ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಗಿರಿಗೌಡ ಅವರಿಗೆ ಬೈಂದೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಭಿನಂದಿಸಿ ಶಿಕ್ಷಕರ ಸಮಸ್ಯೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಪ್ರಶಸ್ತಿ ವಿಜೇತ ಶ್ರೀರಾಂಪುರದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಗ್ರೇಡ್ -1ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಉಪ್ಪುಂದ ಜೂನಿಯರ್ ಕಾಲೇಜಿನ ಪ್ರಭಾರ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಬಾಡ, ಬೈಂದೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಶ್ರೀರಾಂಪುರದ ಶಾಲೆಯ ಶಿಕ್ಷಕ ವೃಂದದವರು ಹಾಗೂ ಸ್ಥಳೀಯ ವಸತಿ ಗೃಹದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಬೂತ್ ಅಧ್ಯಕ್ಷರ ಮತ್ತು ಶಕ್ತಿ ಕೇಂದ್ರದ ಅಧ್ಯಕ್ಷರ ಮನೆ ಮೇಲೆ ಬಿಜೆಪಿ ಧ್ವಜ ಹಾರಿಸಲಾಯಿತು. ಬಿಜೆಪಿ ಬೆಳೆದು ಬಂದ ಹಾದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಮತ್ತು ರಾಜ್ಯದ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಅಶೋಕ ಎನ್.ಡಿ., ಮಿಥನ್ ದೇವಾಡಿಗ, ರವೀಂದ್ರ ಖಾರ್ವಿ ಕಂಚುಗೋಡು, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಬೂತ್ ಕಾರ್ಯದರ್ಶಿಗಳು, ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ ದನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಬಿ ಪ್ರವರ್ಗ 4 ಮತ್ತು ಸಿ ಪ್ರವರ್ಗದ 76 ಅಧಿಸೂಚಿತ ಸಂಸ್ಥೆಗಳು, ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಭಕ್ತಾಧಿಗಳು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ ಪ್ರವರ್ಗದ ದೇವಸ್ಥಾನಗಳು – ಉಡುಪಿ ತಾಲೂಕಿನ ಉದ್ಯಾವರದ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಪಿತ್ರೋಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಶ್ರೀ ಶಂಭುಕಲ್ಲು ವೀರಭದ್ರ ದೇವಸ್ಥಾನ, ಹೆರ್ಗದ ಶ್ರೀ ಫರೀಕ ಮಹಾಲಿಂಗೇಶ್ವರ ದೇವಸ್ಥಾನ, ನೈಯಂಪಳ್ಳಿ ಪುತ್ತೂರಿನ ಶ್ರೀ ಮಡಿಮಲ್ಲಿಕಾರ್ಜುನ ದೇವಸ್ಥಾನ, ಇಂದ್ರಾಳಿಯ ಶ್ರೀ ಇಂದ್ರಾಣಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನ, ಕೊರಂಗ್ರಪಾಡಿಯ ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ತೆಂಕನಿಡಿಯೂರಿನ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಹೆರ್ಗದ ಶ್ರೀ ಮಾಣಿಕೋಡು ವಿಷ್ಣುಮೂರ್ತಿ, ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10000 ರೂ ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ಸುಮೀತ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಕೋರ್ಸ್ ನ ವಿಜೇತರಿಗೆ ಏಪ್ರಿಲ್ 17 ಮತ್ತು 18ರಂದು ಅಡ್ವಾನ್ಸಡ್ ಸ್ಕಿಲ್ ಡೆವಲಮೆಂಟ್ ತರಬೇತಿ ಕೇಂದ್ರ ನಡೆಸುವ ಗ್ರ್ಯಾಂಡ್ ಫೈನಲ್ ಸ್ಪರ್ಧೆಗೆ ಅವಕಾಶ ಸಿಕ್ಕಿದ್ದು, ವಿಜೇತರಿಗೆ 25000 ನಗದು ಬಹುಮಾನ ದೊರಕಲಿದೆ. ಸಿಕ್ಕಿದ ಸಮಯವನ್ನ ಸರಿಯಾದ ರೀತಿಯಲ್ಲಿ ಕಲಿಕೆಗಾಗಿ ಉಪಯೋಗಿಸಿ ಶಶಾಂಕ್ ಇಂದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದದ್ದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಕಾಲೇಜಿನ 6 ಪ್ರಾಜೆಕ್ಟ್ ತಂಡಗಳು ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಅಧ್ಯಕ್ಷರ ಮನೆಗಳಲ್ಲಿಯೂ ಬಿಜೆಪಿ ಬಾವುಟ ಧ್ವಜಾರೋಹಣ ಮಾಡಲಾಯಿತು. ವಿವಿಧ ಬೂತ್ ಅಧ್ಯಕ್ಷರ ಮನೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸೇರಿದಂತೆ ಬಿಜೆಪಿಯ ವಿವಿಧ ನಾಯಕರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರಾವಳಿ ವಾರಿಯರ್ಸ್ ಬೇಲಿಕೇರಿ ಬಂದರ್ ಗಂಗೊಳ್ಳಿ ಇದರ 7ನೇ ವಾರ್ಷಿಕೋತ್ಸವದ ಅಂಗವಾಗಿ ಬಡ ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಗಂಗೊಳ್ಳಿಯ ಕೆಎಫ್ಡಿಸಿ ವಠಾರದಲ್ಲಿ ಜರಗಿದ ಬೈಂದೂರು ವಲಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ನ್ಯೂ ಫ್ರೆಂಡ್ಸ್ ಗಂಗೊಳ್ಳಿ ತಂಡ ಪ್ರಥಮ ಸ್ಥಾನಿಯಾಗಿ ಕರಾವಳಿ ವಾರಿಯರ್ಸ್ ಟ್ರೋಫಿ-2021ಮತ್ತು 15 ಸಾವಿರ ರೂ. ನಗದನ್ನು ತನ್ನದಾಗಿಸಿಕೊಂಡಿತು. ಬೆಳಗಿನ ಜಾವ ನಡೆದ ಅಂತಿಮ ಹಣಾಹಣಿಯಲ್ಲಿ ನ್ಯೂ ಫ್ರೆಂಡ್ಸ್ ಗಂಗೊಳ್ಳಿ ತಂಡ ಕೋಸ್ಟಲ್ ಸ್ಟ್ರೈಕರ್ ಗಂಗೊಳ್ಳಿ ತಂಡವನ್ನು ಸೋಲಿಸಿತು. ಬಿ.ಕೆ.ಬಾಯ್ಸ್ ಗಂಗೊಳ್ಳಿ ತಂಡ ತೃತೀಯ ಸ್ಥಾನಿಯಾಯಿತು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದ ಅತಿಥಿಗಳಾಗಿದ್ದ ಗಂಗೊಳ್ಳಿಯ ಮತ್ಸ್ಯೋದ್ಯಮಿ ಹರೀಶ ಕುಮಾರ್, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕ ಗುರುರಾಜ್ ಖಾರ್ವಿ ಮತ್ತು ಗಣೇಶ ಪೂಜಾರಿ ಬೇಲಿಕೇರಿ ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸುಮಂತ ಖಾರ್ವಿ ಉಪಸ್ಥಿತರಿದ್ದರು. ಇದೇ ಸಂದರ್ಭ ಐದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ವಿತರಿಸಲಾಯಿತು. ಉದ್ಘಾಟನೆ: ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಆಶ್ರಯದಲ್ಲಿ ಗುರಿಕಾರರ ಸಮಾವೇಶ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದ ಹೋಬಳಿ ವ್ಯಾಪ್ತಿಯ ಮೊಗವೀರ ಸಮಾಜದ ಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಇಲ್ಲಿನ ಶ್ರೀಮಹಿಷಾಸುರಮರ್ದಿನಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಉದ್ಘಾಟಿಸಿ, ಮೊಗವೀರರೆಲ್ಲರೂ ಒಂದಾಗಬೇಕು. ಉಪ್ಪಳದಿಂದ ಶಿರೂರು ತನಕದ ಎಲ್ಲ ಮೊಗವೀರರನ್ನು ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ ಸಮಾಜ ಇನ್ನೂ ಮುಂದೆ ಬರಬೇಕು. ಆ ಹಿನ್ನೆಲೆಯಲ್ಲಿ ಸಮಾಜದ ಧಾರ್ಮಿಕ ಸ್ಥಳಗಳ ಜೀರ್ಣೋದ್ದಾರದ ಬಳಿಕ ಎಲ್ಲ ಸಮಾಜದವರು ನಮ್ಮ ಸಮಾಜವನ್ನು ನೋಡುವಂತಾಗಿದೆ. ಗುರಿಕಾರರು ಕೂಡಾ ಅಷ್ಟೆ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ, ಶುಭ ಅಶುಭ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಪ್ರದಾಯವನ್ನು ಮುಂದುವರಿಸುವುದು, ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕಾರ್ಯ ಮಾಡಬೇಕಿದೆ ಎಂದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷ ಕೆ.ಕೆ ಕಾಂಚನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ನೇಹ, ಪ್ರೀತಿ, ವಿಶ್ವಾಸ, ಬಾಂಧವ್ಯ ಬೆಳೆಯುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನು ಸಮವಾಗಿ ಸ್ವೀಕರಿಸಬೇಕು. ವ್ಯವಸ್ಥಿತವಾಗಿ ಕ್ರೀಡಾ ಸ್ಪರ್ಧೆಯನ್ನು ಸಂಘಟಿಸಿದ ಕೋಟೇಶ್ವರ ಗಾಣಿಗ ಯುವ ಸಂಘಟನೆಗೆ ಅಭಿನಂದನೆಗಳು ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಹೇಳಿದರು. ಅವರು ಕೋಟೇಶ್ವರ ಗಾಣಿಗ ಯುವ ಸಂಘಟನೆ ದಶಮಾನೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗಾಣಿಗ ಸಮಾಜ ಬಾಂಧವರಿಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾದ ವಿವಿಧ ಕ್ರೀಡಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೋಟೇಶ್ವರ ಗಾಣಿಗ ಯುವ ಸಂಘಟನೆಯ ಅಧ್ಯಕ್ಷ ಅಭಿಲಾಷ್ ಬಿ.ಎ ವಹಿಸಿದ್ದರು. ಕ್ರೀಡಾ ಸ್ಪರ್ಧೆಗಳಾದ ಕಪ್ಪೆ ಜಿಗಿತ, ಚೆಂಡೆಸೆತ, ಬಕೆಟ್ ಬಾಲ್, ಓಟ, ಗುಂಡೆಸೆತ, ಮಡಿಕೆ ಒಡೆಯುವುದು, ಹಗ್ಗಜಗ್ಗಾಟ, ಥೋಬಾಲ್, ವಾಲಿಬಾಲ್, ಕ್ರಿಕೆಟ್ ಪಂದ್ಯಾಟ ನಡೆಯಿತು. ಕ್ರೀಡಾಕೂಟದ ಯಶಸ್ವಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ, ಸುನೀಲ್, ಕೇಶುಬಾಯಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಿಕ್ಷಣ ಸಂಸ್ಥೆಗಳು ಬುದ್ಧಿವಂತರನ್ನು ತಯಾರು ಮಾಡಬಹುದು. ಪ್ರಪಂಚದಲ್ಲಿ ಬುದ್ದಿವಂತರು ಅನೇಕರಿರಬಹುದು. ಆದರೆ ನಮಗೆ ಹೃದಯವಂತರು ಬೇಕು. ರಂಗ ಚಟುವಟಿಕೆಯಿಂದ ಹೃದಯ ಅರಳುತ್ತದೆ ಎಂದು ಕನ್ನಡ ಪ್ರಾಧ್ಯಾಪಕ ಸುಜಯೀಂದ್ರ ಹಂದೆ ಹೇಳಿದರು. ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾದರು. ಚಿತ್ರಕಲಾವಿದ ಎಂ. ಎಲ್. ಸೋಮವಾರದ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಬಾಬು ಶೆಟ್ಟಿ, ಸುರೇಶ್ ಬಟವಾಡಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀಧರ್ ಭಟ್, ಶ್ರೀ ಸಿದ್ದೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಮಹಾಲಿಂಗ ನಾಯ್ಕ್, ವಲಯ ಅರಣ್ಯಾಧಿಕಾರಿ ಶ್ರೀಧರ್ ಪಿ., ಬೈಂದೂರು ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್, ಬೈಂದೂರು ಡಾ| ಬಿ. ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ರಿ. ಬೈಂದೂರು ಅಧ್ಯಕ್ಷ ನಾಗರಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ ಸ್ಥಾನ ಗಳಿಸುವ ಮುಖೇನ ಸರಸ್ವತಿ ವಿದ್ಯಾಲಯ ಅಗ್ರ ಸ್ಥಾನವನ್ನು ಪಡೆದಿದೆ. ಬಾಲಕರ ಮತ್ತು ಬಾಲಕಿಯರ ಟೆನಿಕಾಯ್ಟ್ ನಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ಬಾಲ್ ಬ್ಯಾಡ್ಮಿಂಟನಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿದರು. ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದರೆ ಕೊಲ್ಲೂರಿನ ಶ್ರೀ…
