Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರಲ್ಲಿ ಅಡಗಿರುವ ಹಲವಾರು ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸುತ್ತಾ, ಮಾನಸಿಕ ಖಿನ್ನತೆ, ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ, ಆರೋಗ್ಯದ ಬಗ್ಗೆ ಮತ್ತು ಇಂದಿನ ಯುಗದಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ದೈಹಿಕ ಹಾಗೂ ಬೌದ್ಧಿಕ ಸಮಸ್ಯೆಗಳ ಬಗ್ಗೆ ಮತ್ತು ಇವುಗಳ ಪರಿಹಾರಗಳ ಬಗ್ಗೆ ಡಾ. ಎನ್. ಆರ್. ಆಚಾರ್ಯ ಆಸ್ಪತ್ರೆಯ ಮನೋರೋಗ ತಜ್ಞರು ಡಾ. ಮಹಿಮಾ ಆಚಾರ್ಯ ತಿಳಿಸಿದರು. ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಮಹಿಳಾ ದೌರ್ಜನ್ಯ ತಡೆ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ್ಯ, ನ್ಯಾಷನಲ್ ಮೆಡಿಕೋಸ್ ಒರ್ಗನೈಸೇಷನ್ (ಎನ್‌ಎಮ್‌ಒ) ಇವರ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಲ್ಲಿ ಶೈಕ್ಷಣಿಕೇತರ ಸಮಸ್ಯೆಗಳು ಮತ್ತು ಪರಿಹಾರಗಳು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರು ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಎನ್.ಸಿ.ಸಿ ಸೇನಾ ಕೆಡೆಟ್ ಜೂನಿಯರ್ ಅಂಡರ್ ಆಫೀಸರ್ ಹನಿ ಹೆಗ್ಡೆ ಅವರು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 12, 2025 ರವರೆಗೆ ದೆಹಲಿಯಲ್ಲಿ ನಡೆಯಲಿರುವ ಥಾಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 1 ರಿಂದ ಜೂನ್ 10, 2025 ರವರೆಗೆ ಕಾರ್ಕಳದಲ್ಲಿ ನಡೆದ ಮೊದಲ ಶಿಬಿರ, ಜುಲೈ 6 ರಿಂದ ಜುಲೈ 15, 2025 ರವರೆಗೆ ಮೂಡಬಿದ್ರಿಯಲ್ಲಿ ನಡೆದ ಎರಡನೇ ಶಿಬಿರ, ಜುಲೈ 17 ರಿಂದ ಜುಲೈ 26, 2025 ರವರೆಗೆ ಮೈಸೂರಿನಲ್ಲಿ ನಡೆದ ಮೂರನೇ ಶಿಬಿರ TSC – IGC, ಜುಲೈ 27 ರಿಂದ ಆಗಸ್ಟ್ 5, 2025 ರವರೆಗೆ ಮೈಸೂರಿನಲ್ಲಿ ನಡೆದ ನಾಲ್ಕನೇ ಶಿಬಿರ TSC – 1, ಆಗಸ್ಟ್ 10 ರಿಂದ ಆಗಸ್ಟ್ 19, 2025 ರವರೆಗೆ ಮೈಸೂರಿನಲ್ಲಿ ನಡೆದ 5ನೇ ಶಿಬಿರ TSC – 2 ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ರೈತರಿಗೆ ಪೋತ್ಸಾಹಕರ ವಾತಾವರಣ ಸೃಷ್ಠಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತ ಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ 48ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತೆರೆಯ ಮರೆಯಲ್ಲಿರುವ ರೈತರನ್ನು ಹುಡುಕಿ ಗುರುತಿಸುವ ಕಾಯಕ ಅತ್ಯಂತ ಶ್ಲಾಘನೀಯ ಕಾರ್ಯ, ಪಂಚವರ್ಣ ಸಾಮಾಜಿಕ ಕಾರ್ಯ, ನಿರಂತ ಸ್ವಚ್ಛತೆ ಮತ್ತು ಹಸಿರು ಅಭಿಯಾನ ಮನೆಮಾತಾಗಿ ಬೆಳೆದಿದೆ ಎಂದು ಸಾಧಕ ರೈತ ಮಹಿಳೆ ಶಾರದ ಶೆಟ್ಟಿಗೆ ರೈತಪುರಸ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಗೋ ಮಾತೆ ಪೂಜೆ ನೆರವೆರಿಸಿಕೊಂಡು, ಗಿಡನೆಟ್ಟು ಪರಿಸರ ಜಾಗೃತಿ ಮೆರೆಯಲಾಯಿತು. ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ಯಶಸ್ಸು ಕೇವಲ ಪ್ರತಿಭೆಯಿಂದ ನಿರ್ಧಾರವಾಗುವುದಿಲ್ಲ. ಶ್ರೇಷ್ಠ ಸಾಧನೆಯೆಡೆಗಿನ ತುಡಿತ,  ಆತ್ಮವಿಶ್ವಾಸ, ನಿರಂತರ ಪರಿಶ್ರಮ ಹಾಗೂ ಗುರಿಯತ್ತ ಸರಿಯಾದ ಮಾರ್ಗದಲ್ಲಿ ಸಾಗುವ ಪ್ರಾಮಾಣಿಕ ಪ್ರಯತ್ನ ಸಾಧನೆಯನ್ನು ಸಹಕಾರಗೊಳಿಸುತ್ತದೆ ಎಂದು 2025ರ ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ 10ನೇ ರ್ಯಾಂಕ್‌ ಪಡೆದ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿ ಸಿಎ ತಬಿಶ್ ಹಸನ್ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿಯಲ್ಲಿ ಟಾಪ್ 10ರ ಒಳಗೆ ರ್ಯಾಂಕ್‌ ಪಡೆದ ಹಾಗೂ ಸಿಎ ಫೈನಲ್ ಪರೀಕ್ಷೆಯನ್ನು 2025ರಲ್ಲಿ ಉತ್ತೀರ್ಣರಾದ ಸಾಧಕರ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕ ಸಂದೇಶ ನೀಡಿದರು. ಗುರಿಯನ್ನು ಕೇಂದ್ರೀಕರಿಸಿ, ಅದನ್ನು ಸಾಧಿಸಲು ಶ್ರಮಿಸುವುದು ಅತಿ ದೊಡ್ಡ ಸಾಧನೆ ಏನಿಸಿಕೊಳ್ಳುತ್ತದೆ. ಸುಲಭವಾಗಿ ಸಿಗುವ ತಕ್ಷಣದ ಯಶಸ್ಸು ಭ್ರಮೆಯೆ ಸರಿ. ಶ್ರೇಷ್ಠ ಸಾಧನೆಗೆ ತಾಳ್ಮೆ ಮತ್ತು ಪರಿಶ್ರಮ ಬೇಕು. ಕನಸನ್ನು ನನಸಾಗಿಸಲು ತ್ಯಾಗ ಅಗತ್ಯ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ, ಭಂಡಾರ್ಕಾರ್ಸ್ ಪದವಿ ಕಾಲೇಜು ಮತ್ತು ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇವರು ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿ.ಯು ಅಂತರ್ ಕಾಲೇಜು ಬಾಲಕ- ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್. ಗೊಂಡ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಅಧ್ಯಕ್ಷ ಗುರುರಾಜ್ ಕೊತ್ವಾಲ್, ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹರೀಶ್ ಕಾಮತ್, ಪಿ.ಯು ದೈಹಿಕ ನಿರ್ದೇಶಕರುಗಳ ಸಂಘ ಇದರ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ಭಂಡಾರ್ಕಾರ್ಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಗ್ರಾಮಾಂತರ ಕೈಗಾರಿಕೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲ ಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ / ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಠ 8000 ರೂ. ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಹರು ವೆಬ್‌ಸೈಟ್ udupi.nic.in ಲಿಂಕ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ದೃಢೀಕರಣಗೊಂದಿಗೆ ಸೆಪ್ಟಂಬರ್ 15ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820-2574915 ಅನ್ನು ಸಂಪಕಿರ್ಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋಹಿತ್ 200 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಈಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಅನ್ನಪೂರ್ಣ ನರ್ಸರಿ ಪೇತ್ರಿ,ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಮೂರು ತಿಂಗಳ ಹಸಿರುಜೀವ 269ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕಾರ್ಯಕ್ರಮ ಹಸಿರುಜೀವ ಅಭಿಯಾನದಲ್ಲಿ ಕೋಟ, ಸಾಲಿಗ್ರಾಮ, ಗುಂಡ್ಮಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೆಟ್ಟ ಗಿಡಗಳಿಗೆ ಕಾಯಕಲ್ಪ ನೀಡುವ ಕಾರ್ಯಕ್ರಮ ಭಾನುವಾರ ಜರಗಿತು. ಕಾರ್ಯಕ್ರಮಕ್ಕೆ ನ್ಯಾಯವಾದಿ ರಾಜೇಶ್ ಬಾರಿಕೆರೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಕೋಟ, ಪಂಚವರ್ಣದ ಉಪಾಧ್ಯಕ್ಷರಾದ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ “ಏಕರೂಪದ ಮಾನಸಿಕ ಆರೋಗ್ಯ ನೀತಿ”ಯನ್ನು ರೂಪಿಸುವ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿಯನ್ನು ಅನುಷ್ಠಾನಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿರುವ ಮಾನಸಿಕ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ದೆ ಮತ್ತು ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಅರ್ಜಿಗಳನ್ನು 2025ನೇ ಸೆಪ್ಟೆಂಬರ್ 19…

Read More