ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.4ರ ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 92 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಂಬೈನಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 78 ಪುರುಷರು, 13 ಮಹಿಳೆಯರು ಹಾಗೂ 1 ಮಗು ಸೇರಿದೆ. ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 563 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 108 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 454 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ► ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ – https://kundapraa.com/?p=38258 . ► ಕುಂದಾಪುರ ತಾಲೂಕಿನ 24, ಬೈಂದೂರು ತಾಲೂಕಿನ 15 ಕಡೆಗಳಲ್ಲಿ ಸೀಲ್‌ಡೌನ್ – https://kundapraa.com/?p=38263 .
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನಲೆ ಮನೆಗೆ ಬಂದ ಗಂಗೊಳ್ಳಿ ಗ್ರಾಮದ ಮಹಿಳೆಯೋರ್ವಳಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದ್ದು, ಗಂಗೊಳ್ಳಿ ಗ್ರಾಮದ ವೆಂಕಿಮನೆ ಪ್ರದೇಶವನ್ನು ಗುರುವಾರ ಸೀಲ್‌ಡೌನ್ ಮಾಡಲಾಗಿದೆ. ಗಂಗೊಳ್ಳಿ ಗ್ರಾಮದ ವೆಂಕಿಮನೆ ಸಮೀಪದ ಮನೆಗೆ ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಗೆ ವರದಿಯು ಪಾಸಿಟಿವ್ ಬಂದಿದ್ದು ಇದೀಗ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಿಮನೆ ಸಮೀಪದ ೧೦೦ ಮೀಟರ್ ವ್ಯಾಪ್ತಿಯ ಎಂಟು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ಡಿ. ಅವರು ಕಂಟೈನ್‌ಮೆಂಟ್ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸೀಲ್ ಡೌನ್ ಮಾಡಿದ ಸ್ಥಳಕ್ಕೆ ಯಾರೂ ಪ್ರವೇಶಿಸುವಂತಿಲ್ಲ ಮತ್ತು ಮನೆಯವರು ಯಾರು ಹೊರಗೆ ಬರುವಂತಿಲ್ಲ ಎಂದು ಸೂಚನೆ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಎಸ್.ಪೂಜಾರಿ, ಪಿಡಿಒ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಟಾಸ್ಕ್‌ಪೋರ್ಸ್ ಸದಸ್ಯ ಬಿ.ರಾಘವೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇಲಾಖೆಗಳ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದಲ್ಲದೇ, ಆತಂಕದ ನಡುವೆ ಬದುಕುವಂತಾಗಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ನಿಯೋಗ ಆರೋಪಿಸಿದೆ. ಗುರುವಾರ ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಅವರನ್ನು ಭೇಟಿ ಮಾಡಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಆಗುತ್ತಿರುವ ಗೊಂದಲಗಳ ಬಗ್ಗೆ ಮನವರಿಕೆ ಮಾಡಿತು. ಈ ಸಂದರ್ಭ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸುವ ರೀತಿಯೇ ಗೊಂದಲಮಯವಾಗಿದೆ. ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದವರ ಮಾಹಿತಿಯನ್ನು ಅವರಿಗೆ ತಿಳಿಸುತ್ತಿಲ್ಲ. ಪಾಟಿಸಿವ್ ಬಂದಿರುವ ಬಗ್ಗೆ ತಿಳಿಸಿದ ಮೇಲೆ ಕೂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ೨-೩ ದಿನ ತೆಗೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಪಾಸಿಟಿವ್ ಬಂದವರ ಮನೆಗೆ ತೆರಳಿ ಕರೆದೊಯ್ಯುವ ಬದಲಿಗೆ ಹೈವೆಗೆ ಬಂದು ನಿಂತುಕೊಳ್ಳುವಂತೆ ಹೇಳಲಾಗುತ್ತಿದೆ. ಆರೋಗ್ಯ ಇಲಾಖೆಯ ಈ ನಿರ್ಧಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19 ಸಮುದಾಯಕ್ಕೆ ಹರಡದಂತೆ ತಡೆಯಲು ಪಾಸಿಟಿವ್ ಬರುವ ವ್ಯಕ್ತಿಗಳ ಮನೆಯ ಸುತ್ತಲಿನ 200 ಮೀ. ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗುತ್ತಿದ್ದು, ಬುಧವಾರ ಸಂಜೆಯ ತನಕ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 39 ಕಡೆಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ತೆಕ್ಕಟ್ಟೆ, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ತಲ್ಲೂರು, ಹೆಮ್ಮಾಡಿ, ಹಕ್ಲಾಡಿ, ಮರವಂತೆ, ಹಡವು ನಾಡ, ಕೊಲ್ಲೂರು, ಜಡ್ಕಲ್, ಗೋಳಿಹೊಳೆ, ಯಡ್ತರೆ, ಶಿರೂರು ಗ್ರಾಮಗಳ ಪ್ರದೇಶಗಳು ಸೇರಿದಂತೆ ಬೈಂದೂರು ತಾಲೂಕು 15 ಹಾಗೂ ಕುಂದಾಪುರ ತಾಲೂಕಿನ 24 ಕಡೆಗಳಲ್ಲಿ ಬುಧವಾರ ಸೀಲ್‌ಡೌನ್ ಮಾಡಲಾಗಿದೆ. ನಿನ್ನೆಯೂ ಪಾಸಿಟಿವ್ ಪ್ರಕರಣಗಳು ಹೆಚ್ಚಿರುವುದರಿಂದ ಸೀಲ್‌ಡೌನ್ ಪ್ರಕ್ರಿಯೆ ಮುಂದುವರಿದಿದೆ. ಮಂಗಳವಾರ ಉಡುಪಿ ಜಿಲ್ಲೆಯಲ್ಲಿ16 ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿತ್ತು. ಮುಂಬೈ ಹಾಗೂ ಹೊರರಾಜ್ಯಗಳಿಂದ ಬಂದು ಕ್ವಾರಂಟೈನಿನಲ್ಲಿ ಇದ್ದವರು ಮನೆಗೆ ತೆರಳಿದ ಬಳಿಕ ಕೋವಿಡ್ ವರದಿಗಳು ಬರುತ್ತಿದ್ದು, ಕಳೆದ ಮೂರು ದಿನಗಳಿಂದ ಹೆಚ್ಚು ವರದಿಗಳು ದೊರೆಯುತ್ತಿವೆ. ಹಾಗಾಗಿ ಪಾಸಿಟಿವ್ ಬರುವ ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಅವರ ಮನೆಯ ಪರಿಸರವನ್ನು ಸೀಲ್‌ಡೌನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ಹೊರಜಿಲ್ಲೆಯಿಂದ ಆಗಮಿಸುವವರು ಕ್ವಾರಂಟೈನ್ ಗೆ ತೆರಳುವ ಮುನ್ನ ತಪ್ಪು ವಿಳಾಸ , ದೂರವಾಣಿ ಸಂಖ್ಯೆ ನೀಡಿದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಹೊರ ರಾಜ್ಯಗಳಿಂದ ಬರುವವರಿಗೆ ಸೂಚನೆ: ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆಪ್ ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗದಲ್ಲಿ ಆಗಮಿಸುವವರು , ರಾಜ್ಯದ ಗಡಿಯಲ್ಲಿರುವ ಸ್ವೀಕಾರ (BRC – BORDER RECEIVE CENTER) ಕೇಂದ್ರದಲ್ಲಿ ಸೂಚಿಸುವ , ತಮ್ಮ ಜಿಲ್ಲೆಯಲ್ಲಿನ, ಸ್ವೀಕಾರ ಕೇಂದ್ರ (DRC – DISTRICT RECEIVE CENTER) ಗೆ ಹಾಜರಾಗಿ ತಮ್ಮ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಿ ಕ್ವಾರಂಟೈನ್ ಗೆ ಒಳಪಡಬೇಕು, ಮಹಾರಾಷ್ಟ್ರದಿಂದ ಆಗಮಿಸುವವರು 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಗೆ ಒಳಪಡಬೇಕು, ಇತರೆ ರಾಜ್ಯದಿಂದ ಆಗಮಿಸುವವರು 14 ದಿನಗಳ ಹೋಂ ಕ್ವಾರಂಟೈನ್ ಗೆ ಒಳಪಡಬೇಕು. ರೈಲಿನಲ್ಲಿ ಬರುವವರಿಗೆ ಅವರು ಇಳಿಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.3ರ ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 62 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ. ನಿನ್ನೆ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ 150 ಸೋಂಕು ಪ್ರಕರಣಗಳು ದೃಢವಾಗಿತ್ತು. ನಿನ್ನೆ ಜಿಲ್ಲೆಯಲ್ಲಿ 410 ಒಟ್ಟು ಪ್ರಕರಣವಿದ್ದರೆ ಇಂದು 472 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 472 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 85 ಮಂದಿ ಬಿಡುಗಡೆಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 387 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 63 ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದು, 4,500ಕ್ಕೂ ಅಧಿಕ ವರದಿಗಳು ಬರುವುದು ಬಾಕಿ ಇದೆ. ಇದನ್ನೂ ಓದಿ: ► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಪೂರ್ಣಿಮಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ಅವರು ಕರ್ನಾಟಕ ಬ್ಯಾರಿ ಅಕಾಡೆಮಿಯ ಪ್ರಭಾರ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸುವ ಕಾರ್ಯಕ್ರಮ ಇತ್ತೀಚೆಗೆ ರಜತಾದ್ರಿಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ್ , ಹದಿನೈದು ಸಾವಿರ ಮಾಸ್ಕ್ ಗಳನ್ನು ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮತ್ತು ಉಡುಪಿಯ ಡಿಡಿಪಿಐ ಶೇಷಶಯನ ಕಾರಂಜ ಅವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ವಿಜಯೇಂದ್ರ ವಸಂತ್, ರಾಜ್ಯದಲ್ಲಿ ಒಂದು ಕೋಟಿ ಮಾಸ್ಕ್ ಸಿದ್ಧವಾಗಿದ್ದು , ಉಡುಪಿ ಜಿಲ್ಲೆಯಲ್ಲಿ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ ಬೈಂದೂರು,ಕುಂದಾಪುರ, ಬ್ರಹ್ಮಾವರ, ಕಲ್ಯಾಣಪುರ, ಉಡುಪಿ, ಕಾರ್ಕಳ ಹಾಗೂ ಕಾಪು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಹೆತ್ತವರ ಸಹಕಾರದಿಂದ ಒಂದೂವರೆ ಲಕ್ಷ ಮಾಸ್ಕ್ ತಯಾರಿಸಿ ವಿತರಿಸುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಹದಿನೈದು ಸಾವಿರ ಮಾಸ್ಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಅವರು ಬುಧವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ನಾಗರೀಕರ ಕೋವಿಡ್ ಪರೀಕ್ಷೆಯನ್ನು ಶೀಘ್ರದಲ್ಲಿ ನಡೆಸುವ ಅಗತ್ಯವಿದ್ದು, ಈಗಾಗಲೇ ಮಣಿಪಾಲದ ಕೆಎಂಸಿ ಯಲ್ಲಿ ಇರುವ ಲ್ಯಾಬ್ ನ ಜೊತೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ನೂತನ ಲ್ಯಾಬ್ ಆರಂಭದ ಕುರಿತಂತೆ , ಲ್ಯಾಬ್ ನ ಸಿವಿಲ್ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಶೀಘ್ರದಲ್ಲಿ ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವುದಾಗಿ ತಿಳಿಸಿದ ಸಚಿವರು , ಮುಂದಿನ 10 ದಿನದಲ್ಲಿ ಈ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು. ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದೆರಡು ದಿನದಿಂದ ಸುರಿಯುತ್ತಿರುವ ಮಳೆಗೆ ಕುಂದಾಪುರ ನಗರ ಪ್ರದೇಶದಲ್ಲಿ ಅವಾಂತರಗಳನ್ನು ಸೃಷ್ಟಿಯಾಗಿದೆ. ರಾತ್ರಿ ನಿರಂತವಾಗಿ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ – 66ರ ಬಸ್ರೂರು ಮೂರುಕೈ ಸಮೀಪ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುವಂತಾಯಿತು. ಹೆದ್ದಾರಿ ಬದಿಯ ತೋಡುಗಳು ಬ್ಲಾಕ್ ಆಗಿದ್ದರಿಂದ ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ಡಿಪೋದಿಂದ ವಿನಾಯಕ ಟಾಕೀಸ್ ತನಕ ರಸ್ತೆ ಮೇಲೆಯೇ ನೀರು ತುಂಬಿ ಹರಿಯುತ್ತಿದ್ದು, ಬಹಳ ಹೊತ್ತು ವಾಹನ ಸಂಚಾರ ಅಸ್ಥವ್ಯಸ್ಥವಾಗಿತ್ತು. ರಾಷ್ಟ್ರೀಯ ಹೆದ್ದಾರಿಯ ಪ್ಲೈಓವರ್, ಡಿವೈಡರ್ ಕಾಮಗಾರಿಗಳು ಅರ್ದಕ್ಕೆ ನಿಂತಿದೆ. ಅದು ಪೂರ್ಣಗೊಳ್ಳುವ ತನಕ ಅವಾಂತರ ತಪ್ಪಿದ್ದಲ್ಲ. ಪ್ರತಿಭಾರಿಯಂತೆಯೇ ಮಳೆಗಾಲ ಬರುವ ತನಕವೂ ನಿದ್ರಾವಸ್ಥೆಯಲ್ಲಿರುವ ಅಧಿಕಾರಿಗಳು, ಈ ಭಾರಿಯೂ ಅದನ್ನೂ ಸಾಕ್ಷೀಕರಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಕೊರೋನಾ ನಡುವೆ ಬಹಳಷ್ಟು ಗ್ರಾಮಗಳನ್ನು ಈವರೆಗೆ ಮಳೆಗಾಲದ ತಯಾರಿಯೇ ನಡೆದಿಲ್ಲ. ಇದು ಇನ್ನಷ್ಟು ಅವಾಂತರ ಸೃಷ್ಟಿಸುವ ಮೊದಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುತ್ತಾರಾ ಕಾದು ನೋಡುಬೇಕಿದೆ. ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡುಗಳಲ್ಲಿ ಬ್ಲಾಕ್ ತೆರವುಗೊಳಿಸಿ…
