Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ8 ಹಾಗೂ 9ರಂದು ಎಲ್ಲಾ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 48 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಹಾಗೂ ಮರವಂತೆ ಪ್ರದೇಶಗಳಿಗೆ ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಶಾಸಕರಾದ ಸುಕುಮಾರ್ ಶೆಟ್ಟಿ ಅವರು ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಮರವಂತೆ ಹೊರಬಂದರು ಪ್ರದೇಶದ ಸಮೀಪ ಕಡಲ್ಕೊರೆತದಿಂದ ವ್ಯಾಪಕ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಂಸದರು ಕಡಲ್ಕೊರೆತಕ್ಕೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹಾಗಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು. ಶಾಸಕರ ಜೊತೆಗೂಡಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು. ಕಾಮಗಾರಿಯಲ್ಲಿ ಹಣ ದುರುಪಯೋಗವಾದರೆ ಈ ಕುರಿತು ಸೂಕ್ತ ತನಿಖೆ ನಡೆಯಬೇಕು. ರಾಜ್ಯ ಸರ್ಕಾರದ ವತಿಯಿಂದ ಮರವಂತೆ ಭಾಗದ ವಿವಿಧ ಅಭಿವೃದ್ಧಿಗೆ ಈಗಾಗಲೇ 84 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದರು. ಪ್ರಕೃತಿಯ ಮುಂದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಪ್ರಸಕ್ತ ಮಳೆಗಾಲದಲ್ಲಿ ಯಾವುದೇ ಜೀವ ಹಾಗೂ ಜಾನುವಾರು ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಅವಘಢಗಳು ನಡೆಯದಂತೆ ತಪ್ಪಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿವೃಷ್ಠಿಯಿಂದಾಗಿ ಮನೆಗಳು ಹಾನಿ ಉಂಟಾದ ಸಂದರ್ಭದಲ್ಲಿ ನಷ್ಠ ಪರಿಹಾರ ಅಂದಾಜಿಸುವಾಗ ಹಾನಿಯ ವಸ್ತುಸ್ಥಿತಿಯನ್ನು ವೈಜ್ಞಾನಿಕವಾಗಿ ಅಂದಾಜಿಸಿ ಗ್ರಾಮ ಲೆಕ್ಕಿಗರು ಪ್ರಾಥಮಿಕ ವರದಿಯನ್ನು ಸಲ್ಲಿಸಬೇಕು. ಅದರ ಆಧಾರದ ಮೇಲೆ ಹಾನಿಯ ಪ್ರಮಾಣವನ್ನು ಇಂಜಿನಿಯರ್ ಗಳು ನಿರ್ಧರಿಸುವುದು ಸೂಕ್ತ ಎಂದರು. ಕೆಲವೊಮ್ಮೆ ಮಳೆಯ ನೀರಿನಿಂದ ಮನೆಗಳ ತಳಪಾಯಗಳು ಹಾನಿಯಾದಲ್ಲಿ ಅಂತಹ ಮನೆಯನ್ನು ಸಂಪೂರ್ಣವಾಗಿ ಕೆಡವಿ ಹೊಸದಾಗಿ ನಿರ್ಮಾಣ ಮಾಡಬೇಕಾಗುತ್ತದೆ ಅವು ದುರಸ್ಥಿಗೆ ಯೋಗ್ಯವಾಗಿರುವುದಿಲ್ಲ ಇಂತಹವುಗಳನ್ನು ಅಂದಾಜಿಸುವಾಗ ಹಾನಿಯು ಸೂಕ್ಷö್ಮತೆಯನ್ನು ಆಧರಿಸಿ ವರದಿ ನೀಡಬೇಕಾಗುತ್ತದೆ ಎಂದರು. ಮಳೆಯ ನೀರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.5: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 6ರ ಬುಧವಾರವೂ ಕೂಡ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರದಂದು ಜಿಲ್ಲೆಯಲ್ಲಿ ನಿರಂತರವಾಗಿ ಎಡೆಬಿಡದೆ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ನಿರಂತರ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಬೆಳಿಗ್ಗೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಸರಕಾರಿ ಬಸ್ಸಿಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸೇರಿದಂತೆ ಮೂವರಿಗೆ ಗಂಭೀರ ಗಾಯವಾದ ಘಟನೆ ನಾವುಂದ ಬಸ್ ನಿಲ್ದಾಣದ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಬಸ್ಸು, ನಾವುಂದ ಬಸ್ ನಿಲ್ದಾಣ ಹಾಗೂ ಬ್ಯಾರಿಕೇಡ್ ಬಳಿ ಬಸ್ ನಿಧಾನಗೊಂಡಾಗ ಹಿಂಬಂದಿಯಿಂದ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನ ಕುಟುಂಬದ ಈರ್ವರೂ ಮಹಿಳೆಯರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರ ಸಹಕಾರದಿಂದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಉಡುಪಿ: ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Read More

ಹೆಬ್ರಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ, ಬೇರೆಡೆ ಎಂದಿನಂತೆ ಶಾಲಾ ಕಾಲೇಜು ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಜುಲೈ 7ರವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಭಾರತೀಯ ಹವಾಮಾನ ಇಲಾಖೆ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಮಳೆ ಕಳೆದೊಂದು ವಾರದಿಂದ ವಿವಿಧೆಡೆ ಮಳೆ ಸುರಿಯುತ್ತಲೇ ಇದೆ. ಜುಲೈ 5 ಮತ್ತು 6ರಂದು ಮಳೆಯ ತೀವ್ರತೆ ಹೆಚ್ಚಾಗುವ ಕಾರಣಕ್ಕೆ ಅಂದು ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಸಿಲಾಗಿದೆ. ಉಳಿದ ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದೈದ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.5: ಮರವಂತೆ ಸಮುದ್ರಕ್ಕೆ ಕಾರು ಉರುಳಿಬಿದ್ದ ಘಟನೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಕ್ಕು ಕೊಚ್ಚಿಹೋಗಿ ನಾಪತ್ತೆಯಾಗಿದ್ದ ಸಹ ಪ್ರಯಾಣಿಕನೋರ್ವನ ಮೃತದೇಹ ಸೋಮವಾರ ಸಂಜೆ ಹೊತ್ತಿಗೆ ಹೊಸಾಡು ಸಮೀಪದ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ. ಕುಂದಾಪುರ ಕಾಡಿನಕೊಂಡದ ನಿವಾಸಿ ನಾರಾಯಣ ಆಚಾರ್ ಎಂಬುವವರ ಅವರ ಪುತ್ರ ರೋಶನ್ ಆಚಾರ್ (24) ಮೃತ ಯುವಕ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು ಭಾನುವಾರ ಬೆಳಿಗ್ಗೆನಿಂದ ರೋಶನ್‌ಗಾಗಿ ರಾತ್ರಿವರೆಗೂ ವ್ಯಾಪಕ ಶೋಧ ನಡೆಸಲಾಗಿತ್ತು. ನಂತರ ಸೋಮವಾರವೂ ಪತ್ತೆಗೆ ಹುಡುಕಾಟ ಮುಂದುವರೆಸಲಾಗಿತ್ತು. ಸ್ಕೂಬ್ ಡ್ರೈವ್ ನಿಪುಣ‌ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಕಾರ್ಯಾಚರಣೆಗೆ ಕರೆಸಲಾಗಿತ್ತು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪಿಎಸ್ಐ ವಿನಯ್ ಎಂ ಕೊರ್ಲಹಳ್ಳಿ, ಮುಳುಗು ತಜ್ಞ ದಿನೇಶ್ ಗಂಗೊಳ್ಳಿ, ಸ್ಥಳೀಯರ ಸಹಿತ ರೋಶನ್ ಕುಟುಂಬಿಕರು, ಸ್ನೇಹಿತರು ಮರವಂತೆ ಬಳಿ ಮೊಕ್ಕಾಂ ಇದ್ದರು. ಕುಂದಾಪುರ ಕಡೆಯಿಂದ ಕುಮಟಾದತ್ತ ಸ್ವಿಫ್ಟ್ ಕಾರಿನಲ್ಲಿ ನಾಲ್ವರು ತೆರಳುತ್ತಿದ್ದ ಸಂದರ್ಭ ಕಾರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಬೀಜಾಡಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಪಾಲಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದಾನೆ. ಓರ್ವ ನಾಪತ್ತೆಯಾಗಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮರವಂತೆ ಬೀಚ್ ಬಳಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿರಾಜ್ ಆಚಾರ್ಯ(28) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರೋಶನ್‌ ಎಂಬವರು ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಶಂಕೆ‌ ವ್ಯಕ್ತವಾಗಿದೆ. ಸಂದೇಶ್ ಹಾಗೂ ಕಾರ್ತಿಕ್ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ತಡರಾತ್ರಿ ಕುಂದಾಪುರದಿಂದ ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ವಿರಾಜ್ ಹಾಗೂ ಅವರ ಸಹೋದರ ಸಂಬಂಧಿಗಳು ಕುಂದಾಪುರ ಕಡೆಯಿಂದ ಬೈಂದೂರು‌ ಕಡೆಗೆ ಪ್ರಯಾಣಿಸುತ್ತಿದ್ದರು. ವಿರಾಜ್ ಸ್ವತಃ ಕಾರನ್ನು ಚಾಲನೆ‌ ಮಾಡುತ್ತಿದ್ದರು ಎನ್ನಲಾಗಿದೆ. ಮರವಂತೆ ಬೀಚ್ ಸಮೀಪ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 40 ಅಡಿ ಕೆಳಕ್ಕೆ ಉರುಳಿದೆ. ಸಮುದ್ರದ…

Read More