Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ, ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ 19 ಸೋಂಕಿತರು ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ಇದಕ್ಕಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರಬೇಕಾಗುತ್ತದೆ. ಇದನ್ನು ಬಿಪಿಎಲ್, ಎಪಿಎಲ್ ಹಾಗೂ ಕಾರ್ಡ್ ಇಲ್ಲದವರು ಸಹ ಸೇರಿದಂತೆ, ವಿವಿಧ ಸರ್ಕಾರಿ ನೌಕರರಿಗೆ ಈ ಕಾರ್ಡ್ ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿಕೊಳ್ಳಲು, ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10 ರೂ ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35 ರೂ ಪಾವತಿಸಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.8ರ ಬುಧವಾರ 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 236 ನೆಗೆಟಿವ್: ಈ ತನಕ ಒಟ್ಟು 20,493 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,992 ನೆಗೆಟಿವ್, 1,421 ಪಾಸಿಟಿವ್ ಬಂದಿದ್ದು, 3,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 236 ನೆಗೆಟಿವ್, 31 ಪಾಸಿಟಿವ್ ಬಂದಿದೆ. ಒಟ್ಟು 1,197 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 229 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,421ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,189 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ – https://kundapraa.com/?p=39353 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ರಾಜ್ಯದಲ್ಲೇ ಕೊರೋನಾ ಆರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈ ಲ್ಯಾಬಿನೊಂದಿಗೆ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್ ಗಳ ಸಂಖ್ಯೆ 82 ಕ್ಕೇರಿದೆ. ಜಿಲ್ಲೆಯಲ್ಲಿ ಮೊದಲು ಟೆಸ್ಟಿಂಗ್ ಗಾಗಿ ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿಂದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ. ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ, ಇಲ್ಲಿ ಲ್ಯಾಬ್ ನ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮಾನ್ಯ ಮುಖ್ಯಮಂತ್ರಿಗಳು ಈ ಲ್ಯಾಬ್ ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು. ಕೋರೋನಾ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ, ಉಡುಪಿ ಜಿಲ್ಲಾಡಳಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.7ರ ಮಂಗಳವಾರ 28 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 466 ನೆಗೆಟಿವ್: ಈ ತನಕ ಒಟ್ಟು 19,773 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,756 ನೆಗೆಟಿವ್, 1,390 ಪಾಸಿಟಿವ್ ಬಂದಿದ್ದು, 2,627 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1170 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 205 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,390 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,182 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಅನುಮತಿಯಿಲ್ಲದೇ ಸಭೆ – ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=39331 . ► ಕೋವಿಡ್ ಪರೀಕ್ಷೆ ಮಾಡಿಸಿದವರು ವರದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಅ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ಈ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂಬ ಅಂಶವನ್ನು ಸಂಘಟಕರು ಅರಿತುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಂದಾಗಿ ಕೋವಿಡ್ -19 ನ್ನು ಹರಡುವ ಸಾಧ್ಯತೆಯಿದ್ದು, ಈ ಕಾರ್ಯಕ್ರಮಗಳ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಪೂರ್ವಾನುಮತಿಯ ಮೇರೆಗೆ ಜರುಗುವ ಮದುವೆ / ಇತರೆ ಸಭೆ ಸಮಾರಂಭ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಆದೇಶದನ್ವಯ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಶುಚಿತ್ವ ಕಾಪಾಡಿಕೊಳ್ಳುವಿಕೆಗೆ ಹಾಗೂ ಇತರ ಎಸ್.ಓ.ಪಿ. ಕ್ರಮಗಳು ಯಥಾ ರೀತಿಯಲ್ಲಿ ಪಾಲನೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬಂಧಿಸಿದ ತಹಶೀಲ್ದಾರರು/ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು/ ಉಡುಪಿ ನಗರಸಭೆ ಪೌರಾಯುಕ್ತರು / ಮುಖ್ಯಾಧಿಕಾರಿಗಳು/ ಗ್ರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ,ದೇಶದ ಜನ ಕೋವಿಡ್ -19 ನಿಂದ ಸಂಕಷ್ಟದಿಂದ ಇರುವ ಸಂದರ್ಭದಲ್ಲಿ ಡಿಸೇಲ್,ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಹೇಳಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನ ಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ ಅಂತಾರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೆ ಎರಿದಾಗ ದೇಶದಲ್ಲಿ ತೈಲ ಬೆಲೆ ಹೆಚ್ಚಿಸಿದಾಗ ಬೀದಿಗಿಳಿದು ಹೋರಾಟ ಮಾಡಿವವರೇ ಈಗ ಅಧಿಕಾರದಲ್ಲಿದ್ದು ಪ್ರಸ್ತುತ ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದುದರಿಂದ 30 ರಿಂದ 35 ರೂಪಾಯಿಗೆ ಡಿಸೇಲ್ ನೀಡಬೇಕಿತ್ತು. ಇದು ಜನ ಸಾಮಾನ್ಯರ ಪರವಾದ ಪ್ರತಿಭಟನೆ ಎಂದ ಅವರು ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು ಆರ್ಥಿಕವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್’ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು ಪಾಸಿಟಿವ್ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಹೊರರಾಜ್ಯದಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ 19 ಪರೀಕ್ಷಾ ವರದಿ ಬಂದ ನಂತರವೇ ಜಿಲ್ಲೆಗೆ ಬರಬೇಕು, ಖಾಸಗಿ ಲ್ಯಾಬ್ ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನು ಸಂಬAದಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಜಿಲ್ಲೆಯಲ್ಲಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದೇ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಬಸ್ ಗಳ ವಿರುದ್ದ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟೀಶ್ ನೀಡುವಂತೆ ಸೂಚಿಸಿದರು. ಎಲ್ಲಾ ತಹಸೀಳ್ದಾರ್ ಗಳು ಬಸ್ ಗಳಲ್ಲಿ ನಿಗಧಿತ ಸಂಖ್ಯೆಗಿAತ ಹೆಚ್ಚಿನ ಪ್ರಯಾಣಿಕರದ್ದಲ್ಲಿ ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ವಂಡ್ಸೆಯಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಅರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಯಿಂದ ಜನ ಕಂಗೆಟ್ಟಿದ್ದು, ಅದರೊಂದಿಗೆ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿರುವುದು ಬಿಸಿವತುಪ್ಪವಾಗಿ ಪರಿಣಮಿಸಿದೆ. 2014 ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 6330 ರೂ. ಇದ್ದಿದ್ದು ಈಗ 3035 ರೂ. ಗೆ ಕುಸಿದಿದೆ, ಆದರೂ ಕೇಂದ್ರ ಸರ್ಕಾರ ಬೆಲೆ ಎರಿಕೆ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋ ನೀತಿಯ ವಿರುದ್ಧ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.6ರ ಸೋಮವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಹೋಟೆಲ್ ಸಿಬ್ಬಂದಿ, ಅಂಗಡಿ ಮಾಲೀಕರ ಕುಟುಂಬ, ಬಸ್ ಚಾಲಕ ಕರೋನಾ ಸೋಂಕು ತಗುಲಿದ್ದು ಸಮುದಾಯಕ್ಕೆ ಹಬ್ಬುವ ಭೀತಿ ಎದುರಾಗಿದೆ. ಕೋಟದಲ್ಲಿರುವ ಹೋಟೆಲ್ ಮತ್ತು ಅಂಗಡಿ ಮಾಲೀಕರಿಗೆ ಕೋವಿಡ್ ದೃಢಗೊಂಡಿದ್ದು, ಹೊಟೇಲ್ ಮತ್ತು ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿದೆ. ಇಂದು 466 ನೆಗೆಟಿವ್: ಈ ತನಕ ಒಟ್ಟು 18,542 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,540 ನೆಗೆಟಿವ್, 1,362 ಪಾಸಿಟಿವ್ ಬಂದಿದ್ದು, 1,640 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1126 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 205 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,362 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1154 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋದ ಮೂವರು ಬಸ್ ಚಾಲಕರಿಗೆ ಕೋರೋನಾ ಸೊಂಕು ದೃಢಪಟ್ಟಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 44 ವರ್ಷದ ಕುಂದಾಪುರ – ಬೆಂಗಳೂರು ಬಸ್ ಚಾಲಕ, 36 ವರ್ಷದ ಕುಂದಾಪುರ – ಶಿವಮೊಗ್ಗ ಬಸ್ ಚಾಲಕ ಹಾಗೂ 58 ವರ್ಷದ ಬಸ್ ಚಾಲಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರ ವರದಿ ದೊರೆತಿದ್ದು, ಬಾಗಲಕೋಟೆ ಮೂಲದ ಚಾಲಕನನ್ನು ಬಾಗಲಕೋಟೆ ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆ ದಾಖಲಿಸಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವನ್ನು ಕ್ವಾರಂಟೈನ್ ಮಾಡಲಾಗಿದೆ.

Read More