Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಯಲ್ಲಿ ವಾಹನ ಚಾಲನಾ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಸುರಕ್ಷಿತವಾಗಿರಬಹುದು, ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳಿಂದ ಮುಕ್ತವಾಗಬಹುದು ಎಂದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್ಗಳನ್ನು, 2 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಸಂಚಾರಕ್ಕೆ ಸುರಕ್ಷಿತ ಸ್ಥಳಗಳನ್ನಾಗಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಾದೇಶಿಕ ಸಾರಿಗೆ ಅಧಿಕಾರಿ,ಪೊಲೀಸ್ ಮತ್ತು ರಾಷ್ಟಿçÃಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಈ ಎಲ್ಲಾ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಪರಿಶೀಲಿಸಿ, ಅಲ್ಲಿನ ಸ್ಥಿತಿಗತಿ ಮತ್ತು ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ವಿವರವಾದ ವರದಿಯನ್ನು ನೀಡಬೇಕು, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಸೂಚನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕೆನಡಾ: ವಿದೇಶದಲ್ಲಿರುವ ನಾವು ನಮ್ಮ ಅನುಭವ ಕಥನಗಳನ್ನು ದಾಖಲಿಸುವ ಮೂಲಕ ಇಲ್ಲಿ ಬೆಳೆಯುತ್ತಿರುವ ನಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಗಳ ಅರಿವು ಮೂಡಿಸ ಬೇಕು. ಈ ಕೃತಿ ಆ ಕೆಲಸವನ್ನು ಮಾಡುತ್ತಿದೆ’ ಎಂದು ಕೆನೆಡಿಯನ್ ಹವ್ಯಕ ಸಂಘದ ಅಧ್ಯಕ್ಷರಾದ ಡಾ.ಡಿ.ಪರಮೇಶ್ವರ ಭಟ್ ಹೇಳಿದರು. ಅವರು ಟೊರೊಂಟೋದ ಶೃಂಗೇರಿ ವಿದ್ಯಾಭಾರತಿ ಸಮುದಾಯ ಭವನದಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಬಾಳಿಕೆ ರಾಮ ಭಟ್ ಬರೆದು ಕುಂದಾಪುರದ ಜನಪ್ರತಿನಿಧಿ ಪ್ರಕಾಶನವು ಪ್ರಕಟಿಸಿದ ‘ಬಾಳಿಕೆಯಿಂದ ಕೆನಡಾಕ್ಕೆ’ ಎಂಬ ಅನುಭವ ಕಥನ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕೆನಡಾದ ಕಾನ್ ಕಾರ್ಡಿಯಾ ವಿ.ವಿ.ದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾದ ಮತ್ತು ಈಗಾಗಲೇ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನಾಲ್ಕು ಕೃತಿಗಳನ್ನು ಬರೆದಿರುವ ಬಾಳಿಕೆ ರಾಮ ಭಟ್ ತಮ್ಮ ಪ್ರಸ್ತುತ ಕೃತಿಯ ಹಿನ್ನೆಲೆ ಹಾಗೂ ಉದ್ದೇಶಗಳ ಕುರಿತು ಮಾತನಾಡಿದರು. ಈ ಸಂದರ್ಭ ಶಾರದಾ ಡಿ.ಪಿ.ಭಟ್ ಮತ್ತು ರಾಮ ಭಟ್ಟರ ಪತ್ನಿ ಪಾರ್ವತಿ ಭಟ್ ಉಪಸ್ಥಿತರಿದ್ದರು. ವಾಟರ್ಲೂ ವಿ.ವಿ.ಪ್ರಾಧ್ಯಾಪಕ ಡಾ.ನವೀನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ 3,000 ರೂ. ಗಳ ಮೊತ್ತವನ್ನು ನೇರ ನಗದು ವರ್ಗಾವಣೆ ((DBT Aadhaar)) ಮೂಲಕ ಪಾವತಿಸಲು E-Governance ಇಲಾಖೆಗೆ ಕಳುಹಿಸಲಾಗಿದ್ದು, ಸದರಿ ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಪಾವತಿಯಾಗಿರುತ್ತದೆ ಹಾಗೂ ಉಳಿದ ಶೇ.10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವುದಿಲ್ಲ ಹಾಗೂ ಬ್ಯಾಂಕ್ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್.ಪಿ.ಸಿ.ಎಲ್ ಗೆ ಮ್ಯಾಪಿಂಗ್ ಮಾಡದಿರುವ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ಸಹಾಯಧನ ಮೊತ್ತವು ಪಾವತಿಯಾಗಿರುವುದಿಲ್ಲ. ಆದ್ದರಿಂದ ಇದುವರೆಗೂ ಕೋವಿಡ್-19, 2ನೇ ಅಲೆಯ ಒಂದು ಬಾರಿ ಸಹಾಯಧನ 3,000 ರೂ. ವನ್ನು ಮಂಡಳಿಯಿಂದ ಸ್ವೀಕರಿಸದೇ ಇರುವ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸುವ ಸಾರ್ವಜನಿಕರ ದೂರುಗಳ ಕುರಿತಂತೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುಧೀರ್ ಕಾಂಚನ್ ಶಿರಿಯಾರ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಸರ್ಕಾರಿ ಬಸ್ ಗಳನ್ನು ಓಡಿಸಬೇಕು, ಹಳ್ಳಿಗಳಿಗೆ ಸಂಚರಿಸಲು ಪರವಾನಗಿ ಪಡೆದು, ಸಂಚರಿಸಿದೇ ಇರುವ ಖಾಸಗಿ ಬಸ್ ಗಳ ಪರವಾನಗಿ ರದ್ದುಗೊಳಿಸಬೇಕು, ಖಾಸಗಿ ಬಸ್ ಗಳಲ್ಲಿ ಹಿರಿಯ ನಾಗರೀಕರಿಗೆ ರಿಯಾಯತಿ ದರ ನೀಡಬೇಕು, ಪರವಾನಗಿ ಇಲ್ಲದೇ ಸಂಚರಿಸುತ್ತಿರುವ ಬಸ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಪ್ರಾಂತ್ಯ ರೈತ ಸಂಘದ ಶಶಿಧರ್ ಮಾತನಾಡಿ, ಬಸ್ ಗಳಲ್ಲಿ ದರ ಹೆಚ್ಚಳ ಹಿಂಪಡೆಯಬೇಕು, ಮಣಿಪಾಲ-ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಪುನರಾರಂಭಿಸಬೇಕು, ಸರ್ಕಾರಿ ಬಸ್ ಗಳ ರೂಟ್ ಸಂಖ್ಯೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಸಂವಿದಾನ-ಮೂಲಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಕೋಡಿ ಬ್ಯಾರೀಸ್ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ ಹೇಳಿದರು. ಅವರು ಕಾಲೇಜಿನಲ್ಲಿ ಮತದಾರರ ಸಾಕ್ಷರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ರಾಜ್ಯಶಾಸ್ತ್ರ ಉಪನ್ಯಾಸಕಿ ನಿಲುಫರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಕಲಾ ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿ, ಪ್ರಥಮ ಕಲಾ ವಿದ್ಯಾರ್ಥಿನಿ ಫಾಯಿಝಾ ವಂದಿಸಿದರು, ಪ್ರಥಮ ಕಲಾ ವಿದ್ಯಾರ್ಥಿನಿ ರಿಫಾನ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಹೆಮ್ಮಾಡಿ ರಿಕ್ಷಾ ನಿಲ್ದಾಣದಲ್ಲಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ, ಇತ್ತೀಚೆಗಷ್ಟೇ ಅಗಲಿದ ನಟ ಪುನೀತ್ ರಾಜಕುಮಾರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಮೊದಲು ಪುನೀತ್ ಅವರ ಸಾಮಾಜಿಕ ಕಾರ್ಯಗಳ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಎಲ್ಲಾ ಮಾಧ್ಯಮಗಳಲ್ಲೂ ಅವರ ಸಾಮಾಜಿಕ ಕಾರ್ಯದ ಕಳಕಳಿಯ ಚಿಂತನೆಗಳು ಹೊರಹೊಮ್ಮಿದ್ದು ಅವರ ಮರಣದ ನಂತರದ ದಿನಗಳಲ್ಲಿ. ಯಾವುದೇ ಸಿನಿ ತಾರೆಯರು ಮರಣ ಹೊಂದಿದಾಗ ಇಡೀ ಕರಾವಳಿ ಇಷ್ಟೊಂದು ನೋವುಂಡಂತಹ ಇತಿಹಾಸವೇ ಇಲ್ಲ. ಹೆಚ್ಚೆಂದರೆ ಒಂದೆರಡು ದಿನ ಮರೆತು ಎಲ್ಲರೂ ತಮ್ಮ ಕಾಯಕದಲ್ಲಿ ತೊಡಗಿಕೊಳ್ಳುತ್ತಾರೆ. ಆದರೆ ಪುನೀತ್ ರಾಜಮಾರ್ ನಮ್ಮನ್ನಗಲಿ ಹತ್ತು ದಿನಗಳು ಕಳೆದರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕಿನ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿ ನಿಧಿ ಜಮೆ ಮಾಡುವ ನೂತನ ಕಾರ್ಯಕ್ರಮಕ್ಕೆ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಚಾಲನೆ ನೀಡಿದರು. ಯೋಜನೆಯ ತ್ರಾಸಿ ವಲಯ ಮುಳ್ಳಿಕಟ್ಟೆ ಗ್ರಾಹಕ ಸೇವಾ ಕೇಂದ್ರದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಬ್ಯಾಂಕಿನ ಮೂಲಕ ಪ್ರಗತಿನಿಧಿ ಸಾಲವನ್ನು ನೀಡಲಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸದಸ್ಯರು ಸಂಘದಲ್ಲಿ ಬೇಡಿಕೆ ನೀಡಿದ ಪ್ರಗತಿ ನಿಧಿ ಮೊತ್ತವನ್ನು ಸದಸ್ಯರ ವೈಯಕ್ತಿಕ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ರಾಜ್ಯದಾದ್ಯಂತ ಅನು?ನ ಗೊಳಿಸಲಾಗುತ್ತಿದೆ. ಸಂಘದ ಸದಸ್ಯರ ಪ್ರಗತಿನಿಧಿ ವಿತರಣೆಯಲ್ಲಿ ಇನ್ನೂ ಹೆಚ್ಚಿನ ಸುರಕ್ಷತಾ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಈ ಪ್ರಕ್ರಿಯೆಯನ್ನು ಅನು?ನಗೊಳಿಸಲಾಗುತ್ತಿದೆ. ಸಂಘದ ಸದಸ್ಯರಿಗೆ ಸರಳವಾಗಿ ಹಾಗೂ ಪಾರದರ್ಶಕವಾಗಿ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿನಿಧಿ ಜಮೆ ಮಾಡುವುದರ ಮೂಲಕ ಆರ್ಥಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್‌ಟಿಐ ಕಾರ್ಯಕರ್ತರನ್ನು ಹತ್ತಿಕ್ಕುವ ಉದ್ದೇಶದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಸಿಕ ಸ್ಥಿಮಿತ ಕಳಕೊಂಡ ಕೆಲವು ವ್ಯಕ್ತಿಗಳು ಆಧಾರ ರಹಿತವಾದ ಸಂದೇಶಗಳನ್ನು ಸಂಘಟನೆಗಳ ಹೆಸರಿನಲ್ಲಿ ಹರಿದುಬಿಟ್ಟಿದ್ದಾರೆ. ಇದರಲ್ಲಿ ನಾಗರಿಕಾ ಹೋರಾಟ ಸಮಿತಿ ಮತ್ತು ಗೂಡ್ಸ್ ವಾಹನ ಚಾಲಕ ಮಾಲಕ ಸಂಘವನ್ನು ಹೆಸರಿಸಲಾಗಿದೆ. ನಮ್ಮ ಹೋರಾಟವನ್ನು ಅಸ್ಥಿರಗೊಳಿಸುವ ಉದ್ದೇಶದಲ್ಲಿ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದವರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬ್ರಹ್ಮಾವರ ತಾಲೂಕು ಗೂಡ್ಸ್ ವಾಹನ ಮಾಲಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ತಿಳಿಸಿದರು. ಅವರು ಬ್ರಹ್ಮಾವರದ ಮದರ್ ಪ್ಯಾಲೇಸ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಹೇರೂರು ನಾಗರಿಕಾ ಹೋರಾಟ ಸಮಿತಿಯು 2003ರಲ್ಲಿ ರಚನೆಯಾಗಿದ್ದು ಗ್ರಾಮದ ಮೂಲಭೂತ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಆಶ್ರಯ ಶರ್ತ ಉಲ್ಲಂಘನೆ ಮಾಡಿರುವ ಪ್ರಕರಣಗಳನ್ನು ದಾಖಲೆ ಮೂಲಕ ಸಂಗ್ರಹಿಸಿ 150ಕ್ಕೂ ಹೆಚ್ಚು ನಿವೇಶನಗಳನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವಲ್ಲಿ ಕಾನೂನು ಹೋರಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಚಾರ, ವಿನೋದದೊಂದಿಗೆ ಸತತ ಎಂಟನೇ ವರ್ಷ ಆಯೋಜಿಸಲಾಗುತ್ತಿರುವ ಕಾರ್ಟೂನು ಹಬ್ಬ ಇಲ್ಲಿನ ಕಲಾಮಂದಿರದಲ್ಲಿ ಡಿ.3ರಿಂದ 5ರ ತನಕ ನಡೆಯಲಿದೆ. ಸ್ವಾತಂತ್ರ್ಯದ 75ನೇ ವರ್ಷದ ಪ್ರಯುಕ್ತ ಭಾರತ ಮುಂದಿನ 75 ವರ್ಷಗಳು ಎಂಬ ಥೀಮ್’ನೊಂದಿಗೆ ನಡೆಯುವ ಮೂರು ದಿನಗಳ ಕಾರ್ಯಕ್ರಮದಲ್ಲಿ ಕಾರ್ಟೂನ್ ಪ್ರದರ್ಶನ, ಕ್ಯಾರಿಕೇಚರ್ ತರಬೇತಿ, ಕಾರ್ಟೂನಿಗೆ ಕ್ಯಾಪ್ಟನ್ ಬರೆಯುವ ಸ್ಪರ್ಧೆ, ವಿದ್ಯಾರ್ಥಿಗಳು ಹಾಗೂ ಹೆತ್ತವರಿಗೆ ಕಾರ್ಟೂನು ಸ್ಪರ್ಧೆ, ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸ್ವರ್ಧೆ, ಬಡ ವಿದ್ಯಾರ್ಥಿಗಳ ಸಹಾಯಕ್ಕಾಗಿ ಸ್ಥಳದಲ್ಲೇ ಕ್ಯಾರಿಕೇಚರ್ ರಚನೆಯ ಚಿತ್ರನಿಧಿ, ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ ನಡೆಯಲಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎಸ್.ವಿ. ದತ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚೆಗೆ ನಿಧನ ಹೊಂದಿದ ಚಿತ್ರನಟ ಪುನೀತ್ ರಾಜಕುಮಾರ್ ಅವರಿಗೆ ವಿವಿಧ ಕಾರ್ಟೂನಿಸ್ಟ್ ಗಳಿಂದ ವಿಶೇಷ ನೆನಪಿನ ಸರಣಿ ಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ಕಾರ್ಟೂನಿಷ್ಟ್ ಸತೀಶ್ ಆಚಾರ್ಯ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಕರು ಮತ್ತು ಪಾರ್ಸಿ ಜನಾಂಗದ ಸಿ.ಇ.ಟಿ / ನೀಟ್ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೆ.ಎಂ.ಡಿ.ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಕೌನ್ಸಿಲಿಂಗ್ ಮುಗಿದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More