ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮನುಷ್ಯನ ಶರೀರ ದೃಢವಾಗಿದ್ದರೆ ರೋಗ ಅಷ್ಟಾಗಿ ಬಾಧಿಸದು. ಭಾರತೀಯ ಪರಂಪರೆಯ ಅಯುರ್ವೇದ ಪದ್ಧತಿಯಲ್ಲಿ ಅಂತಹ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಮತ್ತು ಔಷಧಿಗಳು ರೂಢಿಯ್ಲವೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಆಲೂರಿನ ಚಿತ್ರಕೂಟ ಮತ್ತು ತೇಜಸ್ವೇದ ಸಂಸ್ಥೆಗಳು ಹೊರತಂದಿರುವ ’ರಕ್ಷಾ ಪಂಚಕ’ ಕಿಟ್ ಬಿಡುಗಡೆಗೊಳಿಸಿ ಮಾತನಾಡಿದರು. ಮನುಷ್ಯರನ್ನು ಬಾಧಿಸುವ ಕಾಯಿಲೆಗಳು ಕೊರೊನಾದೊಂದಿಗೆ ಅಂತ್ಯವಾಗುವುದಿಲ್ಲ. ಹೊಸ ಕಾಯಿಲೆಗಳು ಬರುತ್ತಲೇ ಇರುತ್ತವೆ ಮತ್ತು ಜಗತ್ತನ್ನು ಬದಲಾಯಿಸುತ್ತ ಹೋಗುತ್ತವೆ. ಅದಕ್ಕೆ ಮನುಷ್ಯ ಹೊಂದಿಕೊಳ್ಳಬೇಕಾಗುತ್ತದೆ. ಭಾರತೀಯ ಔಷಧ ಪದ್ಧತಿ ರೋಗ ಬಂದ ಮೇಲೆ ಅದನ್ನು ತಡೆಯುವ ಬದಲು ಅದು ಬರದಂತೆ ಪ್ರತಿರೋಧಿಸುವುದಕ್ಕೆ ಆದ್ಯತೆ ನೀಡುತ್ತದೆ. ಅದು ಆರೋಗ್ಯಪೂರ್ಣ ಆಹಾರ ವಿಹಾರಗಳಿಗೆ ಆದ್ಯತೆ ನೀಡಿ ಸ್ವಸ್ಥ ಜೀವನ ವಿಧಾನವನ್ನು ಪ್ರತಿಪಾದಿಸುತ್ತದೆ. ಈ ಕಾಲದಲ್ಲಿ ಭಾರತೀಯರು ತಮ್ಮ ಪರಂಪರೆಗೆ ಮರಳಬೇಕಾಗುತ್ತದೆ ಎಂದು ಅವರು ಹೇಳಿದರು. ಕೇದಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುವುದು, ಪ್ರತೀ ವಿದ್ಯಾರ್ಥಿಗಾಗಿ ಶಿಕ್ಷಣ ಇಲಾಖೆಯಿಂದ ಸ್ಯಾನಿಟೈಸ್ ಗಳ ಪೂರೈಕೆಯಾಗಿದ್ದು, ಪ್ರತೀ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್ ಗಳನ್ನು ವಿತರಿಸಲಾಗುತ್ತಿದೆ. ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರದೊಂದಿಗೆ ಪ್ರವೇಶ ನೀಡಲು, ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲು ಕ್ರಮ ಕೈಗೊಂಡಿದ್ದು, 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.14ರ ಭಾನುವಾರ ಒಟ್ಟು 21 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರ, ತಮಿಳುನಾಡು, ಉತ್ತರಪ್ರದೇಶದಿಂದ ಹಿಂದಿರುಗಿದವರಾಗಿದ್ದು, ಓರ್ವ ಸ್ಥಳೀಯರ ಸಂಪರ್ಕ ಪತ್ತೆ ಹೆಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1026 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 789 ಮಂದಿ ಬಿಡುಗಡೆಯಾಗಿದ್ದು, 236 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಜೂನ್ 13ರಂದು ನಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಕರ್ಕುಂಜೆ ಗ್ರಾಮದ ಶೆಟ್ರಕಟ್ಟೆ ನಿವಾಸಿ ಲಕ್ಷ್ಮಣ ಪೂಜಾರಿ (38) ಮೃತ ಪಟ್ಟ ದುರ್ದೈವಿ. ಬಾವಿ ನಿರ್ಮಾಣ ಹಂತದಲ್ಲಿದ್ದು ರಿಂಗ್ ಇಳಿಸುವ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭ ಆಯಾ ತಪ್ಪಿ ಕಾಲು ಜಾರಿ ಲಕ್ಷ್ಮಣ ಪೂಜಾರಿ ಬಾವಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿ ಶಾಮಕದಳದ ಸಿಬ್ಬಂದಿಗಳು, ಗಂಗೊಳ್ಳಿ ಠಾಣೆಯ ಪೊಲೀಸರು, ಗಂಗೊಳ್ಳಿ 24*7 ಅಂಬ್ಯುಲೆನ್ಸ್, ಸ್ವಯಂಸೇವಕ ತಂಡದವರ ಸಹಕಾರದಿಂದ ಶವವನ್ನು ಮೇಲೆತ್ತಲಾಯಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 . ► ಉಡುಪಿ: ಶನಿವಾರ 15 ಕೊರೋನಾ ಪಾಸಿಟಿವ್ ದೃಢ. ಒಟ್ಟು 720 ಮಂದಿ ಡಿಸ್ಚಾರ್ಜ್ – https://kundapraa.com/?p=38608 .…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.13ರ ಶನಿವಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಹಾರಾಷ್ಟ್ರ ಮೂಲದ್ದಾಗಿವೆ. ರಾಜ್ಯದ ಬುಲೆಟಿನಿನಲ್ಲಿ 14 ಪಾಸಿಟಿವ್ ಬಂದಿರುವ ಬಗ್ಗೆ ತಿಳಿಸಲಾಗಿದೆ. ಆದರೆ ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಒಟ್ಟು 15 ಪ್ರಕರಣಗಳು ವರದಿಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1006 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 720 ಮಂದಿ ಬಿಡುಗಡೆಯಾಗಿದ್ದು, 285 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೃತರಾದ ತನ್ನ ತಾಯಿಯನ್ನು ಕಂಡು ಮಗನೂ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಮನಕಲಕುವ ಘಟನೆಯೊಂದು ಕುಂದಾಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಸಮೀಪದ ಮಹಾರಾಜ್ ಜುವೆಲ್ಲರ‍್ಸ್ ಮಾಲಿಕ ದಿ. ರಮೇಶ್ ಶೇಟ್ ಪತ್ನಿ ಶಕುಂತಲಾ ಶೇಟ್ (80) ಸ್ವಗೃಹದಲ್ಲಿ ಮೃತಪಟ್ಟಿದ್ದರು. ತಾಯಿ ಮೃತಪಟ್ಟ ನೋವಿನಲ್ಲಿದ್ದ ಮಗ ಪ್ರಶಾಂತ್ ಶೇಟ್ (46) ಕೂಡ ಒಂದು ಗಂಟೆಯ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮೃತ ಶಕುಂತಲಾ ಅವರಿಗೆ 4 ಗಂಡು ಹಾಗೂ 2 ಪುತ್ರಿಯರಿದ್ದು, ಅವರು ಗಂಡು ಮಕ್ಕಳೊಂದಿಗೆ ಕುಂದಾಪುರದಲ್ಲಿನ ಮನೆಯಲ್ಲಿ ವಾಸವಾಗಿದ್ದರು. ಪ್ರಶಾಂತ್ 3ನೇ ಪುತ್ರರಾಗಿದ್ದು, ಅವಿವಾಹಿತರಾಗಿದ್ದರು. ಕುಂದಾಪುರದ ಜುವೆಲ್ಲರ್ಸ್ ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದ ಅವರು ಅಪಾರ ಮಿತ್ರ ವರ್ಗವನ್ನು ಹೊಂದಿದ್ದರು. ಶನಿವಾರ ನಗರದ ಚಿಕ್ಕನ್‌ಸಾಲ್ ರಸ್ತೆಯಲ್ಲಿ ಇರುವ ಹಿಂದೂ ಸ್ಮಶಾನದಲ್ಲಿ ತಾಯಿ ಹಾಗೂ ಮಗನ ಅಂತ್ಯ ಸಂಸ್ಕಾರ ಒಟ್ಟಿಗೆ ನಡೆಸಲಾಯಿತು. ಕುಂದಾಪುರದ ಜುವೆಲ್ಲರಿ ಅಂಗಡಿಗಳು ಮೃತರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪೊಲೀಸ್ ಇಲಾಖೆಯಲ್ಲಿ 2020-21 ನೇ ಸಾಲಿನ ನೇಮಕಾತಿಗೆ ಸಂಬOದಿಸಿದOತೆ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬOದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಈ ಹಿಂದೆ ನಿಗಧಿಪಡಿಸಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿದೆ. ಇನ್ನುಳಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ (ವಯೋಮಿತಿ ಸೇರಿ) ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. ಎ.ಪಿ.ಸಿ 444 ಹುದ್ದೆ ಮತ್ತು ಸಿ.ಪಿ.ಸಿ 558 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 9 ಆಗಿದ್ದು, ಶುಲ್ಕ ಪಾವತಿಸಲು ಜುಲೈ 13 ಕೊನೆಯ ದಿನಾಂಕವಾಗಿದೆ. ಸಿ.ಪಿ.ಸಿ 2007 ಮತ್ತು ಎ.ಪಿ.ಸಿ 1005 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 13 ಆಗಿದ್ದು, ಶುಲ್ಕ ಪಾವತಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ. ಸ್ಟೇ ಆರ್.ಪಿ.ಸಿ 252 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.11ರ ಗುರುವಾರ ಒಟ್ಟು 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 20 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಸ್ಥಳೀಯ ಪ್ರಕರಣಗಳಲ್ಲಿ ಓರ್ವ ಆರೋಗ್ಯ ಕಾರ್ಯಕರ್ತೆ ಹಾಗೂ ಡಿ ದರ್ಜೆಯ ನೌಕರರಿಗೆ ಪಾಸಿಟಿವ್ ಬಂದಿದೆ. 22 ಮಂದಿಯಲ್ಲಿ 11 ಪುರುಷರು, 9 ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ. ಎಲ್ಲರಿಗೂ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಗುಣಮುಖರಾದ 106 ಮಂದಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 968 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 550 ಮಂದಿ ಬಿಡುಗಡೆಯಾಗಿದ್ದು, 417 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆ: ಗುರುವಾರ 22 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38496 . ► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ವಿರುದ್ದ ಜಿಲ್ಲಾಡಳಿತ ಕೈಗೊಂಡಿರುವ ಕಾರ್ಯಗಳ ಕುರಿತು ಸುಖಾ ಸುಮ್ಮನೇ , ಯಾವುದೇ ಆಧಾರವಿಲ್ಲದೇ , ಸಾಮಾಜಿಕ ಮಾದ್ಯಮದಲ್ಲಿ ಅವಹೇಳನವಾಗಿ ಅಪವಾದ ಪ್ರಕಟಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಅನ್ವಯ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ 947 ಪಾಸಿಟಿವ್ ಪ್ರಕರಣ ಪೈಕಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿದ್ದು, ಜಿಲ್ಲಾಡಳಿತ ಹಾಗೂ ಯಾವುದೇ ಸಂಸ್ಥೆಯ ವಿರುದ್ದ ಇಲ್ಲಸಲ್ಲದ ಕಲ್ಪನೆ ಮಾಡಿಕೊಂಡು ಆಧಾರರಹಿತ ಅಪವಾದ ಮಾಡಿ, ಪ್ರಕಟಿಸುವುದು ಸಹಿಸಲು ಅಸಾಧ್ಯವಾದ ಅಪವಾದವಾಗಿದ್ದು, ಯಾರೇ ಆದರೂ ಸಾಮಾಜಿಕ ಮಾಧ್ಯಮದಲ್ಲಿ ಮನಸ್ಸಿಗೆ ಬಂದದ್ದು ಬರೆಯಬಹುದು ಎಂಬುದು ಅವರ ತಪ್ಪು ಕಲ್ಪನೆ,ಅಂತಹವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 . ► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆ.ಪಿ.ಸಿ.ಸಿ. ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರರವರು, ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು ಮುಂದಿನ ಸ್ಥಳಿಯಾಡಳಿತ ಚುನಾವಣೆಯನ್ನು ಪಕ್ಷ ಸಮರ್ಥವಾಗಿ ಎದುರಿಸಲಿದೆ ಎಂದರು . ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕುರಿತು ಕುಂದಾಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಅಧ್ಯಕ್ಷತೆ ವಹಿಸಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ ಕೊಡವೂರು , ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಹೆಗ್ಡೆ, ಪ್ರಸನ್ನ ಕುಮಾರ ಶೆಟ್ಟಿ ಬಿ. ಹಿರಿಯಣ್ಣ , ಮಲ್ಯಾಡಿ ಶಿವರಾಮ ಶೆಟ್ಟಿ ದೇವಕಿ , ಮುರಳಿ ಶೆಟ್ಟಿ , ನವೀನ್ ಡಿ ಸೊಜಾ ದಿನೇಶ ಪುತ್ರನ್ ಅಣ್ಣಯ್ಯ ಶೇರಿಗಾರ್, ವಿಶ್ವಾಸ ಅಮೀನ್ ಯುವ…
