Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಮೇ.6: ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಸಾಲಿಗ್ರಾಮ ಗುಂಡ್ಮಿಯ ಡಾ. ಜಿ. ಭಾಸ್ಕರ್ ಮಯ್ಯ (70 ವ) ಹೃದಯಾಘಾತಕ್ಕೆ ಒಳಗಾಗಿ ಇಂದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಕೋವಿಡ್ ಸೊಂಕು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಕಳೆದ ನಾಲ್ಕು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದಿ, ಸಂಸ್ಕೃತ, ಪಾಲಿ, ಕನ್ನಡ, ಇಂಗ್ಲಿಷ್ ಮತ್ತಿತರ ಭಾಷೆಗಳಲ್ಲಿ ಆಳವಾದ ಪಾಂಡಿತ್ಯ ಹೊಂದಿದ್ದ ಇವರು ಜೈನಧರ್ಮದಿಂದ ಮಾರ್ಕ್ಸ್ ವಾದದವರೆಗೂ ಅಧ್ಯಯನ ಮಾಡಿದ್ದರು. ಸತತವಾದ ಓದು. ಚಿಂತನೆ, ಪರಿಶ್ರಮಗಳಿಂದ ಹಲವಾರು ವಿಶ್ವವಿದ್ಯಾಲಯಗಳಿಂದ ಎಂ.ಎ. ಪದವಿಗಳನ್ನೂ, ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿಯನ್ನೂ ಗಳಿಸಿದ್ದಾರೆ ಮತ್ತು 52 ಪುಸ್ತಕಗಳನ್ನು, ಅನೇಕಾನೇಕ ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ. ಜಿ. ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಒಂಟಿತನ, ಪರಕೀಯಪ್ರಜ್ಞೆ ಕುರಿತ  ‘ಅಜನಬೀಪನ್: ಏಕ್ ಸೈದ್ಧಾಂತಿಕ್ ಅನುಶೀಲನ್’ ಸಂಶೋಧನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ /ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ , ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ, ವಿದ್ಯಾ ಸಿರಿ-ಊಟ ಮತ್ತು ವಸತಿ ಸಹಾಯಯೋಜನೆ ಮತ್ತು ನರ್ಸಿಂಗ್ ವಿದ್ಯಾಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು http://www.ssp.postmatric.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ-8050770005/8050770004, ಇ-ಮೇಲ್ bcwd.scholarship@karnataka.gov.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಡಿತರ ಚೀಟಿಯಲ್ಲಿ ಅಕ್ಷರ ಅಂಕೆಯ ಅಥವಾ 12 ಅಂಕಿಗಳಿಗಿಂತ ಭಿನ್ನವಾದ ಸಂಖ್ಯೆ ನೀಡಿರುವ ಪಡಿತರಚೀಟಿಗಳಿಗೆ (ಉದಾ: bnlr1234567,ctd 12345678 ) ಇದೀಗ 12 ಅಂಕಿಗಳ ಹೊಸ ಸಂಖ್ಯೆಯನ್ನು ನೀಡಲಾಗಿದೆ. ಸಾರ್ವಜನಿಕರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ , ತಮ್ಮ ಪಡಿತರ ಚೀಟಿ /ಆಧಾರ್ ಅಥವಾ ಪಡಿತರ ಚೀಟಿ ಸಂಖ್ಯೆ ನೀಡಿದಾಗ , ಬದಲಾಗಿರುವ ಪಡಿತರ ಚೀಟಿ ಸಂಖ್ಯೆಯನ್ನು ನೀಡಲು ಮತ್ತು ನಿಮ್ಮ ಪಡಿತರ ಚೀಟಿಯ ಮೇಲೆ ಬರೆಯಲು ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಸಾರ್ವಜನಿಕರು ಇನ್ನು ಮುಂದೆ ಬದಲಾಗಿರುವ ಹೊಸ ಪಡಿತರ ಚೀಟಿ ಸಂಖ್ಯೆಯನ್ನು ಬಳಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳನ್ನು ಸಂಪರ್ಕಿಸಲು ಕೋರಿದ್ದು, ಈ ವಿಷಯವಾಗಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಾಲೂಕಿನ ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದು ಮತ್ತು ಯಾವುದೇ ದೂರುಗಳಿದ್ದಲ್ಲಿ ಆಹಾರ ಇಲಾಖೆಯ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಬಹುದು ಎಂದು ಆಹಾರ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಆಕ್ಸಿಜನ್ ಬೆಡ್ ಹಾಗೂ ಬೆಡ್‌ಗಳ ಸಮಸ್ಯೆ ಇಲ್ಲ, ಯಾರೂ ಆತಂಕಗೊಳ್ಳಬೇಕಾಗಿಲ್ಲ. ಜಿಲ್ಲೆಯಲ್ಲಿ 43 ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗೆ ಗುರುತಿಸಲಾಗಿದೆ. 1924 ಬೆಡ್‌ಗಳಿದ್ದು, 960 ಅಕ್ಸಿಜನ್ ಬೆಡ್‌ಗಳಿವೆ. ಈಗ 245 ಬೆಡ್‌ಗಳು ಮಾತ್ರ ಭರ್ತಿಯಾಗಿದ್ದು, 736 ಅಕ್ಸಿಜನ್ ಬೆಡ್ ಖಾಲಿ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 89 ಮಂದಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ 145 ಮಂದಿ ಒಟ್ಟು 234 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎನ್ನುವ ಸಾಕಷ್ಟು ದೂರುಗಳು ಬರುತ್ತಿದ್ದು ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ತಾಲೂಕು ಮಟ್ಟದ ಅಧಿಕಾರಿಯೋರ್ವರನ್ನು ನೋಡೆಲ್ ಅಧಿಕಾರಿಯಾಗಿ ನಿಯೋಜಿಸಲಾಗುವುದು. ನಾಳೆಯಿಂದಲೇ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಓರ್ವ ಅಧಿಕಾರಿ ನೋಡೆಲ್ ಅಧಿಕಾರಿಯಾಗಿ ಕೊರೊನಾ ಮೀಸಲು ಬೆಡ್ಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಗಣನೀಯವಾಗಿ ಏರಿಕೆಯಾಗಿದ್ದು ಬುಧವಾರ 1,655 ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 879, ಕುಂದಾಪುರ, ಬೈಂದೂರು ತಾಲೂಕಿನ 399, ಕಾರ್ಕಳ, ಹೆಬ್ರಿ ತಾಲೂಕಿನ 370 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಒಟ್ಟು 1654 ಪ್ರಕರಣಗಳಲ್ಲಿ 409 ಸಿಂಟಮಿಕ್ ಹಾಗೂ 1246 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 48 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 1607 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 81 ವರ್ಷ, 65 ವರ್ಷ ವೃದ್ದ ಹಾಗೂ ಉಡುಪಿಯ 53 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 433 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3925 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2200 ಮಂದಿಗೆ ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜಿನ್ ಮತ್ತು ರೆಮ್ಡಿಸಿವರ್ ಸರಬರಾಜು ಮಾಡುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಬುಧವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಗೆ ಪ್ರತೀ ದಿನ ಅಗತ್ಯವಿರುವ ರೆಮ್ಡಿಸಿವರ್ ಕುರಿತು , ಪ್ರತೀ ದಿನ ವರದಿಯನ್ನು ನೀಡಿ ಹಾಗೂ ಆಕ್ಸಿಜಿನ್ ಕೊರತೆಯಾಗದಂತೆ , ನಿರಂತರವಾಗಿ ಸರಬರಾಜು ಮತ್ತು ದಾಸ್ತಾನು ಇರುವಂತೆ ಎಚ್ಚರವಹಿಸಿ, ಜಿಲ್ಲೆಗೆ ಆಗತ್ಯವಿರುವ ರೆಮ್ಡಿಸಿವರ್ ಮತ್ತು ಆಕ್ಸಿಜಿನ್ ಒದಗಿಸುವ ಕುರಿತಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಆದರೆ ಇದರ ಆಡಿಟ್ ನಡೆಸಿ, ಅಗತ್ಯ ಪ್ರಮಾಣದಲ್ಲಿ, ಅಗತ್ಯವಿರುವ ರೋಗಿಗಳಿಗೆ ಮಾತ್ರ ನೀಡಿ, ಅನಗತ್ಯ ಪೋಲಾಗದಂತೆ ತಡೆಯಿರಿ ಎಂದು ಸಚಿವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಹೋಂ ಐಸೋಲೇಶನ್ ನಲ್ಲಿ ಇರಲು ಅಗತ್ಯ ವ್ಯವಸ್ಥೆಯಿಲ್ಲದಿರುವವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳಿಂದ ಕುಂದಾಪುರ ತಾಲೂಕಿನಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ಕಳೆದ ವರ್ಷದಂತೆ ಸೋಂಕು ಹರಡುವಿಕೆ ತಡೆಯುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾದಂತೆ ಕಾಣುತ್ತಿದೆ. ಜನತಾ ಕರ್ಫ್ಯೂ ಕಾರಣದಿಂದ ಬೇರೆಡೆ ವ್ಯವಹಾರ ನಡೆಸುತ್ತಿರುವ ಗ್ರಾಮೀಣ ಪ್ರದೇಶದ ಜನರು ಊರಿಗೆ ಆಗಮಿಸಿದ್ದು ಅವರಿಗೆ ಮನೆಗಳಲ್ಲಿ ಹೋಂ ಐಸೋಲೇಶನ್ಗೆ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಮತ್ತು ಪ್ರಾಥಮಿಕ ಸಂಪರ್ಕದಲ್ಲಿರುವವರು ಬೇಕಾಬಿಟ್ಟಿ ತಿರುಗಾಡುತ್ತಿರುವುದು ಸೋಂಕು ಹೆಚ್ಚಲು ಕಾರಣವಾಗುತ್ತಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಹೋಂ ಐಸೋಲೇಶನ್‍ಗೆ ಸರಿಯಾದ ವ್ಯವಸ್ಥೆ ಇಲ್ಲದವರಿಗೆ ಮತ್ತು ಆಸ್ಪತ್ರೆಗೆ ಸೇರಬೇಕಾದ ಅಗತ್ಯವಿಲ್ಲದವರಿಗೆ ಶೀಘ್ರವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಬೇಕು ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ್ಯಾಪಿಡ್ ಟೆಸ್ಟ್ ಕಿಟ್ ಹೆಚ್ಚಿಸುವುದು, ಗ್ರಾಮೀಣ ಪ್ರದೇಶಕ್ಕೆ ಹೆಚ್ಚುವರಿ ಅಂಬುಲೆನ್ಸ್ ಸೇವೆ ಒದಗಿಸುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿ ನೇಮಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತರ ಬದುಕಿನ ಪ್ರತಿ ಹೆಜ್ಜೆಯೂ ಸ್ಪೂರ್ತಿದಾಯಕವಾಗಿದ್ದು, ಅವರ ಬದುಕು-ಬರವಣಿಗೆ ಮುಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಆ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ಕಾರಂತರ ಕುರಿತಾದ ಕೆಲಸವನ್ನು ನಿರ್ವಹಿಸುತ್ತಿರುವುದು ಸಂತಸದ ವಿಷಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ ಹೇಳಿದರು. ಅವರು ಇತ್ತೀಚಿಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಶ್ರೀಪ್ರಕಾಶ್ ಹಂದಟ್ಟು, ವಿಕಾಸ ಸೌಧದ ಸಿಬ್ಬಂದಿ ಕೋಟ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಂಚಾಯಿತಿ ವ್ಯಾಪ್ತಿಯ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಕಾಣಿಸಿಕೊಳ್ಳುತ್ತಿರುವ ಕೊರೋನಾ ಪಾಸಿಟಿವ್ ಪ್ರಕರಣಗಳ ಮೇಲೆ ನಿಗಾ ಇರಿಸಲಾಗುತ್ತಿದೆ. ಹೋಮ್ ಐಸೊಲೇಶನ್ ಬಗೆಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಚಿಕಿತ್ಸೆ ಅಗತ್ಯ ಇರುವವರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಸಾರ್ವಜನಿಕರು ಕೊರೊನಾ ತಡೆ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ ಹೇಳಿದರು. ಅವರು ಶಿರೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು. ಶಿರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಮೂರು ಸಾವು ಸಂಭವಿಸಿದೆ. ಜನರು ಇದನ್ನು ಗಂಭೀರವಾಗಿ ಪರಿಗಣಿಸದೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಎಲ್ಲದರ ನಿಯಂತ್ರಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೋಮವಾರ ಮತ್ತು ಮಂಗಳವಾರ ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿಲ್ಶಾದ್ ಬೇಗಂ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತಿಸಿದ ಅಭಿವೃದ್ಧಿ ಅಧಿಕಾರಿ ಮಂಜುನಾಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಗ್ರ ಮಕ್ಕಳರಕ್ಷಣೆ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಆಪ್ತಸಮಾಲೋಚನೆಗೆ ಅಗತ್ಯವಿರುವ 0-18 ವರ್ಷದ ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ ಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲು ಟೋಲ್ ಪ್ರೀ ಸಂಖ್ಯೆ 14499 ಸ್ಥಾಪಿಸಲಾಗಿದೆ. ಇದು ಸಮಗ್ರ ಮಕ್ಕಳ ರಕ್ಷಣಾಯೋಜನೆಯಡಿ ನಿರ್ಲಕ್ಷತೆಗೆ ಒಳಗಾದ, ಪರಿತ್ಯಜಿಸಲ್ಪಟ, ದೌರ್ಜನ್ಯಕ್ಕೊಳಗಾದ, ಶೋಷಣೆಗೆ ಒಳಗಾದ, ಕುಟುಂಬದಿಂದ ಬೇರ್ಪಟ್ಟ ಮಕ್ಕಳು, ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮ ಪಡಿಸುವ ಉದ್ದೇಶವನ್ನು ಹೊಂದಿರುವ ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಕೋವಿಡ್-19 ಎರಡನೇ ಅಲೆ ಅತೀ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಆಪ್ತಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಟೆಲಿಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲಾಗುವುದು.ಆಪ್ತಸಮಾಲೋಚನೆ ಬಯಸುವ ಉಡುಪಿ ಜಲ್ಲೆಯ ಎಲ್ಲಾ ಮಕ್ಕಳು ಬೆಳಗ್ಗೆ 8 ರಿಂದರಾತ್ರಿ 8 ಗಂಟೆಯವರೆಗೆ 14499 ಸಂಖ್ಯೆಗೆ ಕರೆಮಾಡುವ ಮೂಲಕ ಉಚಿತವಾಗಿ ಆಪ್ತಸಮಾಲೋಚನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ ಹಾಗೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಉಚಿತ ಮಕ್ಕಳ ಸಹಾಯವಾಣಿ ಸಂಖ್ಯೆ;…

Read More