Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲೆ 3182 ಝೋನ್-1 ಇದರ ಸಹಾಯಕ ಗವರ್ನರ್ ಡಾ. ಉಮೇಶ್ ಪುತ್ರನ್ ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಬುಧವಾರ ಕ್ಲಬ್‌ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಎಚ್. ಉದಯ ಆಚಾರ್ ಅವರಿಗೆ ರೋಟರ್ ಕಾಲರ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182ನಿಂದ ಪ್ರಸಕ್ತ ಸಾಲಿನಲ್ಲಿ ಕಲಿಕಾ ಸಾಮರ್ಥ ನ್ಯೂನ್ಯತೆ ಇರುವ ಮಕ್ಕಳ ಅಭ್ಯುದಯಕ್ಕೆ ಸಂಬಂಧಿಸಿದ ಯೋಜನೆಗಳು, ಅಂಗಾಂಗ ಹಾಗೂ ಚರ್ಮ ದಾನ, ಸ್ತ್ರೀ ಸಬಲೀಕರಣ, ಇಲೆಕ್ಟ್ರಾನಿಕ್ಸ್ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಬಗ್ಗೆ ಕಾರ್ಯನಿರ್ವಹಿಸಲಾಗುತ್ತದೆ ಎಂದ ಅವರು ಸೇವಾಕಾಂಕ್ಷಿ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಕ್ರೂಢಿಕರಿಸಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನ ಗುರುತಿಸುತ್ತಾರೆ. ಒಬ್ಬರಿಂದಾಗದ ಕೆಲಸ ಸಂಸ್ಥೆಯ ಮೂಲಕ ಮಾಡಬಹುದು. ಹೀಗಾಗಿ ಎಲ್ಲರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್‌ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ. ಅಲ್ಲದೇ ಜೀವನದ ಜಂಜಾಟದಿಂದ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ಇದರಲ್ಲಿ ಕಾಣಬಹುದಾಗಿದೆ ಎಂದು ಕಾಸರಗೋಡಿನ ಬ್ರಹ್ಮಕುಮಾರಿ ಬಿ. ಕೆ. ವಿಜಯಲಕ್ಷ್ಮೀ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್‌ವೀಲ್ ಕ್ಲಬ್‌ನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್‌ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಸ್ವ-ಬೆಳವಣಿಗೆಯೊಂದಿಗೆ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು. ೨೦೨೨-೨೩ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಯ್ಕೆಯದ ಭಾನುಮತಿ ಬಿ. ಕೆ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿಂಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.07: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಾಲೂಕಿನ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಾಲ್ಬುಡ, ಕುದ್ರು ಪ್ರದೇಶ ಮುಳುಗಡೆಯಾಗಿದ್ದು, ಸಾಲ್ಬುಡದ ಕುದ್ರು ಗ್ರಾಮದ ಸಂತ್ರಸ್ತರನ್ನು ಎಸ್.ಡಿ.ಆರ್.ಎಫ್ ತಂಡ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮರವಂತೆ, ಬಡಾಕೆರೆ ಮೊದಲಾದ ಪ್ರದೇಶಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ನೆರೆಯಿಂದಾಗಿ ಜನರು ಸಂಚಾರಕ್ಕೆ ದೋಣಿಗಳನ್ನು ಬಳಸುವಂತಾಗಿದೆ. ಪಂಚಗಂಗಾವಳಿ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಹಲವೆಡೆ ನೆರೆ ಕಾಣಿಸಿಕೊಂಡಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜು.6ರಂದು ಮಳೆಯಿಂದಾಗಿ ಗಂಗೊಳ್ಳಿ, ಹೊಸಂಗಡಿ, ಬಸ್ರೂರು, ಯಡ್ಯಾಡಿ ಮತ್ಯಾಡಿ, ಕುಳಂಜೆ, ಅಂಪಾರು, ಕೊರ್ಗಿ, ಸಿದ್ದಾಪುರ, ಹೆಮ್ಮಾಡಿ, ಗಂಗೊಳ್ಳಿ, ತೆಕ್ಕಟೆ, ಶಿರೂರು, ನಾವುಂದ ಗ್ರಾಮದ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಅಂದಾಜು 6.25 ಲಕ್ಷ ರೂ. ಹಾನಿಯಾದ ಬಗ್ಗೆ ವರದಿಯಾಗಿದೆ. ಇನ್ನು ಮರವಂತೆ, ಕಿರಿಮಂಜೇಶ್ವರ, ಗಂಗೊಳ್ಳಿಯ ಕೆಲ ಭಾಗಗಳಲ್ಲಿ ಕಡಲಕೊರೆತ ಕಾಣಿಸಿಕೊಂಡಿದ್ದು, ಸಮುದ್ರ ತಡದ ಜನರು ಭಯದಿಂದ ಬದುಕುವಂತಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ8 ಹಾಗೂ 9ರಂದು ಎಲ್ಲಾ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 48 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಹಾಗೂ ಮರವಂತೆ ಪ್ರದೇಶಗಳಿಗೆ ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಶಾಸಕರಾದ ಸುಕುಮಾರ್ ಶೆಟ್ಟಿ ಅವರು ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಮರವಂತೆ ಹೊರಬಂದರು ಪ್ರದೇಶದ ಸಮೀಪ ಕಡಲ್ಕೊರೆತದಿಂದ ವ್ಯಾಪಕ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಂಸದರು ಕಡಲ್ಕೊರೆತಕ್ಕೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹಾಗಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು. ಶಾಸಕರ ಜೊತೆಗೂಡಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು. ಕಾಮಗಾರಿಯಲ್ಲಿ ಹಣ ದುರುಪಯೋಗವಾದರೆ ಈ ಕುರಿತು ಸೂಕ್ತ ತನಿಖೆ ನಡೆಯಬೇಕು. ರಾಜ್ಯ ಸರ್ಕಾರದ ವತಿಯಿಂದ ಮರವಂತೆ ಭಾಗದ ವಿವಿಧ ಅಭಿವೃದ್ಧಿಗೆ ಈಗಾಗಲೇ 84 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದರು. ಪ್ರಕೃತಿಯ ಮುಂದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಪ್ರಸಕ್ತ ಮಳೆಗಾಲದಲ್ಲಿ ಯಾವುದೇ ಜೀವ ಹಾಗೂ ಜಾನುವಾರು ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಅವಘಢಗಳು ನಡೆಯದಂತೆ ತಪ್ಪಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿವೃಷ್ಠಿಯಿಂದಾಗಿ ಮನೆಗಳು ಹಾನಿ ಉಂಟಾದ ಸಂದರ್ಭದಲ್ಲಿ ನಷ್ಠ ಪರಿಹಾರ ಅಂದಾಜಿಸುವಾಗ ಹಾನಿಯ ವಸ್ತುಸ್ಥಿತಿಯನ್ನು ವೈಜ್ಞಾನಿಕವಾಗಿ ಅಂದಾಜಿಸಿ ಗ್ರಾಮ ಲೆಕ್ಕಿಗರು ಪ್ರಾಥಮಿಕ ವರದಿಯನ್ನು ಸಲ್ಲಿಸಬೇಕು. ಅದರ ಆಧಾರದ ಮೇಲೆ ಹಾನಿಯ ಪ್ರಮಾಣವನ್ನು ಇಂಜಿನಿಯರ್ ಗಳು ನಿರ್ಧರಿಸುವುದು ಸೂಕ್ತ ಎಂದರು. ಕೆಲವೊಮ್ಮೆ ಮಳೆಯ ನೀರಿನಿಂದ ಮನೆಗಳ ತಳಪಾಯಗಳು ಹಾನಿಯಾದಲ್ಲಿ ಅಂತಹ ಮನೆಯನ್ನು ಸಂಪೂರ್ಣವಾಗಿ ಕೆಡವಿ ಹೊಸದಾಗಿ ನಿರ್ಮಾಣ ಮಾಡಬೇಕಾಗುತ್ತದೆ ಅವು ದುರಸ್ಥಿಗೆ ಯೋಗ್ಯವಾಗಿರುವುದಿಲ್ಲ ಇಂತಹವುಗಳನ್ನು ಅಂದಾಜಿಸುವಾಗ ಹಾನಿಯು ಸೂಕ್ಷö್ಮತೆಯನ್ನು ಆಧರಿಸಿ ವರದಿ ನೀಡಬೇಕಾಗುತ್ತದೆ ಎಂದರು. ಮಳೆಯ ನೀರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.5: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 6ರ ಬುಧವಾರವೂ ಕೂಡ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರದಂದು ಜಿಲ್ಲೆಯಲ್ಲಿ ನಿರಂತರವಾಗಿ ಎಡೆಬಿಡದೆ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ನಿರಂತರ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಬೆಳಿಗ್ಗೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಸರಕಾರಿ ಬಸ್ಸಿಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸೇರಿದಂತೆ ಮೂವರಿಗೆ ಗಂಭೀರ ಗಾಯವಾದ ಘಟನೆ ನಾವುಂದ ಬಸ್ ನಿಲ್ದಾಣದ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಬಸ್ಸು, ನಾವುಂದ ಬಸ್ ನಿಲ್ದಾಣ ಹಾಗೂ ಬ್ಯಾರಿಕೇಡ್ ಬಳಿ ಬಸ್ ನಿಧಾನಗೊಂಡಾಗ ಹಿಂಬಂದಿಯಿಂದ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನ ಕುಟುಂಬದ ಈರ್ವರೂ ಮಹಿಳೆಯರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರ ಸಹಕಾರದಿಂದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಉಡುಪಿ: ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Read More