ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಮೀನುಗಾರಿಕೆ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಂಗೊಳ್ಳಿ, ಮರವಂತೆ ಹಾಗೂ ಕೊಡೇರಿ ಮೀನುಗಾರಿಕಾ ಬಂದರಿಗೆ ಶನಿವಾರ ಭೇಟಿ ನೀಡಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕುಸಿದು ಬಿದ್ದ ಜೆಟ್ಟಿಯನ್ನು ಮತ್ತು ಬ್ರೇಕ್ ವಾಟರ್ ತಡೆಗೋಡೆಯನ್ನು ಪರಿಶೀಲಿಸಿದ ಸಚಿವರು, ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯ ಮೀನುಗಾರ ಮುಖಂಡರ ಸಲಹೆ, ಸೂಚನೆ, ಅಭಿಪ್ರಾಯವನ್ನು ಆಲಿಸಿದರು. 102 ಕೋಟಿ ರೂ. ವೆಚ್ಚದ ಬ್ರೇಕ್ ವಾಟರ್ನ ತಡೆಗೋಡೆ ಕುಸಿಯುತ್ತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದಷ್ಟು ಶೀಘ್ರ ತಡೆಗೋಡೆ ದುರಸ್ಥಿಗೆ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು, ಕುಸಿದು ಬಿದ್ದ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರಕಾರ 12 ಕೋಟಿ ರೂ. ಬಿಡುಗಡೆಗೆ ಸಚಿವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಭಾರತದಖ್ಯಾತ ಐಟಿ ಕಂಪನಿ ಟಿಸಿಎಸ್ ಐಯಾನ್ಜತೆಗೆ ಶೈಕ್ಷಣಿಕಒಪ್ಪಂದವನ್ನು ಮಾಡಿಕೊಂಡಿದೆ. ಟಿಸಿಎಸ್ ಐಯಾನ್, ಟಾಟಾಕನ್ಸಲ್ಟನ್ಸಿ ಸರ್ವೀಸಸ್ನ ಭಾಗವಾಗಿದೆ. ಸಲಹಾ ಮತ್ತು ವ್ಯವಹಾರ ಪರಿಹಾರದಲ್ಲಿ ಕುಶಲತೆಯನ್ನು ಹೊಂದಿರುವ ಈ ಸಂಸ್ಥೆಯೊಂದಿಗಿನ ಒಪ್ಪಂದವು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ನವಯುಗದಉದ್ಯಮ ಹೊಂದಾಣಿಕೆಯಕೌಶಲ್ಯ ಹಾಗೂ ಉದ್ಯಮ ಪ್ರವೃತ್ತಿಯ ಇಂಟರ್ನಶಿಫ್ ಅವಕಾಶವನ್ನು ಟಿಸಿಎಸ್ ಐಯಾನ್ನ ಐಎಚ್ಸಿ(ಇಂಡಸ್ಟ್ರಿ ಆನರ್ ಸರ್ಟಿಫಿಕೇಶನ್) ಮತ್ತುಆರ್ಐಒ (ರಿಮೋಟ್ ಇಂಟರ್ನ್ಶಿಪ್ ಅಪಾರ್ಚುನಿಟಿಸ್ ) ಮೂಲಕ ಒದಗಿಸಿ ಕೊಡುತ್ತದೆ. ಕರ್ನಾಟಕದ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಟಿಸಿಎಸ್ ಐಯಾನ್ನ ಒಡಂಬಡಿಕೆಗೆ ಒಳಪಡುತ್ತಿರುವ ಮೊದಲ ಕಾಲೇಜು ಎಂಬ ಹೆಮ್ಮೆಗೆ ಪಾತ್ರವಾಗುತ್ತಿದೆ. ಈ ಕೋರ್ಸುಗಳು ಆಳ್ವಾಸ್ ವಿದ್ಯಾರ್ಥಿ ಸಮೂಹಕ್ಕೆ ಔದ್ಯೋಗಿಕ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯ ಹಾಗೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗಬಲ್ಲ ಕ್ಷೇತ್ರಗಳಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ರೊಬೋಟಿಕ್ಸ್, ಕ್ಲೌಡ್ ಕಂಪ್ಯುಟಿಂಗ್, ಡಾಟಾ ಮೈನಿಂಗ್, ಅನಾಲಿಟಿಕ್ಸ್, ಐಒಟಿ ಮತ್ತು ಸೈಬರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ದೀಪ ಬೆಳಗಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ರವರು ರಾಧಾಕೃಷ್ಣನ್ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.5ರ ಶನಿವಾರ 175 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 34, ಉಡುಪಿ ತಾಲೂಕಿನ 106 ಹಾಗೂ ಕಾರ್ಕಳ ತಾಲೂಕಿನ 31 ಮಂದಿಗೆ ಪಾಸಿಟಿವ್ ಬಂದಿದೆ. 4 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಈತನಕ ಜಿಲ್ಲೆಯಲ್ಲಿ ಒಟ್ಟು 112 ಮಂದಿ ಮೃತಪಟಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 134 ಸಿಂಥಮೇಟಿವ್ ಹಾಗೂ 41 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 65, ILI 61, ಸಾರಿ 0 ಪ್ರಕರಣವಿದ್ದು, 49 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 68 ಮಂದಿ ಆಸ್ಪತ್ರೆಯಿಂದ ಹಾಗೂ 164 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 79, 70 ವರ್ಷದ ವೃದ್ಧೆಯರು 62 ವರ್ಷದ ವೃದ್ಧ, ಕಾರ್ಕಳದ 68 ವರ್ಷದ ವೃದ್ಧ, ಇಂದು ಮೃತಪಟ್ಟಿದ್ದಾರೆ. 1250 ನೆಗೆಟಿವ್: ಈ ತನಕ ಒಟ್ಟು 76891 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 64123 ನೆಗೆಟಿವ್, 12511 ಪಾಸಿಟಿವ್ ಬಂದಿದ್ದು, 257…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ| ಎಸ್. ರಾಧಾಕೃಷ್ಣನ್, ಅಬ್ದುಲ್ ಕಲಾಂ, ಪ್ರಣವ್ ಮುಖರ್ಜಿಯವರು ಶಿಕ್ಷಕರಾಗಿದ್ದುಕೊಂಡು ಕಾರ್ಯಕ್ಷಮತೆ, ಬದ್ಧತೆಯಿಂದ ದೇಶದ ಅತ್ಯುನ್ನತ ಹುದ್ದೆಗೇರಿರುವುದು ಶಿಕ್ಷಕರಾದ ನಮಗೆ ಹೆಮ್ಮೆ. ಅವರಂತೆಯೇ ಪ್ರತಿಯೊಬ್ಬ ಶಿಕ್ಷಕನೂ ಸಹ ಈ ಕೊರೊನಾದಂತಹ ಸಂಕಷ್ಟ ಸಮಯದಲ್ಲಿಯೂ ಆತ್ಮ ಗೌರವವನ್ನು ಹೆಚ್ಚಿಸಿಕೊಳ್ಳುವುದು ಇಂದಿನ ಅವಶ್ಯಕ ಎಂದು ಕುಂದಾಪುರದ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ, ಪ್ರಸ್ತುತ ಡಯಟ್ ಉಪ ಪ್ರಾಂಶುಪಾಲಾಗಿರುವ ಅಶೋಕ್ ಕಾಮತ್ ಹೇಳಿದರು. ಅವರು ಕುಂದಾಪುರದ ಸರಕಾರಿ ಪ.ಪೂ. ಕಾಲೇಜಿನ (ಬೋರ್ಡ್ ಹೈಸ್ಕೂಲು) ಶ್ರೀ ಲಕ್ಷ್ಮಿ ನರಸಿಂಹ ಸಭಾಭನದಲ್ಲಿ ಉಡುಪಿ ಜಿ.ಪಂ., ಕುಂದಾಪುರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಧಾಕೃಷ್ಣನ್ ಅವರಲ್ಲಿರುವ ಮಾನವೀಯ ಗುಣಗಳಿಂದ ಎಲ್ಲರನ್ನು ಆಕರ್ಷಿಸುತ್ತಿದ್ದರು. ಅಂತಹ ಸದ್ಗುಣಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಢಿಸಿಕೊಳ್ಳಬೇಕು. ಈ ಸಮಯ ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳುವುದು ಸಹ ಅತ್ಯವಶ್ಯಕ. ಒಬ್ಬ ಶ್ರೇಷ್ಠ ಗುರುವಿನಿಂದ ಶ್ರೇಷ್ಠ ಶಿಷ್ಯಂದಿರ ನಿರ್ಮಾಣ ಸಾಧ್ಯ. ಅದರಿಂದ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬಿದ್ಕಲ್ಕಟ್ಟೆಯಲ್ಲಿ (ಐಟಿಐ) ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಆನ್ ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸೆಪ್ಟೆಂಬರ್ 10 ರೊಳಗೆ ಇಲಾಖೆ ವೆಬ್ಸೈಟ್ www.emptrg.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಂಗಳೂರಿನಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್ಕಟ್ಟೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08254-235313 ಸಂಪರ್ಕಿಸುವಂತೆ ಪ್ರಾಚಾರ್ಯರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ವೃತ್ತಿ ಅವಕಾಶಗಳು ಕುರಿತಾದ ಒಂದು ದಿನದ ಅಂತರ್ಜಾಲ ವಿಚಾರ ಸಂಕಿರಣ ನಡೆಯಿತು. ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ಉಮೇಶ ಶೆಟ್ಟಿ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಮಂಗಳೂರು ವಿ. ವಿ. ಸಂಧ್ಯಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಾ ಪಿ.ಹೆಗ್ಡೆ ಮಾತನಾಡಿ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗ ಕೊಡಮಾಡುವ ಕೋರ್ಸುಗಳು ಮತ್ತು ವಿಫುಲ ಉದ್ಯೋಗಾವಕಾಶಗಳ ಜೊತೆ ಜೊತೆಗೆ ವರ್ತಮಾನ ಜಗತ್ತು ಅಪೇಕ್ಷಿಸುವ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಉಪ-ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಬಿ.ಸಿ. ತಾಂತ್ರಿಕ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು, ವಿಚಾರ ಸಂಕಿರಣದ ಸಂಯೋಜಕಿ ಹಾಗೂ ವಾಣಿಜ್ಯ ಮತ್ತು ನಿರ್ವಹಣ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿ, ನಿರ್ವಹಿಸಿದರು, ಸಹ ಸಂಯೋಜಕ ಸಂತೋಷ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಕರಾವಳಿಯ ಪ್ರಮುಖ ತೋಟಗಾರಿಕೆ ಕೃಷಿಯಾದ ತೆಂಗು ಉತ್ತಮ ಆರ್ಥಿಕ ಬೆಳೆ. ಕೂಲಿಯಾಳುಗಳ ಕೊರತೆಯಿಂದ ತೆಂಗು ಕೃಷಿಗೆ ಆತಂಕ ಎದುರಾಗಿದೆ. ಗ್ರಾಮೀಣ ಯುವಕ, ಯುವತಿಯರು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ನಡೆಸುವ ತೆಂಗಿನ ಮರ ಏರುವ ತರಬೇತಿ ಪಡೆದು ಲಾಭಕರ ಉದ್ಯೋಗ ನಡೆಸಬಹುದು’ ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಶಶಿಧರ್ ಕೆ. ಸಿ. ತಿಳಿಸಿದರು. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ಕುಂದಾಪುರ ತಾಲ್ಲೂಕು ಕಲ್ಪವೃಕ್ಷ ತೆಂಗು ಉತ್ಪಾದಕರ ಫೆಡರೇಷನ್ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾಮಂಟಪದಲ್ಲಿ ‘ವಿಶ್ವ ತೆಂಗು ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ‘ತೆಂಗಿನ ಸಮಗ್ರ ಬೇಸಾಯ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಾಪ್ಕಾಮ್ಸ್ ಅಧ್ಯಕ್ಷ ಸೀತಾರಾಮ ಗಾಣಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ಎಸ್ ಯು. ಪಾಟೀಲ್, ತೆಂಗು ಉತ್ಪಾದಕರ ಕಂಪನಿಯ ಮೂಲಕ ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕ್ಷೌರಿಕ, ಬ್ಯೂಟಿಪಾರ್ಲರ್, ಕಮ್ಮಾರಿಕೆ, ಪ್ಲಂಬರ್, ಇಲೆಕ್ಟ್ರಿಷಿಯನ್ ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಈ ಕಛೇರಿಯಿಂದ/ ಆಯಾಯ ಗ್ರಾಮ ಪಂಚಾಯತ್ಗಳಿಂದ ಪಡೆದು ಸೆಪ್ಟೆಂಬರ್ 11 ರೊಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ ಬ್ಲಾಕ್ ರೂಂ. ನಂ.207 ಮೊದಲನೇ ಮಹಡಿ ರಜತಾದ್ರಿ ಮಣಿಪಾಲ ಕಛೇರಿಗೆ ಸಲ್ಲಿಸುವಂತೆ ಗ್ರಾಮಾಂತರ ಕೈಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರಕಾರಿ ಕೆಲಸ ಕೊಡಿಸುವ ಭರವಸೆ ನೀಡಿ, ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ ಸದಸ್ಯ ಸಂದೀಪ್ ಪೂಜಾರಿ ಕೋಡಿ ಎಂಬಾತನನ್ನು ಶುಕ್ರವಾರದಂದು ಬಂಧಿಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು, ಆ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದು ವಂಚಿಸಿದ್ದಲ್ಲದೇ, ಆಕೆಗೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಆ ಮಹಿಳೆ ತನ್ನ ಗೆಳತಿಯಲ್ಲಿ ಮೂಲಕ ಆಪಾದಿತನಲ್ಲಿ ವಿಚಾರಿಸಿದಾಗ ಅವರಿಗೂ ಸಹ ಅವಾಚ್ಯವಾಗಿ ಅವಹೇಳನ ಮಾಡಿದ್ದಾನೆ ಎನ್ನಲಾಗಿದೆ. ಸೆ.1ರಂದು ಸಂದೀಪ ಪೂಜಾರಿ ಮೊಬೈಲ್ ನಂಬರ್ನಿಂದ ಆತನ ಪತ್ನಿ ವಂಚನೆಗೊಳಗಾದ ಮಹಿಳೆಗೆ ಕರೆ ಮಾಡಿ ನನ್ನ ಗಂಡನ ಬಗ್ಗೆ ಮಾತನಾಡದೆ ಸುಮ್ಮನಿರಬೇಕು ಎಂದು ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ್ದಳು ಎಂದು ದೂರಿದ್ದಾರೆ. ಸಂತ್ರಸ್ಥ…
