ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು, ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಿ, ಅಗತ್ಯವಿರುವಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ 166ಎ ರಲ್ಲಿ ಸಹ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲಾಗುವುದು, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಈ ಮುಂದಿನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ದೇವಾಲಯಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಮಾಸ್ಕ್ ಇಲ್ಲದೇ ಇರುವವರು ದೇವಸ್ಥಾನದ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ನೀಡಲಾದ ಸ್ಯಾನಿಟೈಸರ್ ಬಳಸುವುದು. ದೇವಸ್ಥಾನದ ಎದುರುಗಡೆ ಆಳವಡಿಸಿರುವ ನಲ್ಲಿ (ಸೋಪ್/ಹ್ಯಾಂಡ್ ವಾಷ್) ಯಲ್ಲಿ ಕೈ ತೊಳೆದುಕೊಂಡು ದೇವಾಲಯಕ್ಕೆ ಪ್ರವೇಶಿಸುವುದು. ದೇವಾಲಯದ ಒಳಗೆ ಮತ್ತು ಜೊತೆಗೆ (6 ಅಡಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು, ಉಸಿರಾಟದ ತೊಂದರೆ ಜ್ವರ, ಕೆಮ್ಮು, ನೆಗಡಿ ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರು ದೇವಾಲಯದ ಪ್ರದೇಶಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ಮಾರ್ಟ್ ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅಳವಡಿಸಿಕೊಳ್ಳುವುದು. ದೇವರ ದರ್ಶನಕ್ಕೆ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.6ರ ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 121 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 889 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 108 ಮಂದಿ ಬಿಡುಗಡೆಯಾಗಿದ್ದು, 781 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಾಳೆ(ಜೂನ್ 7) ಸಂಪೂರ್ಣ ಲಾಕ್ ಡೌನ್ ಇರಲ್ಲ: ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ಭಾನುವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ. ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂದು ಉಡುಪಿ ಕೋವಿಡ್ -19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ಆಗಲಿದ್ದಾರೆ. ಕೊರೋನಾ ಸೋಂಕಿತ ಚಿಕಿತ್ಸೆಗಾಗಿ ಉಡುಪಿ ಟಿಎಂಎ ಪೈ ಆಸ್ಪತ್ರೆ, ಕುಂದಾಪು ಸರಕಾರಿ ಆಸ್ಪತ್ರೆ, ಕಾರ್ಕಳ ಆಸ್ಪತ್ರೆ, ಎಸ್.ಡಿ.ಎಂ ಕಾಲೇಜು ಮತ್ತು ಕೊಲ್ಲೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜೂ.6: ಬೈಂದೂರು ತಾಲೂಕಿನಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚು ವರದಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಬಿಜೂರು, ಉಪ್ಪುಂದ, ನಂದನವನ ಹಾಗೂ ಕೆರ್ಗಾಲು ಭಾಗದ ವ್ಯಾಪಾರಸ್ಥರು ನಾಳೆಯಿಂದ ಒಂದು ವಾರಗಳ ಕಾಲ ಸ್ವಯಂಪ್ರೇರಿತವಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಆ ಪೈಕಿ ಬೈಂದೂರು ತಾಲೂಕಿನಲ್ಲಿಯೇ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಇದರಿಂದ ಮುಂಜಾಗೃತಾ ಕ್ರಮವಾಗಿ ಜೂನ್7ರಿಂದ ಜೂನ್15ರ ತನಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದೆ. ಆಸ್ಪತ್ರೆ ಹಾಗೂ ಮೆಡಿಕಲ್ ಹೊರತುಪಡಿಸಿ, ಈ ಭಾಗದ ವ್ಯಾಪಾರಸ್ಥರು ಎಂಟು ದಿನಗಳ ಕಾಲ ವ್ಯವಹಾರ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಅಲ್ಲಲ್ಲಿ ಬ್ಯಾನರ್ ಅಳವಡಿಸಿದ್ದು, ರಿಕ್ಷಾದಲ್ಲಿ ಪ್ರಚಾರವನ್ನು ಮಾಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ವಯಂ ಪ್ರೇರಿತ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ. ಬ್ಯಾಂಕ್, ಸೊಸೈಟಿ, ಆಸ್ಪತ್ರೆ ಎಂದಿನಂತೆ ತೆರೆದಿರಲಿದೆ: ಈ ಭಾಗದ ಆಸ್ಪತ್ರೆ,ಮೆಡಿಕಲ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾರ್ ಅಸೋಸಿಯೇಶನ್ಗೆ ನಡೆದ ಚುನಾವಣೆಯಲ್ಲಿ ನಿರಂಜನ್ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಹಂದೆ ಆಯ್ಕೆಗೊಂಡಿದ್ದಾರೆ. ಕುಂದಾಪುರ ಬಾರ್ ಅಸೋಸಿಯೇಶನ್ಗೆ ಜೂ.5ರಂದು ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಹೆಗ್ಡೆ ಹಾಗೂ ಕೆ.ಸಿ ಶೆಟ್ಟಿ ಸ್ಪರ್ಧಿಸಿದ್ದರು. ಒಟ್ಟು 232 ಮತಗಳಲ್ಲಿ 223 ಮತಗಳು ಚಲಾಯಿಸಲ್ಪಟ್ಟಿದ್ದವು. 9 ಮತಗಳಿಂದ ನಿರಂಜನ್ ಹೆಗ್ಡೆ ಗೆಲುವು ಸಾಧಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರಮೋದ್ ಹಂದೆ ಸ್ಪರ್ಧೆ ಮಾಡಿದ್ದು, ಅವರು 32 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಮುಂಬಯಿಯ ಬಿಲ್ಲವ ಸೇವಾ ಸಂಘ ಕುಂದಾಪುರ, ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾವುದೇ ಸದ್ದು ಗದ್ದಲವಿಲ್ಲದೆ ಅಸಹಾಯಕ ಸಮುದಾಯ ಬಾಂಧವರಿಗೆ ಹಾಗೂ ಸಂಕಷ್ಟಕ್ಕೆ ಸಿಲುಕಿದ ಕೆಲವು ಕುಟುಂಬಗಳಿಗೆ ದೈನಂದಿನ ಅಗತ್ಯ ವಸ್ತುಗಳು ವಿತರಿಸಿದ ಸಂಘ ನೊಂದ ಸದಸ್ಯರ ಪಾಲಿಗೆ ಆಶಾಕಿರಣವಾಗಿದೆ. ಲಾಕ್ ಡೌನ್ ನಿಂದ ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಂಘದ ಸದಸ್ಯರಿಗೆ, ಸಮುದಾಯ ಬಾಂಧವರಿಗೆ ಮತ್ತು ಬಿಲ್ಲವರೇತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದಿದೆ. ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿಯವರ ನೇತೃತ್ವದಲ್ಲಿ ಸಮಾಜದ ದಾನಿಗಳು ಹಾಗೂ ಸಂಘದ ಆಡಳಿತ ಸಮಿತಿ ಮತ್ತು ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದೊಂದಿಗೆ ನಾಲಾಸೋಪಾರ, ವಿರಾರ್, ದಿಘಾ, ಐರೋಳಿ, ಸಾಯನ್, ಕುರ್ಲಾ, ಬಾಂಢೂಪ್, ಥಾಣೆ, ಡೊಂಬಿವಲಿ, ಠಾಕುರ್ಲಿ, ಅಂಬರನಾಥ್ ಮುಂತಾದ ಕಡೆಗಳಲ್ಲಿ ನೆಲೆಸಿರುವ ಸಂಕಷ್ಟಕ್ಕೀಡಾದ ಕೆಲವು ಕುಟುಂಬಗಳಿಗೆ ದೈನಂದಿನ ಆಹಾರ ಸಾಮಗ್ರಿಗಳನ್ನು ವಿತರಿಸಿದೆ. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.5ರ ಶುಕ್ರವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 204 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 203 ಮಂದಿ ಮಹಾರಾಷ್ಟದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಓರ್ವ ಸ್ಥಳೀಯ ಪೊಲೀಸ್ ಸಿಬ್ಬಂದಿಗೂ ಪಾಸಿಟಿವ್ ಬಂದಿದೆ. 204ರಲ್ಲಿ 157 ಪುರುಷರು, 40 ಜನ ಮಹಿಳೆರು ಹಾಗೂ 7 ಜನ ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 767 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 134 ಮಂದಿ ಬಿಡುಗಡೆಯಾಗಿದ್ದು, 634 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ ಒಟ್ಟು 80 ಕಡೆ ಸೀಲ್ ಡೌನ್ – https://kundapraa.com/?p=38288 . ► ಉಡುಪಿ ಜಿಲ್ಲೆ: ಗುರುವಾರ 92 ಕೊರೋನಾ ಪಾಸಿಟಿವ್ – https://kundapraa.com/?p=38278 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನ ಹೋಟೆಲ್ ಉದ್ಯಮಿ, ಆಲೂರು ಕಲ್ಲಂಗಡಿ ಮನೆ ಮಂಜುನಾಥ ಪೂಜಾರಿ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ, ಸಹೋದರರು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂ.4: ಕೋವಿಡ್-19 ಪಾಸಿಟಿವ್ ಬರುವ ವ್ಯಕ್ತಿಯ ಮನೆಯ ಸುತ್ತಲಿನ 200 ಮೀ. ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಕುಂದಾಪುರ ಉಪವಿಭಾಗದಲ್ಲಿ ಇಲ್ಲಿಯ ತನಕ ಒಟ್ಟು 80 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಈ ಪೈಕಿ ಗಂಗೊಳ್ಳಿ ಹಾಗೂ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗರಿಷ್ಠ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬೈಂದೂರು ಠಾಣೆ ವ್ಯಾಪ್ತಿಯಲ್ಲಿ 31, ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ 2, ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ 32, ಕುಂದಾಪುರ ಠಾಣೆ ವ್ಯಾಪ್ತಿಯಲ್ಲಿ 07, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 07, ಅಮಾಸೆಬೈಲು ಠಾಣೆ ವ್ಯಾಪ್ತಿಯ 01 ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಹಾಗೂ ಕಂಟೈನ್ಮೆಂಟ್ ಆಗಿರುವ ಪ್ರದೇಶಗಳಲ್ಲಿ ಕೇದೂರು, ತೆಕ್ಕಟ್ಟೆ, ಬೀಜಾಡಿ, ಬಸ್ರೂರು, ಕೋಣಿ, ಗುಲ್ವಾಡಿ, ಕರ್ಕುಂಜೆ, ಹಳ್ನಾಡು, ಕೋಡಿ, ವಡೇರಹೋಬಳಿ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಹಕ್ಲಾಡಿ, ಮರವಂತೆ, ನಾವುಂದ, ಹಡವು ನಾಡ, ನೆಂಪು, ಕಂಬದಕೋಣೆ, ಗಂಗೊಳ್ಳಿ, ಗುಜ್ಜಾಡಿ, ಕೊಲ್ಲೂರು, ಜಡ್ಕಲ್, ಗೋಳಿಹೊಳೆ, ಯಡ್ತರೆ, ಬೈಂದೂರು,…
