ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬೆಳಗಿನ ವಾಯು ವಿಹಾರ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಅಧಿಕಾರಿಗಳು ಮಾದರಿಯಾಗಿದ್ದಾರೆ. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರೊಂದಿಗೆ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬೆಳಗಿನ ವಾಯು ವಿಹಾರ ಹೊರಟ ಅಧಿಕಾರಿಗಳಾದ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಹೆಬ್ರಿ ತಹಸೀಲ್ದಾರ್ ಪುರಂದರ ಅವರು , ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು , ಗಾಜಿನ ಬಾಟಲಿಗಳು , ಪ್ಲಾಸ್ಟಿಕ್ ಕವರ್ ಸೇರಿದಂತೆ ಮತ್ತಿತರ ಕಸವನ್ನು ಕಂಡು ಅದನ್ನು ಸ್ವಚ್ಛಗೊಳಿಸಲು ನಿರ್ಧರಿಸಿ, ಆಗುಂಬೆ ಘಾಟ್ ನ 14 ನೇ ತಿರುವಿನಲ್ಲಿ ಸುಮಾರು 200 ಮೀ ವರೆಗಿನ ರಸ್ತೆಯಲ್ಲಿ, ಪ್ರವಾಸಿಗರು ಮತ್ತು ಸಾರ್ವಜನಿಕರು ಎಸೆದಿದ್ದ 5ಚೀಲಕ್ಕೂ ಹೆಚ್ಚಿನ ಕಸವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟದೆ, ಒಂದೊಂದು ಅಕ್ಷರವನ್ನೂ ತುಂಬು ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಮುಸ್ತಾಕ್ ಹೆನ್ನಾಬೈಲು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ವೇದಿಕೆ ಆಯೋಜಿಸಿದ ಭಾವಭೃಂಗದ ಶೃಂಗ ಕವಿ ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕಿಯಾದ ದಿವ್ಯಾ ಶ್ರೀಧರ್ ರಾವ್ ಬೆಂಗಳೂರು ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಬದುಕಿನ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಸಾಹಿತ್ಯ ವೇದಿಕೆಯ ಸಂಯೋಜಕ, ಕನ್ನಡ ಉಪನ್ಯಾಸಕರಾದ ಸುಕುಮಾರ ಶೆಟ್ಟಿ ಕಮಲಶಿಲೆ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಸಂಸ್ಕೃತ ಉಪನ್ಯಾಸಕಿಯಾದ ಸುದಕ್ಷಿಣಾ ಎ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಿರಂತರ ಪರಿಶ್ರಮ, ದುಡಿಮೆಯಿಂದ ಜೀವನದಲ್ಲಿ ಯಶಸ್ಸು ಏಳಿಗೆ ಕಾಣಲು ಸಾಧ್ಯವಿದೆ. ಯಾವುದೇ ಕಾರ್ಯವನ್ನು ಯಶಸ್ಸಿನ ಪಥದತ್ತ ಕೊಂಡೊಯ್ಯುವುದು ಸಲಭವಲ್ಲ. ಇದಕ್ಕೆ ಏಕಾಗ್ರತೆ, ಶ್ರದ್ಧೆ ಅವಶ್ಯಕ. ಕಳೆದ ಆರು ದಶಕಗಳಿಂದ ಅಪೂರ್ವ ವಸ್ತುಗಳ ಸಂಗ್ರಹದ ಹವ್ಯಾಸ ಬೆಳೆಸಿಕೊಂಡು ಬಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಪೂರ್ವ ಪ್ರಾಚೀನ ವಸ್ತು ಸಂಗ್ರಹಕಾರ ಗಂಗೊಳ್ಳಿಯ ಭಾಸ್ಕರ ಕಲೈಕಾರ್ ಅವರು ತನ್ನ ಸಂಪಾದನೆಯ ಸಾವಿರಾರು ರೂಪಾಯಿ ಹಣವನ್ನು ಹಳೆಯ ಪ್ರಾಚೀಣ ಅಪೂರ್ವ ವಸ್ತುಗಳನ್ನು ಖರೀದಿಸಲು ಉಪಯೋಗಿಸಿ ಗಂಗೊಳ್ಳಿಯಲ್ಲಿ ಸುಸಜ್ಜಿತವಾದ ಮ್ಯೂಸಿಯಂ ನಿರ್ಮಿಸಿರುವುದು ಸ್ತುತ್ಯಾರ್ಹವಾದುದು ಎಂದು ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಕಲೈಕಾರ್ ಮಠದ ಬಳಿಯಲ್ಲಿ ಸುಮಾರು 25ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ‘ಗಂಗೊಳ್ಳಿ ಭಾಸ್ಕರ ಕಲೈಕಾರ್ ಮ್ಯೂಸಿಯಂ’ನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ರಾಜ್ಯದ ವಿವಿಧೆಡೆ ಸುಮಾರು 75ಕ್ಕೂ ಮಿಕ್ಕಿ ಉಚಿತ ಪ್ರದರ್ಶನ ನೀಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೊಂಕಣಿ ನಕ್ಷತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಟ್‌ಬೆಲ್ತೂರು ಗ್ರಾಮದ ಹರೆಗೋಡು ನಿವಾಸಿ ನಾಗರಾಜ ಮೊಗವೀರ (35) ಅಲಿಯಾಸ್ ಬುಲೆಟ್ ನಾಗ ಬಂಧಿತ ಆರೋಪಿ. ಅರಾಟೆ ಸೇತುವೆ ಕೆಳಗಡೆ ಹೊಳೆಯ ಬದಿಯಲ್ಲಿ ನಾಗರಾಜ ಮೊಗವೀರ ಎಂಬಾತ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಅಂದಾಜು ರೂ.16,000 ಮೌಲ್ಯದ 540 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ., ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್ ಸಿನ್ನೂರ ಸಂಗಣ್ಣ ಅವರು ಕುಂದಾಪುರ ತಹಶಿಲ್ದಾರ್ ಆನಂದಪ್ಪ ಅವರ ಸಮಕ್ಷಮ ಈ ದಾಳಿ ನಡೆಸಿದ್ದು ಕಾರ್ಯಾಚರಣೆಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಕ್ರೈಮ್ ವಿಭಾಗದ ಸಿಬ್ಬಂದಿಗಳಾದ ಮೋಹನ್ ಪೂಜಾರಿ ಶಿರೂರು, ಚಂದ್ರಶೇಖರ್ ಅರೆಶಿರೂರು, ಶ್ರೀಧರ್ ಸೆಳ್ಳೆಕುಳ್ಳಿ, ಪ್ರಿನ್ಸ್ ಕೆ.ಜೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಕಛೇರಿಯಲ್ಲಿ ಜನಸಾಮಾನ್ಯರ ಕೆಲಸವಾಗದಿದ್ದರೆ ಅಧಿಕಾರಿಗಳು ಆ ಹುದ್ದೆಯಲ್ಲಿದ್ದೇನು ಪ್ರಯೋಜನ. ಕೆಲಸ ಮಾಡಲಾಗದಿದ್ದರೆ ವರ್ಗಾವಣೆ ತೆಗೆದುಕೊಂಡು ಹೋಗಿ. ಹೀಗೆ ಜನರಿಗೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಿದ್ಧಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲವು ಬಡ ಕುಟುಂಬಗಳಿಗೆ 94ಸಿ ಹಕ್ಕುಪತ್ರ ನೀಡಿ ಆರ್‌ಟಿಸಿ ಮಾಡಿಕೊಳ್ಳುವ ಸಂದರ್ಭ ಆ ಜಾಗ ಡೀಮ್ಡ್ ಫಾರೆಸ್ಟ್‌ಗೆ ಸೇರಿದ್ದೆಂಬ ನೆಪ ಹೇಳುತ್ತಿರುವ ಬಗ್ಗೆ ಕುಂದಾಪುರ ತಹಶಿಲ್ದಾರರ ವಿರುದ್ಧ ಗರಂ ಆದರು. ಬೈಂದೂರು ವಿಧಾನಸಭಾ ಕ್ಷೇತ್ರದ ಹಲವೆಡೆ ಇದೇ ಪರಿಸ್ಥಿತಿ ಇದೆ. ಜನಸಾಮಾನ್ಯನೊಬ್ಬ ಮನೆ ಕಟ್ಟಿಕೊಳ್ಳಲು ಪಡೆದ ನಿವೇಶನಕ್ಕೂ ಅಧಿಕಾರಿಗಳು ನಿಲ್ಲದ ನೆಪ ಹೇಳಿ ಮತ್ತೆ ಕಿತ್ತುಕೊಳ್ಳುವುದು ಸರಿಯಲ್ಲ. ಈ ವ್ಯವಸ್ಥೆ ಸರಿಪಡಿಸಿದ್ದರೆ ತಾನು ಖುದ್ದಾಗಿ ತಾಲೂಕು ಕಛೇರಿಯಲ್ಲಿ ಪ್ರತಿಭಟನೆ ಕೂರುತ್ತೇನೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಹಂತದಲ್ಲಿಯೇ ಸೃಜನಶೀಲ ಕಲೆಗಳ ಬಗ್ಗೆ ಆಸಕ್ತಿ ವಹಿಸುವುದು ಅವರ ಮುಂದಿನ ಬದುಕಿಗೆ ನೆರವಾಗಲಿದೆ. ಯಾವುದೇ ಸ್ಪರ್ಧೆಯಲ್ಲಿ ಬಹುಮಾನ ಗಿಟ್ಟಿಸಿಕೊಳ್ಳುವುದಷ್ಟೇ ಮುಖ್ಯವಲ್ಲ, ಅದರಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಕೂಡ ಗೆಲುವೇ ಆಗಿದೆ ಎಂದು ಕುಂದಾಪ್ರ ಡಾಟ್ ಕಾಂ ಅಂತರ್ಜಾಲ ಸುದ್ದಿತಾಣದ ಸಂಪಾದಕ ಸುನಿಲ್ ಹೆಚ್. ಜಿ. ಹೇಳಿದರು. ಅವರು ಕುಂದಾಪುರ ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಕಿರುಚಿತ್ರ ಸ್ಪರ್ಧೆಯ ಕಿರುಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ ಯಾವುದೇ ಕ್ಷೇತ್ರದಲ್ಲಿ ಬದಲಾವಣೆ ಕಾಣಬೇಕಾದರೆ ಅದನ್ನು ಇನ್ಯಾರಿಂದಲೋ ನಿರೀಕ್ಷಿಸುವ ಬದಲಿಗೆ ನಾವೇ ಬದಲಾವಣೆಗೆ ಸಾಕ್ಷಿಯಾಗಬೇಕಿದೆ ಎಂದರು. ಪ್ರಾಂಶುಪಾಲರಾದ ಡಾ. ಶಮೀರ್ ಅವರು ಮಾತನಾಡಿ ಕೇವಲ ವಿದ್ಯಾಭ್ಯಾಸ ಮಾತ್ರ ಜೀವನವನ್ನು ರೂಪಿಸಲು ಸಾಧ್ಯವಿಲ್ಲ. ಅದರ ಜೊತೆಗೆ ಇತರ ಸಾಫ್ಟ್ ಸ್ಕಿಲ್‌ಗಳು ಕೂಡ ಬೇಕು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರೆಹಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದಿಂದ ಸಂಶೋಧನ ವಿಧಾನದ ಕುರಿತು ಒಂದು ದಿನದ ಕಾರ‍್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ವಿದ್ಯಾರ್ಥಿಗಳಿಗೆ ಸಂಶೋಧನ ವಿನ್ಯಾಸ ಹಾಗೂ ವಿಧಾನಗಳ ಕುರಿತು ಮಾಹಿತಿ ನೀಡಿದರು. “ಜ್ಞಾನದ ಸೃಷ್ಠಿ ಸಂಶೋಧನೆಯಿಂದ ಮಾತ್ರ ಸಾಧ್ಯ. ಸಂಶೋಧನೆಯಲ್ಲಿ ಯಾವುದೇ ವಿಷಯದ ಕುರಿತು ಸಂಶೋಧಕನ ಜ್ಞಾನ ಹಾಗೂ ಆಸಕ್ತಿ ತುಂಬಾ ಮುಖ್ಯವಾಗುತ್ತವೆ. ಒಬ್ಬ ಸಂಶೋಧಕ ಜ್ಞಾನದ ಮೂಲಕ ಎಲ್ಲರಿಗೂ ದಾರಿ ತೋರಿಸುವವನಾಗಿರುತ್ತಾನೆ. ಅದಕ್ಕಾಗಿ ವಿಶ್ವಾಸಾರ್ಹತೆ ಕೂಡ ಪ್ರಮುಖ ಪಾತ್ರ ವಹಿಸುತ್ತದೆ” ಎಂದರು. ಸಂಶೋಧನೆ ಮಾಡಲು ವಿಷಯಗಳನ್ನು ಆಯ್ಕೆ ಮಾಡುವುದರ ಕುರಿತು ಹೇಳಿದ ಡಾ| ಕುರಿಯನ್, ಸ್ಪಷ್ಟವಾಗಿ ಯೋಚನೆ ಮಾಡಲು ಪ್ರಾರಂಭಿಸಿದಾಗ ಮಾತ್ರ ಸಂಶೋಧನೆ ಮಾಡಲು ಸಾಧ್ಯ ಎಂದು ಹೇಳಿದರು. ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಶೋಧನಾ ವಿಷಯಗಳ ಕುರಿತು ಚರ್ಚಿಸಲಾಯಿತು. ಕಾರ್ಯಾಗಾರದಲ್ಲಿ ವಿಭಾಗದ ಸಂಯೋಜಕರಾದ ಪ್ರಸಾದ್ ಶೆಟ್ಟಿ, ಬಿಎಸ್‌ಡಬ್ಲ್ಯೂ ವಿಭಾಗದ ಉಪನ್ಯಾಸಕರಾದ ಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದೊಂದಿಗೆ ರಾಮ್ಸನ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಚತೆಯ ಅರಿವು ಕಾರ್ಯಕ್ರಮ ನಡೆಯಿತು. ಪ್ರಭಾರ ಮುಖ್ಯೋಪಾಧ್ಯಾಯರಾದ ನಾಗಮ್ಮ ನಾಯಕ್ ಅಧ್ಯಕ್ಷತೆ ವಹಿಸಿದ್ದರು . ಸಂಪನ್ಮೂಲ ವ್ಯಕ್ತಿಗಳಾಗಿ ದಿವಾಕರ್ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಇವರು ವಿದ್ಯಾರ್ಥಿಗಳಿಗೆ ಜಲವೆಂದರೆ ಬರೀ ನೀರಲ್ಲ ಅದು ಪಾವನ ತೀರ್ಥ ಜೀವಜಲದ ಮಹತ್ವತಿಳಿಸಿ ನೀರು ಕಲುಷಿತಗೊಳ್ಳುವ ಕುರಿತು ಸವಿಸ್ತಾರ ಮಾಹಿತಿನೀಡಿ ಕಿರು ಚಿತ್ರ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು . ಮುಖ್ಯ ಅತಿಥಿಗಳಾಗಿ ರಜನಿ ಎಸ್ ಹೆಗಡೆ ಹಿರಿಯ ಸಹ ಶಿಕ್ಷಕರು ಅಜಯ್ ಕುಮಾರ್ ಶೆಟ್ಟಿ ಸಹ ಶಿಕ್ಷಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು . ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಎನ್‌ಐಟಿ ಗಳಲ್ಲಿನ ಆರ್ಕಿಟೆಕ್ಚರ್ ಕೋರ್ಸ್‌ನ ಪ್ರವೇಶಕ್ಕಾಗಿ ನಡೆದ ಜೆಇಇ ಮೈನ್‌ನ ಬಿ – ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಟಿ. ದೇವಾಡಿಗ 96.5 ಅಂಕ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಹಾಗೆಯೇ ಆರ್ಕಿಟೆಕ್ಚರ್ ಡ್ರಾಯಿಂಗ್‌ನಲ್ಲಿ 99.7 ಅಂಕ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನಲ್ಲಿಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾಟ-2020-21ನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ವಿಶ್ವಸ್ಥರಾದ ರಾಜೇಂದ್ರ ತೋಳಾರ್ ಇತ್ತೀಚೆಗೆ ಉದ್ಘಾಟಿಸಿದರು. ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟ್ರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಶ್ರೀ ಶಾರದಾ ಕಾಲೇಜು ಬಸ್ರೂರು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು. ಕುಸ್ತಿ ಪಂದ್ಯಾಟದ ಫಲಿತಾಂಶ: 57 ಕೆ.ಜಿ ವಿಭಾಗ- ಪ್ರಥಮ- ಶ್ರೀನಿವಾಸ,ಶ್ರೀ ಶಾರದಾಕಾಲೇಜು ಬಸ್ರೂರು ದ್ವಿತೀಯ-ಮಹಮ್ಮದ್ ಸಯೀದ್,ಎಕ್ಷಲೆಂಟ್ ಪದವಿಪೂರ್ವಕಾಲೇಜು,ಸುಣ್ಣಾರಿ,ತೃತೀಯ- ಸುದೀಪ್,ಶ್ರೀ ವೆಂಕಟರಮಣ ಪದವಿ ಪೂರ್ವಕಾಲೇಜು, ಕುಂದಾಪುರ 61ಕೆ.ಜಿ ವಿಭಾಗ- ಪ್ರಥಮ-ರವೀಶ್,ಶ್ರೀ ಶಾರದಾಕಾಲೇಜು ಬಸ್ರೂರು ದ್ವಿತೀಯ-ಸುದೀಪ್,ಶ್ರೀ ಶಾರದಾಕಾಲೇಜು ಬಸ್ರೂರುತೃತೀಯ-ದೀನದಯಾಳ್ ನಿಶಾದ್,ಮಹಾತ್ಮಗಾಂಧಿ ಪದವಿ ಪೂರ್ವಕಾಲೇಜು,ಉಡುಪಿ. 65 ಕೆ.ಜಿ ವಿಭಾಗ- ಪ್ರಥಮ-ಅಜಯ್‌ಕುಮಾರ್,ಸರಕಾರಿ ಪದವಿ ಪೂರ್ವಕಾಲೇಜು,ಕುಂದಾಪುರ, ದ್ವಿತೀಯ-ಅವಿನಾಶ್,ಶ್ರೀ ಶಾರದಾಕಾಲೇಜು ಬಸ್ರೂರುತೃತೀಯ-ವರುಣ್, ಶ್ರೀ ವೆಂಕಟರಮಣ ಪದವಿ ಪೂರ್ವಕಾಲೇಜು, ಕುಂದಾಪುರ 70 ಕೆ.ಜಿ ವಿಭಾಗ- ಪ್ರಥಮ-ಪ್ರಿನ್ಸನ್‌ಡಿಸೋಜಾ,ಶ್ರೀ ಶಾರದಾಕಾಲೇಜು ಬಸ್ರೂರು…
