ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣದ ಪ್ರಗತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಈಗಾಗಲೇ ಜಿಲ್ಲೆಯಲ್ಲಿ 95% ಪ್ರಥಮ ಡೋಸ್ ಲಸಿಕೆ ನೀಡಲಾಗಿದ್ದು, 2 ನೇ ಡೋಸ್ ಪಡೆಯಲು ಅರ್ಹರಿರುವವರನ್ನು ಮತ್ತು ಅವಧಿ ಮೀರಿದ್ದರೂ ಲಸಿಕೆ ಪಡೆಯದವವರನ್ನು ಗುರುತಿಸಿ, ಕೂಡಲೇ ಅವರಿಗೆ ಲಸಿಕೆ ನೀಡಿ, ಲಸಿಕೆ ಪಡೆಯಲು ನಿರಾಕರಣೆ ಇರುವ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಲಸಿಕೆ ಪಡೆಯುವಂತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಹೋಮ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಹೆರ್ಗ ಜಯರಾಮ ತಂತ್ರಿಗಳ ಮಾರ್ಗದರ್ಶನದಲ್ಲಿ ಜರುಗಿತು. ಈ ಸಂದರ್ಭ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ. ಯಡ್ತರೆ ರಾಜಮೋಹನ್ ಶೆಟ್ಟಿ, ಯಡ್ತರೆ ಮನೆ ಕುಟುಂಬಿಕರಾದ ಅರ್ಜುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ, ಡಾ. ಮಿಥುನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮಗಳ ಕೊನೆಯಲ್ಲಿ ಗಂಗಾನಾಡಿನ ಮರಾಠಿ ಸಮುದಾಯದವರು ಶಿವನಿಗೆ ಪ್ರಿಯವಾದ ಹೋಳಿಕುಣಿತ ಸೇವೆ ಸಲ್ಲಿಸಿದ್ದು, ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಮದ್ದಳೆ ಭಾರಿ ಗಮನ ಸೆಳೆದರು. ಇದನ್ನೂ ಓದಿ:► ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ – https://kundapraa.com/?p=55975…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಬದುಕು ಕೇವಲ ಓದಿಗೆ ಮೀಸಲಾಗಬಾರದು, ಕ್ರೀಡೆಯಿಂದಲೂ ಜಾಗತಿಕ ಮಟ್ಟದಲ್ಲಿ ಮಿಂಚಬಹುದು, ಬದುಕನ್ನು ಕಟ್ಟಿಕೊಳ್ಳಬಹುದು. ಒಲಿಂಪಿಕ್ಸ್ನಲ್ಲಿ ಭಾರತ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾದರೆ ಪೋಷಕರು ಓದಿನ ಜತೆಯಲ್ಲಿ ತಮ್ಮ ಮಕ್ಕಳನ್ನು ಕ್ರೀಡೆಯಲ್ಲೂ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಕ್ರೀಡಾ ಪ್ರೋತ್ಸಾಹಕ, ಚೆಸ್ ತಜ್ಞ, ಮುಂಬಯಿಯ ಡಿಜಿ ಫ್ಲಿಕ್ ಇನ್ಷುರೆನ್ಸ್ನ ನಿರ್ದೇಶಕ ರಂಜನ್ ನಾಗರಕಟ್ಟೆ ಅವರು ಅಭಿಪ್ರಾಯಪಟ್ಟರು. ಅವರು ಟಾರ್ಪೆಡೊಸ್ ಸ್ಪೋರ್ಟ್ಸ್ ಕಾರ್ನಿವಲ್ ಇದರ ಅಂಗವಾಗಿ ಕುಂದಾಪುರದಲ್ಲಿ ಶನಿವಾರ ಆರಂಭಗೊಂಡ ಅಖಿಲ ಭಾರತ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಫಿಡೆ ರೇಟೆಡ್ ಚೆಸ್ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿ ಕರಾವಳಿಯ ಕ್ರೀಡಾ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಯುನೈಟೆಡ್ ಕರ್ನಾಟಕ ಚೆಸ್ ಸಂಸ್ಥೆ, ಅಖಿಲ ಭಾರತ ಚೆಸ್ ಸಂಸ್ಥೆ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಗೌತಮ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಈ ಚಾಂಪಿಯನ್ಷಿಪ್ ನಡೆಯುತ್ತಿದೆ. ಇಲ್ಲಿನ ಹರಿಪ್ರಸಾದ್ ಹೊಟೇಲ್ನ ಆತಿಥ್ಯ ಸಭಾಗಂಣದಲ್ಲಿ…
ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ: ಡಾ. ವೈ. ಭರತ್ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ ಕಾರ್ಯನಿರ್ವಹಿಸುತ್ತವೆ. ದೇವಳದಲ್ಲಿ ಕೆಲಕಾಲ ವಿರಮಿಸಿದರೆ ಮನಸ್ಸು ಪ್ರಪುಲ್ಲಗೊಂಡು ಮಾನಸಿಕವಾಗಿ ನೆಮ್ಮದಿ ಉಂಟಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಹೇಳಿದರು. ಅವರು ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ಶನಿವಾರ ಹಮ್ಮಿಕೊಂಡ ಧಾರ್ಮಿಕ – ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಗೋಕರ್ಣ ಹೊರತುಪಡಿಸಿ ಭಕ್ತರು ದೇವರನ್ನು ಮುಟ್ಟಿ ಪೂಜೆ ಮಾಡುವ ಅವಕಾಶವಿರುವುದು ವಣಕೊಡ್ಲುವಿನಲ್ಲಿ ಮಾತ್ರ. ಪ್ರಾಚೀನ ದೇಗುವ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ವಿಚಾರ ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮನವಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿ ಬಹಳ ಪ್ರಸಿದ್ಧ ಪಡೆದಿರುವ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಂಡಾಗಲೇ ದೇವತಾ ಕಾರ್ಯ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದರು. ವಣಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಆ್ಯಂಬುಲೆನ್ಸ್’ಗೆ ತಾತ್ಕಾಲಿಕ ನೆಲೆಯಲ್ಲಿ ಚಾಲಕನನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಚಾಲಕನ ಸಂಬಳ ಹಾಗೂ ಡಿಸೆಲ್ ವೆಚ್ಚವನ್ನು ಭರಿಸಲು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್’ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಮುಂದೆ ಬಂದಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಹೆಚ್ ಅವರು ಟ್ರಸ್ಟ್’ಗೆ ಮಾಡಿದ್ದ ಮನವಿಗೆ ಸ್ಪಂದಿಸಿ ಸರಕಾರದಿಂದ ನೇಮಕಾತಿ ಆಗುವ ತನಕ ತಾತ್ಕಾಲಿಕವಾಗಿ ಓರ್ವ ಆ್ಯಂಬುಲೆನ್ಸ್ ಚಾಲಕನ ಸಂಬಳ ಹಾಗೂ ಡಿಸೇಲ್ ವೆಚ್ಚ ಭರಿಸಿಕೊಡಲು ಟ್ರಸ್ಟ್ ಒಪ್ಪಿಗೆ ಪತ್ರವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು. ಒಪ್ಪಿಗೆ ಪತ್ರ ಹಸ್ತಾಂತರಿಸಿ ಮಾತನಾಡಿದ ಡಾ. ಗೋವಿಂದ ಬಾಬು ಪೂಜಾರಿ ಅವರು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳು ಹೆಚ್ಚಿಸುವುದರ ಜೊತೆಗೆ ಬಡಜನರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಆಗಬೇಕು. ಡಿ.ಹೆಚ್.ಓ ಅವರ ಮನವಿಯಂತೆ ಓರ್ವ ಅಂಬ್ಯುಲೆನ್ಸ್ ಚಾಲಕನ ಸಂಬಳ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಕರಾಟೆ ತರಗತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ವೃದ್ಧಿಸಲು, ಸ್ವಯಂ ರಕ್ಷಣೆಗೂ ಕರಾಟೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭ ಕೆಡಿಎಫ್ ಕರಾಟೆ & ಫಿಟ್’ನೆಸ್ ಅಕಾಡೆಮಿಯ ಸಂಸ್ಥಾಪಕ ಕಿರಣ್ ಕುಂದಾಪುರ, ಕರಾಟೆ ಮಾಸ್ಟರ್ ವಿಶ್ವನಾಥ್ ಉಪ್ಪುಂದ.. ಸಂದೀಪ್, ಶಿಯಾನ್ ಶೇಖ್, ಸಂತೋಷ ಉಪಸ್ಥಿತರಿದ್ದರು. ಶಿಕ್ಷಕ ಪ್ರಕಾಶ್ ಮಾಕೋಡಿ ಸ್ವಾಗತಿಸಿ, ಚೈತ್ರ ಯಡ್ತರೆ ವಂದಿಸಿದರು, ಗುರುರಾಜ ಎಸ್. ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೆಲವು ವರ್ಷಗಳ ಹಿಂದಿನಿಂದಲೂ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆಯಬೇಕೆಂಬ ಆಶಯವಿತ್ತು ಆದರೆ ಸಮಯಾಭಾವದಿಂದ ಕ್ಷೇತ್ರಕ್ಕೆ ರಲು ಸಾಧ್ಯವಾಗಿಲ್ಲ. ಪ್ರಸ್ತುತ ಬೈಂದೂರಿನ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಇವರ ಕೋರಿಕೆ ಮೇರೆಗೆ ಈಗ ಸಕಾಲ ಕೂಡಿ ಬಂದಿದ್ದು, ತಾಯಿಯ ದರ್ಶನಕ್ಕೆ ಅವಕಾಶ ಸಿಕ್ಕಿದೆ ಎಂದು ಕಾಶೀಮಠದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಕೊಲ್ಲೂರು ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಇಲ್ಲಿನ ಶ್ರೀ ಸರಸ್ವತಿ ಮಂಟಪದಲ್ಲಿ ಆಶೀರ್ವಚನ ಮಂತ್ರಾಕ್ಷತೆ ನೀಡಿದರು. ಮಹಾಮಾರಿ ಕೊರೊನಾದಿಂದ ವಿಶ್ವವೇ ತಲ್ಲಣಗೊಂಡಿದ್ದು, ಜನರನ್ನು ಈ ಆತಂಕದಿಂದ ದೂರ ಮಾಡುವಂತೆ ಹಾಗೂ ದೇಶದಲ್ಲಿ ರೋಗದ ಭೀಕರತೆ ಮುಕ್ತಗೊಂಡು ಸುಖ-ಶಾಂತಿ ನೆಲೆಸುವ ಮೂಲಕ ಸುಭದ್ರವಾಗಿರಲಿ ಎಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಿದ್ದೇವೆ. ನಿಸ್ವಾರ್ಥ ಸೇವೆಯಿಂದ ದೇವರು ಹತ್ತಿರನಾಗುತ್ತಾನೆ. ಹಾಗೆಯೇ ಭಕ್ತರ ಬೇಡಿಕೆಗಳನ್ನು ತಾಯಿ ಈಡೇರಿಸುತ್ತಾಳೆ ಎಂಬ ನಂಬಿಕೆ ನಮ್ಮದು ಎಂದರು. ದೇವಳದ ಪ್ರಧಾನ ಅರ್ಚಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ 2021-22ನೇ ಶೈಕ್ಷಣಿಕ ಸಾಲಿನ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು ವಿಜ್ಞಾನ ವಿಭಾಗದ ನಿಯತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕುಂದಾಪುರದ ಹೂವಯ್ಯ ಖಾರ್ವಿ ಹಾಗೂ ಅಮ್ರತ ದಂಪತಿಗಳ ಪುತ್ರಿ ನಿಯತಿ, ಭರತನಾಟ್ಯ ಗುರುಗಳಾದ ವಿದೂಷಿ ಪ್ರವಿತಾ ಅಶೋಕ್ ಇವರಿಂದ ತರಬೇತಿ ಪಡೆದಿರುತ್ತಾಳೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿ ಕುಮಾರಿ ಸಿಂಚನಾ ನೆಂಪು ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪಠ್ಯೇತರ ಚಟುವಟಿಕೆಗಳಲ್ಲಿ ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ,ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ. ಇದನ್ನೂ ಓದಿ:► ಭಗವದ್ಗೀತಾ ಕಂಠಪಾಠ & ಕನ್ನಡ ಭಾಷಣ ಸ್ಪರ್ಧೆ: ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ – https://kundapraa.com/?p=55873 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ವಿಭಾಗದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ದೇವಸ್ಥಾನದ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು. ದೇವಾಲಯದ ಪ್ರಧಾನ ಅರ್ಚಕ ಡಾ. ಕೆ. ರಾಮಚಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿಯ ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.10: ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭಗೊ೦ಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು. ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು,74 – ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ. ಬ್ರಹ್ಮಾವರ ತಾಲೂಕಿನ ಕೋಟತಟ್ಟು,ಬಾರ್ಕೂರು. ಹೆಬ್ರಿ ತಾಲೂಕಿನ ಮಾಡಾಮಕ್ಕಿ, ನಾಡ್ಪಾಲು. ಕಾರ್ಕಳ ತಾಲೂಕಿನ ಎರ್ಲಪಾಡಿ, ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ, ನಿಟ್ಟೆ, ನಲ್ಲೂರು, ರೆಂಜಾಳ, ಬೋಳ, ನ0ದಳಿಕೆ, ಮು೦ಡ್ಕೂರು ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದು, 100% ಮತದಾನ…
