ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒಂದು ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಅಲ್ಲಿ ಉತ್ತಮ ಸಂಪರ್ಕ, ಸಾರಿಗೆ ಸೌಲಭ್ಯ ಇರಬೇಕು. ಇದನ್ನು ಗಮನದಲ್ಲಿ ಇರಿಸಿಕೊಂಡು ಗ್ರಾಮೀಣ ಪ್ರದೇಶಗಳಿಂದ ಕೂಡಿರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಶಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಹೇರೂರು ಗ್ರಾಮದ ನಾಲ್ಕು ರಸ್ತೆಯಿಂದ ಕಾಲ್ತೋಡು ಗ್ರಾಮದ ಜೋಡುಗುಪ್ಪೆ ವರೆಗಿನ ರಸ್ತೆಯನ್ನು ಡಾಂಬರೀಕರಣದ ಮೂಲಕ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ದೇವಾಲಯದ ಅರ್ಚಕ ಎಂ. ಕೃಷ್ಣ ಭಟ್ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಮ್ಮ ಗ್ರಾಮ ನಮ್ಮ ರಸ್ತೆ ಅಡಿಯಲ್ಲಿ ೫ ಕಿಮೀ ಉದ್ದದ ಈ ರಸ್ತೆಯನ್ನು ರೂ ೧.೬೩ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಹೇರೂರು ಗ್ರಾಮದ ಹಲವು ಜನವಸತಿ ಪ್ರದೇಶಗಳಿಗೆ ಮತ್ತು ಹೇರೂರಿನಿಂದ ಕಾಲ್ತೋಡಿಗೆ ಸರ್ವಋತು ಸಂಪರ್ಕ ಸೌಲಭ್ಯ ಲಭಿಸುತ್ತದೆ ಎಂದು ಅವರು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.25ರ ಶನಿವಾರ 182 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 37, ಉಡುಪಿ ತಾಲೂಕಿನ 96 ಹಾಗೂ ಕಾರ್ಕಳ ತಾಲೂಕಿನ 49 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 109 ಪುರುಷರು, 68 ಮಹಿಳೆಯರು, 5 ಮಕ್ಕಳು ಸೇರಿದ್ದಾರೆ. ಇಂದು 79 ಮಂದಿ ಬಿಡುಗಡೆಗೊಂಡಿದ್ದಾರೆ. 493 ನೆಗೆಟಿವ್: ಈ ತನಕ ಒಟ್ಟು 27,375 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 23,629 ನೆಗೆಟಿವ್, 3,218 ಪಾಸಿಟಿವ್ ಬಂದಿದ್ದು, 528 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 493 ನೆಗೆಟಿವ್, 182 ಪಾಸಿಟಿವ್ ಬಂದಿದೆ. ಒಟ್ಟು 1,611 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1197 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,218 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,008 ಮಂದಿ ಬಿಡುಗಡೆಯಾಗಿದ್ದು, 1,197 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಅಧಿಕಾರಿ ಉಡುಪಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್ ಜಿ., ಪರಿಸರದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಮನೆ ವಠಾರ ಹಾಗೂ ಪರಿಸರದಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು. ಕರೋನಾ ವೈರಸ್ ಹರಡುತ್ತಿರುವ ಈ ದಿನಗಳಲ್ಲಿ ಎಲ್ಲರೂ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲೇರಿಯಾ ರೋಗದ ಬಗ್ಗೆ ಮಾಹಿತಿಯುಳ್ಳ ಕರಪತ್ರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ ಬಿಡುಗಡೆಗೊಳಿಸಿದರು. ಉದ್ಯಮಿ ರಾಜೇಶ ಎಂ.ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪ್ರೀತಿ ಗೆಹ್ಲೋಟ್ ಅವರು ಭೇಟಿ ನೀಡಿದರು. ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ ಆರ್ಟ್ ಗ್ಯಾಲರಿ, ಗ್ರಂಥಾಲಯ ವೀಕ್ಷಿಸಿದರು. ಥೀಮ್ ಪಾರ್ಕ್ನಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯವನ್ನು ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಈ-ಗ್ರಂಥಾಲಯ ಮಾಡುವ ಬಗ್ಗೆ ಸಹಕಾರ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ಅರುಣ್ ಕುಮಾರ್ ಶೆಟ್ಟಿ, ಪಿ.ಡಿ.ಓ ಶ್ರೀಮತಿ ಶೈಲಾ ಎಸ್ ಪೂಜಾರಿ, ಕಾರಂತ ಪ್ರತಿಷ್ಠಾನ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಕಂದಾಯ ನಿರೀಕ್ಷಕ ಶ್ರೀ ರಾಜು, ವಿ.ಎ ಚೆಲುವರಾಜು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಅಕ್ರಮವಾಗಿ ಕಂಟೇನರ್ ಲಾರಿಯಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ಆಧಾರದಲ್ಲಿ ಸೈಬರಕಟ್ಟೆ ಚೆಕ್ ಪೋಸ್ಟ್ ಬಳಿ ಶುಕ್ರವಾರ ಮುಂಜಾನೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಹರಿಯಾಣದಿಂದ ಕೇರಳಕ್ಕೆ ಜಾನುವಾರ ಸಾಗಾಟ ಮಾಡುತ್ತಿದ್ದ ಬಗ್ಗೆ ತನಿಖೆ ವೇಳೆ ತಿಳಿದುಬಂದಿದೆ.ಕೇರಳ ಮೂಲದ ಅಬ್ದುಲ್ ಜಬ್ಭ್ರ್ (35), ಜೋಮುನ್ (36), ಶಂಶುದ್ದೀನ್ (34), ಹರಿಯಾಣ ಮೂಲದ ಮುಖೀಮ್ (18) ಎಂಬುವವರನ್ನು ಬಂಧಿಸಲಾಗಿದೆ. ಎಮ್ಮೆ ಕರುಗಳ ಮಾಲಿಕ ಕೇರಳದ ಅಬ್ದುಲ್ ಅಜೀಜ್ ಹಾಗೂ ಕಂಟೈನರ್ ಮಾಲಿಕ ಮೈಸೂರು ಮೂಲದ ರಫಿಕ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಕೋಟ ಠಾಣೆಯ ಪಿಎಸ್ಐ ಸಂತೋಷ್ ಬಿ.ಪಿ. ಅವರು ಸಿಬಂದಿಗಳ ಜೊತೆಗೆ ಕಾರ್ಯಾಚರಣೆ ನಡೆಸಿ ಕಂಟೈನರ್ ಲಾರಿ ಹಾಗೂ 2 ಲಕ್ಷ ಮೌಲ್ಯದ ಎಮ್ಮೆ ಕರುಗಳನ್ನು ಹಾಗೂ ಕಟ್ಟಲು ಉಪಯೋಗಿಸಿದ ನೈಲಾನ್ ಹಗ್ಗವನ್ನು ವಶಕ್ಕೆ ಪಡೆದಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.24ರ ಶುಕ್ರವಾರ 190 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 50, ಉಡುಪಿ ತಾಲೂಕಿನ 99 ಹಾಗೂ ಕಾರ್ಕಳ ತಾಲೂಕಿನ 41 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 112 ಪುರುಷರು, 78 ಮಹಿಳೆಯರು, 14 ಮಕ್ಕಳು ಸೇರಿದ್ದಾರೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಮೂರು ಸಾವಿರ ದಾಟಿದೆ. 265 ನೆಗೆಟಿವ್: ಈ ತನಕ ಒಟ್ಟು 26,783 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 23,136 ನೆಗೆಟಿವ್, 3,036 ಪಾಸಿಟಿವ್ ಬಂದಿದ್ದು, 611 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 265 ನೆಗೆಟಿವ್, 190 ಪಾಸಿಟಿವ್ ಬಂದಿದೆ. ಒಟ್ಟು 1,729 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1096 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 3,036 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,926 ಮಂದಿ ಬಿಡುಗಡೆಯಾಗಿದ್ದು, 1,096 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಸೋಂಕಿತರ ಸಾವಿನ ಸಂಖ್ಯೆಯು ಸಹ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ನಾಗರಿಕರು ಮೃತ ಪಟ್ಟಾಗ ಗೌರವಯುತ ಸಂಸ್ಕಾರ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಕೋವಿಡ್ 19 ಸೋಂಕಿತರು ಮೃತಪಟ್ಟಲ್ಲಿ ಅವರ ಶವ ಸಂಸ್ಕಾರಕ್ಕೆ ಸರಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು ಅದರಂತೆ ಶವ ಸಂಸ್ಕಾರವನ್ನು ನಡೆಸಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಸೋಂಕಿತರ ಹಾಗೂ ಇತರ ಪ್ರಕರಣಗಳಲ್ಲಿ ಶವ ಸಂಸ್ಕಾರಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದ್ದು ,ಇದು ವಿಷಾದನೀಯ ಬೆಳವಣಿಯಾಗಿದೆ. ಸೋಂಕಿತರ ಶವ ಸಂಸ್ಕಾರ ಸರಕಾರದ ನಿರ್ದೇಶನದಂತೆ ನಡೆಸಲಾಗುತ್ತಿದ್ದು, ಜನರು ಯಾವುದೇ ರೀತಿ ಆತಂಕ ಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರು ,ಶವ ಸಂಸ್ಕಾರಕ್ಕೆ ಯಾವುದೇ ರೀತಿಯ ಪ್ರತಿರೋಧ ಒಡ್ಡಬಾರದಾಗಿ ಎಚ್ಚರಿಕೆ ನೀಡಲಾಗಿದೆ. ಯಾರೇ ಆಗಲಿ ಪ್ರತಿರೋಧ ಒಡ್ಡಿದ್ದರೇ ಕಾನೂನಿನಂತೆ ಕಠಿಣಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾದಂಡಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಕೋವಿಡ್-19 ಮೃತದೇಹಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜುಲೈ 30 ಮತ್ತು 31 ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯನ್ನು ಕೋವಿಡ್-19 ಹಿನ್ನಲೆಯಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಇ.ಟಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿಯ ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 3912 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಎಸ್.ಓ.ಪಿ ಪ್ರಕಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪಿಯು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪರೀಕ್ಷೆಯ ಮೊದಲು ಮತ್ತು ನಂತರ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುವಂತೆ ಸೂಚಿಸಿದರು. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಥರ್ಮಲ್ ಸ್ಕ್ಯಾನರ್ ನೊಂದಿಗೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.23ರ ಗುರುವಾರ 160 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 60, ಉಡುಪಿ ತಾಲೂಕಿನ 87 ಹಾಗೂ ಕಾರ್ಕಳ ತಾಲೂಕಿನ 13 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 87 ಪುರುಷರು, 59 ಮಹಿಳೆಯರು, 14 ಮಕ್ಕಳು ಸೇರಿದ್ದಾರೆ. ಇವರಲ್ಲಿ 13 ಮಂದಿ ಮುಂಬೈ, 6 ಮಂದಿ ಬೆಂಗಳೂರು, 2 ಪುಣೆ, ಓರ್ವ ವ್ಯಕ್ತಿ ಮಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 4 ಪ್ರಕರಣ, ILI 42 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. ಇಂದು 65 ಮಂದಿ ಬಿಡುಗಡೆಗೊಂಡಿದ್ದಾರೆ. 276 ನೆಗೆಟಿವ್: ಈ ತನಕ ಒಟ್ಟು 26,370 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,871 ನೆಗೆಟಿವ್, 2,846 ಪಾಸಿಟಿವ್ ಬಂದಿದ್ದು, 653 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 276 ನೆಗೆಟಿವ್, 160 ಪಾಸಿಟಿವ್ ಬಂದಿದೆ. ಒಟ್ಟು 1,684 ಮಂದಿ ಹೋಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ, ಜು.23: ಮುಂಬಯಿಯ ನಗರದ ಪ್ರಸಿದ್ಧ್ದ ನಾಟ್ಯಾಲಯ ಅರುಣೋದಯ ಕಲಾ ನಿಕೇತನದ ನಿರ್ದೇಶಕ, ಕೋಟಕ್ ಮಹೀಂದ್ರ ಬ್ಯಾಂಕ್ನ ಮಾಜಿ ಉದ್ಯೋಗಿ, ಮುಂಬಯಿ ತುಳುಕನ್ನಡಿಗರ ಅನರ್ಘ್ಯ ರತ್ನ ಎಂದೇ ಚಿರಪರಿಚಿತ ರಾಜು ಶ್ರೀಯಾನ್ ನಾವುಂದ (51) ಸಯಾನ್ ಚುನಾಭಟ್ಟಿ ಇಲ್ಲಿನ ತಿರುಪತಿ ಹೈಟ್ಸ್ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ತೀವ್ರ ಹೃದಯಘಾತದಿಂದ ವಿಧಿವಶರಾದರು. ಬೈಂದೂರು ತಾಲೂಕು ನಾವುಂದ ಮಂಕಿ ಮನೆ ನಿವಾಸಿ ಶ್ರೀಯಾನ್ ಮುಂಬಯಿನಲ್ಲಿ ಅಪಾರ ಸಮಾಜಪರ ಚಿಂತಕರಾಗಿ, ಅನನ್ಯ ಕಲಾಪ್ರೇಮಿ, ಕಲಾಪೋಷಕರಾಗಿ ಪ್ರಸಿದ್ಧರೆನಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮತ್ತು ಕರ್ನಾಟಕ ಸಂಘ ಮುಂಬಯಿ ಸಂಸ್ಥೆಗಳಲ್ಲಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ (ಮುಂಬಯಿ), ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಮತ್ತಿತರ ಹತ್ತಾರು ತುಳು ಕನ್ನಡ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಸಕ್ರಿಯ ಸೇವಾಕರ್ತರಾಗಿ ಶ್ರಮಿಸಿದ್ದರು. ನಾಡೋಜ ಜಿ.ಶಂಕರ್ ಉಡುಪಿ ಇವರ ಪರಮಾಪ್ತರಾಗಿದ್ದ ಶ್ರೀಯಾನ್ ಓರ್ವ ಸ್ನೇಹಜೀವಿಯಾಗಿ ಹೆಸರಾಂತ ಯುವ ಸಮಾಜ…
