Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿಗೆ ಬಂದಿದೆ. ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಜಾರಿಗೆ ಬರುವಂತೆ ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ವಿದ್ಯಾಗಮ ಸೇರಿದಂತೆ 6-9ನೇ ತರಗತಿ ಸ್ಥಗಿತ, ಜಿಮ್, ಪಾರ್ಟಿ ಹಾಲ್, ಕ್ಲಬ್, ಈಜು ಕೊಳ ಬಂದ್, ರ್ಯಾಲಿ ಮುಷ್ಕರಗಳಿಗೆ ನಿಷೇಧ, ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆ ನಿಗದಿಪಡಿಸಿದ ಆಸನ ಸಂಖ್ಯೆ ಮೀರುವಂತಿಲ್ಲ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣಕನ್ನಡ, ಉಡುಪಿ, ಕಲಬುರಗಿ, ಧಾರವಾಡ, ಮೈಸೂರು, ಬೀದರ್ ಜಿಲ್ಲೆಗಳಲ್ಲಿ ಸಿನೆಮಾ ಹಾಲ್ 50% ಮೀರುವಂತಿಲ್ಲ, ಪಬ್, ಬಾರ್, ರೆಸ್ಟೊರೆಂಟ್, ಬಾರಿನಲ್ಲಿ 50% ಹೆಚ್ಚಿನ ಗ್ರಾಹಕರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರಾ ಮಹೋತ್ಸವ, ಮೇಳಗಳು ಗುಂಪು ಸೇರುವುದು ನಿಷೇಧ ಸೇರಿದಂತೆ ಟಫ್ ರೂಲ್ಸ್ ಜಾರಿಯಾಗಿದೆ. ಏಪ್ರಿಲ್ 20ರವರೆಗೆ ಈ ಕೆಳಗಿನ 16 ನಿಯಮಗಳು ಜಾರಿಯಲ್ಲಿರಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 70 ಅಧಿಕ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಕಟ್‌ಬೆಲ್ತೂರಿನ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಮುಖಂಡರ ಏಕಪಕ್ಷೀಯ ನಿಲುವುಗಳಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಹಾಗೂ ತ್ರಾಸಿ ಜಿಲ್ಲಾ ಪಂಚಾಯತ್ ಉಸ್ತುವಾರಿ ಶರತ್ ಕುಮಾರ್ ಶೆಟ್ಟಿ ಪಕ್ಷದ ಬಾವುಟ ನೀಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮಾತನಾಡಿ, ಗೋಪಾಲ ಪೂಜಾರಿಯವರು ಈ ಹಿಂದೆ ಮಾಡಿರುವ ಜನಪರ ಕೆಲಸ ಹಾಗೂ ಅವರ ನಾಯಕತ್ವವನ್ನು ಒಪ್ಪಿಕೊಂಡು ಗಂಗೊಳ್ಳಿಯ ಯುವಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹಿಂದೂತ್ವ ಹಾಗೂ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಭಾಗದ ಶಾಸಕರು ಗಂಗೊಳ್ಳಿಯ ಯುವಕರನ್ನು ಚುನಾವಣೆಗೆ ಬಳಸಿಕೊಂಡಿದ್ದು ಬಿಟ್ಟರೆ ಮತ್ತೇನೂ ಉಪಕಾರ ಮಾಡಿಲ್ಲ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಬಾಡದ ರಾಘವೇಂದ್ರ ಎಮ್. ಹಾಗೂ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದು, ಬೆಂಗಳೂರಿನ ಕೆ.ಎಸ್.ಆರ್.ಪಿ ಪೆರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪದಕ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಉಪಸ್ಥಿತರಿದ್ದರು. ರಾಘವೇಂದ್ರ ಅವರು 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿ ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಕು. ವಿದ್ಯಾ ಹೆಚ್. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಆಯ್ಕೆಯಾಗಿದ್ದಾರೆ. ಬಿ.ಎಡ್ ವಿದ್ಯಾರ್ಥಿನಿಯಾಗಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವಾರು ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಗಳಿಸಿದ ಅವರು, ಸಮವಸ್ತ್ರ ಧರಿಸುವ ವೃತ್ತಿಯನ್ನು ಮಾಡಬೇಕು ಮತ್ತು ಮಹಿಳೆ ಪುರುಷರಷ್ಟೇ ಸಮರ್ಥಳು ಎಂಬುದನ್ನು ನಿರೂಪಿಸಬೇಕು ಎಂಬ ಮಹಾದಾಸೆಯನ್ನು ವಿದ್ಯಾರ್ಥಿ ದೆಸೆಯೆಂದಲೇ ಹೊಂದಿದವರಾಗಿದ್ದಾರೆ. ಅವರ ಈ ಸಾಧನೆಗೆ ನಮ್ಮ ವಿದ್ಯಾರ್ಥಿಗಳು ಸೇನೆಗೆ ಸೇರ್ಪಡೆಯಾಗಬೇಕುಂಬುದು ನನ್ನ ಅಭಿಲಾಷೆ ಎಂದು ಪ್ರತಿಕ್ರಿಯಿಸಿದ, ಬ್ಯಾರೀಸ್ ಸಮೂಹದ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಅವರು, ನಿರ್ದೇಶಕರು, ಪ್ರಾಂಶುಪಾಲರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ 1.94ಕೋಟಿ ರೂ. ಅನುದಾನದಲ್ಲಿ ಶಿರೂರು ಪೇಟೆ, ದೊಂಬೆ ಅಡ್ಡರಸ್ತೆ ಕಾಮಗಾರಿ ಹಾಗೂ ಹಡವಿನಕೋಣೆ ರಸ್ತೆ ಅಭಿವೃದ್ಧಿಗೆ ಮಂಜೂರಾದ 70 ಲಕ್ಷ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ ರಾಘವೇಂದ್ರ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ನಡುವೆ ಸಂಸದ ಮತ್ತು ಶಾಸಕರ ವಿಶೇಷ ಮುತುವರ್ಜಿಯಿಂದ ಮಂಜೂರಾದ ಶಿರೂರು ಕೋಟೆಮನೆ ಬಳಿ ಸಂಕದಗುಂಡಿ ವೆಂಟೆಡ್ ಡ್ಯಾಂ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಜಪ್ಪ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಶಂಕರ ಪೂಜಾರಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಡಿ, ತಾ.ಪಂ ಸದಸ್ಯ ಮೌಲಾನ ದಸ್ತಗೀರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಉಮೇಶ್ ಶೆಟ್ಟಿ ಕಲ್ಗದ್ದೆ, ಮಹಿಳಾ ಮೋರ್ಚಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಗಂಗೊಳ್ಳಿ ಉಪ ಅಂಚೆ ಕಛೇರಿ ಇವರ ಸಹಯೋಗದೊಂದಿಗೆ ಆಧಾರ್ ಕುರಿತಾದ ವಿವಿಧ ಸೇವಾ ಶಿಬಿರ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆಯಿತು. ಶಿಬಿರದಲ್ಲಿ ಮಾಹಿತಿ ನೀಡಿ ಮಾತನಾಡಿದ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕ ನವೀನಚಂದರ್, ಕೇಂದ್ರ ಸರಕಾರದ ಅನೇಕ ಯೋಜನೆಗಳು ಅಂಚೆ ಇಲಾಖೆ ಮೂಲಕ ಅನುಷ್ಠಾನಗೊಳ್ಳುತ್ತಿದ್ದು ಇದರ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕಿದೆ. ಸರಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆಯಲು ಆಧಾರ ಕಡ್ಡಾಯ ಮಾಡಿರುವುದರಿಂದ ಎಲ್ಲರೂ ಆಧಾರ್ ನೊಂದಣಿ ಮಾಡಿಸಿಕೊಳ್ಳಬೇಕು. ಆಧಾರ್ ಕಾರ್ಡ್‌ನಲ್ಲಿ ವಿಳಾಸ, ಹೆಸರು ಬದಲಾವಣೆ, ಬಯೋಮೆಟ್ರಿಕ್ ಪರಿಷ್ಕರಣೆ, ಮೊಬೈಲ್ ನಂಬರ್ ತಿದ್ದುಪಡಿ ಇದ್ದಲ್ಲಿ ಮಾಡಿಸಿಕೊಳ್ಳಬೇಕು. ಗಂಗೊಳ್ಳಿಯ ಉಪ ಅಂಚೆ ಕಛೇರಿಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಲು ಹಾಗೂ ವಾರದ ಎಲ್ಲಾ ದಿನಗಳಲ್ಲಿ ಆಧಾರ್ ತಿದ್ದುಪಡಿ ಸೇವೆ ನೀಡಲು ಕ್ರಮಕೈಗೊಳ್ಳಲಾಗವುದು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್  ಮನೋಜ್ ನಾಯರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದೀಪ್ ಶೆಟ್ಟಿ ಆಜ್ರಿ ಆಗಮಿಸಿದ್ದರು. ಮಂಗಳೂರು ವಿ.ವಿ. ವ್ಯಾಪ್ತಿಯ 18 ಕಾಲೇಜುಗಳ ಕ್ರಿಕೆಟ್ ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಿದ್ದು ಎಸ್.ಡಿ.ಎಮ್ ಕಾಲೇಜು, ಉಜಿರೆ ಚಾಂಪಿಯನ್ನಾಗಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜು ರನ್ನರ್ ಅಪ್ ಆಗಿ ಹೊರಹೊಮ್ಮಿತು. ಮಂಗಳೂರು ವಿ.ವಿ ಕ್ಯಾಂಪಸ್ನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ.ಸಂದೀಪ್ ಸರಣಿ ಶ್ರೇಷ್ಠ ಆಟಗಾರರಾಗಿ, ಎಸ್.ಡಿ.ಎಮ್ ಕಾಲೇಜಿನ ನವೀನ್ ಜೈನ್ ಉತ್ತಮ ದಾಂಡಿಗ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಉತ್ತಮ ನಿರೂಪಕಿಯಾಗಲು ಭಾಷ ಶುದ್ಧತೆ ಮುಖ್ಯ. ಒಬ್ಬ ಪತ್ರಕರ್ತನಿಗೆ ಸಮಯಪ್ರಜ್ಞೆ ಹಾಗೂ ಬದ್ಧತೆ ಇದ್ದಾಗ ವೃತ್ತಿಜೀವನದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದು ಟಿವಿ 9 ನಿರೂಪಕಿ, ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶುಭಶ್ರೀ ಜೈನ್ ಹೇಳಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ, ಸಮೂಹ ಸಂವಹನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ ’ಟ್ರೆಂಡ್ಸ್ ಪ್ರಾಕ್ಟೀಸಸ್ ಇನ್ ಟಿವಿ ಜರ್ನಲಿಸಂ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಮಾಧ್ಯಮ ಲೋಕದಲ್ಲಿ ಹೆಚ್ಚಿನ ಸ್ಪರ್ಧೆಯಿದೆ. ಎಲೆಕ್ಟ್ರಾನಿಕ್ ಮೀಡಿಯಾಕ್ಕೆ ಅಗತ್ಯವಿರುವ ಕೌಶಲಗಳನ್ನು ಕಾಲೇಜು ಮಟ್ಟದಲ್ಲಿಯೇ ಕಲಿತುಕೊಂಡರೆ ವೃತ್ತಿ ಜೀವನ ಸುಗಮವಾಗಿರುತ್ತದೆ. ನಿರೂಪಕನಿಗೆ ಧ್ವನಿ, ಮುಖಭಾವ, ಮೇಕಪ್, ವಸ್ತ್ರ ವಿನ್ಯಾಸಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಇರಬೇಕು. ಇದೆಲ್ಲದರ ಜೊತೆಗೆ ಒಬ್ಬ ನಿರೂಪಕನಿಗೆ ಯಾವುದೇ ವಿಷಯದ ಬಗ್ಗೆ ಆಳ ಜ್ಞಾನ, ಪ್ರಬುದ್ಧತೆ ತುಂಬಾ ಮುಖ್ಯ. ಇದು ಯಾವುದೇ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವ ಆತ್ಮ ವಿಶ್ವಾಸವನ್ನು ತುಂಬುತ್ತದೆ ಎಂದರು. ನಿರೂಪಣೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು. ಆಂಕರ್‌ಗಳಿಗಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮುದ್ರದಲ್ಲಿ ಯಾವುದೇ ರೀತಿಯ ಅನಧಿಕೃತ ಹಾಗೂ ನಿಷೇಧಿತ ಮೀನುಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಂಭಾಂಗಣದಲ್ಲಿ, ಜಿಲ್ಲೆಯ ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂದರುಗಳಲ್ಲಿ ಮೀನುಗಾರರು ತಪ್ಪದೇ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಹಾಗೂ ಕೈಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು. ಸಮುದ್ರದಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಿ ಚಿಕಿತ್ಸೆ ನೀಡಲು ಅನುಕೂಲವಾಗಲು ಸಿ-ಆಂಬುಲೆನ್ಸ್ ಬೋಟ್ ಅನ್ನು ಶೀಘ್ರದಲ್ಲಿಯೇ ನಿಯೋಜಿಸಲಾಗುವುದು ಎಂದರು. ಬಂದರುಗಳಲ್ಲಿ ಈಗಾಗಲೇ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ದಿನಪೂರ್ತಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಆಗಿಂದಾಗೆ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿ ಉತ್ತಮ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿದಿನ ಮಲ್ಪೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಿವೃತ್ತ ಅಧ್ಯಾಪಕ, ಹಿರಿಯ ಪುರೋಹಿತ ಗಂಗೊಳ್ಳಿ ನಿವಾಸಿ ಕೋಟ ರಾಮದಾಸ ಭಟ್ (99) ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಗಂಗೊಳ್ಳಿ ಪರಿಸರದಲ್ಲಿ ‘ಮಾಸ್ಟ್ರ ಮಾಮ್’ ಎಂದೇ ಪರಿಚಿರಾಗಿದ್ದ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಸುಮಾರು 26 ವರ್ಷಗಳ ಕಾಲ ಸಂಸ್ಕೃತ ಮತ್ತು ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ತಾಂತ್ರಿಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಮತ್ತು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ಪ್ರೀತಿಗೆ ಪಾತ್ರರಾಗಿ ಅವರ ಅಚ್ಚುಮೆಚ್ಚಿನ ಶಿಷ್ಯರಾಗಿ ಗುರುತಿಸಿಕೊಂಡಿದ್ದರು. ಕಾರ್ಕಳದಲ್ಲಿ ವಾಸ್ತವ್ಯವಿದ್ದ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಹಪಾಠಿಯಾಗಿ ಉಪನಿಷತ್ ಮತ್ತು ವೇದಾಂತಕ್ಕೆ ಸಂಬಂಧಪಟ್ಟ ವಿಷಯಗಳನ್ನು ಅಭ್ಯಸಿಸಿದಲ್ಲದೆ ಶ್ರೀ ಸುಧೀಂದ್ರ ತೀರ್ಥ…

Read More