Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜ್ವರ ಶೀತ ಕೆಮ್ಮು ರೋಗಿಗಳಿಗೆ ವೈದ್ಯರ ಸಲಹಾ ಚೀಟಿಯಿಲ್ಲದೇ ಯಾವುದೇ ಮೆಡಿಕಲ್ ಶಾಪ್ ಗಳಲ್ಲಿ ಔಷಧ ವಿತರಿಸದಂತೆ ಈಗಾಗಲೇ ಸೂಚಿಸಲಾಗಿದ್ದು, ವೈದ್ಯರ ಚೀಟಿಯಿಲ್ಲದೇ ಮಾರಾಟ ಮಾಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್ ಗಳು ಪ್ರತಿದಿನ ತಮ್ಮಲ್ಲಿ ಮಾರಾಟವಾದ ಔಷಧಗಳ ವಿವರ ನೀಡುವಂತೆ ಸೂಚನೆ ನೀಡಲಾಗಿದ್ದು, ಹಲವು ಮೆಡಿಕಲ್ ಶಾಪ್ ಗಳು ಪ್ರತಿದಿನ ವರದಿ ನೀಡದೇ ಇರುವುದು ಗಮನಕ್ಕೆ ಬಂದದ್ದು , ಎಲ್ಲರೂ ಕಡ್ಡಾಯವಾಗಿ ಪ್ರತಿದಿನದ ವರದಿ ನೀಡುವಂತೆ , ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ. ಇದನ್ನೂ ಓದಿ: ► ಬೆಂಗಳೂರಿನಿಂದ ಕೋಟೇಶ್ವರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25ವರ್ಷದ ಟೆಕ್ಕಿ ಸಾವು – https://kundapraa.com/?p=38668 . ► ಉಡುಪಿ ಜಿಲ್ಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ 14,034 ಮಂದಿ ವಿದ್ಯಾರ್ಥಿಗಳು – https://kundapraa.com/?p=38652 . ► ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ: ಜಿಲ್ಲಾಧಿಕಾರಿ ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಬೆಂಗಳೂರಿನಿಂದ ಕೋಟೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಟೆಕ್ಕಿಯೋರ್ವ ಖಾಸಗಿ ಬಸ್ಸಿನಲ್ಲಿ  ಮೃತರಾದ ಬಗ್ಗೆ ಘಟನೆ ನಡೆದಿದೆ. ಕುಂಬ್ರಿಯ ವಿಷ್ಣುಮೂರ್ತಿ ಎಂಬುವವರ ಮಗ ಚೈತನ್ಯ (25) ಮೃತ ದುರ್ದೈವಿ. ಚೈತನ್ಯ ಜೂ.15 ರಂದು ರಾತ್ರಿ 09 ಗಂಟೆಗೆ ಖಾಸಗಿ ಬಸ್ಸಿನಲ್ಲಿ ಕೋಟೇಶ್ವರಕ್ಕೆ ಹೊರಟಿದ್ದರು. ಜೂ.16 ಬೆಳಿಗ್ಗೆ 06:30ರ ಸುಮಾರಿಗೆ ತಂದೆ ವಿಷ್ಣುಮೂರ್ತಿ ಅವರಿಗೆ ಕರೆಮಾಡಿಬಸ್ಸು ಬಾರ್ಕೂರುನಲ್ಲಿ ಇರುವುದಾಗಿ ತಿಳಿಸಿದ್ದರು. ಆ ನಂತರ ಆತ ಅಸ್ವಸ್ಥಗೊಂಡಿರುವ ಬಗ್ಗೆ ತಿಳಿದುಬಂದಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಬಳಿಕ ವಿನಯಾ ಆಸ್ಪತ್ರಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿಪಡಿಸಿದ್ದಾರೆ. ಚೈತನ್ಯ ಹೃದಯಾಘಾತದಿಂದ ಅಥವಾ ಇತರ ಯಾವುದೋ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದ್ದು, ಕೋವಿಡ್-19 & ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಣಿಪಾಲಕ್ಕೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಬ್ರಹ್ಮಾವರದವರಾದ ಚೈತನ್ಯ ಕಳೆದೆರಡು ವರ್ಷಗಳಿಂದ ಬೆಂಗಳೂರು ಮಾರತಹಳ್ಳಿಯ ಖಾಸಗಿ ಕಂಪೆನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ದುಡಿಯುತ್ತಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ಕೋವಿಡ್-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತೆಗಳು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಕುಂದಾಪುರದ ಡಾ. ಜಿ. ಶಂಕರ್ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ ಎಸ್.ಬಿ.ಐ ನಿಂದ 4 ಮತ್ತು ಇನ್ಪೋಸಿಸ್ ನಿಂದ 3 ವೆಂಟಿಲೇಟರ್ ಗಳ ಸರಬರಾಜು ಆಗಿದ್ದು, ಅವುಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ,ಅಲ್ಲದೇ ಕನಿಷ್ಠ 40 ಬೆಡ್ ಗಳ ಆಕ್ಸ್ಸಿಜಿನ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದರ ಮೂಲಕ ಇದನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದೆ ಎಂದರು. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಡ ಗ್ರಾಮದ ಪಡುಕೋಣೆಯ ನಿವೃತ್ತ ಶಿಕ್ಷಕಿ ಪಾವ್ಲೀನ್ ಫೆನಾಂಡೀಸ್ (82) ಮಂಗಳವಾರ ಮನೆಯಲ್ಲಿ ನಿಧನರಾದರು. ಶಿರೂರು, ನಾವುಂದ ಮತ್ತು ಪಡುಕೋಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು ೩೪ ವರ್ಷ ಸುದೀರ್ಘ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ಪ್ರೀತಿಯ ಶಿಕ್ಷಕಿ ಎನಿಸಿದ್ದರು. ಅವಿವಾಹಿತರಾಗಿದ್ದ ಅವರು ತಮ್ಮ ಹಲವು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಾಯ ಮಾಡಿದ್ದರು. ಪಡುಕೋಣೆ ಚರ್ಚ್‌ನ ಪಾಲನಾ ಮಂಡಳಿಯ ಸದಸ್ಯರಾಗಿ, ಬಡವರ ಆರೋಗ್ಯ, ಶಿಕ್ಷಣದ ಬಗೆಗೆ ನೆರವಾಗುವ ಸ್ಥಳೀಯ ಸಂಘಟನೆ ಎಸ್.ವಿ.ಪಿಯ ಕಾರ್ಯದರ್ಶಿಯಾಗಿ ದೀರ್ಘಕಾಲ ದುಡಿದಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬದಲಾದ ಕಾಲಘಟ್ಟ ದಲ್ಲಿ ವಿದ್ಯಾರ್ಥಿಗಳು ಹೊಸತನದ ಕಲಿಕೆಯ ಸಾಧ್ಯತೆಗಳನ್ನು ಇರುವ ಅವಕಾಶಗಳಲ್ಲಿಯೇ ಸಂಪೂರ್ಣವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಬೇಕು. ನಮ್ಮ ವಿದ್ಯಾರ್ಥಿಗಳು ಕಲಿಯುವ ಯಾವುದೇ ಹೊಸ ಅವಕಾಶಗಳಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಈ ಆನ್ಲೈನ್ ತರಗತಿಗಳನ್ನು ನಾವು ಪ್ರಾರಂಭಿಸುತ್ತಿದ್ದೇವೆ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಷನ್ನಿನ ಅಧ್ಯಕ್ಷ ಡಾ. ಕಾಶೀನಾಥ್ ಪೈ ಅವರು ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಆನ್ಲೈನ್ ತರಗತಿಗಳ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ರಸಾಯನ ಶಾಸ್ತ್ರ ಉಪನ್ಯಾಸಕರಾದ ಆರ್.ಎನ್ ರೇವಣ್ಕರ್ ಪಾಠವನ್ನು ಆರಂಭಿಸುವುದರ ಮೂಲಕ ತರಗತಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ್ಯದರ್ಶಿ ಎನ್ ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಮ್ ಸಿ ಉಪಸ್ಥಿತರಿದ್ದರು. ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರ್ವಹಿಸಿದರು. ಹಿಂದಿ ಉಪನ್ಯಾಸಕ…

Read More

ಕುಂದಾಪುರ: ಐದನೇ ತರಗತಿಯ ತನಕದ ವಿಧ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಕ್ಲಾಸುಗಳನ್ನು ರದ್ದು ಮಾಡಿರುವ ರಾಜ್ಯದ ಯಡಿಯೂರಪ್ಪ ಸರ್ಕಾರದ ಕ್ರಮ ಸ್ವಾಗತಾರ್ಹ. ಹಾಗೆಯೇ ಅದರ ಮುಂದುವರಿಕೆಯಾಗಿ ಪಿಯುಸಿಯ ತನಕವೂ ಈ ಆನ್‌ಲೈನ್ ಕ್ಲಾಸುಗಳನ್ನು ರದ್ದು ಪಡಿಸುವ ಕುರಿತು ಸರ್ಕಾರ ತೀರ್ಮಾನಕ್ಕೆ ಬರಬೇಕೆಂದು ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಉಸ್ತುವಾರಿ ಕೆ. ಚಂದ್ರಶೇಖರ ಶೆಟ್ಟಿ ಆಗ್ರಹಿಸಿದ್ದಾರೆ. ಈ ನಾಡಿನ ಜನತೆ ಮೋದಿ ಸರ್ಕಾರದ ಅವೈಜ್ಞಾನಿಕವಾದ ನೋಟು ನಿಷೇಧ ಮತ್ತು ಇದೀಗ ಪೂರ್ವತಯಾರಿ ಇಲ್ಲದ ಲಾಕ್‌ಡೌನ್ ನಿಂದಾಗಿ ಕೆಲಸವಿಲ್ಲದೆ, ಆದಾಯವಿಲ್ಲದೆ ಆರ್ಥಿಕವಾಗಿ ಸಂಪೂರ್ಣವಾಗಿ ಕಂಗೆಟ್ಟಿದ್ದಾರೆ. ಇಂತಹ ಸಮಯದಲ್ಲಿ ಆನ್‌ಲೈನ್ ಶಿಕ್ಷಣದ ಹೆಸರಿನಲ್ಲಿ ಮಕ್ಕಳಿಗೆ ಕಂಪ್ಯೂಟರ್/ ಲ್ಯಾಪ್‌ಟಾಪ್, ಆಂಡ್ರಾಯ್ಡ್ ಮೊಬೈಲ್ ಕೊಡಿಸಲು ಆ ಹೆತ್ತವರಿಗೆ ಖಂಡೀತವಾಗಿಯೂ ಸಾಧ್ಯವಿಲ್ಲ. ಒಂದು ವೇಳೆ ಅವುಗಳನ್ನು ಕೊಡಿಸಿದರೂ ರಾಜ್ಯದ ಬಹುಭಾಗ ಗ್ರಾಮೀಣ ಪ್ರದೇಶವಾಗಿರುವ ಕಾರಣಕ್ಕಾಗಿ ಅಲ್ಲಿ ಇಂಟರ್‌ನೆಟ್ ಸೇವೆ ಇರಲಾರದು. ಇಂತಹ ಅವ್ಯವಸ್ಥೆಯಲ್ಲಿ ಆನ್‌ಲೈನ್ ಕ್ಲಾಸ್ ಗಳನ್ನು ಆರಂಭಿಸಿದರೆ ಖಂಡಿತವಾಗಿಯೂ ಗ್ರಾಮೀಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜೂನ್ 25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 14,034 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4,014 ಬಾಲಕರು ಮತ್ತು 3,295 ಬಾಲಕಿಯರು, ಇಂಗ್ಲೀಷ್ ಮಾಧ್ಯಮದಲ್ಲಿ 3,321 ಬಾಲಕರು ಮತ್ತು 3,404 ಬಾಲಕಿಯರು ಸೇರಿದಂತೆ ಒಟ್ಟು 7,335 ಬಾಲಕರು ಮತ್ತು 6,699 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷಾ ಕೆಂದ್ರ ಬದಲಾವಣೆ ಮಾಡಿಕೊಂಡು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು 507 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡು 82 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಸಿದ್ದತೆ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ 12 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಸುರಕ್ಷತಾ ಕ್ರಮ: ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸಂಪೂಣ್ ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ 2 ಮಸ್ಕ್’ಗಳನ್ನು ಉಚಿತವಾಗಿ ವಿತರಿಸಲಾಗಿದ್ದು, ಡಾ.ಜಿ. ಶಂಕರ್ ಟ್ರಸ್ಟ್ ವತಿಯಿಂದ 15000 ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.15ರ ಸೋಮವಾರ ಒಟ್ಟು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಈ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರ ಹಿಂದಿರುಗಿದವರಾಗಿದ್ದು, 29 ವರ್ಷದ ಮಹಿಳೆಗೆ ಪಿ-5451 ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಈವರೆಗೆ 819 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1028 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 819 ಮಂದಿ ಬಿಡುಗಡೆಯಾಗಿದ್ದು, 208 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಎಪಿಎಂಸಿ: ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಶೆಟ್ಟಿ ಆಯ್ಕೆ – https://kundapraa.com/?p=38639 . ► ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ. ಜಗದೀಶ್ – https://kundapraa.com/?p=38630 .

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ನೂತನ ಅಧ್ಯಕ್ಷರಾಗಿ ವೆಂಕಟ ಪೂಜಾರಿ ಸಸಿಹಿತ್ಲು, ಉಪಾಧ್ಯಕ್ಷರಾಗಿ ಹೆಚ್. ವಸಂತ ಕುಮಾರ್ ಶೆಟ್ಟಿ ಕೆದೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂ.15ರಂದು ನಡೆದ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ಒಟ್ಟು 16 ಸದಸ್ಯ ಬಲವನ್ನು ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಈಗ 10 ಬಿಜೆಪಿ, 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಸರ್ಕಾರ ಇತ್ತೀಚೆಗೆ ಮೂರು ಜನ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಇಂದು ನಡೆದ  ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಸಾಧಿಸಿದ್ದಾರೆ. ಈ ಹಿಂದೆ ಎಪಿಎಂಸಿ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. ಕುಂದಾಪುರ ತಹಶೀಲ್ದಾರ್ ಕೆ. ಆನಂದಪ್ಪ ನಾಯ್ಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, …

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮನುಷ್ಯನ ಶರೀರ ದೃಢವಾಗಿದ್ದರೆ ರೋಗ ಅಷ್ಟಾಗಿ ಬಾಧಿಸದು. ಭಾರತೀಯ ಪರಂಪರೆಯ ಅಯುರ್ವೇದ ಪದ್ಧತಿಯಲ್ಲಿ ಅಂತಹ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಮತ್ತು ಔಷಧಿಗಳು ರೂಢಿಯ್ಲವೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಆಲೂರಿನ ಚಿತ್ರಕೂಟ ಮತ್ತು ತೇಜಸ್ವೇದ ಸಂಸ್ಥೆಗಳು ಹೊರತಂದಿರುವ ’ರಕ್ಷಾ ಪಂಚಕ’ ಕಿಟ್ ಬಿಡುಗಡೆಗೊಳಿಸಿ ಮಾತನಾಡಿದರು. ಮನುಷ್ಯರನ್ನು ಬಾಧಿಸುವ ಕಾಯಿಲೆಗಳು ಕೊರೊನಾದೊಂದಿಗೆ ಅಂತ್ಯವಾಗುವುದಿಲ್ಲ. ಹೊಸ ಕಾಯಿಲೆಗಳು ಬರುತ್ತಲೇ ಇರುತ್ತವೆ ಮತ್ತು ಜಗತ್ತನ್ನು ಬದಲಾಯಿಸುತ್ತ ಹೋಗುತ್ತವೆ. ಅದಕ್ಕೆ ಮನುಷ್ಯ ಹೊಂದಿಕೊಳ್ಳಬೇಕಾಗುತ್ತದೆ. ಭಾರತೀಯ ಔಷಧ ಪದ್ಧತಿ ರೋಗ ಬಂದ ಮೇಲೆ ಅದನ್ನು ತಡೆಯುವ ಬದಲು ಅದು ಬರದಂತೆ ಪ್ರತಿರೋಧಿಸುವುದಕ್ಕೆ ಆದ್ಯತೆ ನೀಡುತ್ತದೆ. ಅದು ಆರೋಗ್ಯಪೂರ್ಣ ಆಹಾರ ವಿಹಾರಗಳಿಗೆ ಆದ್ಯತೆ ನೀಡಿ ಸ್ವಸ್ಥ ಜೀವನ ವಿಧಾನವನ್ನು ಪ್ರತಿಪಾದಿಸುತ್ತದೆ. ಈ ಕಾಲದಲ್ಲಿ ಭಾರತೀಯರು ತಮ್ಮ ಪರಂಪರೆಗೆ ಮರಳಬೇಕಾಗುತ್ತದೆ ಎಂದು ಅವರು ಹೇಳಿದರು. ಕೇದಾರ್…

Read More