ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ ಅ.12ರಿಂದ ಅ.14ರ ತನಕ ನಡೆಯಲಿದೆ. ಅ.12ರ ಮಂಗಳವಾರ ಬೆಳಿಗ್ಗೆ ಶ್ರೀ ಶಾರದಾಂಬೆಯ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ದುರ್ಗಾ ಹೋಮ, ಪೂಜೆ, ರಾತ್ರಿ ಶ್ರೀ ತಿರುಮಲ ವೆಂಕಟರಮಣ ಭಜನಾ ಮಂಡಳಿ ನೇತೃತ್ವದಲ್ಲಿ ಆಹ್ವಾನಿತ ಭಜನಾ ತಂಡಗಳಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದ. ಅ.13ರ ಬುಧವಾರ ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 8.30ಕ್ಕೆ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.14ರ ಗುರುವಾರ ಮಧ್ಯಾಹ್ನ 12ರಿಂದ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ಶಾರದಾಂಬೆ ವಿಗ್ರಹ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಯಾವುದೇ ಕೆಲಸಕ್ಕೆ ನಿರ್ಬಂಧನೆ ಮಾಡಿದ್ದು, ನಿರ್ಬಂಧನೆ ಮೀರಿ ಕೆಲವು ಅಧಿಕಾರಿಗಳು ಕೆಲವೊಂದು ರಾಜಕೀಯ ಒತ್ತಡಕ್ಕೆ ಮಣಿದು ಹಣವನ್ನು ತೆಗೆದುಕೊಳ್ಳುತ್ತಿರುವುದಲ್ಲದೆ ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡಲು ಕಚೇರಿಗೆ ಅಲೆದಾಡಿಸುತ್ತಾರೆ. ಈ ವ್ಯವಸ್ಥೆಯನ್ನು ಮಹಿಳೆಯರು ತಮ್ಮ ಒಕ್ಕೂಟದ ಮೂಲಕ ಖಂಡಿಸಬೇಕು. ಎಲ್ಲರೂ ಕಾನೂನನ್ನು ಗೌರವಿಸಬೇಕಿದೆ. ಸರಕಾರದ ಸೌಲಭ್ಯ ಪಡೆಯಲು ಮೊಬೈಲ್ ಮೂಲಕ ಅಂತರ್ಜಾಲದಲ್ಲಿರುವ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅವರವರ ಕೆಲಸವನ್ನು ಅವರೇ ಮಾಡಿಕೊಂಡರೆ ದಲ್ಲಾಳಿಗಳ ಕಾಟವನ್ನು ತಪ್ಪಿಸಿಬಹುದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಬಿ.ಎಸ್. ಹೇಳಿದರು. ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ರೋಟರಿ ಕ್ಲಬ್ ಗಂಗೊಳ್ಳಿ, ಯುವ ಸ್ಪಂದನ ಕೇಂದ್ರ ಉಡುಪಿ, ಸಂಗಮ ಸಂಜೀವಿನಿ ಸ್ವಸಹಾಯ ಸಂಘ ಒಕ್ಕೂಟ, ನಾವುಂದ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಾವುಂದಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಂಪಿಗ್ ಯಾರ್ಡ್‌ನಂತೆ ಭಾಸವಾಗುತ್ತಿದ್ದ ಕೋಟೇಶ್ವರದ ಸರ್ವಿಸ್ ರಸ್ತೆಯ ಅಂಚಿನಲ್ಲಿಗ ಬಣ್ಣ ಬಣ್ಣದ ಗಿಡಗಳು ಕಂಗೊಳಿಸುತ್ತಿವೆ. ಅನಗತ್ಯವಾಗಿ ಕಸ ಎಸೆಯುದನ್ನು ತಡೆಯಲು ಅದೇ ಪ್ರದೇಶದಲ್ಲಿ ಸುಂದರ ಗಾರ್ಡನ್ ನಿರ್ಮಿಸಲಾಗಿದೆ. ಬೆಳೆಯುತ್ತಿರುವ ಪ್ರಮುಖ ಪಟ್ಟಣ ಪ್ರದೇಶ ಕೋಟೇಶ್ವರಕ್ಕೆ ಕಸ ವಿಲೇವಾರಿ ಬಹುದೊಡ್ಡ ತಲೆನೋವು. ಕೋಟೇಶ್ವರ ಹೆದ್ದಾರಿ, ಸರ್ವಿಸ್ ರಸ್ತೆ ಬದಿ ಕೊಳಚೆ ಗುಂಡಿಗಳಾಗಿ ಗೋಚರಿಸುತ್ತಿವೆ. ಕೋಟೇಶ್ವರದ ಎಂಬ್ಯಾಕ್‌ಮೆಂಟ್ ಸಂಧಿಸುವ ಸರ್ವಿಸ್ ರಸ್ತೆಯ ಅಂಚು ಇತ್ತೀಚಿನ ವರ್ಷಗಳಲ್ಲಿ ತ್ಯಾಜ್ಯ ಗುಂಡಿಯಾಗಿ ಮಾರ್ಪಟ್ಟಿತ್ತು. ರಸ್ತೆಯಂಚಿನ ಖಾಲಿ ನಿವೇಶನ ಡಂಪಿಂಗ್ ಯಾರ್ಡ್ ಆಗಿದ್ದವು. ದಾರಿಹೋಕರು ಎಸೆದು ಹೋಗುವ ತ್ಯಾಜ್ಯಗಳನ್ನು ಸುಟ್ಟು ಹಾಕುವುದು, ತೆರವುಗೊಳಿಸುವುದು ಪಂಚಾಯಿತಿಗೆ ಪ್ರತ್ಯೇಕ ಹೊರೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಂಡರೂ ಸಾರ್ವಜನಿಕರು ಸ್ಪಂದಿಸಿರಲಿಲ್ಲ ಇದೆಲ್ಲದಕ್ಕೂ ಈಗ ಬ್ರೇಕ್ ಹಾಕಲು ಸ್ಥಳೀಯಾಡಳಿತ ಕ್ರಮ ಕೈಗೊಂಡಿದೆ. ಕಸದ ಗುಂಡಿಯಲ್ಲಿ ಹೂತೋಟ:ಪ್ಲಾಸ್ಟಿಕ್, ಮಾಂಸ ಸಹಿತ ತ್ಯಾಜ್ಯ ಬೀಳುತ್ತಿದ್ದ ಸ್ಥಳದಲ್ಲೀಗ ಹೂಬನ ಕಂಗೊಳಿಸುತ್ತಿದೆ. ಅಲಂಕಾರಿಕ ಗಿಡಗಳು, ಗಾರ್ಡನ್ ಸೊಬಗು ಹೆಚ್ಚಿಸುವ ಆಕೃತಿಗಳು ಗಮನ ಸೆಳೆಯುತ್ತಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತವು ಅ.6ರಂದು 20 ವರ್ಷ ಪೂರೈಸಲಿದ್ದು, ಇದರ ಅಂಗವಾಗಿ ಯುವಮೋರ್ಚಾ ಉಡುಪಿ ಜಿಲ್ಲೆ ಹಾಗೂ ಯುವಮೋರ್ಚಾ ಬೈಂದೂರು ಇವರ ಸಹಭಾಗಿತ್ವದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸ್ನಾನ ಘಟ್ಟದ ನದಿಯ ತಟವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಇಂಧನ ಸಚಿವರಾದ ವಿ. ಸುನೀಲ್ ಕುಮಾರ್, ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಕ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಅನುರ್ ಮೆಂಡನ್ ಪಕ್ಷದ ಕಾರ್ಯಕರ್ತರು ಈ ವೇಳೆ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯೊಳಗಿನ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಂಸ್ಥೆಯು ಸಕ್ಷಮ ನೋಂದಾಣಾಧಿಕಾರಿಗಳಲ್ಲಿ ನೋಂದಣಿ ಹೊಂದಿರಬೇಕು ಮತ್ತು ಕನಿಷ್ಟ 3ವರ್ಷಗಳ ಅವಧಿಯಾಗಿರಬೇಕು. ಕಾಲಕಾಲಕ್ಕೆ ನವೀಕರಿಸಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಈ ಹಿಂದೆ ಇಂತಹ ಯಾವುದಾದರೂ ಸಮೀಕ್ಷೆ ನಡೆಸಿದ ಅನುಭವ ಹೊಂದಿದ್ದು, ಅನುಭವ ಪ್ರಮಾಣ ಪತ್ರ ಲಗತ್ತಿಸಿರಬೇಕು. ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ದೂ ಸಂ: 0820-2574977 ಅಥವಾ 8553141512ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪರಿಸರ ಸಂರಕ್ಷಣೆ ನಾಗರಿಕರ ಪ್ರಮುಖ ಹೊಣೆ: ಶಾಸಕ ಡಾ. ಭರತ್ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳ ಯೋಚನೆಗಳು ಪರಿಸರ ಸಂರಕ್ಷಣೆಯತ್ತ ಇರಲಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ಹಾಗೂ ಕುದೆರಮುಖ ವನ್ಯಜೀವಿ ಘಟಕದ ಸಹಯೋಗದಲ್ಲಿ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ವೇದಿಕೆಯಲ್ಲಿ ನಡೆದ ‘ಗ್ರೀನ್ ಪಾರ್ಲಿಮೆಂಟ್ -2021’ ಅಣಕು ಸಂಸತ್ತಿನ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶೈಕ್ಷಣಿಕ ವಿಚಾರಗಳಿಗೆ ಒತ್ತು ನೀಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಕಡಿಮೆಯಾಗಿದೆ. ಜನರ ದುರಾಸೆಯ ಸ್ವಭಾವದಿಂದ ಹೆಕ್ಟೇರ್ ಗಟ್ಟಲೆ ಅರಣ್ಯ ಪ್ರದೇಶ ಶೋಷಣೆಗೊಳಗಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ನೀತಿಗಳ ತಿಳುವಳಿಕೆ ವಿದ್ಯಾರ್ಥಿಗಳಲ್ಲಿ ಮೂಡಿಸಲು ಗ್ರೀನ್ ಪಾರ್ಲಿಮೆಂಟ್ ಕಾರ್ಯಕ್ರಮ ಬಹಳ ಅಗತ್ಯ ಎಂದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಕಾಶ್ ನೆತಾಲ್ಕರ್ ಮಾತನಾಡಿ, ಅರಣ್ಯ ನೀತಿ ಹಾಗೂ ಪರಿಸರ ಸೂಕ್ಶ್ಮ ಪ್ರದೇಶಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಅತ್ಯಂತ ವಿರಳವಾಗಿ ಕಾಣಸಿಗುವ ಶ್ರೇಷ್ಠ ಮತೀಯ ವ್ಯಕ್ತಿ, ಸಾಹಿತಿಯಾಗಿ ಚಿಂತಕರಾಗಿ ಕನ್ನಡ ಸಾಹಿತ್ಯದ ಹರಿವಿನ ವಿನ್ಯಾಸವನ್ನು ಬದಲಾಯಿಸಿದವರು. ಕನ್ನಡದ ಪ್ರಜ್ಞೆಯನ್ನು ಅಸಾಧರಣವಾಗಿ ವಿಸ್ತರಿಸಿದವರು. ಮುಖ್ಯವಾಗಿ ಕಾದಂಬರಿ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಾ ಬದುಕನ್ನು ಬೇರೆ ಬೇರೆ ಆಯಾಮಗಳಿಂದ ಬಗೆಯುವ ಆಲೋಚಿಸುವ ಮತ್ತು ಕಲಾತ್ಮಕವಾಗಿ ನಿರೂಪಿಸುವ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ಮಾಡಿಕೊಂಡು ಬಂದಿರುವ ಕಾರಂತರು ವ್ಯಕ್ತಿಯಲ್ಲ ಒಂದು ವಿದ್ಯಾಮಾನ ಎಂದು ಖ್ಯಾತ ವಾಗ್ಮಿ, ಚಿಂತಕರು ಕೃಷ್ಣೆಗೌಡ ಮೈಸೂರು ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಐದನೇ ದಿನದ ನುಡಿ ಚೇತನದಲ್ಲಿ ಮಾತನಾಡಿದರು. ಭಾಷೆ ಎನ್ನುವುದು ಕೇವಲ ತಮಗೆ ಅನ್ನಿಸುವುದನ್ನು ಹೇಳುವ ವಸ್ತುವಾಗಿರದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಮೀಪದ ಮೂಡುಬಗೆ ಎಂಬಲ್ಲಿ ಮಂಗಳವಾರ ಸಂಜೆ ಕಾಣಿಸಿಕೊಂಡ ಬಿರುಗಾಳಿ ಅಬ್ಬರಕ್ಕೆ ಅಪಾರ ಮರಮಟ್ಟುಗಳು ಧರಾಶಾಹಿಗೊಂಡಿದ್ದು ಮನೆ, ದನದ ಕೊಟ್ಟಿಗೆ, ವಿದ್ಯುತ್ ಕಂಬ, ಕೃಷಿತೋಟ ಹಾನಿಗೊಂಡಿದೆ. ಕುಂದಾಪುರ ಸಿದ್ದಾಪುರ ರಾಜ್ಯ ಹೆದ್ದಾರಿ ಹೋಗುವ ಇಲ್ಲಿ ಮರಗಳು ಹೆದ್ದಾರಿಗೆ ಒರಗಿದ ಪರಿಣಾಮ ಎರಡುವರೆ ತಾಸು ಹೆದ್ದಾರಿ ಬಂದ್ ಆಗಿದ್ದು, ಮೆಸ್ಕಾಂ, ಅರಣ್ಯ ಇಲಾಖೆ, ಪೋಲಿಸರು ಹಾಗೂ ಸ್ಥಳೀಯರು ಹೆದ್ದಾರಿಯಲ್ಲಿನ ಮರಗಳ ತೆರವಿಗೆ ಶ್ರಮಿಸಿದರು. ಅಡಿಕೆ, ತೆಂಗು, ಮನೆಗಳಿಗೆ ಹಾನಿ:ಸಿದ್ದಾಪುರ: ಗ್ರಾಮೀಣ ಭಾಗದ ಶಂಕರನಾರಾಯಣ, ಅಂಪಾರು, ಕೊಂಡಳ್ಳಿ, ಶಾನ್ಕಟ್ಟು, ಮೂಡುಬಗೆ, ಗೊರಟೆ, ಕನ್ನಾಲಿ, ಕುಳ್ಳುಂಜೆ ಮುಂತಾದ ಕಡೆ ಮಂಗಳವಾರ ಮಧ್ಯಾಹ್ನ ಸಮಯದಲ್ಲಿ ಬೀಸಿದ ಸುಂಟರಗಾಳಿ ಅಬ್ಬರಕ್ಕೆ ಮನೆ, ಅಡಿಕೆ, ತೆಂಗು, ವಿದ್ಯುತ್ ಕಂಬ ಇತ್ಯಾದಿ ಭಾರಿ ಗಾತ್ರದ ಮರಗಳು ಧರೆಗುರುಳಿವೆ. ಹಠಾತ್ತನೆ ಬೀಸಿದ ಗಾಳಿಗೆ ಸಾವಿರಾರು ಅಡಿಕೆ ತೆಂಗಿನ ಮರಗಳು ಹಾಗೂ ಅಂದಾಜು ೩೦ಕ್ಕೂ ಮಿಕ್ಕಿ ಮನೆಗಳು ಗಾಳಿಯ ಅಬ್ಬರಕ್ಕೆ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಡವೆಯನ್ನು ಕೊಂದು ಮಾಂಸ ಮಾಡಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ತಾಲೂಕು ಯಡ್ತರೆ ಗ್ರಾಮದ ಮುದ್ದೋಡಿ ಸಮೀಪದ ಕುಂಜಳ್ಳಿ ಮಾರ್ಗದಲ್ಲಿ ನಡೆದಿದೆ. ಕಡವೆ ಮಾಂಸ, 2 ದ್ವಿಚಕ್ರ ವಾಹನ ಸಹಿತ ಯಡ್ತರೆ ನಿವಾಸಿಗಳಾದ ಮಮ್ಮಿಶಾಹ್ ಫೈಜಲ್, ಖರುರಿ ನಿಜಾಮುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದಾರೆನ್ನಾದ ಹೆರಿಯಣ್ಣ ಶೆಟ್ಟಿ, ಪ್ರವೀಣ್ ಶೆಟ್ಟಿ ಹಾಗೂ ಇತರರು ಪರಾರಿಯಾಗಿದ್ದಾರೆ. ಬೈಂದೂರಿನಿಂದ ಕುಂಜಳ್ಳಿಗೆ ಹೋಗುವ ರಸ್ತೆಯ ಮಾರ್ಗ ಮದ್ಯೆ ಕಡವೆಯೊಂದನ್ನು ಹೊಡೆದು ಕೊಂದು ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದಾಗ ಮಾಹಿತಿ ಪಡೆದ ಬೈಂದೂರು ವಲಯ ಅರಣ್ಯಾಧಿಕಾರಿ ಟಿ. ಕಿರಣ್ ಬಾಬು ನೇತೃತ್ವದ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಆರೋಪಿಗಳ ವಿರುದ್ಧ 1972 ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್ ಜಿ. ಮಾರ್ಗದರ್ಶನದಲ್ಲಿ ಬೈಂದೂರು ವಲಯಾರಣ್ಯಾಧಿಕಾರಿ ಟಿ. ಕಿರಣ್ ಬಾಬು, ಉಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.05: ಪ್ರತಿಯೊಬ್ಬ ನಾಗರಿಕನೂ ಸಾಮಾನ್ಯ ಕಾನೂನಿನ ಅರಿವು ಹೊಂದಿದಾಗ ಮಾತ್ರ ಉತ್ತಮ ಸಾಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು. ಅವರು ಇಂದು ನಗರದ ಮಣಿಪಾಲ್ನ ಮಾಧವಕೃಪ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಅರಣ್ಯ ಇಲಾಖೆ, ಹಾಗೂ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 75 ನೇ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೋವಿಡ್-19 ಜಾಗೃತಿ ಮತ್ತು ಲಸಿಕಾ ಅಭಿಯಾನ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ…
