Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂದು ವಿಶ್ವಕರ್ಮ ದಿನ, ವಿಶ್ವಕರ್ಮನು ಪಂಚಬ್ರಹ್ಮರ ಮೂಲಕ, ಲೋಕಕ್ಕೆ ಪಂಚಶಿಲ್ಪ ಕಾರ್ಯಗಳ ಮೂಲಕ ಸೃಷ್ಟಿಯಲ್ಲಿ ಸೃಜನಶೀಲತೆ ನಿರಂತರವಾಗಿ ನಡೆಯುತ್ತಿರುವಂತೆ ನೋಡಿಕೊಂಡವನು. ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದ್ದೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್. ಹೇಳಿದರು. ಅವರು ಶುಕ್ರವಾರ ಬೈಂದೂರು ತಾಲೂಕು ತಹಶೀಲ್ದಾರ್ ಕಛೇರಿಯಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಿಸಿ, ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಅದೇ ರೀತಿ ಸಮುದಾಯದ ಮೂಲಕ ಪಂಚ ಕಸಬನ್ನು ಇನ್ನೂ ಅತ್ಯಂತ ಜನಪ್ರಿಯಗೊಳಿಸಲು ಮತ್ತು ಕಲಾ ಕೌಶ್ಯಲಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಬೇಕು ಹಾಗೂ ಈ ಸಮಾಜವರು ಶಿಸ್ತು ಸಂಯಮ ತಾಳ್ಮೆ ಜಾಣತನ, ಸಾಮಾಜಿಕ ಬದ್ದತೆಯನ್ನು ರೂಢಿಸಿಕೊಂಡು ಬಂದಿದ್ದಾರೆ ಎಂದರು. ವಿಶ್ವಕರ್ಮ ಭಾವಚಿತ್ರವನ್ನು ಬೈಂದೂರು ವಿಶ್ವಕರ್ಮ ಯುವ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಕಛೇರಿಗೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಉಪತಹಶೀಲ್ದಾರ್ ಲತಾ ಶೆಟ್ಟಿ, ಯಡ್ತರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೆಇಇ ಮೈನ್ಸ್ 2021 ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 495 ವಿದ್ಯಾರ್ಥಿಗಳು ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆಯುವ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಗೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ ಕೆಟಗರಿ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಜಯಸೂರ್ಯ ಎಂ. ಎಸ್ 147ನೇ ರ‍್ಯಾಂಕ್, ಹರ್ಷಿತಾ ಗಂಗಾದರಪ್ಪ 172ನೇ ರ‍್ಯಾಂಕ್, ಧನರಾಜ 206ನೇ ರ‍್ಯಾಂಕ್, ಶೈಕ್ಷಾ ನಾಯಕ್ 213ನೇ ರ‍್ಯಾಂಕ್, ಪ್ರಜ್ವಲ್ ಆರ್ 350ನೇ ರ‍್ಯಾಂಕ್, ಐಶ್ವರ್ಯ ಎಂ. ಗಸ್ತಿ 955ನೇ ರ‍್ಯಾಂಕ್, ಮಂಜುನಾಥ ಎಸ್ 993 ರ‍್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿ ಕಿರಣ್ ರೆಡ್ಡಿ ಜೆಇಇ ಆರ್ಕ್ ಹಾಗೂ ಜೆಇಇ ಮೈನ್ಸ್ ನಲ್ಲಿ ಕ್ರಮವಾಗಿ 99.48 ಹಾಗೂ 99.26 ಪರ್ಸನ್ಟೈಲ್ ಗಳಿಸಿದ್ದಾರೆ. ವರುಣ್ ಅನ್ನಸಾಬ್ ಶಿಪುರೆ 99.04, ಸುಜ್ಞಾನ್ ಆರ್ ಶೆಟ್ಟಿ 98.95, ಗುರುರಾಜ್ ಮಹಾದೇವ್ ಮಾದನ್ನಾವರ್ 98.75 ಪರ್ಸನ್ಟೈಲ್ ಪಡೆದಿದ್ದಾರೆ. 95 ಪರ್ಸನ್ಟೈಲ್‌ಗಿಂತಲೂ ಅಧಿಕ 52 ವಿದ್ಯಾರ್ಥಿಗಳು, 90 ಪರ್ಸನ್ಟೈಲ್ ಗಿಂತ ಅಧಿಕ 172 ವಿದ್ಯಾರ್ಥಿಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ, ಗಂಗೊಳ್ಳಿ (ತ್ರಾಸಿ) ಮಹಾಶಕ್ತಿ ಕೇಂದ್ರ ಹಾಗೂ ರೆಡ್‌ಕ್ರಾಸ್ ಸಂಸ್ಥೆ ಬೈಂದೂರು-ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಶುಕ್ರವಾರ ಜರಗಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಮಾದರಿ ಆಡಳಿತದ ಮೂಲಕ ವಿಶ್ವ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ. ಕರೋನಾ ವಿರುದ್ಧ ಯಶಸ್ವಿ ಹೋರಾಟ ನಡೆಸಿ, ದೇಶದ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಲಸಿಕಾ ಅಭಿಯಾನವನ್ನು ಹಮ್ಮಿಕೊಂಡು ದೇಶದ ಜನರ ಪ್ರಾಣರಕ್ಷಣೆಗೆ ಮುಂದಾಗಿದ್ದಾರೆ. ಅವರ ಜನ್ಮದಿನ ಅವಿಸ್ಮರಣೀಯವಾಗಿಸಲು ೨೦ ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಆಯೋಜಿಸಿರುವ ರಕ್ತದಾನ ಶಿಬಿರದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ರಕ್ತದಾನ ಎಲ್ಲಾ ದಾನಗಳಲೇ ಶ್ರೇಷ್ಠವಾಗಿದೆ. ಜೀವ ಉಳಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಳೆ ವಯಸ್ಸಿನಿಂದ ಮಕ್ಕಳಿಂದ ಇಳಿ ವಯಸ್ಸಿನ ಮಹಿಳೆಯವರೆಗೂ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ, ಅತ್ಯಾಚಾರಗೈದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಮಂಗಳೂರು ಇವರ ನೇತೃತ್ವದಲ್ಲಿ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು. ಅ.ಭಾ.ವಿ.ಪ ಉಡುಪಿ ಜಿಲ್ಲೆ ಜಿಲ್ಲಾ ಸಂಚಾಲಕ್ ಅಶೀಶ್ ಶೆಟ್ಟಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ವೀರ ವನಿತೆಯರನ್ನು ಹೊಂದಿರುವ ಈ ನಾಡಿನಲ್ಲಿ ಹೆಣ್ಣಿಗೆ ಪೂಜನೀಯವಾದ ಸ್ಥಾನ ನೀಡಿದೆ. ನೆಲ, ಜಲ, ದೇಶ ಎಲ್ಲದ್ದಕ್ಕೂ ಹೆಣ್ಣಿನ ಸ್ಥಾನ ನೀಡಿರುವ ಪರಂಪರೆ ನಮ್ಮದು. ಆದರೆ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮನುಷ್ಯತ್ವವನ್ನು ಮೀರಿದವುಗಳಾಗಿವೆ. ಅತ್ಯಾಚಾರಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಮತ್ತೆ ಇಂಥಹ ಕೃತ್ಯಗಳು ನಡೆಯಂತೆ ಕಾನೂನಿನ ಭಯ ಮೂಡಿಸುವ ಕೆಲಸ ಆಗಬೇಕು ಎಂದರು. ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ನಿರಕ್ಷಿತ, ಪ್ರಸನ್ನ, ತಾ.ಸಂಚಾಲಕ ಪ್ರಜ್ವಲ್, ಆಶಿಶ್ ಬೋಳ, ವಿಜೇತ್, ಯಶಸ್ವಿನಿ ಬೀಜಾಡಿ, ದೀಪಕ್, ರಶ್ಮಿತಾ, ರಾಹುಲ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ ಅಂಗವಾಗಿ ಇಂಜಿನಿಯರ್ ರಘುನಂದನ ನಾಯಕ್ ತ್ರಾಸಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರೋ. ರಾಜೇಶ ಎಂ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ ಸೇನಾನಿ ಕೆ. ರಾಮನಾಥ ನಾಯಕ ಶುಭಾಶಂಸನೆಗೈದರು. ರೋಟರಿ ಸದಸ್ಯರಾದ ಜನಾರ್ದನ ಪೂಜಾರಿ, ನಾಗರಾಜ ಶೆಟ್ಟಿ, ಎಂ. ನಾಗೇಂದ್ರ ಪೈ, ನಾಗೇಶ ನಾಯಕ್, ಲಿಪ್ಟನ್ ಒಲಿವೇರಾ ಹಾಗೂ ಪ್ರವೀಣ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಲಯನ್ಸ್ ಕ್ಲಬ್ ವಡೆರಹೋಬಳಿ, ಕುಂದಾಪುರ ಹಾಗೂ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇವುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳ ಶಿಕ್ಷಕರಿಗಾಗಿ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ ನಡೆಯಿತು. ಡಿಸ್ಯಾಬಿಲಿಟಿ ಎನ್‌ಜಿಒ ಅಲಯನ್ಸ್ ಮ್ಯಾನೇಜರ್ ರೂಪಲಕ್ಷ್ಮೀ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಕೆ ಪದ್ಮನಾಭ, ವಿಶೇಷ ಶಾಲಾ ಶಿಕ್ಷಕರಿಗೆ ಅಂಗವಿಕಲರ ಹಕ್ಕುಗಳ ಅಧಿನಿಯಮ -೨೦೧೬ರ ಕುರಿತು ಮಾಹಿತಿಯನ್ನು ನೀಡಿದರು. ಈ ಕಾಯಿದೆಯು ಅಂಗವಿಕಲರ ಹಕ್ಕುಗಳ ರಕ್ಷಣೆಯೊಂದಿಗೆ ವಿವಿಧ ಸವಲತ್ತುಗಳನ್ನು ನೀಡಿದೆ. ವಿಶೇಷವಾಗಿ ಈ ಕಾಯಿದೆಯು ಅಂಗವಿಕಲರ ಬದುಕನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು ಮತ್ತು ಕಾಯಿದೆಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯು ಆಯೋಜಿಸಿದ ಯಶೋಗಾನ ಲೇಖನ ಸ್ಪರ್ಧೆಯಲ್ಲಿ ಆಯ್ಕೆಯಾದ ಲೇಖಕರಿಗೆ ನಗದು ಪುರಸ್ಕಾರ ಮತ್ತು ತಲ್ಲೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜತೆಗೆ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹೇಳಿದರು. ದೇವಸ್ಥಾನ ಅಧೀನದ ಅರೆಶಿರೂರು ಪ್ರೌಢಶಾಲೆಯ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ದೇವಳ ವತಿಯಿಂದ ಬುಧವಾರ ಉಚಿತ ನೋಟ್ ಬುಕ್ ವಿತರಿಸಿ ಅವರು ಮಾತನಾಡಿದರು. ಗುರುಹಿರಿಯರನ್ನು ಗೌರವಿಸಬೇಕು. ಕಷ್ಟದಲ್ಲಿರುವವರಿಗೆ ನೆರವಾಗಬೇಕು. ವ್ಯಕ್ತಿ ಕರುಣೆ, ಮಾನವ ಸಂಬಂಧ, ಸತ್ಯ, ನ್ಯಾಯಪರತೆ, ಸಾಮಾಜಿಕ ಕಳಕಳಿ ಹೊಂದಿದ್ದರೆ ಜೀವನದಲ್ಲಿ ವಿಶೇಷ ಸಾಧನೆ ಮಾಡಬಹುದು ಎಂದು ಹೇಳಿದರು. ಮುಖ್ಯೋಪಾಧ್ಯಾಯ ಎ. ಶಿವರಾಮ ಸ್ವಾಗತಿಸಿದರು. ಶಿಕ್ಷಕ ಉದಯ ನಾಯ್ಕ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿಯ ಸದ್ಯರಾದ ಜಯಾನಂದ ಹೋಬಳಿದಾರ್, ಶಿಕ್ಷಕರಾದ ಪ್ರಶಾಂತ ಶ್ಯಾನುಭಾಗ್, ಗೀತಾ ಎಚ್, ಗೋವಿಂದ ಗೊಂಡ, ವೇಣುಗೋಪಾಲ ಶೆಟ್ಟಿ, ಸುಧೀಂದ್ರ ಗೊಂಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ, ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ ಹೆಬ್ಬಾರ್ ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ 1959 ರಲ್ಲಿ ಸ್ಥಾಪನೆಯಾಗಿ ವಿಶೇಷ ಚೇತನರಿಗೆ ಸ್ವಾವಲಂಬಿ ಬದುಕು ಕಲ್ಪಿಸುವ ಕೆಲಸ ಮಾಡುತ್ತಿದೆ ಮತ್ತು ಅವರಿಗೆ ಇಷ್ಟವಾಗುವ ತರಬೇತಿ ನೀಡಿ, ಗ್ರಾಮೀಣ ಮಟ್ಟದಲ್ಲಿ ವಿಶೇಷ ಚೇತನರು ಪೂರಕ ಜೀವನ ಸಾಗಿಸಲು ನಮ್ಮ ಸಂಸ್ಥೆ ಸಹಕಾರಿಯಾಗುತ್ತಿದೆ ಎಂದರು. ಡಿಎನ್ಎ ಸಂಸ್ಥೆಯ ವ್ಯವಸ್ಥಾಪಕಿ ರೂಪ ಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ಚೇತನರು ಸಾಕಷ್ಟು ಕ್ಷೇತ್ರದಲ್ಲಿ ಸಾಧನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆರಾಡಿ ವರಸಿದ್ಧಿ ವಿನಾಯಕ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಆದ ನೀಟ್, ಸಿಇಟಿ ಮತ್ತು ಜೆಇಇ ಪರೀಕ್ಷೆ ಎದುರಿಸಲು ಒಂದು ದಿನದ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿ ಎಮ್. ಎಸ್. ರಾಮಚಂದ್ರ ಐಐಟಿ ರೂರ್ಕೆ ಅವರು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಚಾಲಕರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದು, ಪ್ರಾ0ಶುಪಾಲರಾದ ಪ್ರಸಾದ್ ಕುಮಾರ್ ಆರ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಚೈತ್ರ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾಗಮ ಹಾಗೂ ಕರ್ನಾಟಕದ ನಾಲ್ಕು ರೋಟರಿ ಜಿಲ್ಲೆಗಳ ಪ್ರಯೋಜಕತ್ವದ ಮಹತ್ವಾಕಾಂಕ್ಷಿ, ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಕ ‘ವಿದ್ಯಾಸೇತು’ ಪುಸ್ತಕಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ. ಜಿ., ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಈ ಪುಸ್ತಕದ ಸದುಪಯೋಗಪಡಿಸಿಕೊಂಡು ಮುಂಬರುವ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸುವಲ್ಲಿ ಪ್ರಯತ್ನಿಸಬೇಕು ಎಂದರು. ವಲಯ ಸೇನಾನಿ ಕೆ.ರಾಮನಾಥ್ ನಾಯಕ್ ಮತ್ತು ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್ ರೋಟರಿಯ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರಾದ ಗೋಪಾಲ ದೇವಾಡಿಗ, ಶ್ರೀಲತಾ, ಲವೀನಾ, ಕಚೇರಿ ಸಹಾಯಕ ಶ್ರೀಧರ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಕಾರ್ಯದರ್ಶಿ ನಾರಾಯಣ ಇ. ನಾಯ್ಕ್ ವಂದಿಸಿದರು.

Read More