Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 12 ಸಂಖ್ಯಾ ಬಲದ ಕೋಡಿ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೂ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಗೂ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆ ಆಗದ ಕಾರಣ ಪ್ರಭಾಕರ ಮೆಂಡನ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತ 4ನೇ ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದು ಈ ಹಿಂದೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅನುಭವ ಇದ್ದು, ಇದೀಗ ಅಧ್ಯಕ್ಷರಾಗಿ, ಗ್ರಾಮಾಭಿವೃದ್ಧಿಗೆ ಶ್ರಮಿಸುವ ಇವರ ಮನೋಭಿಲಾಷೆಗೆ ಬೆಂಬಲ ಸಿಕ್ಕಂತಾಗಿದೆ. ಡಾ. ಅರುಣ್ ಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 12 ಮಂದಿ ಸದಸ್ಯ ಬಲ ಹೊಂದಿರುವ ಕೋಡಿ ಪಂಚಾಯತ್‌ನಲ್ಲಿ ಆಂಥೋನಿ ಒಬ್ಬರೇ ಕಾಂಗ್ರೆಸ್ ಬೆಂಬಲಿತ ರಾಗಿ ಜಯಗಳಿಸಿದ್ದರು. ಉಳಿದೆಲ್ಲರೂ ಬಿಜೆಪಿ ಬೆಂಬಲಿತ ಸದಸ್ಯರೆ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ವರ್ಗ ಬಿ ಇಂದ ಆಂಥೋನಿ ಡಿ ಸೋಜ ಒಬ್ಬರೇ ಅರ್ಹರಾಗಿದ್ದರೂ ಕಾಂಗ್ರೆಸ್ ಬೆಂಬಲಿತ ಏಕೈಕ ಪ್ರತಿನಿಧಿಯಾದ್ದರಿಂದ ಸೂಚಕರಾಗಿ ಬೆಂಬಲಿಸುವರಿಲ್ಲದೆ ಆಯ್ಕೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಹೀಗಾಗಿ ಉಪಾಧ್ಯಕ್ಷ ಸ್ಥಾನಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹಿಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಭತ್ತ ಸಂಗ್ರಹಣೆಗೆ ಈಗಾಗಲೇ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ತಂತ್ರಾಂಶದಿಂದ ರೈತರ ಮಾಹಿತಿಯನ್ನು ಪಡೆದು ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ನಿಗಧಿಪಡಿಸಿರುವ 0.12 ಲಕ್ಷ ಮೆ.ಟನ್ ಭತ್ತವನ್ನು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ. 1868 ರ ದರದಲ್ಲಿ ಹಾಗೂ ಗ್ರೇಡ್ ಎ ಭತ್ತವನ್ನು ಪ್ರತಿ ಕ್ವಿಂಟಾಲ್ಗೆ ರೂ. 1888 ರ ದರದಲ್ಲಿ ಹಾಗೂ ಜ್ಯೋತಿ ಭತ್ತವನ್ನು ಪ್ರತಿ ಕ್ವಿಂಟಾಲ್ಗೆ ರೂ. 1868 ರ ದರದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್ನಂತೆ ಗರಿಷ್ಟ 40 ಕ್ಷಿಂಟಾಲ್ ಭತ್ತವನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಲು ಜಿಲ್ಲೆಗೆ ಕರ್ನಾಟಕ ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತ ರವರನ್ನು ಸಂಗ್ರಹಣಾ ಏಜೆನ್ಸಿಯನ್ನಾಗಿ ನೇಮಿಸಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದದಲ್ಲಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಯ ಕೆಲಸದ ವೇಳೆಯನ್ನು ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ. ಮೇ.12ರ ತನಕ ಬೆಳಿಗ್ಗೆ 7 ಗಂಟೆಯಿಂದಲೇ ಪ್ರಧಾನ ಕಛೇರಿ ತೆರೆಯಲಿದ್ದು ಸಂಸ್ಥೆಯ ಸದಸ್ಯರು ಹಾಗೂ ಗ್ರಾಹಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 27 ರಿಂದ ಮೇ 12 ರ ವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ತೆರೆದು ಅನಗತ್ಯ ವಾಹನ ಸಂಚಾರವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ. ಗಡಿಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ಳನ್ನು ತೆರೆದು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ, ವೈದ್ಯಕೀಯ ಕಾರಣಗಳಿಂದ ಮತ್ತು ಸೂಕ್ತ ಪಾಸ್ಗಳನ್ನು ಪಡೆದು ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಿ ಪ್ರವೇಶಿಸಲು ಅವಕಾಶ ನೀಡಲಾಗಿದೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 10 ವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ಅಂಗಡಿಗಳ ಮುಂದೆ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ಅಧಿಕಾರಿಗಳು ಪರಿಶೀಲಿಸಬೇಕು. ಬೆಳಗ್ಗೆ 10 ಗಂಟೆಯ ನಂತರವೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 27 ರಿಂದ ಮೇ 12 ರ ವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಜಿಲ್ಲೆಯಲ್ಲಿ ಕೋವಿಡ್ ಉಲ್ಬಣವಾಗುವುದನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರನ್ನು ಅವರು ಹೊಂದಿರುವ ಅಧಿಕೃತ ಟಿಕೆಟ್ ಆಧಾರದಲ್ಲಿ ಸಂಚಾರಕ್ಕೆ ಅನುಮತಿ ನೀಡಿ, ತುರ್ತು ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಿ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 477 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 263, ಕುಂದಾಪುರ, ಬೈಂದೂರು ತಾಲೂಕಿನ 128, ಕಾರ್ಕಳ, ಹೆಬ್ರಿ ತಾಲೂಕಿನ 82 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 477 ಪ್ರಕರಣಗಳಲ್ಲಿ 234 ಸಿಂಟಮಿಕ್ ಹಾಗೂ 243 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 38 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 439 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3772 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1892 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 272 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಪ್ರಾಣಿ ದಯಾ ಸಂಘದ ವತಿಯಿಂದ ಮುಂದಿನ 2 ವರ್ಷಗಳ ಅವಧಿಗೆ ಗೌರವಾನ್ವಿತ ಪ್ರಾಣಿ ಕಲ್ಯಾಣಾಧಿಕಾರಿಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶು ಪಾಲನಾ ಇಲಾಖೆ, ಉಡುಪಿ, ದೂ.ಸಂ.0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸ್ಥಳೀಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿರುವ ಸರಕಾರವು ವಿದೇಶಿ ಆನ್‌ಲೈನ್ ಕಂಪನಿಗಳಿಗೆ ನೀಡಿರುವ ಆನ್‌ಲೈನ್ ಡೆಲಿವರಿ ಸೇವೆಯನ್ನು ಕೂಡ ನಿಲ್ಲಿಸಬೇಕೆಂದು ಆಲ್ ಇಂಡಿಯಾ ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್ ಉಡುಪಿ ಘಟಕ ಸರಕಾರಕ್ಕೆ ಮನವಿ ಮಾಡಿದೆ. ಕರೋನಾ ಎರಡನೇ ಅಲೆ ತೀವ್ರವಾಗಿ ಹರಡಿದ್ದು ಸರಕಾರವೂ ಜನರ ಒಳಿತಿಗಾಗಿ ಕೈಗೊಂಡ ಲಾಕ್‌ಡೌನ್ ನಿಯವನ್ನುಸ್ಥಳೀಯ ವ್ಯಾಪಾರಿಗಳು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಸರಕಾರ ನೊಂದ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ಕೊಡದೆ ವಿದೇಶಿ ಆನ್‌ಲೈನ್ ಕಂಪನಿಗಳಿಗೆ ಸಹಕಾರ ಕೊಟ್ಟು ಸ್ಥಳಿಯ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಸರಕಾರ ವ್ಯಾಪಾರವನ್ನು ಬಂದ್ ಮಾಡಲು ಸುತ್ತೋಲೆ ಹೊರಡಿಸಿದಾಕ್ಷಣ ಚಾಚೂ ತಪ್ಪದೆ ಪಾಲಿಸುವ ವ್ಯಾಪಾರಿಗೊಂದು ನೀತಿ, ಆನ್‌ಲೈನ್ ಕಂಪನಿಗಳಾದ ಅಮೆಜಾನ್ ಪ್ಲಿಪ್‌ಕಾರ್ಟ್‌ಗಳಿಗೊಂದು ನೀತಿ .  ಫೇಸ್ ಮಾಸ್ಕ್ ಹ್ಯಾಂಡ್ ಗ್ಲೋಸ್, ಸ್ಯಾನಿಟೈಝೇರ್ ಯಾವುದೇ ಮುಂಜಾಗ್ರತೆಯನ್ನು ವಹಿಸದೆ ಆನ್‌ಲೈಕಂಪನಿಗಳಿಗೆ ತಮ್ಮ ವ್ಯವಹಾರವನ್ನುನಡೆಸುತ್ತಿದ್ದಾರೆ. ಆನ್‌ಲೈನ್ ಕಂಪನಿಗಳಿಗೆ ಮನೆಮನೆಗೆ ಪಾರ್ಸೆಲ್ಗಳುಬರುತ್ತದೆ ಆದರೆ ಇದರಿಂದ ಕೊರೋನಾ ಹರಡುದಿಲ್ಲವೇ?…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 412 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 195, ಕುಂದಾಪುರ, ಬೈಂದೂರು ತಾಲೂಕಿನ 154, ಕಾರ್ಕಳ, ಹೆಬ್ರಿ ತಾಲೂಕಿನ 61 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಈರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 412 ಪ್ರಕರಣಗಳಲ್ಲಿ 207 ಸಿಂಟಮಿಕ್ ಹಾಗೂ 205 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 45 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 367 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2416 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 290 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮೊದಲ ಸಭೆ ಸೋಮವಾರ ನಡೆದಿದ್ದು ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ದೇವಳದ ಜಗದಾಂಬಿಕಾ ಸಭಾಭವನದಲ್ಲಿ ಚುನಾವಣೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಡಾ. ಅತುಲ್ ಕುಮಾರ್ ಶೆಟ್ಟಿ ಮತ್ತು ಚಂದ್ರಶೇಖರ ಶೆಟ್ಟಿ ಉಮೇದುದಾರರಾಗಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ ಶೆಟ್ಟಿ ಕೆರಾಡಿ ಅವರು 5 ಮತಗಳನ್ನು ಡಾ. ಅತುಲ್ ಕುಮಾರ್ ಶೆಟ್ಟಿ 4 ಮತಗಳನ್ನು ಪಡೆದರು. ನೂತನ ಸಮಿತಿಯ ಸದಸ್ಯರಾದ ಪ್ರಧಾನ ಅರ್ಚಕರಾದ ಡಾ. ಕೆ. ರಾಮಚಂದ್ರ ಅಡಿಗ, ರತ್ನಾ ರಮೇಶ್ ಕುಂದರ್ ಕೊಲ್ಲೂರು, ಸಂಧ್ಯಾ ರಮೇಶ್ ಮಚ್ಚಟ್ಟು, ಗೋಪಾಲಕೃಷ್ಣ ಸೇನಾಪುರ, ಜಯಾನಂದ ಹೋಬಳಿದಾರ್ ಬೈಂದೂರು, ಚಂದ್ರಶೇಖರ ಶೆಟ್ಟಿ, ಗಣೇಶ್ ಕಿಣಿ ಬೆಳ್ವೆ, ಡಾ. ಅತುಲ್‌ಕುಮಾರ್ ಶೆಟ್ಟಿ ಚಿತ್ತೂರು ಹಾಗೂ ಶೇಖರ ಪೂಜಾರಿ ಕಾರ್ಕಡ ನೇಮಕಗೊಂಡಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿ, ಈ ಜಾಗದಲ್ಲಿ ಅಧ್ಯಕ್ಷರಾಗಿ…

Read More