Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಮಕ್ಕಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಯೋಗ, ವಾಚನಾಲಯದ ಸೌಲಭ್ಯ ಸಂಗೀತ, ನೃತ್ಯ, ಕರಾಟೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶವಿದ್ದು, ವಿಶಾಲವಾದ ಪ್ರಯೋಗ ಶಾಲೆಗಳನ್ನು ಸುಂದರವಾದ ಕಟ್ಟಡವನ್ನು ಹೊಂದಿದೆ. ಪ್ರಸುತ್ತ ಉಡುಪಿ ಜಿಲ್ಲೆಯಲ್ಲಿ 5 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ https://navodaya.gov.in/nvs/en/Home1 ಅಥವಾ ಹೆಚ್ಚಿನ ಮಾಹಿತಿಗಾಗಿ 9880588736/08253-251260 ನ್ನು ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ದಸರಾ ಮುಗಿದ ಕೂಡಲೇ ಅಂದರೆ ಅ.16ರಿಂದಲೇ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ. ಕುಂದಾಪುರ ಬೋರ್ಡ್ ಹೈಸ್ಕೂಲು ಹಾಗೂ ಉಡುಪಿಯ ಒಳಕಾಡು ನಾರ್ತ್ ಶಾಲೆಗೆ ಬಂದು ಶಾಲೆಯ ವೀಕ್ಷಣೆ ಮಾಡಿದ ಬಳಿಕ ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದರು. ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಝೀರೋ ಇದೆ. ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭವಾಗುತ್ತದೆ. ಜೊತೆಗೆ ದಸರಾ ಮುಗಿದ ತಕ್ಷಣ ಬಿಸಿಊಟ ಕೂಡ ಆರಂಭವಾಗಲಿದೆ. ಸಿಎಂ ಬೊಮ್ಮಾಯಿ ಕೂಡ ಶೀಘ್ರ ಶಾಲೆ ಆರಂಭಿಸಲು ಆಸಕ್ತಿ ತೋರಿದ್ದಾರೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಈ ಬಗ್ಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಜ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಂಜುಳಾ ಮೈಸೂರು ವಿಭಾಗ ಮಟ್ಟದ ಐಟಿ ಕ್ವಿಜ್‌ಗೆ ಆಯ್ಕೆಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೋಲಿ ರೋಜರಿ ಚರ್ಚ್ ಸ್ಥಾಪನೆಯಾಗಿ 450 ವರ್ಷಗಳಾಗಿರುವುದು ವಿಶೇಷ ಸಂದರ್ಭ. ನಾಲ್ಕು ಶತಮಾನದ ಸಾರ್ಥಕ ಸೇವೆಯ ಇತಿಹಾಸವನ್ನು ಈ ಧರ್ಮ ಕೇಂದ್ರ ಹೊಂದಿದೆ. ಭಕ್ತರಾದ ನಾವುಗಳು ನಿಷ್ಠೆ, ಪ್ರಾಮಾಣಿಕತೆ, ದೇವರ ಇಚ್ಛೆಯಂತೆ ಸತ್ಕಾರ್ಯ, ತ್ಯಾಗ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತೆ ಮಾರಿಯಮ್ಮವನರ ಸೇವೆಯನ್ನು ಮಾಡುವ ಮೂಲಕ ಜೀವನವನ್ನು ಸಾಕಾರಗೊಳಿಸಿಕೊಳ್ಳುವ ಎಂದು ಶಿವಮೊಗ್ಗ ಬಿಷಪ್ ಡಾ. ಪ್ರಾನ್ಸಿಸ್ ಸೆರಾವೋ ಎಸ್.ಜೆ. ಆಶೀರ್ವಚಿಸಿದರು. ಅವರು ಕುಂದಾಪುರದ ಹೋಲಿ ರೋಜರಿ ಚರ್ಚ್ 450ನೇ ವರ್ಷಾಚರಣೆಯ ಸಮಾರಂಭವನ್ನು ಉದ್ಘಾಟಿಸಿ, ಸಂದೇಶ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಬಿಷಪ್ ಡಾ| ಜೆರಾಲ್ಡ್ ಐಸಾಕ್ ಲೋಬೋ ಆಶೀರ್ವಚಿಸಿದರು. ಸಮ್ಮಾನಈ ಸಂದರ್ಭ ಉಡುಪಿ ಬಿಷಪ್ ಡಾ| ಜೆರಾಲ್ಡ್ ಐಸಾಕ್ ಲೋಬೋ, ಶಿವಮೊಗ್ಗ ಡಾ. ಪ್ರಾನ್ಸಿಸ್ ಸೆರಾವೋ ಎಸ್.ಜೆ., ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್, ಈ ಚರ್ಚ್‌ನಲ್ಲಿ ಧರ್ಮಗುರುಗಳು, ಸೈಂಟ್ ಮೇರಿಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದವರು, ಧರ್ಮ ಭಗಿನಿಯರು, ದಾನಿಗಳನ್ನು ಸಮ್ಮಾನಿಸಲಾಯಿತು. ಸ್ಮರಣ ಸಂಚಿಕೆ ಬಿಡುಗಡೆಬರ್ನಾಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ನರಿಕೊಡ್ಲುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಶುಕ್ರವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ನೂತನ ಗೃಹದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಗೋವಿಂದ ಬಾಬು ಪೂಜಾರಿ ಅವರು ದೇವರು ಮೆಚ್ಚುವ ಕಾರ್ಯ ಮಾಡಿದ್ದಾರೆ. ಅವರಿಂದ ಇನ್ನಷ್ಟು ಜನಪರ ಕಾರ್ಯಗಳಾಗಲಿ ಎಂದು ಶುಭಹಾರೈಸಿದರು. ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ಗೋವಿಂದ ಪೂಜಾರಿ ಅವರು ಸವಿತಾ ಅವರಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು. ಬಳಿಕ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ಐದನೇ ಮನೆ ಇದಾಗಿದೆ. ಟ್ರಸ್ಟ್ ಮೂಲಕ ನಿರಂತರವಾಗಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬರಲಾಗುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತುಳುನಾಡಿನ ಪ್ರತಿಯೊಂದು ಆರಾಧನೆಯ ಹಿಂದೆ ವೈಜ್ಞಾನಿಕ ಮಹತ್ವ ಇದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಹೇಳಿದರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ತುಳು ಸಂಘದ ವತಿಯಿಂದ ನಡೆದ ‘ಗೇನದ ಬೊಲ್ಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಳುನಾಡಿನಲ್ಲಿ ಸತ್ಯರಾಧನೆ ಹಾಗೂ ನಾಗರಾಧನೆ ಮಾನಸಿಕ ಮತ್ತು ದೈಹಿಕ ವ್ಯಾಧಿಗಳನ್ನು ಪರಿಹರಿಸುವ ಸಲುವಾಗಿ ಬೆಳೆದು ಬಂದಿದೆ. ಮೂಲ ತುಳುವರ ಪ್ರತಿಯೊಂದು ಆರಾಧನೆಯು ಪ್ರಕೃತಿಯ ಸಂರಕ್ಷಣೆ ಹಾಗೂ ವೈಜ್ಞಾನಿಕ ಹಿನ್ನಲೆಯನ್ನು ಹೊಂದಿದೆ. ಆಧುನಿಕ ಕಾಲಘಟ್ಟದಲ್ಲಿ ಜೀರ್ಣೋದ್ಧಾರದ ಹೆಸರಿನಲ್ಲಿ ಬನಗಳನ್ನು ಕಾಂಕ್ರೀಟಿಕರಣಗೊಳಿಸುತ್ತಿದ್ದು ಇದರಿಂದ ಸ್ಥಳದ ಪಾವಿತ್ರ್ಯತೆ ನಶಿಸುತ್ತಿದೆ. ಯಾವುದೇ ಬದಲಾವಣೆಗಳು ಮೂಲ ವ್ಯವಸ್ಥೆಗೆ ಧಕ್ಕೆಯಾಗಬಾರದೆಂದರು. ದೈವರಾಧನೆಯು ಭಕ್ತಿಯೊಂದಿಗೆ ಅವಿಭಕ್ತ ಕುಟುಂಬದ ಮೌಲ್ಯಗಳನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತುಳು ಸಂಸ್ಕೃತಿ ಹಾಗೂ ಭಾಷೆಗೆ ಕೃತಜ್ಞರಾಗಿರಬೇಕು ಎಂದು ಹೇಳಿದರು. ಇನ್ನೋರ್ವ ಅತಿಥಿ ತುಳು ಬರಹಗಾರ್ತಿ ರಾಜಶ್ರೀ ಟಿ. ರೈ ಪೆರ್ಲ ತುಳುನಾಡಿನ ಕೃಷಿ ಬದುಕಿನ ಕುರಿತು ಮಾತನಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್ ಟಿ ಎ(NTA) ನಡೆಸಲ್ಪಡುವ ಜೆಇಇ ಬಿ.ಆರ್ಕ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಟಿ. ದೇವಾಡಿಗ ಅವರು 99.7 ಪರ್ಸಂಟೈಲ್(ಆರ್ಕಿಟೆಕ್ಚರ್ ಡ್ರಾಯಿಂಗ್) ನೊಂದಿಗೆ ರಾಷ್ಟ್ರ ಮಟ್ಟದಲ್ಲಿ 658ನೇ ರ‍್ಯಾಂಕ್ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರವೃಂದ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾಣಿಜ್ಯ ಬ್ಯಾಂಕ್‌ಗಳಲ್ಲಿ ನಾಗರೀಕರು ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಿಗುವ ಸೌಲಭ್ಯಗಳ ನಿಖರ ಮಾಹಿತಿಯನ್ನು ಅವರುಗಳಿಗೆ ಒದಗಿಸುವುದರೊಂದಿಗೆ ಗರಿಷ್ಠ ಸೇವೆಯನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕಾರ್ಯವ್ಯಾಪ್ತಿಯಲ್ಲಿ ಬರುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅವರಿಗೆ ಒದಗಿಸಿ, ಬ್ಯಾಂಕಿಂಗ್ ಕ್ಷೇತ್ರದ ಸೇವೆಗಳ ಬಗ್ಗೆ ಅವರು ವಿಶ್ವಾಸ ಹೊಂದುವಂತೆ ಮಾಡಿ, ಗರಿಷ್ಠ ಆರ್ಥಿಕ ಚಟುವಟಿಕೆಯನ್ನು ಬ್ಯಾಂಕ್ ಗಳ ಮೂಲಕ ನಿರ್ವಹಿಸುವಂತೆ ಮಾಡುವ ಮೂಲಕ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಬೇಕು ಎಂದರು. ಬ್ಯಾಂಕ್ ಗಳಲ್ಲಿ ಜನಸಾಮಾನ್ಯರಿಗೆ ಸರಿಯದ ಸೇವಾ ಮಾಹಿತಿಗಳು ಒದಗಿಸುತ್ತಿಲ್ಲ ಎಂಬ ದೂರುಗಳು ಸಹ ಕೇಳಿಬರುತ್ತಿವೆ ಇದಕ್ಕೆ ಆಸ್ಪದ ನೀಡದೇ ಉತ್ತಮ ಸೇವೆಯನ್ನು ಒದಗಿಸಲು ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಸಾಲ ಠೇವಣಿ ಅನುಪಾತವು 2020…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳೆಯರು ತಾವು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಪುರುಷರ ಯಾವುದೇ ಕಿರುಕುಳಕ್ಕೆ ಒಳಗಾಗದೇ ಗೌರವಯುತವಾಗಿ ಕೆಲಸ ಮಾಡುವುದು ಮಹಿಳೆಯ ಮೂಲಭೂತ ಹಕ್ಕು ಎಂದು ವಿಶಾಖಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಡೆದ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳದ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲಾ ವಲಯಗಳಲ್ಲಿ ಪುರುಷರಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ, ಮಹಿಳೆಯರು ತಮ್ಮ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದಿಂದ, ದೈಹಿಕವಾಗಿ ಮಾತ್ರವಲ್ಲದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಮಹನವರಾತ್ರಿ ಮಹೋತ್ಸವಕ್ಕೆ ಗುರುವಾರ ಶಾಸ್ತ್ರೋಕ್ತ ವಿದಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಬೆಳಿಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಬೆಳಿಗ್ಗೆ 8.45ಕ್ಕೆ ನವರಾತ್ರಿ ಕಲಶ ಸ್ಥಾಪನೆಯೊಂದಿಗೆ ಮಹಾನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರಕಿತು. ದೇವಳದ ತಂತ್ರಿ ಡಾ. ಕೆ.ರಾಮಚಂದ್ರ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ಈ ಸಂದರ್ಭ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ದೇವಳದ ವ್ಯವಸ್ಥಾಪನಾ ಸಮಿತಿ ಆದ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ದೇವಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ, ಡಾ. ಅತುಲ್‌ಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ್, ಕೆ.ಪಿ ಶೇಖರ್,ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು.

Read More