Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.25ರ ಗುರುವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಇವುಗಳಲ್ಲಿ 10 ಪ್ರಕರಣ ಮಹಾರಾಷ್ಟ್ರದಿಂದ ಹಿಂದಿರುಗಿದವರದ್ದಾಗಿದ್ದು, 4 ಪ್ರಕರಣ ಸ್ಥಳೀಯ ಸಂಪರ್ಕದಿಂದ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ನಾಲ್ವರು ಪುರುಷರು, ಏಳು ಮಹಿಳೆಯರು ಹಾಗೂ ಮೂವರು ಮಕ್ಕಳ ಸೇರಿದ್ದಾರೆ. ಈ ತನಕ ಒಟ್ಟು 13,840ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,336ನೆಗೆಟಿವ್, 1,116 ಪಾಸಿಟಿವ್ ಬಂದಿದ್ದು, 388 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 103 ನೆಗೆಟಿವ್, 14 ಪಾಸಿಟಿವ್ ಬಂದಿದೆ. 94 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1,116ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1020 ಮಂದಿ ಬಿಡುಗಡೆಯಾಗಿದ್ದು, 94  ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು, ಬೈಂದೂರು ಬೈಂದೂರು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ವೆಂಕ್ಟ ಪೂಜಾರಿ ಸಸಿಹಿತ್ಲು ಇವರ ಮನೆಯಲ್ಲಿ ಗುರುವಾರ ಯಂತ್ರಶ್ರೀ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ವೆಂಕ್ಟ ಪೂಜಾರಿ ಸಸಿಹಿತ್ಲು, ಬೈಂದೂರು ಕೇಂದ್ರ ಸಮಿತಿ ಅಧ್ಯಕ್ಷರಾದ ರಘುರಾಮ ಕೆ ಪೂಜಾರಿ. ಕೊಲ್ಲೂರು ವಲಯದ ಅಧ್ಯಕ್ಷರಾದ ಮಂಜು ಪೂಜಾರಿ ಸಸಿಹಿತ್ಲು, ಯೋಜನಾಧಿಕಾರಿಗಳಾದ ಶಶಿರೇಖಾ ಪಿ., ಕೃಷಿ ಅಧಿಕಾರಿಗಳಾದ ಮಂಜುನಾಥ್ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಹಾಗೂ ಬೈಂದೂರು ವಲಯ ಮಾಜಿ ಅಧ್ಯಕ್ಷರಾದ ಕೃಷ್ಣ ಗಾಣಿಗ ಮೊದಲಾದವರು ಇದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ನೇತೃತ್ವದಲ್ಲಿ ಬೈಂದೂರು ತಾಲೂಕಿನಲ್ಲಿ ೮೨೫ ಕುಟುಂಬದ ೯೨೦ ಎಕರೆ ಜಮೀನಿನಲ್ಲಿ ಯಂತ್ರಶ್ರೀ ನಾಟಿ ಪದ್ದತಿಯ ಗುರಿಯನ್ನು ಹೊಂದಿದೆ.

Read More

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಡಿಸೆಂಬರ್ 2020 ರೊಳಗೆ ಜಿಲ್ಲೆಯ ಎಲ್ಲಾ 158 ಗ್ರಾಮ ಪಂಚಾಯತ್ ಗಳಲ್ಲಿ ಎಸ್.ಎಲ್.ಆರ್.ಎಂ ಘಟಕಗಳನ್ನು ಆರಂಭ ಮಾಡುವ ಮೂಲಕ ಉಡುಪಿ ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸಂಪೂರ್ಣ ಯಶಸ್ಸು ಸಾಧಿಸುವ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 65 ರಿಂದ 70 ಗ್ರಾಮ ಪಂಚಾಯತಿಗಳಲ್ಲಿ ಎಸ್.ಎಲ್.ಆರ್.ಎಂ ಘಟಕಗಳನ್ನು ಆರಂಭಿಸಲಾಗಿದ್ದು, ಅದರಲ್ಲಿ ಕೆಲವೊಂದು ಘಟಕಗಳು ಕಸ ವಿಲೇವಾರಿಯಲ್ಲಿ ಬರುವ ಆದಾಯದಿಂದಲೇ ತಮ್ಮ ಸಂಪೂರ್ಣ ಖರ್ಚು ವೆಚ್ಚಗಳನ್ನು ಭರಿಸಿಕೊಂಡು ಸಂಪೂರ್ಣ ಸ್ವಾವಲಂಬನೆ ಸಾಧಿಸಿವೆ. ಹಸಿ ಕಸ ಸಂಗ್ರಹಣೆ ನಿಲ್ಲಿಸಲಾಗಿದ್ದು, ಹಸಿ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಬಗ್ಗೆ ಅರಿವು ಮೂಡಿಸಲಾಗಿದ್ದು, ಒಣ ಕಸ ಸಂಗ್ರಹಣೆ ಮಾತ್ರ ಮಾಡಲಾಗುತ್ತಿದ್ದು, ಇದಕ್ಕಾಗಿ ಪಂಚಾಯತ್ ಗಳಲ್ಲಿ 20 ರಿಂದ 60 ರೂ ಗಳ ವರೆಗೆ ಮಾಸಿಕ ದರ ವಸೂಲಿ ಮಾಡುತ್ತಿದ್ದು, ಈ ದರವನ್ನು ಆಯಾ ಗ್ರಾಮ ಪಂಚಾಯತ್ ಗಳೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.24ರ ಬುಧವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಒಟ್ಟು ಪ್ರಕರಣಗಳಲ್ಲಿ 9 ಪ್ರಕರಣ ಮಹಾರಾಷ್ಟ್ರದ್ದಾಗಿದ್ದು, 4 ಸ್ಥಳೀಯ ಪ್ರಕರಣ ಹಾಗೂ 1 ಬೆಂಗಳೂರಿನಿಂದ ಬಂದವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 7 ಪುರುಷರು, 5 ಮಹಿಳೆಯರು, 2 ಮಕ್ಕಳು ಸೇರಿದ್ದಾರೆ. ಸ್ಥಳೀಯ ಪ್ರಕರಣಗಳಲ್ಲಿ 3 ಪ್ರಕರಣ ಪಿ-3851ರ ಸಂಪರ್ಕದಿಂದ ಬಂದಿದ್ದು, ಒಂದು ಪ್ರಕರಣದ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಇಂದು 51 ನೆಗೆಟಿವ್: ಈ ತನಕ ಒಟ್ಟು 13,733ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,233ನೆಗೆಟಿವ್, 1,102 ಪಾಸಿಟಿವ್ ಬಂದಿದ್ದು, 398 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 51ನೆಗೆಟಿವ್, 14 ಪಾಸಿಟಿವ್ ಬಂದಿದೆ. 113 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1,102ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 987 ಮಂದಿ ಬಿಡುಗಡೆಯಾಗಿದ್ದು, 113 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಗೆ ಚಿಕಿತ್ಸೆ ನೀಡಲು ನೊಂದಾಯಿಸಿಕೊAಡಿರುವ ಆಸ್ಪತ್ರೆಗಳು , ತಮ್ಮಲ್ಲಿ ಬರುವ ಕೋವಿಡ್-19 ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ,ಜಿಲ್ಲಾಧಿಕಾರಿ ಕಚೇರಿಯಲ್ಲಿ , ಕೋವಿಡ್-19 ಚಿಕಿತ್ಸೆ ನೀಡಲು ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳು ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೋವಿಡ್ 19 ಚಿಕಿತ್ಸೆ ನೀಡಲು 19 ಆಸ್ಪತ್ರೆಗಳು ನೊಂದಾಯಿಸಿದ್ದು, ಈ ಆಸ್ಪತ್ರೆಗಳು ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಬೆಡ್ ಗಳನ್ನು ಮೀಸಲಿಡುವುದಂತೆ ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳನ್ನು ಅಳವಡಿಸಿಕೊಳ್ಳುವಂತೆ ಹಾಗೂ ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಂಡು ಯಾವುದೇ ಸಂದರ್ಭದಲ್ಲಿ ತಮ್ಮಲ್ಲಿಗೆ ಬರುವ ರೋಗಿಯ ಚಿಕಿತ್ಸಗೆ ಸಂಪೂಣ್ ಸಿದ್ದರಿರುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ , ಯಾವುದೇ ರೋಗಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ 108 ಪಾಸಿಟಿವ್ ಪ್ರಕರಣಗಳು ಮಾತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜೂನ್ 25 ರಿಂದ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸುಗಮವಾಗಿ ಪರೀಕ್ಷೆ ನಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ, ಉಡುಪಿಯ ವಳಕಾಡು ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಮಾತಸನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಸುರಕ್ಷಿತ ಮತ್ತು ಸುಗಮವಾಗಿ ನಡೆಸುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಜಿಲ್ಲಾ ಪಂಚಾಯತ್ ಸಿಇಓ , ಡಿಡಿಪಿಐ ಮತ್ತು ನಾನು ಹಲವು ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ, ಕಂಟೋನ್ಮೆAಟ್ ಝೋನ್ ನಿಂದ ಬರುವ 4 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ, ಕ್ವಾರಂಟೈನ್ ಗೆ ಬಳಸಿರುವ ಶಾಲೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ವ್ಯವಸ್ಥೆ ಮಾಡಲಾಗಿದ್ದು, 10 ಪರೀಕ್ಷಾ ಕೇಂದ್ರಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿಶ್ವದಾದ್ಯಂತ ಕರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯಾವುದೇ ಭೀತಿ ಇಲ್ಲದೆ ಪರೀಕ್ಷೆ ಎದುರಿಸಬೇಕು. ಗಂಗೊಳ್ಳಿಯ ಎಸ್.ವಿ.ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪೋಷಕರು ಯಾವುದೇ ಆತಂಕಕ್ಕೆ ಒಳಗಾಗದೆ ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು. ಪರೀಕ್ಷೆ ಬರೆಯುವ ಮಕ್ಕಳ ಉಪಯೋಗಕ್ಕಾಗಿ ಹ್ಯಾಂಡ್ ಸ್ಯಾನಿಟೈಸರ್‌ನ್ನು ಎಲ್ಲಾ ಶಾಲೆಗಳಿಗೆ ವಿತರಿಸಲಾಗಿದೆ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಹೇಳಿದರು. ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಗ್ರಾಮದ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜು, ಸ.ವಿ.ಆಂಗ್ಲ ಮಾಧ್ಯಮ ಶಾಲೆ, ಸ್ಟೆಲ್ಲಾ ಮಾರೀಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ನಿಯೋಜಿತ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಎಚ್.ಗಣೇಶ ಕಾಮತ್, ರೋಟರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳಲ್ಲಿ ಕೊವೀಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಠಾಣೆಯನ್ನು ಬಂದ್ ಮಾಡಲಾಗಿದ್ದು, ಮಂಗಳವಾರ ಸ್ಯಾನಿಟೈಸ್ ಮಾಡಲಾಯಿತು. ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಸದ್ಯ ಪೊಲೀಸರು ಹಳೆಯ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 2 ದಿನಗಳ ಬಳಿಕ ಠಾಣೆಯಲ್ಲಿ ಶಿಫ್ಟ್ ಆಗಲಿದ್ದಾರೆ. ಇದನ್ನೂ ಓದಿ: ► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.23ರ ಮಂಗಳವಾರ 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.  ಒಟ್ಟು ಪ್ರಕರಗಳಲ್ಲಿ ಒಂದು ಪ್ರಕರಣ ಪಿ-2047  ಸಂಪರ್ಕದಿಂದ ಬಂದಿದ್ದು, 4  ಪ್ರಕರಣ ದುಬೈ, ಕುವೈತ್ ಹಾಗೂ ಸೌದಿ ಅರೆಬಿಯಾದಿಂದ ಹಿಂದಿರುಗಿದವರು ಹಾಗೂ 6 ಪ್ರಕರಣ ಮುಂಬೈನಿಂದ ಹಿಂದಿರುಗಿದವರಿಂದ ಬಂದಿದೆ. ಈ ಪೈಕಿ 4 ಪುರುಷರು, 3 ಮಹಿಳೆಯರು, 4 ಮಕ್ಕಳು ಸೇರಿದ್ದಾರೆ. ಇಂದು 47 ನೆಗೆಟಿವ್: ಈ ತನಕ ಒಟ್ಟು 13,626 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,182 ನೆಗೆಟಿವ್, 1088 ಪಾಸಿಟಿವ್ ಬಂದಿದ್ದು, 356 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 47 ನೆಗೆಟಿವ್, 11 ಪಾಸಿಟಿವ್ ಬಂದಿದೆ. 108 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1088ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 978 ಮಂದಿ ಬಿಡುಗಡೆಯಾಗಿದ್ದು, 108 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೋವಿಡ್ ವಿರುದ್ಧದ ಸಮರದಲ್ಲಿ ಪತ್ರಕರ್ತರು ವಹಿಸಿದ ಪಾತ್ರ ಬಹಳ ಮಹತ್ತರವಾದದ್ದು. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಶ್ರಮ ಅಪಾರ’ ಎಂದು ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ನಾಗೇಶ್ ಹೇಳಿದ್ದಾರೆ. ಕುಂದಾಪುರದ ಸರ್ಕಾರಿ ಅಯುಷ್ ಆಸ್ಪತ್ರೆಯಲ್ಲಿ ಪತ್ರಕರ್ತರ ರೋಗ ನಿರೋಧಕ ಶಕ್ತಿ ವೃದ್ಧಿಗೆ ನೀಡಲಾದ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ಕೊರೋನಾದ ಪ್ರಭಾವ ಇನ್ನಷ್ಟು ಸಮಯ ಮುಂದುವರಿಯಲಿದೆ. ಲಾಕ್ ಡೌನ್ ಸಡಿಲಿಕೆಯ ಬಳಿಕ ಜನಸಾಮಾನ್ಯರು ಕೋವಿಡ್ ಕುರಿತು ಹೆಚ್ಚು ಕಾಳಜಿ ವಹಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮತ್ತು ಆಗಾಗ ಸ್ಯಾನಿಟೈಝರ್ ಬಳಕೆ ಕೋವಿಡ್ ತಡೆಗಟ್ಟುವಲ್ಲಿ ಬಹಳ ಸಹಕಾರಿ. ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕಿತ್ಸೆ ನೀಡಿದ ಕಾರಣ ಕೋವಿಡ್ ರೋಗಿಗಳಲ್ಲಿ ಬಹುತೇಕರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನುಳಿದ ರೋಗಿಗಳು ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ನಾಗೇಶ್ ಹೇಳಿದರು. ಆಯುರ್ವೇದ ಔಷಧ ಪದ್ದತಿಯಲ್ಲಿ…

Read More