ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಡಿ ಗ್ರಾಮದ ಮಧ್ಯಕೋಡಿ ವ್ಯಾಪ್ತಿಯಲ್ಲಿ ಕಡಲ್ಕೊರೆತದ ತೀವ್ರತೆಗೆ ಹಳೆಯ ತಡೆಗೋಡೆ ಪೂರ್ಣ ಕುಸಿತ ಕಂಡಿದೆ. ಸುಮಾರು 200 ಮೀಟರ್ ಅಂತರದಲ್ಲಿಎರಡು ಕಡೆ ತೀವ್ರ ಕೊರೆತ ಸಂಭವಿಸಿದೆ. ಅಲೆಗಳ ಹೊಡೆತಕ್ಕೆ ಕಲ್ಲುಗಳು ಸಮುದ್ರ ಪಾಲಾಗಿದೆ. ಭಾರಿ ಅಲೆಗಳು ಅಪ್ಪಳಿಸುತ್ತಿದ್ದು ನೀರು ರಸ್ತೆಗೆ ಚಿಮ್ಮುತ್ತಿದೆ. ಕಳೆದ ಕೆಲವು ದಿನಗಳಿಂದ ಕಡಲು ಅಬ್ಬರಿಸುತ್ತಿದ್ದು ಕಳೆದೆರಡು ದಿನಗಳಿಂದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ. ತಡೆಗೋಡೆಗೆ ಹೊಂದಿಕೊಂಡಿರುವ ವಿದ್ಯುತ್ ಮಾರ್ಗದ ಕಂಬಗಳು ಅಪಾಯಕ್ಕೆ ಸಿಲುಕಿವೆ. ರಸ್ತೆ ಕೊಚ್ಚಿಹೋಗುವ ಆತಂಕ ಎದುರಾಗಿದೆ. ಸಂಬಂಧಿತ ಇಲಾಖೆ ಕೂಡಲೆ ಕ್ರಮ ವಹಿಸಿ ರಕ್ಷಣೆ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ಗ್ರಾಮದ ಹಳಗೇರಿ ಕೇಳಾಮನೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತೇಜಪ್ಪ ಶೆಟ್ಟಿ (೮೧) ಶನಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಬೆಳ್ತಂಗಡಿ, ನಾವುಂದ, ಕಂಬದಕೋಣೆ ಮೊದಲಾದ ಸರಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕೃಷಿ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧುಗಳು ಹಾಗೂ ಶಿಷ್ಯವರ್ಗವನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಅತ್ಯಂತ ಸರಳವಾಗಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತಿರಿದ್ದರು. ದೇವಸ್ಥಾನ ಪ್ರವೇಶಕ್ಕೆ ಪೂರ್ವದಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಮಾಡಿಕೊಂಡೆ ಒಳ ಪ್ರವೇಶಿಸುವಂತೆ ನೋಡಿಕೊಳ್ಳಲಾಯಿತು. ಸಾಮಾಜಿಕ ಅಂತರವನ್ನು ಭಕ್ತಾಧಿಗಳು ಕಾಪಾಡಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.31ರ ಶುಕ್ರವಾರ 213 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 455 ನೆಗೆಟಿವ್: ಈ ತನಕ ಒಟ್ಟು 31,665 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,747 ನೆಗೆಟಿವ್, 4,356 ಪಾಸಿಟಿವ್ ಬಂದಿದ್ದು, 562 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 455 ನೆಗೆಟಿವ್, 213 ಪಾಸಿಟಿವ್ ಬಂದಿದೆ. ಒಟ್ಟು 1,419 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,805 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,356 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,552ಮಂದಿ ಬಿಡುಗಡೆಯಾಗಿದ್ದು, 1,805 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.30ರ ಗುರುವಾರ 248 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 762 ನೆಗೆಟಿವ್: ಈ ತನಕ ಒಟ್ಟು 31,044 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,292 ನೆಗೆಟಿವ್, 4,143 ಪಾಸಿಟಿವ್ ಬಂದಿದ್ದು, 609 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 762 ನೆಗೆಟಿವ್, 248 ಪಾಸಿಟಿವ್ ಬಂದಿದೆ. ಒಟ್ಟು 1,403 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,669 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,143 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,445 ಮಂದಿ ಬಿಡುಗಡೆಯಾಗಿದ್ದು, 1,669 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 44ರನ್ವಯ ಮಕ್ಕಳ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬಂಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ. ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಮಗುವನ್ನು 18 ವರ್ಷದ ವಯಸ್ಸಿನವರೆಗೂ ಪೋಷಕತ್ವ ಮುಂದುವರೆಸಲು ಅವಕಾಶ ಕಲ್ಪಿಸಬಹುದಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು, ಉಡುಪಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ಪೋಷಿಸಲು ಆಸಕ್ತಿ ಇರುವ ಪೋಷಕರು ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.0820-2574964, ಮೊ: 94490 54062 ಅಥವಾ ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಉಡುಪಿ, ದೂ: 0820-2580220, ಮೊ:94488 35228 ಸಂಪರ್ಕಿಸಬಹುದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್-19ರ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ , 26 ಫಾರ್ಮಸಿಸ್ಟ್ ಹುದ್ದೆಗಳಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ , ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾಸಿಕ ವೇತನ 20000 ಇರುತ್ತದೆ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ, ಡಿಪ್ಲಮೊ ಇನ್ ಫಾರ್ಮಸಿ ಮತ್ತು ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ಕಡ್ಡಾಯ ನೊಂದಣಿ ಮಾಡಿರುವ ಅಭ್ಯರ್ಥಿಗಳು , ತಮ್ಮ ಅರ್ಜಿಯನ್ನು ಆಗಸ್ಟ್ 3ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ ಅಜ್ಜರಕಾಡು, ಉಡುಪಿ ಜಿಲ್ಲಾಸ್ಪತ್ರೆಗೆ ಸಲ್ಲಿಸುವಂತೆ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ ಮಾಡುತ್ತಿದ್ದಲ್ಲಿ ಸಾರ್ವಜನಿಕರು ತಾವೇ ಕಾನೂನನ್ನು ಕೈಗೊತ್ತಿಕೊಳ್ಳುವಂತಿಲ್ಲ , ಈ ಬಗ್ಗೆ ಸಂಬಂಧಿಸಿದ ಹತ್ತಿರದ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಥವಾ 100 ಕರೆ ಮಾಡಿ ತಿಳಿಸಬೇಕು, ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಹೇಳಿದರು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡುವವರು, ಪಶು ಸಂಗೋಪಣಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಸ್ಥಳೀಯ ಸಂಸ್ಥೆಗಳ ಮತ್ತು ಸದ್ರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅನುಮತಿ ಪಡೆಯಬೇಕು, ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಲು ಹತ್ತಿರದ ಗೋಶಾಲೆಗೆ ಗುರುತಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು. ಎಲ್ಲಾ ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ ಬಾಧಿತರಾಗಿ ಮೃತಪಟ್ಟಿದ್ದ ಮೊಳಹಳ್ಳಿ ಗ್ರಾಮದ 70 ವರ್ಷದ ವೃದ್ಧರೊಬ್ಬರ ಅಂತ್ಯಸಂಸ್ಕಾರಕ್ಕೆ ಯಾರೂ ಲಭ್ಯರಾಗದೆ ಇದ್ದಾಗ ಸಾಮಾಜಿಕ ಕಾರ್ಯಕರ್ತರು ಹಾಗೂ ಪಿಎಫ್ಐ ಸಂಘಟನೆ ಸದಸ್ಯರು ಅಂತಸಂಸ್ಕಾರಕ್ಕೆ ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ಬುಧವಾರ ರಾತ್ರಿ ವೃದ್ಧ ಮೃತಪಟ್ಟಿದ್ದು, ಅವರ ಪತ್ನಿ ಕೂಡ ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿದ್ದಾರೆ. ದಂಪತಿಗೆ ಮಕ್ಕಳಿಲ್ಲ. ಸಮೀಪದ ಸಂಬಂಧಿಗಳ 2 ಮನೆ ಸೀಲ್ಡೌನ್ ಆಗಿದೆ. ಮೃತದೇಹವನ್ನು ಮುಟ್ಟಲು ಯಾರೂ ಸಿದ್ಧರಿಲ್ಲದ ಸ್ಥಿತಿ ಬಂದಿತ್ತು. ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ, ಪಿಎಫ್ಐ ಸಂಘಟನೆಯ ಆಸಿಫ್, ಉಸಾಮಾ, ಸಿದ್ದಿಕ್, ಸಮೀರ ಅವರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಿಸಿದರು. ಸರಕಾರಿ ನಿಯಮಾವಳಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಆಡಳಿತಾಧಿಕಾರಿ ಕೋವಿಡ್’ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಬೇಕೆಂಬ ನಿಯಮವಿದೆ. ಆದರೆ ಆ ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಪಷ್ಟ ಪ್ರತಿಕ್ರಿಯೆ ಬಾರದಿರುವುದರಿಂದ ವೈದ್ಯಾಧಿಕಾರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೂರ್ಣಾವಧಿ ವೈದ್ಯಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲೆ ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರನ್ನು ಬುಧವಾರ ಭೇಟಿ ಮಾಡಿದ ಉಡುಪಿ ಜಿಲ್ಲೆ ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ. ವೀಣಾ ಎನ್.ಕಾರಂತ ನೇತೃತ್ವದ ನಿಯೋಗ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೂರ್ಣಾವಧಿ ವೈದ್ಯಾಧಿಕಾರಿಗಳ ಕೆಲವು ಬೇಡಿಕೆಗಳ ಬಗ್ಗೆ ಗಮನ ಸೆಳೆದು ಮನವಿ ಸಲ್ಲಿಸಿತು. ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿರುವಂತೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ವರದಿಗನುಗುಣವಾಗಿ (CGHS Pay Scale) ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಿಗೆ ಸರಿಸಮಾನ ವೇತನ-ಭತ್ಯೆಗಳನ್ನು ಮಂಜೂರು ಮಾಡಬೇಕು. ಕೊವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಆಯುಷ್ ವೈದ್ಯಪದ್ಧತಿಗಳ ಚಿಕಿತ್ಸೆಯನ್ನು ಕನಿಷ್ಠ ಸ್ವಯಂ ಅಪೇಕ್ಷೆ…
