ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಸನ್ನಾ ಪೈ 600ರಲ್ಲಿ 600 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ್ದಾರೆ. ಇಂಗ್ಲೀಷ್-100, ಸಂಸ್ಕೃತ-100, ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಜೀವಶಾಸ್ತ್ರದಲ್ಲಿ-100ಅಂಕಗಳೊಂದಿಗೆ ಒಟ್ಟು600 ಅಂಕಗಳಿಸಿ ಕಾಲೇಜಿಗೆ ಹಾಗೂ ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೂಡ ಈಕೆ ಶಾಲೆಗೆ ಮತ್ತು ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2020-2021ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಕುಂದಾಪುರ ಆರ್. ಎನ್. ಶೆಟ್ಟಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಸ್ತುತಿ (ಪಿಸಿಎಂಬಿ), ರಾಜೇಶ್ವರಿ ಶೆಟ್ಟಿ ಆರ್. (ಪಿ.ಸಿ.ಎಂ.ಸಿ), ಶರಣ್ಯ (ಪಿಸಿಎಂಎಸ್), ವಾಣಿಜ್ಯ ವಿಭಾಗ ಧನ್ಯ ಕೆ (ಬಿಇಬಿಎ) ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು 478 ವಿದ್ಯಾರ್ಥಿಗಳಲ್ಲಿ 206 ವಿಶಿಷ್ಠ ಶ್ರೇಣಿ ಹಾಗೂ 255 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಾಕೃತಿಕ ವಿಕೋಪದಿಂದ ಯಾವುದೇ ಮಾನವ ಮತ್ತು ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ರಾಜ್ಯದಲ್ಲಿ ಅಧಿಕವಾಗಿ ಮಳೆಯಾಗುತ್ತಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದರು. ಮುಂಗಾರು ಮಳೆಯ ವಿಕೋಪ ಸಂದರ್ಭದಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಯಾವುದೇ ಜೀವ ಹಾನಿಯಾದಗಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ರಾಜ್ಯದಲ್ಲಿ 4 ಎನ್.ಡಿ.ಆರ್.ಎಫ್, ಮತ್ತು ಎಸ್.ಡಿ.ಆರ್.ಎಫ್ ತಂಡಗಳು ವಿಕೋಪ ನಿರ್ವಹಣೆಗೆ ನೆರವು ನೀಡಲು ಸಿದ್ಧವಾಗಿದ್ದು, ಅಗತ್ಯವಿದ್ದಲ್ಲಿ ಕೂಡಲೇ ನೆರವು ಪಡೆಯಿರಿ ಎಂದ ಸಿಎಂ ಯಡಿಯೂರಪ್ಪ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಕೋಪ ತಡೆಗೆ ಅಗತ್ಯವಿರುವ ಸುರಕ್ಷತಾ ಉಪಕರಣಗಳನ್ನು ಹಾಗೂ ಕಾಳಜಿ ಕೇಂದ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 24*7 ಕಂಟ್ರೋಲ್ ರೂಂ ಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣದಲ್ಲಿ ಸ್ಪಂದಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. 218 ವಿದ್ಯಾರ್ಥಿಗಳ ಪೈಕಿ 129 ವಿಜ್ಞಾನ ವಿಭಾಗ ಹಾಗೂ 89 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿದ್ದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು 600ರಲ್ಲಿಲ 600 ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕರ್ನಾಟಕ ಸರಕಾರ 18 ವರ್ಷ ಮೇಲ್ಪಟ್ಟವರಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 – 44 ವರ್ಷದವರಿಗೆ ಆದ್ಯತೆ ಮೇರೆಗೆ ಬೃಹತ್ ಲಸಿಕಾ ಅಭಿಯಾನದಲ್ಲಿ 2832 ಜನರಿಗೆ ಲಸಿಕೆ ವಿತರಿಸಲಾಯಿತು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, “ಸೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ಜನರಿಗೆ ಉಚಿತ ಲಸಿಕೆ, ಕೊರೊನಾ ಪರೀಕ್ಷೆ ಹಾಗೂ ಸಮಾಲೋಚನೆ ನಡೆಸಲಾಗಿತ್ತು. ತಾಲೂಕಿನಲ್ಲಿ ತ್ವರಿತ ಗತಿಯಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಆರಂಭದಲ್ಲಿ ಲಸಿಕೆಯ ಬಗ್ಗೆ ಜನರಲ್ಲಿದ್ದ ಗೊಂದಲದಿಂದ ಹೆಚ್ಚಿನ ಜನರು ಲಸಿಕೆ ಪಡೆಯಲು ಹಿಂಜರಿದಿದ್ದರೂ, ಇದೀಗ ವ್ಯವಸ್ಥಿತವಾಗಿ ಕೊರೋನಾ ಎದುರಿಸಲು ಜನರು ಸಜ್ಜಾಗಿದ್ದಾರೆ. ಈ ಬಾರಿ ಲಸಿಕೆ ಸಿಗದವರಿಗೆ ಮುಂದಿನ ದಿನಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಲಿತ ಯುವಕ ನಾಗರಾಜ್ ಮೇಲ್ಪಂಕ್ತಿ ಶಿರೂರು ಇವರ ಮೇಲೆ ನಡೆದ ಮಾರಣಾಂತಿಕವಾಗಿ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮತ್ತು ಶಿರೂರು ಮೇಲ್ಪಂಕ್ತಿ ಹಾಗೂ ಮೈದಿನ್ ಪುರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ದಲಿತರ ಮತ್ತು ಅಮಾಯಕರ ಮೇಲಿನ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳುವಂತೆ ಬೈಂದೂರು ಠಾಣಾಧಿಕಾರಿಗಳಿಗೆ ತಾಲೂಕು ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಯ ತಾಲ್ಲೂಕು ಸಂಚಾಲಕರಾದ ರಾಮ ಎಂ ಮಯ್ಯಾಡಿ, ಶಿರೂರು ಗ್ರಾಮ ಶಾಖೆಯ ಸಂಚಾಲಕರಾದ ರಮೇಶ್ ಶಿರೂರು, ಕೆರ್ಗಾಲು ಗ್ರಾಮ ಶಾಖೆಯ ಸಂಚಾಲಕರಾದ ದುರ್ಗಾ ನಂದನವನ, ಬೈಂದೂರು ತಾಲೂಕು ಸಂಘಟನಾ ಸಂಚಾಲಕರಾದ ರಾಘವೇಂದ್ರ ಎನ್ .ಜಿ, ರಾಘವೇಂದ್ರ ಶಿರೂರು ರಾಜೇಶ್ ಕುಮಾರ್ ಕೆರ್ಗಾಲ್ ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ್ಗೆ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ರಾಷ್ಟ್ರೀಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್ಲಾಕ್ ರಸ್ತೆ ನಿರ್ಮಿಸಲು ಅಗತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಕ್ರೀದ್ ಪ್ರಯುಕ್ತ ತಾಲೂಕು ವ್ಯಾಪ್ತಿಯಲ್ಲಿ ಗೋ ಕಳ್ಳತನ ನಡೆಯುತ್ತಿದ್ದು ಗಸ್ತು ಹೆಚ್ಚಿಸುವ ಹಾಗೂ ಚೆಕ್ ಪೋಸ್ಟ್ ಹೆಚ್ಚಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ ಪೋಲಿಸ್ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭ ಬೈಂದೂರು ತಾಲೂಕು ಬಜರಂಗದಳ ಸಂಚಾಲಕರಾದ ಸುಧಾಕರ್ ನೆಲ್ಯಾಡಿ, ಮಹೇಶ್ ಖಾರ್ವಿ, ಸುರಕ್ಷಾ ಪ್ರಮುಖ್, ಸುಕೇಶ್ ಬೈಂದೂರು , ಗಿರೀಶ್ ಶಿರೂರು, ಯೋಗೇಶ್ ಶಿರೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ, ಮೆಡಿಕಲ್ ಗ್ರಾಜುಯೇಟ್ ವಿಥ್ ಪೋಸ್ಟ್ ಗ್ರಾಜುವೇಟ್ ಡಿಗ್ರಿ / ಡಿಪ್ಲೋಮಾ ಅಥವಾ ಮೆಡಿಕಲ್ ಗ್ರಾಜುಯೇಟ್ ವಿಥ್ ಟು ಎಕ್ಸ್ಪೀರಿಯನ್ಸ್ ಇನ್ ಲ್ಯಾಬೋರೇಟರಿ ಸೈನ್ಸಸ್ ಅಥವಾ ಎಮ್.ಎಸ್.ಸಿ ಇನ್ ಮೆಡಿಕಲ್ ಮೈಕ್ರೋಬಯಾಲಜಿ ಅರ್ಹತೆ ಹೊಂದಿರುವವರಿಗೆ, ಮಾಸಿಕ 40,000 ರೂ. ವೇತನದಂತೆ ಗುತ್ತಿಗೆ ಆಧಾರದಲ್ಲಿ 2022 ಮಾರ್ಚ್ 31 ಅಥವಾ ಮುಂದಿನ ಆದೇಶದವರೆಗೆ ನೇಮಕಾತಿ ಮಾಡಿಕೊಳ್ಳಲು ಜುಲೈ 26 ರಂದು ಬೆಳಗ್ಗೆ 10.30ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಬಿ. ಬಿ ಹೆಗ್ಡೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಪ್ರತಿಷ್ಠಿತ ಸೌಕೂರು ಸೇರ್ವೆಗಾರ್ರ್ ಮನೆತನದ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಉಮೇಶ್ ಶೆಟ್ಟಿ ಕೊತ್ತಾಡಿ, ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಂಗ್ಲಿಷ್ ಉಪನ್ಯಾಸಕಿಯಾದ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ಕುಮಾರಿ ದೀಕ್ಷಿತಾ ಪ್ರಾರ್ಥನೆಗೈದರು. ಕನ್ನಡ ಉಪನ್ಯಾಸಕಿಯಾದ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ಸುಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕಿಯಾದ ಕುಮಾರಿ ಪ್ರವೀಣಾ ಪೂಜಾರಿ ವಂದನಾರ್ಪಣೆಗೈದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
