆ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ, ಅಜ್ಜರಕಾಡು, ಉಡುಪಿ ಇಲ್ಲಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ. ಸೆಪ್ಟಂಬರ್ 24 ರಂದು 10.30 ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಯೊಂದಿಗೆ ಹಾಜರಾಗಬೇಕು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2536650 ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಸೆ.20: ಜಿಲ್ಲೆಯಲ್ಲಿ ಒಂದು ದಿನದಲ್ಲಿ 214 ಮೀ.ಮೀ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸತತವಾಗಿ ಮಳೆಯಾಗುತ್ತಿರುವುದರಿಂದ ಸತತವಾಗಿ ಸುರಿದ ಮಳೆಯಿಂದಾಗಿ ಅಪಾರವಾದ ಆಸ್ತಿ ಪಾಸ್ತಿಗಳು ಹಾನಿಯಾಗಿದೆ. ಉಡುಪಿ, ಕಾಪು, ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕಿನ ನದಿ ತೀರದ ಗ್ರಾಮಗಳ ಕೆಲವು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು (ನೆರೆ) ಮಳೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳು ಹಾನಿಗೊಂಡಿದೆ. ಇಂದು ಜಿಲ್ಲೆಯಲ್ಲಿ ಒಟ್ಟು 226 ಮೀ.ಮೀ ಮಳೆಯಾಗಿದ್ದು, ಒಂದೇ ದಿನದಲ್ಲಿ 214 ಮೀ.ಮೀ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 399 ಮೀ.ಮೀ, ಕುಂದಾಪುರ ತಾಲೂಕಿನಲ್ಲಿ 88 ಮೀ.ಮೀ, ಬೈಂದೂರು ತಾಲೂಕಿನಲ್ಲಿ 41 ಮೀ.ಮೀ, ಬ್ರಹ್ಮಾವರ ತಾಲೂಕಿನಲ್ಲಿ 251 ಮೀ.ಮೀ, ಕಾರ್ಕಳ ತಾಲೂಕಿನಲ್ಲಿ 293 ಮೀ.ಮೀ, ಕಾಪು ತಾಲೂಕಿನಲ್ಲಿ 296 ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 220 ಮೀ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗೆ ತಾಲೂಕು ನೋಡಲ್ ಅಧಿಕಾರಿಗಳನ್ನು ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಮೈಸೂರಿನಿಂದ 22 ಮಂದಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯುವಜನರು ಕಲೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರು ಅನಪೇಕ್ಷಣೀಯ ಚಟುವಟಿಕೆಗಳಲ್ಲಿ ಸಮಯ ವ್ಯರ್ಥ ಮಾಡುವುದು ನಿಲ್ಲುತ್ತದೆ. ಅವರ ಕಲಾಭಿವ್ಯಕ್ತಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ನಾಗೂರಿನ ಕುಸುಮಾ ಫೌಂಡೇಶನ್ ಸಂಸ್ಥಾಪಕ ಎಚ್. ನಳಿನ್‌ಕುಮಾರ್ ಶೆಟ್ಟಿ ಹೇಳಿದರು. ರಾಜ್ಯ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ ಮತ್ತು ಕುಸುಮಾ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಭಾನುವಾರ ನಾಗೂರಿನ ಕೆಎಎಸ್ ಆಡಿಟೋರಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತೀಯ ರಂಗೋಲಿ ಕಲೆಗೆ ಅಧ್ಯಾತ್ಮ ಮತ್ತು ಧಾರ್ಮಿಕತೆಯೊಂದಿಗೆ ಸಂಬಂಧವಿದೆ. ಮನೆಗಳ ಮುಂದೆ ಹಿಂದಿದ್ದ ರಂಗೋಲಿ ಹಾಕುವ ಕ್ರಮವನ್ನು ಮುಂದುವರಿಸುವುದರಿಂದ ಪರಂಪರೆಯನ್ನು ಎತ್ತಿಹಿಡಿಯಬಹುದು ಎಂದು ಅವರು ಹೇಳಿದರು. ರಂಗೋಲಿ ಸ್ಪರ್ಧೆಯನ್ನು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಉದ್ಘಾಟಿಸಿದರು. ರಮ್ಯಾ ಪೈ ಪ್ರಾರ್ಥನೆ ಹಾಡಿದರು. ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಗಂಗೊಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.20ರ ಭಾನುವಾರ 293 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 123 ಹಾಗೂ ಕಾರ್ಕಳ ತಾಲೂಕಿನ 70 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 156 ಸಿಂಥಮೇಟಿವ್ ಹಾಗೂ 137 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 217, ILI 63, ಸಾರಿ 7 ಪ್ರಕರಣವಿದ್ದು, 3 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 2 ಮಂದಿ ಹೊರ ಜಿಲ್ಲೆಯಿಂದ, ಓರ್ವ ವ್ಯಕ್ತಿ ಹೊರದೇಶದಿಂದ ಬಂದಿದ್ದಾರೆ. ಇಂದು 38 ಮಂದಿ ಆಸ್ಪತ್ರೆಯಿಂದ ಹಾಗೂ 177 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 920 ನೆಗೆಟಿವ್: ಈ ತನಕ ಒಟ್ಟು 94730 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 79160 ನೆಗೆಟಿವ್, 15391 ಪಾಸಿಟಿವ್ ಬಂದಿದ್ದು, 179 ಮಂದಿಯ ವರದಿ ಬರುವುದು ಬಾಕಿ ಇದೆ. 1,415 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 15391 ಕೊರೋನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಇಕೋ ಕ್ಲಬ್, ಐಕ್ಯೂಎಸಿ ಹಾಗೂ ಬೈಂದೂರು ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ಉಪವಲಯ ಅರಣ್ಯಾಧಿಕಾರಿ ಶಂಕರಪ್ಪ ಡಿ.ಎಲ್ ಬೈಂದೂರು ಇವರು ಸಸಿ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಘು ನಾಯ್ಕ್, ಅರಣ್ಯ ರಕ್ಷ ಕ ಮಂಜುನಾಥ ನಾಯ್ಕ್ , ಗುರುರಾಜ್ ಬಿ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ-2 ರ ಯೋಜನಾಧಿಕಾರಿ ಲತಾ ಪೂಜಾರಿ ಸ್ವಾಗತಿಸಿದರು. ಇಕೋ ಕ್ಲಬ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಅಶ್ವಥ್ ಡಿ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಘಟಕ-1 ರ ಯೋಜನಾಧಿಕಾರಿ ನಾಗರಾಜ್ ಶೆಟ್ಟಿ ವಂದಿಸಿದರು. ಈ ವೇಳೆಯಲ್ಲಿ ಎಲ್ಲ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು ನಾಯ್ಕ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊರೋನಾ ಕಾರಣದಿಂದಾಗಿ ಯಕ್ಷಗಾನ ಕಲಾವಿದರ ಬದುಕು ಅತಂತ್ರವಾಗಿದ್ದು, ಕಲೆಯನ್ನೆ ನಂಬಿಕೊಂಡ ಕಲಾವಿದರಿಗೆ ಬದುಕು ಸಾಗಿಸುವುದು ಕಷ್ಟವಾಗುತ್ತಿದೆ. ಕಲಾಸೇವೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಕೊಲ್ಲೂರು ದೇವಳದ ವತಿಯಿಂದ ಹೊಸ ಯಕ್ಷಗಾನ ಮೇಳ ಆರಂಭಿಸುವಂತೆ ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗರ ನೇತೃತ್ವದಲ್ಲಿ ಕಲಾವಿದರು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊಲೂರಿನಲ್ಲಿ ಮನವಿ ಸಲ್ಲಿಸಿದರು. ದೇಶಕ್ಕೆ ಆವರಿಸಿದ ಮಹಾಮಾರಿ ಕೊರೋನಾದಿಂದ ಮಾರ್ಚ್‌ನಿಂದ ಸ್ಥಗಿತಗೊಂಡ ಯಕ್ಷಗಾನ ಮೇಳಗಳು ಮತ್ತೆ ನವೆಂಬರ್‌ನಿಂದ ತಿರುಗಾಟ ಆರಂಭಿಸುವುದಕ್ಕೆ ಅವಕಾಶ ಕಲ್ಪಿಸಬೇಕು. ಧಾರ್ಮಿಕ ದತ್ತಿಗೆ ಒಳಪಡುವ ಮೇಳಗಳ ಕಲಾವಿದರಿಗೆ ಪೂರ್ಣ ಪ್ರಮಾಣದ ಸಂಭಾವನೆ ಸಿಕ್ಕಿದೆ. ಖಾಸಗಿ ಸಂಚಾಲಕತ್ವದಿಂದ ನಡೆಯುವ ಮೇಳಗಳಿಗೆ ಪರಿಹಾರದ ಸಂಭಾವನೆಯನ್ನು ಸಂಚಾಲಕರರಿಂದಲೂ, ಸರಕಾರದಿಂದಲೂ ಕೊಡಿಸುವುದರೊಂದಿಗೆ ಖಾಸಗಿ ಮೇಳಗಳು ಕೆಲವು ಆರಂಭವಾಗುವ ಸ್ಥಿತಿ ಇಲ್ಲದಿರುವುದರಿಂದ ಕೊಲ್ಲೂರು ದೇವಳದ ವತಿಯಿಂದ ಹೊಸ ಮೇಳವೊಂದನ್ನು ಆರಂಭಿಸಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೋಟ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾ ವಿತರಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಗಂಗಾಧರ ಹಿರೇಗುತ್ತಿಯವರು ಪತ್ರಿಕೋದ್ಯಮದ ಕುರಿತು ಬಾಲ್ಯದಲ್ಲೇ ಹಲವು ಕನಸುಗಳನ್ನು ಕಂಡಿದ್ದರು. ಅನಂತರ ‘ಮುಂಗಾರು’ ದಿನಪತ್ರಿಕೆಯಲ್ಲಿ ಉತ್ತರ ಕನ್ನಡದ ವರದಿಗಾರನಾಗಿ 10 ವರ್ಷ ಸೇವೆ ಸಲ್ಲಿಸಿ, ಅನಂತರ ಕಾರವಾರದ ಜಿಲ್ಲಾ ಕೇಂದ್ರದಿಂದ ‘ಕರಾವಳಿ ಮುಂಜಾವು’ ದಿನಪತ್ರಿಕೆ ಆರಂಭಿಸಿದ್ದು ಪ್ರಸ್ತುತ ಈ ಪತ್ರಿಕೆ ರಾಜ್ಯದ ಪ್ರಸಿದ್ಧ ದಿನಪತ್ರಿಕೆಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಅತ್ಯುನ್ನತ ಸಾಧನೆಗಾಗಿ ಹಿರೇಗುತ್ತಿಯವರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ, ಸಾಧನ ರಾಷ್ಟ್ರೀಯ ಪ್ರಶಸ್ತಿಗಳು ಸಂದಿದೆ. ವಡ್ಡರ್ಸೆಯವರ ಪತ್ರಿಕೋದ್ಯಮದ ಆದರ್ಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.19ರ ಶನಿವಾರ 215 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 50, ಉಡುಪಿ ತಾಲೂಕಿನ 121 ಹಾಗೂ ಕಾರ್ಕಳ ತಾಲೂಕಿನ 35 ಮಂದಿಗೆ ಪಾಸಿಟಿವ್ ಬಂದಿದೆ. 9 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 112 ಸಿಂಥಮೇಟಿವ್ ಹಾಗೂ 103 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 98, ILI 68, ಸಾರಿ 3 ಪ್ರಕರಣವಿದ್ದು, 45 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಹೊರ ಜಿಲ್ಲೆಯಿಂದ ಬಂದಿದ್ದಾರೆ. ಇಂದು 82 ಮಂದಿ ಆಸ್ಪತ್ರೆಯಿಂದ ಹಾಗೂ 229 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 52 ವರ್ಷದ ಪುರುಷ ಮೃತಪಟ್ಟಿದ್ದಾರೆ. 858 ನೆಗೆಟಿವ್: ಈ ತನಕ ಒಟ್ಟು 93528 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 78240 ನೆಗೆಟಿವ್, 15098 ಪಾಸಿಟಿವ್ ಬಂದಿದ್ದು, 190 ಮಂದಿಯ ವರದಿ ಬರುವುದು ಬಾಕಿ ಇದೆ. 1,337 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ,ಸೆ.19: ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು 2020 ರನ್ವಯ ಸರ್ಕಾರವು ಪ್ರತಿ ಮೆ.ಟನ್ ಮರಳಿಗೆ ರೂ. 60 ರಿಂದ ರಾಜಧನವನ್ನು ಪ್ರಸ್ತುತ ರೂ. 80 ಕ್ಕೆ ಹೆಚ್ಚಿಸಿರುವುದರಿಂದ, ರಾಜಧನದೊಂದಿಗೆ ಇತರೆ ಶುಲ್ಕಗಳನ್ನು ಹೆಚ್ಚುವರಿಯಾಗಿ ಪರವಾನಿಗೆದಾರರು ಸರ್ಕಾರಕ್ಕೆ ಪಾವತಿಸಬೇಕಾಗಿರುವುದರಿಂದ, ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಇರುವ ಜಿಲ್ಲಾ 7 ಸದಸ್ಯರ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿರುವಂತೆ ಈ ಹಿಂದೆ ನಿಗದಿಪಡಿಸಿದ್ದ ದರವನ್ನು ಪುನರ್ ಪರಿಶೀಲಿಸಿ ಈ ಕೆಳಕಂಡಂತೆ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ತೆರವುಗೊಳಿಸುವ ಮರಳಿಗೆ ದರ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ 7 ಸದಸ್ಯರ ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಜಿ. ಜಗದೀಶ್ ತಿಳಿಸಿದ್ದಾರೆ. ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿನ (ಸಿಆರ್ಝಡ್ ಪ್ರದೇಶದ ಸ್ವರ್ಣಾ, ಸೀತಾ ಮತ್ತು ಪಾಪನಾಶಿನಿ ನದಿ ವ್ಯಾಪ್ತಿಗಳಲ್ಲಿ) ಮರಳು ದಿಬ್ಬಗಳೊಂದಿಗೆ ತೆರವುಗೊಳಿಸಿದ…
