Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ,ಮೇ31: ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸದ್ಯ ಅವರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಅದರಂತೆ ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿಯ ವರದಿಯೂ ಪಾಸಿಟಿವ್ ಬಂದಿತ್ತು. ಆದರೆ ಅವರು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಚೆಕ್‌ಪೋಸ್ಟ್‌ನಲ್ಲಿ ಕೆಲಸ ನಿರ್ವಹಿಸಿಲ್ಲ ಅಲ್ಲದೇ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಠಾಣೆಯಲ್ಲಿ ಮಾತ್ರ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ ಅವರಿಗೆ ಕೋರೋನಾ ಲಕ್ಷಣಗಳು ಕಂಡುಬಂದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸೋಮವಾರ ಪುನಃ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದ್ದು, ಸಂಜೆ ವರದಿ ಕೈ ಸೇರುವ ಸಾಧ್ಯತೆ ಇದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋವಿಡ್ ಫಾಲ್ಸ್ ಪಾಸಿಟಿವ್ ಬಂದಿರುವ ಸಾಧ್ಯತೆ ಇರುವುದರಿಂದ ಸೋಮವಾರ ಪುನಃ ಸಿಬ್ಬಂದಿಯ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಕೋವಿಡ್ ವರದಿ ದೊರೆಯುವ ತನಕವೂ, ಠಾಣೆಯನ್ನು ಸೀಲ್‌ಡೌನ್ ಮಾಡಲಾಗುವುದಿಲ್ಲ. ಆದರೆ ಸುರಕ್ಷತಾ ಕ್ರಮವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮೇ.31: ಇಂದು ಸಂಜೆ ಸಿಡಿಲು ಬಡಿದ ಪರಿಣಾಮ ತಾಲೂಕಿನ ಹೆಂಗವಳ್ಳಿ ಗ್ರಾಮದ  ಕಮ್ಗೋಳಿಯ ಸಂತೋಷ್ ಶೆಟ್ಟಿ ಎಂಬುವರ ಕೊಟ್ಟಿಗೆಯಲ್ಲಿದ್ದ ಎರಡು ದನ ಹಾಗೂ ಒಂದು ಕರು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬಕ್ಕೆ ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 . ► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 . ► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 . ► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.31ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 10 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 187 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 123 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 . ► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 . ► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಬೈಂದೂರು ಹಾಗೂ ಕುಂದಾಪುರ ಭಾಗದ 14 ಮಂದಿಯನ್ನು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಗುಲಾಬಿ ಗೀಡ ಹಾಗೂ ಮಕ್ಕಳಿಗೆ ಚಾಕಲೇಟ್ ನೀಡಿ ಬೀಳ್ಕೊಡಲಾಯಿತು. ಈ ಸಂದರ್ಭ ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಕೋವಿಡ್-19 ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾರ್ಬಟ್ ರೆಬೆಲ್ಲೊ, ವೈದ್ಯ ಡಾ. ನಾಗೇಶ್, ಬೈಂದೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಕುಂದಾಪುರ ಪಿಎಸ್‌ಐ ಹರೀಶ್ ಆರ್., ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಆಸ್ಪತ್ರೆ ಸಿಬ್ಬಂದಿಗಳು ಇದ್ದರು. ಇದನ್ನೂ ಓದಿ: ► ಉಡುಪಿ: ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಕೆ. ಬಿ. ಆನಂದಪ್ಪ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕುಂದಾಪುರ ತಹಶೀಲ್ದಾರ್ ಆಗಿದ್ದು ತಿಪ್ಪೇಸ್ವಾಮಿ ಅವರು ಸೇವಾ ನಿವೃತ್ತಿ ಹೊಂದಿದಿದ್ದು, ಈ ಹಿಂದೆ ಉಡುಪಿ ಡಿಸಿ ಕಚೇರಿಯ ಚುನಾವಣಾ ತಹಶೀಲ್ದಾರ್ ಆಗಿದ್ದ ಕೆ ಬಿ ಆನಂದಪ್ಪ ನಾಯ್ಕ್ ಇವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ವ್ಯಕ್ತಿಗಳ ಕೋವಿಡ್ -19 ಟೆಸ್ಟ್ ವರದಿ ಹಂತ ಹಂತವಾಗಿ ಕೈಸೇರುತ್ತಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬಂದಿದ್ದು, ಇಂದು ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಅವರ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗುತ್ತಿದೆ. ಕುಂದಾಪುರ ತಾಲೂಕಿನ ಕೋಡಿ, ಬಸ್ರೂರು, ಕೋಣಿ, ನೇರಳಕಟ್ಟೆ, ಹಳ್ನಾಡು, ನೆಂಪು ಗ್ರಾಮಗಳು ಹಾಗೂ ಬೈಂದೂರು ತಾಲೂಕಿನ ಕಬ್ಸೆ, ನಾವುಂದ, ಗುಜ್ಜಾಡಿ ಬೆಣೆಗೇರಿ ಗ್ರಾಮಗಳಲ್ಲಿನ ಕ್ವಾರಂಟೈನ್ ಮುಗಿಸಿದ ವ್ಯಕ್ತಿಗಳಿಗೆ ಪಾಸಿಟವ್ ಬಂದಿದೆ. ಅವರ ಮನೆಯ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗುತ್ತಿದೆ ಎನ್ನಲಾಗಿದೆ. ಇವರೆಲ್ಲರೂ ಸರಕಾರದ ನಿಯಮಾವಳಿಯಂತೆ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಬಂದವರಾಗಿದ್ದು, ಕೋವಿಡ್ ಟೆಸ್ಟ್ ವರದಿ ಬರುವುದು ಬಾಕಿ ಇತ್ತು. ವರದಿ ದೊರೆಯುತ್ತಿದ್ದಂತೆ ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಅವರ ಪ್ರಾಥಮಿಕ ಸಂಪರ್ಕವನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸೀಲ್‌ಡೌನ್ ಮಾಡಲಾಗಿರುವ ಪ್ರದೇಶಗಳ ಪೂರ್ಣ ವಿವರ ಇನ್ನಷ್ಟೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಸಾರ್ವಜನಿಕರ ಕೋರಿಕೆಯ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆಯ ಭಾನುವಾರ ( ಮೇ 31) ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಈ ಬಗ್ಗೆ ರಾಜ್ಯ ಸರಕಾರದ ಅಧಿಕೃತ ಆದೇಶವೂ ಹೊರಬಿದ್ದಿದೆ. ಮೇ 31ರಂದು ಸಂಪೂರ್ಣ ಕರ್ಫ್ಯೂ ಇರುವುದಿಲ್ಲ. ಲಾಕ್ ಡೌನ್ ಸಡಿಲಗೊಳಿಸಿದ ನಂತರ ರಾಜ್ಯದಲ್ಲಿ ಎಂದಿನಂತೆ ಇರುವ ದೈನಂದಿನ ಚಟುವಟಿಕೆ ನಾಳೆ ಕೂಡ ಇರುತ್ತದೆ. ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ಕರ್ಫ್ಯೂ ಹಾಗೇಯೇ ಮುಂದುವರಿಲಿದೆ. ಭಾನುವಾರದ ಸಡಿಲಿಕೆ ಆದೇಶವು ಮೇ 31ಕ್ಕೆ ಮಾತ್ರ ಸೀಮಿತವಾಗಿದ್ದು, ನಂತರದ ನಿರ್ಧಾರವನ್ನು ಕೇಂದ್ರ ಸರ್ಕಾರ ಮುಂದಿನ ಮಾರ್ಗಸೂಚಿಯ ನಂತರ ಕೈಗೊಳ್ಳಬಹುದಾದದ ಸಾಧ್ಯತೆಯಿದೆ. ಪ್ರತಿ ದಿನದಂತೆ ಭಾನುವಾರ ಬಸ್ ಸಂಚಾರ ಇರುತ್ತೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಸಂಚಾರ ಮಾಡಲಿದೆ. ಅಲ್ಲದೇ ಅಂತರ ರಾಜ್ಯ ಸಂಚಾರ ಕೂಡ ಇರುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: 14 ದಿನಗಳ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಕೋಟತಟ್ಟು ಗ್ರಾಮದ ಬಾರಿಕೆರೆಯ ಮಹಿಳೆ ಹಾಗೂ ವಂಡಾರು ಗ್ರಾಮದ ಮಾರ್ವೆಯ ಮಗುವಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈರ್ವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್’ಡೌನ್ ಮಾಡಲಾಗಿದೆ. ಮುಂಬೈನಿಂದ ಆಗಮಿಸಿದ್ದ ಮಹಿಳೆ 14 ದಿನದ ಕ್ವಾರಂಟೈನ್ ಮುಗಿಸಿದ್ದರು. ಪೂನದಿಂದ ತಂದೆ-ತಾಯಿಯೊಂದಿಗೆ ಆಗಮಿಸಿದ ಒಂದೂವರೇ ವರ್ಷದ ಮಗುವಿನ ಕುಟುಂಬ ಕೂಡ ಕ್ವಾರಂಟೈನಿನಲ್ಲಿತ್ತು. ಸರಕಾರದ ಹೊಸ ಆದೇಶ ಬಂದ ಬಳಿಕ, ಗಂಟಲು ದ್ರವ ಪರೀಕ್ಷೆಯ ವರದಿ ಲಭ್ಯವಾಗುವ ಮುನ್ನವೇ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಅವರು ಮೇ 28 ರಂದು ಸಂಜೆ ಮನೆಗೆ ಬಂದಿದ್ದು ಮೇ 29ರಂದು ಪಾಸಿಟಿವ್ ಇರುವುದು ಎಂದು ತಿಳಿದು ಬಂದಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೌರಯ್ಯ, ಕೋಟ ಠಾಣಾಧಿಕಾರಿ ರಾಜಶೇಖರ್ ಮಂದಲ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೋಟತಟ್ಟು ಗ್ರಾ.ಪಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡoತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ/ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ.1077 , ದೂ. ಸಂ: 0820-2574802 ಸಂಪರ್ಕಿಸುವoತೆ ಹಾಗೂ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ, ಹಾಗೂ ಕರ್ನಾಟಕ ಸರ್ಕಾರದ ಮೇ 29 ರ ಅಧಿಸೂಚನೆ ಯಂತೆ, ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಜೂನ್ 15 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 47 ದಿನಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮೀನುಗಾರಿಕೆ ನಿಷೇದಿಸಿದ ಸರ್ಕಾರದ ಸದರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ…

Read More