Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ನಿತ್ಯಾನಂದ ಅವರನ್ನು ಸಿಬ್ಬಂದಿಗಳ ಪರವಾಗಿ ಬೀಳ್ಕೊಡಲಾಯಿತು. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅವರು ಸಿಬ್ಬಂದಿಗಳ ಪರವಾಗಿ ನಿತ್ಯಾನಂದ ಅವರನ್ನು ಗೌರವಿಸಿ ಬೀಳ್ಕೊಟ್ಟರು. ಪೊಲೀಸ್ ಇಲಾಖೆಯಲ್ಲಿ ಒಟ್ಟು 30 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಕಳೆದ ೪ ವರ್ಷಗಳಿಂದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ನಿತ್ಯಾನಂದ ಅವರ ಸೇವೆಯನ್ನು ಸ್ಮರಿಸಿಕೊಂಡ ಉಪನಿರೀಕ್ಷಕ ವಿಜಯ ಅಮೀನ್, ಠಾಣೆಯ ಸಿಬ್ಬಂದಿಗಳಾದ ಸುರೇಂದ್ರ ಮತ್ತು ದಿನೇಶ, ಕೆಎನ್‌ಡಿ ಸಿಬ್ಬಂದಿ ಜಯರಾಜ್ ಅವರು ವಯೋನಿವೃತ್ತಿ ಹೊಂದಿದ ನಿತ್ಯಾನಂದ ಅವರನ್ನು ಅಭಿನಂದಿಸಿದರು. ಶಾರದಾ ನಿತ್ಯಾನಂದ, ಠಾಣೆಯ ಸಿಬ್ಬಂದಿಗಳು, ಕೆಎನ್‌ಡಿ ಸಿಬ್ಬಂದಿಗಳು, ನಿವೃತ್ತ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿ ಸುರೇಂದ್ರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ ಕರಾವಳಿ ಜನರ ಬದುಕಲ್ಲಿ ಹಾಸುಹೊಕ್ಕಾಗಿದೆ, ಇದಕ್ಕೆ ಜನರು ವಿಶೇಷ ಸ್ಥಾನ ಮಾನ ನೀಡುತ್ತಿದ್ದು, ಯಕ್ಷಗಾನ ಮನೋರಂಜನೆ ಜೊತೆಗೆ ಬದುಕಿಗೆ ಸಾಕಷ್ಟು ಅನುಭವಗಳನ್ನು ನೀಡುತ್ತದೆ. ಯಕ್ಷಗಾನ ಎಷ್ಟೊ ಕಲಾವಿದರ ಬದುಕಿಗೆ ಆಸರೆಯಾಗಿದ್ದು ಅದರಿಂದನೇ ಜೀವನ ಸಾಗಿಸುತ್ತಿದ್ದಾರೆ. ಕೋವಿಡ್ ನಿಂದಾಗಿ ಯಕ್ಷಗಾನ ಕಲಾವಿದರ ಬದುಕು ಅತಂತ್ರ ಸ್ಥಿತಿಯಲ್ಲಿ ಇದೆ ಎಂದು ಖ್ಯಾತ ಯಕ್ಷಗಾನ ಕಲಾವಿದ ಸುರೇಶ್ ಕೋಟ ಹೇಳಿದರು. ಅವರು ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಇವರ ಆಶ್ರಯದಲ್ಲಿ ನಡೆದ ತಿಂಗಳ ಕಾರ್ಯಕ್ರಮ ಯಕ್ಷ-ಗಾನ-ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಉಪಸ್ಥಿತರಿದ್ದರು. ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಜನ್ಸಾಲೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯದ ಎಲ್ಲಾ ಸದಸ್ಯರಿಗೆ ಆಹಾರ ಕಿಟ್ ವಿರತಣಾ ಕಾರ್ಯಕ್ರಮ ಇಲ್ಲಿನ ಮಾಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಕಿಟ್ ವಿತರಿಸಿ ಮಾತನಾಡಿದ ಬೈಂದೂರು ತಹಶೀಲ್ದಾರರಾದ ಶೋಭಾಲಕ್ಷ್ಮಿ ಎಚ್.ಎಸ್ ಈ ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂತರ ಕಾಪಾಡಿಕೊಂಡು ಯಾವುದೇ ಸಭೆ ಸಮಾರಂಭದಲ್ಲಿ ಹೆಚ್ಚಿನ ಜನ ಸೇರದೆ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು. ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯದ ಅಧ್ಯಕ್ಷರಾದ ರಾಜು ಟೈಲರ್ ಕೊಲ್ಲೂರು, ಕಾರ್ಯದರ್ಶಿ ಲಕ್ಷ್ಮಿ ಬೈಂದೂರು. ಬೈಂದೂರು ನಗರ ಸಮಿತಿಯ ಅಧ್ಯಕ್ಷರಾದ ಮಹಾಬಲ ಮೊಗವೀರ ಹಾಗೂ ಏಳು ವಲಯಗಳ ಅಧ್ಯಕ್ಷರು ಕಾರ್ಯದರ್ಶಿ ಉಪಸ್ಥಿತರಿದ್ದರು. ನಾಗೇಂದ್ರ ಚಿತ್ತೂರು ಕಾರ್ಯಕ್ರಮವನ್ನು ನಿರೂಪಿಸಿ, ಆಶಾ ದಿನೇಶ ಸ್ವಾಗತಿಸಿದರು. ನೇತ್ರಾವತಿ ಗೋಳಿಹೊಳೆ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಫೈನಾನ್ಸಿನ ವ್ಯವಹಾರದಲ್ಲಿನ ಒಡಕಿನಿಂದಾಗಿ ತನ್ನ ವ್ಯವಹಾರದ ಪಾಲುದಾರ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಅನೂಪ್ ಶೆಟ್ಟಿ ಒಪ್ಪಿಕೊಂಡಿದ್ದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ. ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಕರಣ ಮಾಹಿತಿ ನೀಡಿ , ಆರೋಪಿ ಅನೂಪ್ ಶೆಟ್ಟಿ ಈ ಮೊದಲು ದುಬಾಯಿ ಮತ್ತು ಸಿಂಗಾಪೂರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ಫೈನಾನ್ಸ್ ವ್ಯವಹಾರದಲ್ಲಿ ಇಬ್ಬರಿಗೂ ಆಗಿಂದಾಗ್ಗೆ ಗಲಾಟೆಗಳು ನಡೆದಿದ್ದು, ಇದೇ ಕೊಲೆಗೆ ಪ್ರಮುಖ ಕಾರಣವಾಗಿದೆ. ಜುಲೈ 30ರಂದು ಅಜೇಂದ್ರ ಶೆಟ್ಟಿಯನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿ ಅಜೇಂದ್ರ ಶೆಟ್ಟಿಯ ಕೊರಳಿನಲ್ಲಿದ್ದ ಚಿನ್ನದ ಚೈನ್ ಮತ್ತು ಅವರ ಹೊಸ ಹೊಂಡಾ ಸಿಟಿ ಕಾರನ್ನು ಸುಲಿಗೆ ಮಾಡಿಕೊಂಡು ಹೋಗಿದ್ದ. ಅನೂಪ್ ಪಟ್ಟಿಯು ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧ ಅಜೇಂದ್ರ ಶೆಟ್ಟಿಯ ಅಣ್ಣ ಮಹೇಂದ್ರ ಶೆಟ್ಟಿಯು ನೀಡಿರುವ ದೂರಿನಂತೆ ಕುಂದಾಪ್ರರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶತಮಾನೋತ್ಸವ ಸಂಭ್ರಮ ಆಚರಿಸಿಕೊಂಡಿರುವ ಕುಂದಾಪುರ ತಾಲೂಕಿನ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಾಖಲಾತಿಯಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹೊಸ ದಾಖಲಾತಿ ಶತಕ ಸನಿಹ ತಲುಪಿದೆ. ಪ್ರಸ್ತುತ 1ರಿಂದ 8ನೇ ತರಗತಿಯಲ್ಲಿ ಒಟ್ಟು 360 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದು, 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಈವರೆಗೆ ಸುಮಾರು 92 ಮಕ್ಕಳು ಹೊಸ ದಾಖಲಾತಿಯಾಗಿದ್ದಾರೆ. 1ನೇ ತರಗತಿಗೆ 62 ವಿದ್ಯಾರ್ಥಿಗಳೂ ಸೇರಿದಂತೆ ಇನ್ನುಳಿದ ತರಗತಿಗಳಿಗೆ ಗುಜ್ಜಾಡಿ ಸುತ್ತಲಿನ ಸರಕಾರಿ ಹಾಗೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಂದ 50ಕ್ಕೂ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಫಲಪ್ರದವಾದ ಪರಿಣಾಮಕಾರಿ ಬೋಧನೆ ಹಾಗೂ ವಿದ್ಯಾಗಮ ಕಾರ್ಯಕ್ರಮ. ಆಕರ್ಷಕ ಶಾಲಾ ಪರಿಸರ, ವಿಶಾಲ ಆಟದ ಮೈದಾನ, ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ವಿಶಾಲ ರಂಗಮಂದಿರವನ್ನು ಹೊಂದಿರುವ ಶಾಲೆಯು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀಹರಿಪಾದ ಸೇರಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರು ತಮ್ಮ ಜೀವನದಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಧಾರ್ಮಿಕತೆಗೆ ಹೆಚ್ಚಿನ ಒತ್ತು ನೀಡಿದ್ದರು. ಚಿಕ್ಕ ವಯಸ್ಸಿನಲ್ಲೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಜವಾಬ್ದಾರಿಹೊತ್ತು ಅದನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸಮಾಜಕ್ಕೆ ಹಾಗೂ ಮಠಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸನ್ಮಾರ್ಗದಲ್ಲಿ ಮುನ್ನಡೆಯುವಂತೆ ಮಾಡಿ, ಮಠದ ಪರಂಪರೆಯನ್ನು ಉಳಿಸಿ ಬೆಳೆಸಿದರು. ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ಅವರ ಜೀವನದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಾತ್ವಿಕ ಜೀವನ ನಡೆಸುವಂತಾಗಬೇಕು ಎಂದು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಗುರು ಗುಣಗಾನ ಮಾಡಿ ಮಾತನಾಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಗುರು ಗುಣಗಾನ ಮಾಡಿದರು. ಗುರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ನೇತೃತ್ವದಲ್ಲಿ ಕಥಾಓದು ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಸಾಹಿತಿ ವೈದೇಹಿ ಅವರ ಗುಲಾಬಿ ಟಾಕೀಸ್ ಮತ್ತು ಸಣ್ಣ ಅಲೆಗಳು ಕಥೆಯನ್ನು ಕೀರ್ತಿ ಭಟ್ ಉಪ್ಪುಂದ ವಾಚಿಸಿದರು. ಬಳಿಕ ಸುರಭಿ ಸದಸ್ಯರು ಹಾಗೂ ಕ್ಲಬ್ ಹೌಸ್ ಮೂಲಕ ಸಂವಾದ ನಡೆಯಿತು. ಈ ಸಂದರ್ಭ ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ, ಖಜಾಂಚಿ ಸುರೇಶ್ ಹುದಾರ್, ನಿರ್ದೇಶಕ ಸುಧಾಕರ ಪಿ. ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳವಾರದ ಡ್ರೀಮ್ ಫೈನಾನ್ಸ್ ಪಾಲುದಾರ ಅಜೇಂದ್ರ ಶೆಟ್ಟಿ (33) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ವಶಕ್ಕೆ ಪಡೆದಿದ್ದು, ಅಲ್ಲಿಂದ ಕರೆತರಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಶುಕ್ರವಾರ ತಡರಾತ್ರಿ ಅಜೇಂದ್ರ ಶೆಟ್ಟಿಯ ಮೃತದೇಹ ಅವರ ಡ್ರೀಮ್ ಫೈನಾನ್ಸ್ ಕಚೇರಿಯಲ್ಲೇ ಪತ್ತೆಯಾಗಿತ್ತು. ಅಜೇಂದ್ರ ಸಹೋದರ ಕೊಟ್ಟ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಕ್ಷೀಪ್ರವಾಗಿ ಆರೋಪಿ ಅನೂಪ್ ಶೆಟ್ಟಿಯನ್ನು ಕ್ಷಿಪ್ರವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ಅಜೇಂದ್ರ ಅವರ ಫೈನಾನ್ಸ್ ವ್ಯವಹಾರದ ಪಾಲುದಾರ ಅನುಪ್ ಶೆಟ್ಟಿಯೇ ಕೊಲೆ ಆರೋಪಿ ಎನ್ನುವ ಶಂಕೆ ವ್ಯಕ್ತವಾಗಿತ್ತು. ಹತ್ಯೆ ಮಾಡಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಲ್ಲದೇ ಪರಾರಿಯಾಗಲು ತನ್ನ ಬೈಕ್ ಅಲ್ಲಿಯೇ ಬಿಟ್ಟು ಅಜೇಂದ್ರ ಅವರ ಹೊಸ ಕಾರನ್ನೇ ಬಳಸಿಕೊಂಡಿದ್ದನು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಟೋಲ್ಗೇಟ್ ಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಯು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ದೇಶಗಳ ನಡುವಿನ ಗಡಿಗಳನ್ನು ನಾವಾಗಿಯೇ ನಿರ್ಮಿಸಿಕೊಂಡದ್ದು. ಈ ಗಡಿಗಳು ಮಾನಸಿಕವಾಗಿ ನಮ್ಮನ್ನು ಕಟ್ಟಿಹಾಕಿವೆ. ಇದರ ಉಳಿವಿಗಾಗಿ ಇತಿಹಾಸಕಾಲದಿಂದಲೂ ಯುದ್ಧ ಮಾಡುತ್ತ ಬಂದಿದ್ದೇವೆ. ಯುದ್ಧ ಹಿಂಸೆ ಮಾನವನ ಇತಿಹಾಸದ ಬೆಳವಣಿಗೆಯಲ್ಲಿ ಒಂದು ಅಂಗವಾಗಿಯೇ ಬೆಳೆದು ಬಂದಿದೆ. ಆದ್ದರಿಂದಲೇ ಇವು ಮಾನಸಿಕ ಯುದ್ಧಗಳಾಗಿ ಪರಿವರ್ತನೆಗೊಂಡಿವೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಹೇಳಿದರು. ಆಳ್ವಾಸ್ ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ‘ಪ್ರಸ್ತುತ ಜಗತ್ತಿನಲ್ಲಿ ಯುದ್ಧಗಳಿಲ್ಲದ ಅಹಿಂಸಾತ್ಮಕ ಪರಿಕಲ್ಪನೆಯನ್ನು ಹೆಚ್ಚು ಪ್ರಚುರಪಡಿಸಬೇಕು’ಎಂದರು. ಈ ಸಂದರ್ಭ ಮಾಜಿ ಸೈನಿಕ, ಹವಾಲ್ದಾರ್ ಉದಯ್ ಹಾಗೂ ಮಾಜಿ ಸೈನಿಕ ಹವಾಲ್ದಾರ್ ಹರೀಶ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹವಾಲ್ದಾರ್ ಉದಯ್, ಆಳ್ವಾಸ್ ಕಾಲೇಜು ಕೇವಲ ಒಂದು ಶಿಕ್ಷಣ ಸಂಸ್ಥೆಯಾಗದೆ, ಕ್ರೀಡೆ ಮತ್ತು ಸೇನಾ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಸೈನ್ಯದಲ್ಲಿ ಒಗ್ಗಟ್ಟು ಇದ್ದರೆ ಏನನ್ನೂ ಸಾಧಿಸಲು ಸಾಧ್ಯ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2020 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣ ಬರಹ, ಅನುವಾದ-1 (ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿಗಳು), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿ), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. 2020 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ,…

Read More