ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ (ಎಪಿಎಂಸಿ) ನೂತನ ಅಧ್ಯಕ್ಷರಾಗಿ ಬೈಂದೂರಿನ ವೆಂಕಟ ಪೂಜಾರಿ ಸಸಿಹಿತ್ಲು ಸೋಮವಾರ ಅಧಿಕಾರ ಸ್ವೀಕರಿಸಿದರು. ಇತ್ತಿಚಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಳಾಗಿದ್ದ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷರಾಗಿ ವಸಂತ ಕುಮಾರ ಶೆಟ್ಟಿ ಕೇದೂರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಒಟ್ಟು 16 ಸದಸ್ಯ ಬಲವನ್ನು ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಈಗ 10 ಬಿಜೆಪಿ, 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಸರ್ಕಾರ ಇತ್ತೀಚೆಗೆ ಮೂರು ಜನ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ವೆಂಕಟ ಪೂಜಾರಿ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ಯಾವುದೇ ಒಬ್ಬ ರೈತನಿಗೂ ಸಮಸ್ಯೆಯಾಗಬಾರದು. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಹೊತ್ತು ತಂದು ಮಾರಾಟ ಮಾಡಲು ಬಂದವರಿಗೆ ಯಾವುದೇ ಸುಂಕ ವಸೂಲಿ ಮಾಡಬಾರದು. ಜನರಿಗೂ ಯಾವುದೇ ಸಮಸ್ಯೆಯಾಗಬಾರದು. ಅಲ್ಲದೆ ಎಪಿಎಂಸಿ ಪ್ರಾಂಗಣದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.22ರ ಸೋಮವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಇವುಗಳಲ್ಲಿ ಮಹಾರಾಷ್ಟ್ರದಿಂದ ಬಂದ 8 ಮಂದಿಗೆ, ಪಿ-6843 ಸಂಪರ್ಕದಿಂದ 4 ಮಂದಿಗೆ ಹಾಗೂ ಪಾಸಿಟಿವ್ ಬಂದಿದ್ದು, ಉಳಿದ ಎರಡು ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಈ ಪೈಕಿ 6 ಮಂದಿ ಪುರುಷರು, 6 ಮಂದಿ ಮಹಿಳೆಯರು 7 ಹಾಗೂ 15 ವರ್ಷದ ಮಕ್ಕಳು ಸೇರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಜೂನ್ 21ರ ಕೋವಿಡ್-19 ವರದಿಯಲ್ಲಿ ಕಾನ್ಸ್ಟೇಬಲ್ ಓರ್ವರಿಗೆ ಪಾಸಿಟಿವ್ ಬಂದಿತ್ತು. ಇಂದು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಈರ್ವರಿಗೆ ಪಾಸಿಟಿವ್ ದೃಡವಾಗಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಮಾಹಿತಿ ದೊರೆತಿದೆ. ► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 . ಇಂದು 53 ನೆಗೆಟಿವ್: ಈ ತನಕ ಒಟ್ಟು 13,424ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019ನೇ ಸಾಲಿಗೆ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳ/ಹಿರಿಯ ಕ್ರೀಡಾಪಟುಗಳ/ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ https://sevasindhu.karnataka.gov.in ನಲ್ಲಿ ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಡಾ|ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 9480886467) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ನಾವು ಎಡವಿದ ವಿಷಯಗಳಲ್ಲಿ ಕಾಶ್ಮೀರ ಅತ್ಯಂತ ನೋವಿನದ್ದು. ಅದರ ಪರಿಣಾಮವನ್ನು ನಾವು ಈಗಲೂ ಅನುಭವಿಸುತ್ತಿದ್ದೇವೆ ಎಂದು ಒರಕಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿರುವ ಬಾಡದ ಪ್ರವೀಣ ಶೆಟ್ಟಿ ಹೇಳಿದರು. ಭಾನುವಾರ ಇಲ್ಲಿನ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ನಡೆದ ಬೈಂದೂರು ಹಿರಿಯ ನಾಗರಿಕರ ವೇದಿಕೆಯ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾಶ್ಮೀರ ಸಮಸ್ಯೆಯ ಇತಿಹಾಸವನ್ನು ತೆರೆದಿಟ್ಟ ಅವರು, ಕೋವಿಡ್-೧೯ ಪಿಡುಗಿನ ನಡುವೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ, ಚೀನಾ ಗಡಿ ವಿಚಾರ ಎತ್ತಿಕೊಂಡು ಜಗಳಕ್ಕೆ ನಿಂತಿವೆ. ಅದನ್ನು ಎದುರಿಸಲು ದೇಶದ ಸೇನೆ ಸಮರ್ಥವಾಗಿದೆ. ಈ ಎಲ್ಲ ಸವಾಲುಗಳನ್ನು ಭಾರತ ದಿಟ್ಟವಾಗಿ ಎದುರಿಸಬೇಕು ಎಂದು ಹೇಳಿ ಹುತಾತ್ಮರಾದ ವೀರ ಯೋಧರಿಗೆ ನುಡಿನಮನ ಸಲ್ಲಿಸಿದರು. ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ಎಮ್. ಗೋವಿಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತುಕತೆಯಲ್ಲಿ ಭಾಗವಹಿಸಿದ ಸದಸ್ಯರು ಕೋವಿಡ್ ಮತ್ತು ಲಾಕ್‌ಡೌನ್ ಕಲಿಸಿದ ಮಿತ ಬಳಕೆ, ಪರಿಸರ ಸ್ವಚ್ಛತೆ, ದುಶ್ಚಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ಶ್ರೀ ಮಾತಾ ಚಕ್ರೇಶ್ವರಿ ದೇವಸ್ಥಾನದ 51 ಮಂದಿ ಭಕ್ತಾದಿಗಳು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವರ ಸನ್ನಿಧಿಯಿಂದ ಸತತ 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಂದ್ರ ಖಾರ್ವಿ ಗಂಗೊಳ್ಳಿ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪಾದಯಾತ್ರೆ ಆರಂಭಿಸಿದರು. ಸಮಾಜದ ಉನ್ನತಿಗಾಗಿ, ಗ್ರಾಮದ ಶ್ರೇಯೋಭಿವೃದ್ಧಿ, ಕರೋನಾ ವೈರಸ್ ನಿರ್ಮೂಲನೆ, ಮತ್ಸ್ಯಕ್ಷಾಮ ನಿವಾರಣೆಗಾಗಿ ಪ್ರಾರ್ಥಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುವುದರ ಜೊತೆಗೆ ಪಾದಯಾತ್ರೆಯಲ್ಲಿ ’ಆತ್ಮನಿರ್ಭರ ಭಾರತ್’ ಎನ್ನುವ ಅಭಿಯಾನವನ್ನು ಹಮ್ಮಿಕೊಂಡು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಹಾಗೂ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಿ ದೇಶದ ಅಭಿವೃದ್ಧಿಗೆ ಸಹಕರಿಸಿ ಎನ್ನುವ ಸಂದೇಶವನ್ನು ಪಾದಯಾತ್ರಿಗಳು ದಾರಿಯುದ್ದಕ್ಕೂ ಸಾರುವ ಉದ್ದೇಶ ಹೊಂದಿದ್ದಾರೆ. ಇದನ್ನೂ ಓದಿ: ► ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜೂ.22: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್, ಶಿರೂರು ಆರೋಗ್ಯ ಕೇಂದ್ರದ ಓರ್ವ ಎ.ಎನ್.ಎಂ ಹಾಗೂ ಇತರೆ ಇಬ್ಬರು ವ್ಯಕ್ತಿಗಳಿಗೆ ಕೋರೋನಾ ಪಾಸಿಟಿವ್ ದೃಢವಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಜೂನ್ 21ರ ಕೋವಿಡ್-19 ವರದಿಯಲ್ಲಿ ಕಾನ್ಸ್ಟೇಬಲ್ ಓರ್ವರಿಗೆ ಪಾಸಿಟಿವ್ ಬಂದಿತ್ತು. ಇಂದು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಈರ್ವರಿಗೆ ಪಾಸಿಟಿವ್ ದೃಡವಾಗಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಮಾಹಿತಿ ದೊರೆತಿದೆ. ಶಿರೂರು ಆರೋಗ್ಯ ಕೇಂದ್ರದ ಎ.ಎನ್.ಎಂ ಓರ್ವರಿಗೂ ಪಾಸಿಟಿವ್ ಬಂದಿದ್ದು ಅವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಶಿರೂರು ಆರೋಗ್ಯ ಕೇಂದ್ರ, ಬೈಂದೂರು ಪೊಲೀಸ್ ಠಾಣೆ ಬಂದ್: ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯನ್ನು ಮುಚ್ಚಲಾಗಿದ್ದು, ಸ್ಯಾನಿಟೈಜೇಷನ್ ಮಾಡಿದ ಬಳಿಕ ಒಂದೆರಡು ದಿನಗಳಲ್ಲಿ ಮತ್ತೆ ಠಾಣೆಯನ್ನು ಪುನರಾರಂಭಿಸಲಾಗುತ್ತದೆ. ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗಿದೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ 22ರಂದು ಬಾರ್ಕೂರು ಚೌಳಿಕೆರೆಗೆ ಬಿದ್ದು ಕಾರು ಮುಳುಗಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರಗೊಂಡಿದ್ದ ಯುವತಿಗೆ ಆಸ್ಪತ್ರೆಗೆ ಕೊಂಡೊಯ್ಯುವ ಮೊದಲು ಬಾರ್ಕೂರಿನ 10ನೇ ತರಗತಿ ವಿದ್ಯಾರ್ಥಿನಿಯ ಪ್ರಥಮ ಚಿಕಿತ್ಸೆಯಿಂದಾಗಿ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿನಿ ಹಾಗೂ ಕೆರೆಗಿಳಿದು ಅಪಘಾತವಾದವರ ರಕ್ಷಣೆಗೆ ನಿಂತ ಪ್ರದೀಪ್ ದೇವಾಡಿಗ, ಪ್ರವೀಣ ಪೂಜಾರಿ ಎಂಬ ಯುವಕರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬಾರಕೂರು ಕಡೆಯಿಂದ ಸಾಬರಕಟ್ಟೆ ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆ ಇಲ್ಲದ ಚೌಳಿಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಕಾರು ಮುಳುಗಿದ ತಕ್ಷಣ ಪ್ರದೀಪ್ ದೇವಾಡಿಗ, ಹಾಗೂ ಪ್ರವೀಣ್ ಪೂಜಾರಿ ಎಂಬ ಯುವಕರಿಬ್ಬರು ಜೀವದ ಹಂಗು ತೊರೆದು ಕೆರೆಗೆ ಇಳಿದು ಕಾರಿನ ಗ್ಲಾಸ್ ಒಡೆದು ಕಷ್ಟಪಟ್ಟು ಕಾರಿನೊಳಗಿದ್ದ ಶ್ವೇತ ಶೆಟ್ಟಿ ಹಾಗೂ ಸಂತೋಷ ಶೆಟ್ಟಿಯನ್ನು ಹೊರತೆಗೆಯಲು ಹರಸಾಹಸಪಟ್ಟರು. ಸಂತೋಷ ಶೆಟ್ಟಿ ಅವರು ಅಷ್ಟರಲ್ಲೇ ಮೃತಪಟ್ಟಿದ್ದರು. ಶ್ವೇತಾ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ 10ರಂದು ಗಂಗೊಳ್ಳಿಯ ಪೆರಾಜೆ ಬಾರಿನ ಸಮೀಪ ರಸ್ತೆಯ ಬದಿಯಲ್ಲಿದ್ದ ಬೀದಿ ದನವನ್ನು ಕಳವು ಮಾಡಿ ಕಾರಿನಲ್ಲಿ ತುಂಬಿಕೊಂಡು ತೆರಳಿದ್ದ ಆರೋಪದ ಮೇಲೆ, ಇಂದು ಕಾಪುವಿನಲ್ಲಿ ಆಪಾದಿತ ಮೊಹಮ್ಮದ್ ಹನೀಫ್ ಎಂಬುವವನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ಖಾಸಗಿ ಪ್ಯಾಸೆಂಜರ್ ವಾಹನದಲ್ಲಿ ತೆರಳಿದ್ದ ಮೂವರು ಆಗಂತುಕರು ಗಂಗೊಳ್ಳಿ ಬಂದರು ರಸ್ತೆ ಬಾರ್ ಎದುರು ರಾತ್ರಿ ಹೊತ್ತಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಗೋವನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದರು. ಈ ಘಟನೆಗೂ ಮೊದಲು ಮ್ಯಾಂಗನೀಸ್ ರಸ್ತೆಯಲ್ಲಿ ಗೋಕಳ್ಳತನ ಮಾಡಲು ಯತ್ನಿಸಿದ್ದು, ಸ್ಥಳೀಯರು ಕೂಗಿಕೊಂಡಿದ್ದರಿಂದ ದನವನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಗಂಗೊಳ್ಳಿ ಪೊಲಿಸ್ ಠಾಣಾ ಪಿ.ಎಸ್.ಐ ಭೀಮಾಶಂಕರ ಸಿನ್ನೂರ ಸಂಗಣ್ಣ ಹಾಗೂ ಸಿಬ್ಬಂದಿಗಳಾದ ಶ್ರೀಧರ, ಚಂದ್ರಶೇಖರ, ಪ್ರಿನ್ಸ್ , ಸಂತೋಷ್. ಆರ್ ಡಿ ಸೆಲ್ ವಿಭಾಗದ ಶಿವಾನಂದ ಎಂಬುವವರು ಆರೋಪಿ ಪತ್ತೆಯ ಬಗ್ಗೆ ಮಾಹಿತಿ ಕಲೆ ಹಾಕಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಬಾರಕೂರು ಚೌಳಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ವಕ್ವಾಡಿ ನಿವಾಸಿ ಸಂತೋಷ ಶೆಟ್ಟಿ(40) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆ ವಕ್ವಾಡಿಯ ಶ್ವೇತಾ(23) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಜಾಡಿ ಫ್ಲೈವುಡ್ ಅಂಗಡಿ ಮಾಲಕರಾಗಿದ್ದ ವಕ್ವಾಡಿ ಸಂತೋಷ ಶೆಟ್ಟಿ ಅವರು ಬಾರಕೂರು ಕಡೆಯಿಂದ ಸಾಬರಕಟ್ಟೆ ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆ ಇಲ್ಲದ ಚೌಳಿಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ತಕ್ಷಣವೇ ಸ್ಥಳೀಯರು ಕಾರಿನಲ್ಲಿದ್ದ ಸಂತೋಷ ಶೆಟ್ಟಿ ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ, ಸಂತೋಷ ಶೆಟ್ಟಿ ಅವರು ಮೃತಪಟ್ಟರೆನ್ನಲಾಗಿದೆ. ಸಂತೋಷ್ ಶೆಟ್ಟಿ ಅವರ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶ್ವೇತಾ ಎಂಬುವವರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.21 ರ ಭಾನುವಾರ 1 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ನಾಳಿನ ಕೋವಿಡ ವರದಿಯಲ್ಲಿ ಅಪ್ಡೇಡ್ ಆಗಲಿದೆ. ಕೊವೀಡ್ ಪಾಸಿಟಿವ್ ವ್ಯಕ್ತಿ ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆ ಹಾಗೂ ಪಕ್ಕದ ವೃತ್ತ ನಿರೀಕ್ಷಕರ ಕಛೇರಿಯನ್ನು ಸ್ಯಾನಿಟೈಸ್ ಮಾಡಿ 2-3 ದಿನದ ಮಟ್ಟಿಗೆ ಬಂದ್ ಮಾಡಲಾಗುತ್ತಿದ್ದು, ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿದೆ. ಬೈಂದೂರಿನ ಹಳೆ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕುಂದಾಪುರ ಉಪವಿಭಾಗದ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಇಂದು 27 ನೆಗೆಟಿವ್: ಈ ತನಕ ಒಟ್ಟು 13,745ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,082 ನೆಗೆಟಿವ್, 1064 ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 27 ನೆಗೆಟಿವ್, 1 ಪಾಸಿಟಿವ್ ಬಂದಿದೆ. 97 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1064ಕೊರೋನಾ…
