Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಯುನೈಟೆಡ್ ನೇಶನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ ಹಾಗೂ ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜ್ಯುಕೇಶನ್ ಜಂಟಿಯಾಗಿ ಭಾರತದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದು, ಇದರ ಭಾಗವಾಗಿ ಆಕ್ಟ್ ಟು ರಿಸ್ಟೋರ್’ ಎಂಬ ಆರು ತಿಂಗಳ ಪರಿಸರ ಅಭಿಯಾನವನ್ನು ಆಯೋಜಿಸಿವೆ. ಪರಿಸರ ಸಂಬಂಧೀ ಮಾಹಿತಿ- ಶಿಕ್ಷಣ- ಸಂವಹನ ಅಭಿಯಾನ ಇದಾಗಿದ್ದು, ಇದರ ಭಾಗವಾಗಿ ವಿವಿಧ ಪರಿಸರ ವ್ಯವಸ್ಥೆಗಳ ಬಗ್ಗೆ ಪ್ರತೀ ತಿಂಗಳೂ ವೈಜ್ಞಾನಿಕ ಪೋಸ್ಟರ‍್ಗಳನ್ನು ಬಿಡುಗಡೆಗೊಳಿಸಲಾಗುತ್ತದೆ. ಈ ಅಭಿಯಾನದ ಜುಲೈ ತಿಂಗಳ ಪೋಸ್ಟರ್‌ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಹರೀಶ್ ಭಟ್ ಪಕ್ಷಿವನಕ್ಕೆ ಸ್ಥಾನ ಸಿಕ್ಕಿದೆ. ಯುನೈಟೆಡ್ ನೇಶನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ ಹಾಗೂ ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜ್ಯುಕೇಶನ್ ಪರಿಸರದ ಕುರಿತು ವಾರ್ಷಿಕ ಹಾಗೂ ದಶಕದ ಅವಧಿಯ ಕಾರ್ಯಗಳನ್ನು ನಡೆಸುತ್ತ ಬಂದಿದೆ. ಪ್ರತಿಬಾರಿಯೂ ವಿವಿಧ ಮುಖ್ಯ ಪರಿಸರ ವಿ?ಯಗಳ ಕುರಿತು ಜಾಗೃತಿ ಕಾರ್ಯಗಳನ್ನು ಮಾಡುತ್ತ ಬಂದಿದ್ದು, ಈ ಬಾರಿಯ ಥೀಮ್ ‘ಇಕೋಸಿಸ್ಟಮ್ ರಿಸ್ಟೋರೇಶನ್’ ಆಗಿದೆ. ಕೃಷಿ ಪರಿಸರ, ಹುಲ್ಲುಗಾವಲುಗಳು, ಪರ್ವತಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮದ ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಜಿ.ಪ್ರಮೋದ ಗಾಣಿಗ ಶನಿವಾರ ವಿತರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಮಹಾಲೆ, ಸಹಶಿಕ್ಷಕಿ ಲಲಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಉಪಾಧ್ಯಕ್ಷೆ ರೇಖಾ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದಲ್ಲಿ ಪ್ರಸಕ್ತ ಸಾಲಿನ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದಿ, ಪ್ರವಾಸಿ ಟ್ಯಾಕ್ಸಿ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿ, ಮೈಕ್ರೋ ಕ್ರೆಡಿಟ್ ಪ್ರೇರಣಾ, ಒಡೆತನ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರವರಿಂದ ಹಾಗೂ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ನಿಗಮದ ವೆಬ್‌ಸೈಟ್ https://www.ksskdc.kar.nic.in/ ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 20 ರೊಳಗೆ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ದೂರವಾಣಿ ಸಂಖ್ಯೆ:0820-2574884 ಸಂಪರ್ಕಿಸಬಹುದೆಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಶು ಮತ್ತು ತಾಯಿ ಮರಣ ಸಂಖ್ಯೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಗರ್ಭಿಣಿ ಸ್ತ್ರೀಯರಿಗೆ ತಾಯಿ ಕಾರ್ಡ್ ನೀಡುವುದರೊಂದಿಗೆ, ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ, ಶಿಶು ಮತ್ತು ತಾಯಿ ಮರಣ ನಿಯಂತ್ರಣ ಹಾಗೂ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರ ಶಿಶು ಹಾಗೂ ತಾಯಿ ಮರಣ ಪ್ರಮಾಣ ತಡೆಗಟ್ಟಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದರೂ ಸಹ ಲಾಕ್ಡೌನ್ ಅವಧಿಯಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ, ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಇತರೆ ಸಾಮಾನ್ಯ ಕಾಯಿಲೆ ಹಾಗೂ ಗರ್ಭಿಣಿ ಸ್ತ್ರೀಯರ ಪರೀಕ್ಷೆಗೆ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ಮಾರ್ಚಿನಿಂದ ಜೂನ್ವರೆಗೆ 8 ತಾಯಿ ಮರಣ ಹಾಗೂ ಫೆಬ್ರವರಿಯಿಂದ ಜೂನ್ವರೆಗೆ 52 ಶಿಶು ಮರಣ ಪ್ರಕರಣಗಳು ಆಗಿವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಫುಡ್ ಸೈನ್ಸ್ ಆಂಡ್ ನ್ಯೂಟ್ರಿಷನ್ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಒಂದು ದಿನದ ಆನ್‌ಲೈನ್ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ವಿಭಾಗದ ಹಿರಿಯ ವಿದ್ಯಾರ್ಥಿಗಳಾದ ಅಬುದಾಬಿ ಅಹಲ್ಯಾ ಆಸ್ಪತ್ರೆಯ ಕ್ಲಿನಿಕಲ್ ಡಯಟಿಷನ್ ರಾಧಿಕಾ ಹಾಗೂ ಫುಡ್ ಸರ್ವಿಸ್ ಡಯಟಿಷನ್ ಸಾಯಿಕೃತಿಕಾ ಭಾಗವಹಿಸಿದರು. ಕಾರ್ಯಾಗಾರದಲ್ಲಿ ಮಾತನಾಡಿದ ರಾಧಿಕಾ, ಗರ್ಭಧಾರಣೆ ಸಮಯದಲ್ಲಿ ಉತ್ತಮ ಆಹಾರ ಪದ್ಧತಿ ಹಾಗೂ ಮಕ್ಕಳಿಗೆ ಎದೆಹಾಲುಣಿಸುವಿಕೆಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟರು. ಮಗುವಿನ ಬೆಳೆವಣಿಗೆಯಾಗುವವರೆಗೂ ತಾಯಿಯ ಎದೆಹಾಲನ್ನು ಆಹಾರವಾಗಿ ನೀಡಬಹುದು ಎಂದರು. ಬಳಿಕ ಮಾತನಾಡಿದ ಸಾಯಿಕೃತಿಕಾ ಸ್ತನ್ಯಪಾನದಿಂದ ತಾಯಿ ಹಾಗೂ ಮಗುವಿನ ದೇಹದಲ್ಲಿ ಪ್ರತಿಕಾಯಗಳು ಅಭಿವೃದ್ಧಿಗೊಳ್ಳುತ್ತದೆ. ಅಲ್ಲದೆ ಮಗುವನ್ನು ರೋಗರುಜಿನಗಳಿಂದ ರಕ್ಷಿಸುತ್ತದೆ ಹಾಗೂ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಮುಖ್ಯ ಪಾತ್ರವಹಿಸುತ್ತದೆ ಎಂದರು. ಈ ಸಂದರ್ಭ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ವಿಭಾಗದ ಮುಖ್ಯಸ್ಥೆ ಡಾ ಅರ್ಚನ ಪ್ರಭಾತ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗ್ಲೆನಿಟಾ ಮೆನೆಜಸ್ ಸ್ವಾಗತಿಸಿ, ನವ್ಯ ಬಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿದೆ. ಸರಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಮತ್ತು ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಸುಮಾರು 40 ಸರಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿವೇತನ ವಿತರಣೆ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕರೋನಾದ ಈ ಕಾಲಘಟ್ಟದಲ್ಲಿ ಶಿಕ್ಷಕರ ಮೇಲಿನ ಜವಾಬ್ದಾರಿ ಹೆಚ್ಚಿದ್ದು, ಭೌತಿಕ ತರಗತಿಗಳು ಆರಂಭವಾದ ಬಳಿಕ ಮಕ್ಕಳ ಸುರಕ್ಷತೆ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಕೋಟೇಶ್ವರದ ಗೀತಾ ಎಚ್.ಎಸ್.ಎನ್.ಫೌಂಡೇಶನ್ ಅಧ್ಯಕ್ಷ ಶಂಕರ ಐತಾಳ್ ಹೇಳಿದರು. ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಗೀತಾ ಎಚ್.ಎಸ್.ಎನ್.ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾದ ನೋಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2021-22ನೇ ಸಾಲಿನಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 90% ಸಹಾಯಧನವನ್ನು 10% ಫಲಾನುಭವಿಗಳಿಗೆ ವಂತಿಗೆಯೊಂದಿಗೆ ಹಾಲು ಕರೆಯುವ ಯಂತ್ರ ಮತ್ತು ರಬ್ಬರ್ ನೆಲದ ಹಾಸುಗಳ ಪರಿಕರಗಳನ್ನು ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಫಲಾನುಭವಿಗಳನ್ನು ಆಯ್ಕೆಮಾಡಲು INAPH ಕಿವಿಯೋಲೆ ಹಾಕಿರುವ ಕನಿಷ್ಠ 2 ಮಿಶ್ರತಳಿ ಹಸುಗಳನ್ನು ಹೊಂದಿರುವ, ಪ.ಜಾತಿ/ಪ.ಪಂಗಡದ ಆಸಕ್ತ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿ ನಮೂನೆ ಪಡೆದು ಆಗಸ್ಟ್ 19 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಪಶು ಆಸ್ಪತ್ರೆ, ಉಡುಪಿ (0820-2520659), ಕಾಪು (0820-2551175), ಬ್ರಹ್ಮಾವರ (0820-2561101), ಕುಂದಾಪುರ (08254-230776), ಬೈಂದೂರು (08254-251076), ಕಾರ್ಕಳ (08258-230448) ಮತ್ತು ಹೆಬ್ರಿ (08253-251203)ನ್ನು ಸಂಪರ್ಕಿಸುವAತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2021-22 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವೀಧರರು ಅರ್ಜಿ ನಮೂನೆಯನ್ನು ಆಗಸ್ಟ್ 20 ರೊಳಗೆ ನಿಗದಿತ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಕಛೇರಿಗಳ ಸಂಕೀರ್ಣ, ರಜತಾದ್ರಿ ಬಿ ಬ್ಲಾಕ್, ಕೊಠಡಿ 304, 2ನೇ ಮಹಡಿ ಮಣಿಪಾಲ ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ : 0820-2574881, 2573881ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಹಾತ್ಮ ಗಾಂಧಿ ಮಾರ್ಗದಲ್ಲಿ ನಿರ್ಮಿಸಿರುವ ರಸ್ತೆಯ ವೇಗತಡೆಯನ್ನು ತೆಗೆಯಬೇಕು ಎಂದು ಒಂದು ಬಣ ಒತ್ತಾಯಿಸಿದರೆ, ಉಳಿಸಿಕೊಳ್ಳಬೇಕು ಎಂದು ಇನ್ನೊಂದು ತಂಡ ಆಗ್ರಹಿಸಿತು. ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮದ್ ಈ ವೇಗತಡೆಯ ಅಗತ್ಯದ ಬಗ್ಗೆ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮಜಾಯಿಸಿ ನೀಡಿ ಈ ಕುರಿತಾದ ಬಿಸಿಚರ್ಚೆಯನ್ನು ಮೊಟಕುಗೊಳಿಸಿದರು. ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಈ ಚರ್ಚೆ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಲೀನಾ ಕ್ರಾಸ್ಟಾ, ಚಂದ್ರ ಉಗ್ರಾಣಿಮನೆ, ಜಿ. ರಾಮಕೃಷ್ಣ ಖಾರ್ವಿ, ಗಣೇಶ ಪೂಜಾರಿ, ಮನ್ಸೂರ್ ಇಬ್ರಾಹಿಂ, ಗ್ರೇಶನ್ ಕ್ರಾಸ್ಟಾ, ಕೆ. ವಿಘ್ನೇಶ್ವರ, ಗಣೇಶ ಮಧ್ಯಸ್ಥ, ಶಂಕರ ಪೂಜಾರಿ, ಶೇಷಗಿರಿ ಆಚಾರ್ಯ, ಕೃಷ್ಣ ಮೊಗವೀರ, ಹರೀಶ ಪೂಜಾರಿ, ಮರವಂತೆ ಪ್ರವಾಹ ಬಾಧಿತ ಗ್ರಾಮವಾಗಿರುವುದರಿಂದ ಈಗಿರುವ ಎರಡು ದೋಣಿಗಳು ಸಾಲವು, ಹೆಚ್ಚುವರಿ ದೋಣಿ ಬೇಕು, ಅನ್ನಿಬೆಸೆಂಟ್ ಮಾರ್ಗದಿಂದ ನದಿತೀರಕ್ಕೆ ರಸ್ತೆ ನಿರ್ಮಿಸಬೇಕು, ನಾರಾಯಣ ಗುರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಲೀಂ ಅಲಿ ಎಂದೇ ಖ್ಯಾತರಾಗಿರುವ ಪಕ್ಷಿ ತಜ್ಞ, ಪ್ಲೋರಾ ಎಂಡ್ ಫೌನಾ ಕ್ಲಬ್‌ನ ಅಧ್ಯಕ್ಷ ಡಾ. ಹೆಚ್. ಎಸ್. ಮಲ್ಲಿ ಅವರ ಪಕ್ಷಿಗಳ ಕುರಿತಾದ ಕೃತಿ ಹಾರ್ಬಿನ್‌ಜೆರ್ಸ್ ಆಫ್ ಡಿಲೈಟ್‌ನ್ನು ಕುಂದಾಪುರದ ರೋಟರಿ ಕ್ಲಬ್ ಆಶ್ರಯದಲ್ಲಿ ಅಧ್ಯಕ್ಷರಾದ ಎ. ಶಶಿಧರ ಹೆಗ್ಡೆ ಡಾ. ಹೆಚ್. ಎಸ್. ಮಲ್ಲಿ ಅವರ ಚಿಕಿತ್ಸಾಲಯದಲ್ಲಿ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿದ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಎ. ಶಶಿಧರ ಹೆಗ್ಡೆ ಅವರು ಮಾತನಾಡಿ, ಪ್ರಕೃತಿ ಪರಿಸರ, ಪಕ್ಷಿಗಳ ಕುರಿತು ವಿಶೇಷ ಆಸಕ್ತಿಯನ್ನು ಹೊಂದಿ ಜನರಲ್ಲಿ ಜಾಗೃತಿ ಮೂಡಿಸುವ ಮಹತ್ತರವಾದ ಕಾರ್ಯದಲ್ಲಿ ತೊಡಗಿರುವ ಡಾ. ಹೆಚ್.ಎಸ್. ಮಲ್ಲಿಯವರು ಪಕ್ಷಿಗಳ ವಿಶೇಷ ಚಿತ್ರ ಸಹಿತವಾಗಿ ಅನುಭವ, ಅಧ್ಯಯನವನ್ನು ಕೃತಿಯಲ್ಲಿ ಧಾರೆಯೆರೆದು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಲೇಖಕ ಡಾ. ಹೆಚ್. ಎಸ್. ಮಲ್ಲಿ ಮಾತನಾಡಿ, ಪಕ್ಷಿ ವೀಕ್ಷಣೆ ನನ್ನ ನಿತ್ಯದ ಹವ್ಯಾಸವಾಗಿದ್ದು, ಅದರ ಅನುಭವ ಹಾಗೂ ಪಕ್ಷಿಗಳ ಮಾಹಿತಿಯನ್ನು ಗ್ರಾಮೀಣ ಭಾಗದ ಜನರಿಗೆ…

Read More