Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿ, 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ (ಮರಣ ಹೊಂದಿರುವ ಹಾಗೂ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ) ಪರಿಪಕ್ವ ಮೊತ್ತ ರೂ. 32,351 ಅನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3405 ಫಲಾನುಭವಿಗಳನ್ನು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು ತಡವಾಗಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಅರ್ಹ ಫಲಾನುಭವಿಗಳ ಮಾಹಿತಿಯನ್ನು ಆನ್‌ಲೈನ್ ನಲ್ಲಿ ಅಳವಡಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುವುದರಿಂದ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ Payment Module ನಲ್ಲಿ ಮಾಹಿತಿಯನ್ನು ಅಳವಡಿಸಿಕೊಳ್ಳಬಹುದಾಗಿದೆ. 2007-08 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ನೋಂದಾಯಿಸಿ 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗಾಗಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಸದರು ಮತ್ತು ಕುಂದಾಪುರ ಶಾಸಕರು ಗ್ರಾಮ ಪಂಚಾಯತ್‌ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕುರಿತು ಸಭೆ ಕರೆದಿರುವುದು ಅತ್ಯಂತ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಘನ ತ್ಯಾಜ್ಯ ವಿಲೇವಾರಿ ಮಾಡುವಾಗ ಹಸಿಕಸ ಹಾಗೂ ಒಣಕಸ ವಿಲೆಯನ್ನು ಹೆಚ್ಚಿನ ಎಲ್ಲಾ ಗ್ರಾಮ ಪಂಚಾಯತುಗಳು ಸಾರ್ವಜನಿಕರಲ್ಲಿ ಜಾಗೃತಗೊಳಿಸುವುದರ ಮೂಲಕ ಕಸ ವಿಲೇವಾರಿಯನ್ನು ಕ್ರಮಬದ್ದವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಿವೆ. ಆದರೆ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಇರುವ ಸ್ಥಳದ ಸಮಸ್ಯೆಗಳು ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಇತ್ಯರ್ಥವಾಗಿದೆ ಎನ್ನುವುದು ಅವರ ಮಾಹಿತಿಯ ಕೊರತೆಯಿಂದ ಇರಬಹುದು. ಇಂದಿಗೂ ಅದೆಷ್ಟೋ ಗ್ರಾಮ ಪಂಚಾಯತುಗಳಲ್ಲಿ ವಿಶೇಷವಾಗಿ ಕರಾವಳಿ ಭಾಗದ ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ನಿರ್ಮಾಣಕ್ಕೆ ಸ್ಥಳದ ಸಮಸ್ಯೆಯಿದೆ, ಇನ್ನು ಪುರಸಭೆಯವರು ಕಂದಾವರ ಗ್ರಾಮದಲ್ಲಿ ಘನ ತ್ಯಾಜ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಜಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಮೊಜಮ್, ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿಯಾದ ಅಬ್ದುಲ್ ಮುಬಿನ್ ಹಾಗೂ ತಸ್ಮಿಯಾ ದಂಪತಿಯ ಪುತ್ರ. ವಿಜ್ಞಾನ ವಿಭಾಗದ ಅನೂಪ್ ಗಾಣಿಗ, ಹಾಗೂ ಶುಭಾ ಇಂಡಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಪ್ರಸ್ತುತ ಸಂಸದರಾಗಿರುವ ಜಗದೀಶ್ ಶೆಟ್ಟರ್ ಮಂಗಳವಾರ ಉಡುಪಿ ಜಿಲ್ಲೆಯ ಸಾಸ್ತಾನದ ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಮುಖ್ಯಸ್ಥರಾದ ಸುಬ್ರಹ್ಮಣ್ಯ ಮಧ್ಯಸ್ಥ ಬರಮಾಡಿಕೊಂಡು ಮುಖ್ಯಮಂತ್ರಿ ಆಗುದಕ್ಕಿಂತ ಮೊದಲು ನಮ್ಮ ದೇಗುಲವನ್ನು ಸಂದರ್ಶಿಸಿದ ಶೆಟ್ಟರ್ ಕೆಲವೆ ದಿನಗಳಲ್ಲಿ ಮುಖ್ಯಮಂತ್ರಿ ಪಟ್ಟವನ್ನಲ್ಲಂಕರಿಸಿದರು.ಈ ಹಿನ್ನಲ್ಲೆಯಲ್ಲಿ ದೇಗುಲವನ್ನು ವಿಶೇಷವಾಗಿ ಆರಾಧಿಸಿಕೊಂಡು ಬರುತ್ತಿದ್ದಾರೆ.ಪ್ರಸ್ತುತ ಭೇಟಿ ನಂತರ ದೇವರ ಅನುಗ್ರಹದಿಂದ ಕೇಂದ್ರ ಸಚಿವರಾಗಿ ಹೊರಹೊಮ್ಮಲ್ಲಿದ್ದಾರೆ ಎಂದು ಪ್ರಾರ್ಥಿಸಿದರು. ಇದೇ ವೇಳೆ ದೇಗುಲದ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಸಲ್ಲಿಸಿದ ಶೆಟ್ಟರ್ ಅವರನ್ನು ಶಾಲು ಹೋದಿಸಿ ಗೌರವಿಸಿದರು. ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಸಾಹುಕಾರ್, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ, ಶಕ್ತಿ ಕೇಂದ್ರದ ಆಧ್ಯಕ್ಷ ರಮೇಶ್ ಕಾರಂತ್, ಮುಖಂಡರಾದ ಶಂಕರ್ ಕುಲಾಲ್, ಸಂಜೀವ ಪೂಜಾರಿ, ಸಂಸದರ ಆಪ್ತರಾದ ಜಗನಾಥ್ ಬಂಗೇರ ಬಂಟ್ವಾಳ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ (7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಕರಾಟೆ ಚಾಂಪಿಯನ್‌ಶಿಪ್ ಕೋರಮಂಗಲದ ಒಳಾಂಗಣ ಕ್ರೀಡಾಂಗಣ ಬೆಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು.  ಸೌತ್ ಝೋನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತಿಯಲ್ಲಿ ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸದೇ ಸಾರ್ವಜನಿಕರಿಗೆ ಅನಾನುಕೂಲ ಮಾಡುತ್ತಿರುವುದನ್ನು ಖಂಡಿಸಿ ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ‌ನೇತೃತ್ವದಲ್ಲಿ ಮಂಗಳವಾರ ಉಪ್ಪುಂದ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಯಿತು. ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತವು ಕಳೆದ ಕೆಲವು ತಿಂಗಳುಗಳಿಂದ ಸಭೆಗಳನ್ನು ನಡೆಸದೇ ಇರುವ ಕಾರಣ ಸಾರ್ವಜನಿಕರ ತೀರಾ ಅವಶ್ಯ ಇರುವ ಹಲವಾರು ಅರ್ಜಿಗಳು ವಿಲೇವಾರಿಯಾಗದೇ ತೊಂದರೆಯಾಗುತ್ತಿದ್ದು ಗ್ರಾಮ ಪಂಚಾಯತ್ ಆಡಳಿತದ ಈ ರೀತಿಯ ಸಾರ್ವಜನಿಕ ವಿರೋಧಿ ಧೋರಣೆಯನ್ನು ಉಪ್ಪುಂದ ಗ್ರಾಮೀಣ ಕಾಂಗ್ರೆಸ್ ಸಮಿತಿ ಖಂಡಿಸಿತು. ಈ ಸಾರ್ವಜನಿಕ ವಿರೋಧಿ ಧೋರಣೆಗಳನ್ನು ಸರಿಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ ಉಪ್ಪುಂದ ಗ್ರಾಮಸ್ಥರು ಹಾಗೂ ಸಾರ್ವಜನಿಕ ಸ್ನೇಹಿ ಆಡಳಿತ ನೀಡುವಂತೆ ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತಕ್ಕೆ ಈ ಪ್ರತಿಭಟನೆಯ ಮೂಲಕ ಎಚ್ಚರಿಸಲಾಯಿತು. ಮುಂದಿನ ದಿನಗಳಲ್ಲಿ ಈ ರೀತಿಯ ಸಾರ್ವಜನಿಕ ವಿರೋಧಿ ಧೋರಣೆಗಳು ಉಪ್ಪುಂದ ಗ್ರಾಮ ಪಂಚಾಯತ್ ಆಡಳಿತದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ದಿನವನ್ನು ಸ್ಮರಣೀಯವಾಗಿಸಲು ವಿವಿಧ ಆಟಗಳು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಪ್ರಮುಖ ಅಂಶವಾಗಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೇಘರಾಜನನ್ನು ‘ರಾಜಕುಮಾರ’ ಹಾಗೂ ಪ್ರಥಮ ಬಿಸಿಎ ವಿದ್ಯಾರ್ಥಿನಿ ಮೌಲ್ಯ, ‘ರಾಜಕುಮಾರಿ’ ಎಂದು ಆರಿಸಲ್ಪಟ್ಟರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ, ಬಿಸಿಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವೃಂದದವರು, ತೃತೀಯ ಬಿಸಿಎ ಮತ್ತು ದ್ವಿತೀಯ ಬಿಸಿಎ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಬಿಸಿಎ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಧರ್ಮಸ್ಥಳ ಕ್ಷೇತ್ರ ಕೇವಲ ತೀರ್ಥಕ್ಷೇತ್ರ ಮಾತ್ರವಾಗಿರದೆ ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾಗಿದೆ. ಇಂತಹ ಪವಿತ್ರ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಿ ಅಪಪ್ರಚಾರಕ್ಕೆ ತೊಡಗಿರುವುದು ಸಮಸ್ತ ಹಿಂದೂಗಳ ಭಾವನೆಗಳಿಗೆ ಮಾಡಿದ ಅನ್ಯಾಯ. ಖಾವಂದರ ಮತ್ತು ಕ್ಷೇತ್ರದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡನೀಯ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಬೈಂದೂರು ರೋಟರಿ ಭವನದಲ್ಲಿ ಬೈಂದೂರು ತಾಲೂಕು ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆ ಹಾಗೂ ಜಾಥಾ ಉದ್ಘಾಟಿಸಿ ಮಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ರಾಜ್ಯದ ಕೋಟ್ಯತರ ಭಕ್ತರು ಖಾವಂದರು ಮತ್ತು ಧರ್ಮಸ್ಥಳ ಕ್ಷೇತ್ರದ ಸಮಾಜಮುಖಿ ಕಾರ್ಯದ ಜತೆಗಿದ್ದಾರೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡು ವವರನ್ನು ಎಂದಿಗೂ ಸಹಿಸುವುದಿಲ್ಲ ಎಂದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಧರ್ಮಸ್ಥಳ ಪ್ರಕರಣದ ಗೊಂದಲಗಳು ಮತ್ತು ಅಪಪ್ರಚಾರಗಳಲ್ಲಿ ತೊಡಗಿಸಿಕೊಂಡಾಗ ರಾಜ್ಯ ಸರಕಾರ ಎಸ್ ಐಟಿ ತನಿಖೆಗೆ ಆದೇಶಿಸಿ ದಕ್ಷ ಅಧಿಕಾರಿಗಳನ್ನು ನೇಮಿಸಿರುವುದರಿಂದ ಅಪಪ್ರಚಾರ ಮಾಡುವವರ…

Read More