ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರ್ನಾಟಕ ಸರಕಾರ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ ಉಡುಪಿ, ತಾಲೂಕು ಆಯುಷ್ ಘಟಕ ಕುಂದಾಪುರ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಮತ್ತು ಗೀತಾನಂದ ಫೌಂಡೇಶನ್ ಕೋಟ ಇವರ ಸಹಯೋಗದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಆಯುಷ್ ಔಷಧಿ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಪೊಲೀಸ್ ಠಾಣೆಯಲ್ಲಿ ಗುರುವಾರ ಜರಗಿತು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಅವರು ಮನುಷ್ಯನ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಔಷಧಿಗಳು ಸಹಕಾರಿಯಾಗುತ್ತದೆ. ಹಿಂದಿನಿಂದ ಪೂರ್ವಜರು ಬಳಸುತ್ತಿದ್ದ ಗಿಡಮೂಲಿಕೆ ಔಷಧಿಗಳು, ಆಯುರ್ವೇದ ಔಷಧಿಗಳನ್ನು ಸೇವಿಸುವುದರಿಂದ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗಿ, ಕೋವಿಡ್-೧೯ ವೈರಸ್‌ನಿಂದ ರಕ್ಷಣೆ ಪಡೆಯಲು ಸಹಾಯವಾಗುತ್ತದೆ. ಕರೋನಾ ತಡೆಗಟ್ಟುವ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೇಂದ್ರ ಆಯುಷ್ ಸಚಿವಾಲಯ ಅನುಮೋದಿತ ಆಯುಷ್ ಔಷಧಿಗಳನ್ನು ಕರೋನಾ ವೈರಸ್ ನಿರ್ಮೂಲನೆಯಲ್ಲಿ ಮುಂಚೂಣಿಯಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿತರಿಸಲಾಗುತ್ತಿದ್ದು, ಇದರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಮೀಪದ ಮಣೂರಿನಲ್ಲಿ ಜ.26 ರಾತ್ರಿ ನಡೆದ ಯತೀಶ್ ಕಾಂಚನ್ ಹಾಗೂ ಭರತ್ ಎನ್ನುವವರ ಜೋಡಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಜೋಡಿ ಕೊಲೆ ಪ್ರಕರಣದ ಆರೋಪಿಗಳಾದ ಸುಜಯ್ , ಮಹೇಶ್ ಕುಮಾರ್, ರವಿಚಂದ್ರ, ಅಭಿಷೇಕ್ ಪಾಲನ್ ಎನ್ನುವರ ಜಾಮೀನು ತಿರಸ್ಕ್ರತಗೊಂಡಿದೆ. ಕೋಟ ಜೋಡಿ ಕೊಲೆ ಪ್ರಕರಣದಲ್ಲಿ ಇವರು ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಕೊಲೆಗೆ ಬಳಸಿದ ಮಾರಕಾಯುಧಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತ್ಯಕ್ಷದರ್ಶಿಗಳು ಕೂಡ ಆರೋಪಿಗಳನ್ನು ಗುರುತು ಪತ್ತೆ ಪರೇಡಿನಲ್ಲಿ ಗುರುತಿಸಿದ್ದಾರೆ. ಆದ್ದರಿಂದ ಇವರಿಗೆ ಜಾಮೀನು ನೀಡಿದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕಿ ಸಾಕ್ಷ್ಯ ನಾಶ ಮಾಡುವ ಸಂಭವವಿದೆ ಎಂಬ ವಾದ ಆಲಿಸಿದ ನ್ಯಾಯಾಧೀಶರು ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.9ರ ಗುರುವಾರ 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 466 ನೆಗೆಟಿವ್: ಈ ತನಕ ಒಟ್ಟು 20,711 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 16,835 ನೆಗೆಟಿವ್, 1,443 ಪಾಸಿಟಿವ್ ಬಂದಿದ್ದು, 2,433 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 843 ನೆಗೆಟಿವ್, 22 ಪಾಸಿಟಿವ್ ಬಂದಿದೆ. ಒಟ್ಟು 1235 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 223 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,443 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,217 ಮಂದಿ ಬಿಡುಗಡೆಯಾಗಿದ್ದು, 223 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೀವ್ರವಾಗಿ ಗಾಯಗೊಂಡಿದ್ದ ಕಡಲಾಮೆಯನ್ನು ಬುಧವಾರ ಕೋಡಿ ಕಿನಾರ ಬಳಿಯ ಕಡಲ ತಡಿಯಲ್ಲಿ ರಕ್ಷಿಸಲಾಗಿದೆ. ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರ ನೇತೃತ್ವದಲ್ಲಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್‌ನ ಭರತ್ ಬಂಗೇರ, ರೀಫ್ ವಾಚ್ ಇಂಡಿಯಾದ ಶಂತನು, ತೇಜಸ್ವಿನಿ, ಎಫ್.ಎಸ್.ಎಲ್ ಇಂಡಿಯಾದ ದಿನೇಶ್ ಸಾರಂಗ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಗ್ರಾಮದ ಬೇಬಿ ದೇವಾಡಿಗ ಅವರ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹಾಗೂ ಹಾಗೂ ಗೃಹ ಪ್ರವೇಶದ ದಿನ ಊಟೋಪಚಾರಕ್ಕೆ ದೇಣಿಗೆ ನೀಡಿದ ಉದ್ಯಮಿ ಗುರುರಾಜ ಪೂಜಾರಿ ಅವರಿಗೆ ಉಪ್ಪುಂದ ದೇವಾಡಿಗ ಸಂಘದಿಂದ ಗೌರವಿಸಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ದೇವಾಡಿಗ ಹಾಗೂ ಪ್ರಮೀಳಾ ದೇವಾಡಿಗ, ಉಪ್ಪುಂದ ದೇವಾಡಿಗ ಸಂಘದ ಅದ್ಯಕ್ಷರಾದ ಮಾಧವ ದೇವಾಡಿಗ, ಕಾರ್ಯದರ್ಶಿ ನರಸಿಂಹ ದೇವಾಡಿಗ, ಉಪಾಧ್ಯಕ್ಷ ರಾಮಚಂದ್ರ ದೇವಾಡಿಗ, ದೇವಾಡಿಗ ಮಹೀಳಾ ಸಂಘದ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಹಾಗೂ ಸದಸ್ಯರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶೆಫ್‌ಟಾಕ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರು ಶ್ರೀ ನಾರಾಯಣಗುರು ಕೋ-ಆಪರೇಟೀವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರ ಮಾತೃಸಂಸ್ಥೆ ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಕಚೇರಿಯಲ್ಲಿ ಬುಧವಾರ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ಜಯರಾಮ ಶೆಟ್ಟಿ ಬಿಜೂರು, ಮಂಜುನಾಥ ಪೂಜಾರಿ, ಪ್ರಬಂಧಕರಾದ ನಾಗರಾಜ ಪೂಜಾರಿ, ವಿಲಿಯಂ ಗೋಮ್ಸ್, ಸಿಬ್ಬಂದಿಗಳಾದ ಅಶ್ವಿನಿ, ಸೌಮ್ಯಾ ಶೆಟ್ಟಿ, ಲೋಕೇಶ ಪೂಜಾರಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆ ವಾರ್ಡಿನ 58 ವರ್ಷದ ವ್ಯಕ್ತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಪಾಸಿಟಿವ್ ಇರುವುದು ಬುಧವಾರ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಗಳ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಉಳಿದ ಇಬ್ಬರದು ನೆಗೆಟಿವ್ ಬಂದಿದೆ. ಸದ್ಯ ಮನೆಯನ್ನು ಸೀಲ್ಡೌನ್ ಮಾಡಿ, ದಂಪತಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಮಂಗಳವಾರ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಲಿಗ್ರಾಮದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಮಾತನಾಡಿ, ‘ಕೇಂದ್ರ ಸರ್ಕಾರ ಜನರ ಜೀವನದ ಜತೆ ಚೆಲ್ಲಾಟ ಆಡುತ್ತಿದೆ. ಜಾಗತಿಕವಾಗಿ ಪೆಟ್ರೋಲ್ ದರ ಭಾರಿ ಇಳಿಕೆಯಾಗಿದ್ದರೂ, ದೇಶದಲ್ಲಿ ದಿನದಿಂದ ದಿನಕ್ಕೆ ದರ ಏರಿಕೆ ಆಗುತ್ತಿದೆ. ಬಾಯಿ ತೆರೆದರೆ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಅನ್ನುತ್ತಾರೆ. ಜನರಿಗಾಗಿ ಏನು ಮಾಡಿದ್ದಾರೆ ? ಬಣ್ಣಬಣ್ಣದ ಮಾತನ್ನಾಡಿ ಜನರ ತಲೆ ಕೆಡಿಸಿದ್ದಾರೆ,ಇನ್ನಾವ ಕಾರ್ಯ ಮಾಡಲ್ಲಿಲ್ಲ. ಇದನ್ನು ಜನಸಾಮಾನ್ಯ ಅರ್ಥೈಸಿಕೊಳ್ಳಬೇಕು’ ಎಂದು ಹೇಳಿದರು. ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವೈ.ಬಿ. ರಾಘವೇಂದ್ರ, ನಟರಾಜ್ ಹೊಳ್ಳ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಾಲಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ, ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ 19 ಸೋಂಕಿತರು ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ಇದಕ್ಕಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರಬೇಕಾಗುತ್ತದೆ. ಇದನ್ನು ಬಿಪಿಎಲ್, ಎಪಿಎಲ್ ಹಾಗೂ ಕಾರ್ಡ್ ಇಲ್ಲದವರು ಸಹ ಸೇರಿದಂತೆ, ವಿವಿಧ ಸರ್ಕಾರಿ ನೌಕರರಿಗೆ ಈ ಕಾರ್ಡ್ ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿಕೊಳ್ಳಲು, ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10 ರೂ ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35 ರೂ ಪಾವತಿಸಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.8ರ ಬುಧವಾರ 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 236 ನೆಗೆಟಿವ್: ಈ ತನಕ ಒಟ್ಟು 20,493 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,992 ನೆಗೆಟಿವ್, 1,421 ಪಾಸಿಟಿವ್ ಬಂದಿದ್ದು, 3,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 236 ನೆಗೆಟಿವ್, 31 ಪಾಸಿಟಿವ್ ಬಂದಿದೆ. ಒಟ್ಟು 1,197 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 229 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,421ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,189 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ – https://kundapraa.com/?p=39353 .
