ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪರೀಕ್ಷಾ ಕೇಂದ್ರವೊಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೋರ್ವರಿಗೆ ಕೋವಿಡ್-೧೯ ಪಾಸಿಟಿವ್ ಇರುವುದು ದೃಢವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಆಕೆ ಪರೀಕ್ಷೆ ಬರೆದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಈ ವಿದ್ಯಾರ್ಥಿನಿ ಈಗಾಗಲೇ ಎರಡು ಪರೀಕ್ಷೆಗಳನ್ನು ಬರೆದಿದ್ದು, ಸೋಮವಾರ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷಾ ಕೊಠಡಿಗೆ ಹಾಜರಾಗುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗಿದ್ದು ಈ ಸಂದರ್ಭ ಆಕೆಗೆ ಜ್ವರದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿತ್ತು. ಬಳಿಕ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದ್ದು, ಅದನ್ನು ಸೀಲ್‌ಡೌನ್ ಮಾಡಲಾಗಿದೆ. ಪೊಷಕರು ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ವಿದ್ಯಾರ್ಥಿನಿಯ ಮನೆಯ ಓರ್ವರು ಮುಂಬಯಿಯಿಂದ ಬಂದು ಕ್ವಾರಂಟೈನ್ ಮುಗಿಸಿ ಮನೆಗೆ ಬಂದಿದ್ದು, ಅವರಿಂದ ವಿದ್ಯಾರ್ಥಿನಿಗೂ ಪಾಸಿಟಿವ್ ಬಂದಿರುವ ಶಂಕೆ ಇದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಆರಾಧ್ಯ ದೈವೀಕೇಂದ್ರವಾದ ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಸಮೀಪ ಕಡಲತೀರದಲ್ಲಿ ಕುಂದಾಪುರ ತಾಲ್ಲೂಕು ನಾಡದೋಣಿ ಮೀನುಗಾರರ ಒಕ್ಕೂಟ ಮತ್ತು ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಸಂಯುಕ್ತವಾಗಿ ಭಾನುವಾರ ಸಾಂಪ್ರದಾಯಿಕ ಸಮುದ್ರ ಪೂಜೆ ಸಲ್ಲಿಸಿದವು. ನಾಡದೋಣಿ ಮೀನುಗಾರಿಕೆ ಋತು ಆರಂಭಿಸುವ ಪೂರ್ವಭಾವಿಯಾಗಿ ಸುರಕ್ಷಿತ ಮತ್ತು ಸಮೃದ್ಧ ಮೀನುಗಾರಿಕೆಗಾಗಿ ಪ್ರಾರ್ಥಿಸಿ ಪ್ರತಿವರ್ಷ ಈ ಪೂಜೆ ನಡೆಸಲಾಗುತ್ತದೆ. ಅರ್ಚಕ ಆದರ್ಶ ಭಟ್ ಅಧ್ವರ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀರದಲ್ಲಿ ಮರಳಿನ ಸಮುದ್ರ ದೇವತೆಯ ಲಿಂಗ ರಚಿಸಿ ಅದಕ್ಕೆ ಪೂಜೆ ಮಾಡಲಾಯಿತು. ಆ ಬಳಿಕ ಸಮುದ್ರ ಪೂಜೆ ನೆರವೇರಿಸಿ ಕಡಲಿಗೆ ಬಾಗಿನ, ಹಾಲು ಸಮರ್ಪಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಇದನ್ನೂ ಓದಿ ► ಉಪ್ಪುಂದ: ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘದ ನೂತನ ಕಟ್ಟಡ ‘ಮತ್ಸ್ಯಸಿರಿ’ ಉದ್ಘಾಟನೆ – https://kundapraa.com/?p=39093 . ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ ಹೆಬ್ಬಾರ್, ಕುಂದಾಪುರ ತಾಲ್ಲೂಕು ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಮ್ಪಂದದ ರಾಣಿಬಲೆ ಮೀನುಗಾರರ ಒಕ್ಕೂಟದ ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘದ ನೂತನ ಕಟ್ಟಡ ‘ಮತ್ಸ್ಯಸಿರಿ’ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಕಟ್ಟಡವನ್ನು, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕಿ ಚಂದ್ರಪ್ರತಿಮಾ ಎಂ. ಜೆ ಭದ್ರತಾಕೋಶವನ್ನು, ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ ಗಣಕಯಂತ್ರವನ್ನು ಉದ್ಘಾಟಿಸಿದರು. ಒಕ್ಕೂಟದ ನೂತನ ಕಟ್ಟಡವನ್ನು ಅದರ ಕೋಶಾಧಿಕಾರಿ ಜಿ. ಮಾಧವ ಖಾರ್ವಿ ಉದ್ಘಾಟಿಸಿದರು. ಒಕ್ಕೂಟದ ಗೌರವ ಸಲಹೆಗಾರ ಎಸ್. ಮದನ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ನಿರ್ದೇಶಕ ಮಂಜುನಾಥ ಜಿ. ಖಾರ್ವಿ ಸ್ವಾಗತಿಸಿ ವಂದಿಸಿದರು. ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಅರುಣ್‌ಕುಮಾರ, ಸಂಘದ ನಿರ್ದೇಶಕರಾದ ಡಿ. ಮೋಹನ್ ಖಾರ್ವಿ, ಎ. ಶ್ರೀನಿವಾಸ ಖಾರ್ವಿ, ಪದ್ಮನಾಭ ಖಾರ್ವಿ, ಜಿ. ಮಾಧವ ಖಾರ್ವಿ, ಡಿ. ಶುಕ್ರ ಖಾರ್ವಿ, ರಾಜಾರಾಮ್ ಖಾರ್ವಿ, ರಮೇಶ ಖಾರ್ವಿ, ಬಿ. ನಾಗೇಶ್ ಖಾರ್ವಿ, ಬೈಂದೂರು ವಲಯ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ತಹಶಿಲ್ದಾರ್ ಕಚೇರಿ, ಎಸಿ ಕಚೇರಿ, ಉಪನೋಂದಣಿ ಕಚೇರಿ ಹಾಗೂ ಪುರಸಭೆ ಕಚೇರಿ, ಎಪಿಎಂಸಿ ಮಾರುಕಟ್ಟೆಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಿಢೀರ್ ಭೇಟಿ ಕೊಟ್ಟು ಕೊರೊನಾ ತಡೆಗಟ್ಟುವಿಕೆ ಕೈಗೊಂಡ ಮುಂಜಾಗೃತಾ ಕ್ರಮಗಳ ಪರಿಶೀಲನೆ ನಡೆಸಿದ ಘಟನೆ ನಡೆಸಿದರು. ಈ ವೇಳೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಥರ್ಮಲ್ ಸ್ಕ್ಯಾನರ್ ಇರಲಿಲ್ಲ, ಭೇಟಿಕೊಟ್ಟವರ ದಾಖಲೆ ಪುಸ್ತಕ ನಿರ್ವಹಣೆ ಇಲ್ಲದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ಬಂದಿದೆ. ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಮಾತ್ರವಲ್ಲದೆ ಮಾಸ್ಕ್ ಧರಿಸದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೂಡ ನೀಡಲಾಯಿತು. ಎಸಿ ಕಚೇರಿಯಲ್ಲಿ ಕರ್ತವ್ಯ ಲೋಪ ಕಂಡುಬಂದಿದ್ದು ಹಾಜರಾತಿ ಪುಸ್ತಕದಲ್ಲಿ ಸಹಿಯೇ ಹಾಕದಿರುವ ಕೆಲವು ಸಿಬ್ಬಂದಿಗಳ ಬಗ್ಗೆಯೂ ತಪಾಸಣೆ ವೇಳೆ ತಿಳಿದುಬಂದಿದೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮೆಮೋ ನೀಡುವುದಾಗಿ ಲೋಕಾಯುಕ್ತ ಡಿ.ವೈಎಸ್.ಪಿ ಭಾಸ್ಕರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ► ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬoದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು: 1) ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. 2) ವೈದ್ಯಕೀಯ ತುರ್ತು ಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ.ಇವುಗಳ ಹೊರತು ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ. ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು: ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.29ರ ಸೋಮವಾರ 18 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 209 ನೆಗೆಟಿವ್: ಈ ತನಕ ಒಟ್ಟು 14,268 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,862 ನೆಗೆಟಿವ್, 1,197 ಪಾಸಿಟಿವ್ ಬಂದಿದ್ದು, 209 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 74 ನೆಗೆಟಿವ್, 18 ಪಾಸಿಟಿವ್ ಬಂದಿದೆ. 139 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,197 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1056 ಮಂದಿ ಬಿಡುಗಡೆಯಾಗಿದ್ದು, 139 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡ ವಿಶೇಷ ಕ್ರಮಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ – https://kundapraa.com/?p=39079 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯಷ್ ಕಿಟ್ ವಿತರಣಾ ಕಾರ್ಯಕ್ರಮ ಕಂಬದಕೋಣೆ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಜರುಗಿತು. ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಆಯುಷ್ ಕಿಟ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕಂಬದಕೋಣೆ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಪಿಡಿಓ ಪೂರ್ಣಿಮಾ, ಹಾಗೂ ಇತರೆ ಸದಸ್ಯರು ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ವರದಿ. ಬ್ರಹ್ಮಾವರ: ಒಂದು ಹೊತ್ತಿನ ಊಟಕ್ಕೂ ಪರದಾಡುವ ಬಡವರು, ಬೀದಿ ಬದಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ತಿರುಗುವವರು, ಮನೆಯಲ್ಲಿ ಎಲ್ಲ ಇದ್ದು ಇಲ್ಲದಂತೆ ಶೋಚನೀಯ ಬದುಕನ್ನು ಸಾಗಿಸುವರು. ಇವರೆಲ್ಲರಿಗೂ ಒಂದು ಬದುಕಿದೆ ಅಂತ ಅನಿಸಿದರೂ ಸಾಕಷ್ಟು ಭಾರಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಾರೆ. ಆದರೆ ಪ್ರಶಾಂತ್ ಪೂಜಾರಿ ಕೂರಾಡಿ ಎಂಬ ಈ ಕರುಣಾಮಯಿ ಯುವಕನೋರ್ವ ದುಬೈನಲ್ಲಿ ಹತ್ತು ವರ್ಷ ದುಡಿದು ಬಳಿಕ ಆ ಕೆಲಸವನ್ನು ತೊರೆದು ಊರಿಗೆ ಮರಳಿದ್ದಲ್ಲದೇ ಅಸಹಾಯಕರ ನೋವಿಗೂ ಸ್ಪಂದಿಸುತ್ತಿದ್ದಾರೆ. ಅವರಿಗಾಗಿಯೇ ಅಪ್ಪ-ಅಮ್ಮ ಅನಾಥಾಶ್ರಮ ಎಂಬ ಸೂರು ನಿರ್ಮಿಸಿ ತನ್ನ ಹಗಲು-ಇರುಳಿನ ದುಡಿಮೆಯ ಜೊತೆ ಅವರಿವರು ಸಹಕಾರದಿಂದ 20 ಜನರ ಬಾಳಿಗೆ ಬೆಳಕಾಗುತ್ತಿದ್ದಾರೆ. ಬ್ರಹ್ಮಾವರದ ಆಕಾಶವಾಣಿ ಸಮೀಪದಲ್ಲಿರುವ ಗಿರಿಜಾ ಕೃಷ್ಣ ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಕೂರಾಡಿ ಅವರ ಅಪ್ಪ-ಅಮ್ಮ ಅನಾಥಾಲಯ ನೊಂದವರ ಬದುಕಿಗೆ ಆಧಾರ ಸ್ಥಂಭವಾಗಿ ಹಲವಾರು ಹಿರಿಯ ಜೀವಗಳ ಕಣ್ಣೀರ ಒರೆಸುವ ಕೆಲಸ ಮಾಡುತ್ತಿದೆ. ಅನಾಥಾಲಯ ಸ್ಥಾಪಿಸಿ 18 ತಿಂಗಳು ಕಳೆದಿದ್ದು ನಿರ್ಗತಿಕರು, ಮಾನಸಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಭೇಟಿ ನೀಡಿದರು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿಗಳು ಥೀಮ್ ಪಾರ್ಕ್‌ಗೆ ಬರುವ ರಸ್ತೆಯ ಸಮಸ್ಯೆ ಹಾಗೂ ನಿರ್ಮಾಣವಾಗಲಿರುವ ಸ್ವಾಗತ ಗೋಪುರದ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೇ ಮುಂದೆ ಥೀಮ್ ಪಾರ್ಕ್‌ನಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ ಇದೇ ಸಂದರ್ಭದಲ್ಲಿ ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು, ಕಾರಂತರ ಸಮಾಧೀಗೆ ತೆರಳಲು ರಸ್ತೆ ನಿರ್ಮಾಣ ಹಾಗೂ ಕುಟುಂಬದವರ ಜೊತೆ ಸಂಪರ್ಕಿಸಿ ಕಾರಂತರ ಸಮಾಧಿ ನಿರ್ಮಾಣ ಮಾಡುವ ಬಗ್ಗೆ ಸಚಿವರ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.28ರ ಭಾನುವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಈ ಪೈಕಿ 18 ಪುರುಷರು, 15 ಮಹಿಳೆಯರು ಹಾಗೂ 7 ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ. ಒಟ್ಟು ಪ್ರಕರಣಗಳಲ್ಲಿ 6 ಮಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ, 15 ಮಂದಿ ಮುಂಬೈನಿಂದ, ಇಬ್ಬರು ಬೆಂಗಳೂರು, ಓರ್ವ ಬಾಗಲಕೋಟೆಯಿಂದ ಹಿಂದಿರುಗಿದವರಾಗಿದ್ದಾರೆ. ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸೇರಿದಂತೆ 16 ಪ್ರಕರಣ ಪಾಥಮಿಕ ಸಂಪರ್ಕದಿಂದ ಬಂದಿದೆ. ಇಂದು 132ನೆಗೆಟಿವ್: ಈ ತನಕ ಒಟ್ಟು 14,233ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,788ನೆಗೆಟಿವ್, 1,179ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 132ನೆಗೆಟಿವ್, 40ಪಾಸಿಟಿವ್ ಬಂದಿದೆ. 126 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,179 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1051 ಮಂದಿ ಬಿಡುಗಡೆಯಾಗಿದ್ದು, 126 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…
