Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ , ಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ ಸಂಪನ್ನಗೊಂಡಿತು. ವೇದಮೂರ್ತಿ ಶಾರ್ಕೆ ರಾಮಕೃಷ್ಣ ಭಟ್ ನೇತೃತ್ವದಲ್ಲಿ ಪಂಚವಿಂಶತಿ, ಕಲಶ ಸ್ಥಾಪನೆ , ಪರಿವಾರಕ್ಕೆ ಕಲಶ, ಅಧಿವಾಸ ಹೋಮ, ಕಲಾತತ್ವ ಹೋಮ ಮತ್ತು ನಾನಾ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಅದೇ ದಿನ ಮದ್ಯಾಹ್ನ 2.30ರಿಂದ ಯಕ್ಷಗಾನ ತಾಳಮದ್ದಲೆ ರಾವಣ ಮೋಕ್ಷ ಕಾರ್ಯಕ್ರಮ ಸಂಜೆ 7 ಗಂಟೆಯಿಂದ ಶ್ರೀ ರಾಘವೇಂದ್ರ ಭಜನಾ ಮಂಡಳಿ ವಂಡ್ಸೆಯ ತಂಡದಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 8.30 ಕ್ಕೆ ರಂಗಪೂಜೆ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಔಷಧೀಯ ಸಸ್ಯಗಳ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇಂತಹ ಬೆಲೆ ಬಾಳುವ ವಸ್ತುಗಳ ಬಗ್ಗೆ ಜ್ಞಾನ ಇರದಿದ್ದರೆ, ಅದನ್ನು ರಕ್ಷಣೆ ಮಾಡಲಾಗುವುದಿಲ್ಲ ಎಂದು ಐಎಫ್‌ಎಸ್ ಅಧಿಕಾರಿ, ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ರಾಜ್ಯ ಔಷಧಿಯ ಸಸ್ಯಗಳ ಪ್ರಾಧಿಕಾರದ ಸಿಇಒ ಸುದರ್ಶನ್ ಜಿ.ಎ ಹೇಳಿದರು. ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಾಂಪ್ರದಾಯಿಕ ಔಷಧಗಳ ಆರ್ಕೈವ್ (ಎಟಿಎಂಎ) ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರದ ಸಹಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಂಚೂಣಿಯ ಅರಣ್ಯ ಸಿಬ್ಬಂದಿಗಳಿಗೆ ನಡೆದ ಔಷಧಿಯ ಸಸ್ಯಗಳ ಕುರಿತ ಮಾಹಿತಿ ಕಾರ್ಯಾಗಾರದ ಉದ್ಘಾಟಕರಾಗಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳು, ಅರಣ್ಯ ಸಿಬ್ಬಂದಿಗಳನ್ನು ಒಟ್ಟುಗೂಡಿಸಿ ಇಂತಹ ಮಾಹಿತಿ ಕಾರ್ಯಾಗಾರಗಳನ್ನು ಮಾಡುವುದು ಅವಶ್ಯಕ. ಈ ಮೂಲಕ ರೈತರಿಗೆ ಸಸ್ಯಗಳನ್ನು ನೀಡುವಾಗ ಅದರ ಮಹತ್ವ ಹಾಗೂ ಇದರಿಂದ ರೈತರಿಗೆ ಆಗುವ ಲಾಭಗಳ ಬಗ್ಗೆ ಮಾಹಿತಿ ನೀಡಬಹುದು’…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ವಿದ್ಯಾರ್ಥಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ವಿವಿಧ ಸಾಹಸ ಕಲೆಗಳನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಜಾಗೃತರಾಗಲು ಇಂತಹ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಕೀರ್ತಿ ಜಿ.ಕೆ ಅವರು, ಅನಿರೀಕ್ಷಿತವಾಗಿ ನಡೆಯುವ ಘಟನೆ ಸಂದರ್ಭದಲ್ಲಿ ಹೇಗೆ ಪಾರಾಗಬೇಕು, ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳುವುದು ಎನ್ನುವ ಕುರಿತು ಸ್ವಯಂ ರಕ್ಷಣೆ ಕೌಶಲ ಪ್ರಾತ್ಯಕ್ಷಿಕೆ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ, ಕರಾಟೆ ಇಂಡಿಯ ಸಂಸ್ಥೆಯ ಸರ್ಟಿಫೈಡ್ ಕೋಚ್.ಅಕ್ಷಯ್ ಪೂಜಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಬ್ರಮಣ್ಯ ಶಾಸ್ತ್ರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 70 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪೂರ್ಣೇಶ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಕ್ರೀಡಾ ಶಿಕ್ಷಣದ ಜೊತೆ ಜೊತೆಯಲ್ಲಿ ವ್ಯಕ್ತಿತ್ವ ವಿಕಸನದ ಕಡೆಗೂ ಗಮನಹರಿಸಬೇಕು ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಡುಪಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ಸುಧಾಕರ್ ಖಾರ್ವಿದೀಪ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿದರು. ಜಿ ಎಸ್ ವಿ ಎಸ್ ಅಸೋಸಿಯೇಷನ್ನಿನ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಶುಭಾಶಂಸನೆಗೈದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗಿದ್ದು, ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಅವರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಮಾತನಾಡಿದರು. ಸಾರ್ವಜನಿಕರು ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಪಿಂಗ್ ಮಾಲ್ಗಳಲ್ಲಿ, ಅಂಗಡಿಗಳಿಗೆ ತೆರಳುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಅಂಗಡಿಗೆ ಬರುವ ಸಾರ್ವಜನಿಕರ ಪ್ರವೇಶವನ್ನು ಅಂಗಡಿ ಮಾಲೀಕರು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಂಗಡಿ ಮಾಲೀಕರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯ ಮೊದಲಿನ ಕೊರೊನಾದ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು. ಹೊರ ರಾಜ್ಯಗಳಿಂದ ನೆಗೆಟಿವ್ ವರದಿಯನ್ನು ತಾರದೆ ಬಂದವರ ಬಗ್ಗೆ ಸಾರ್ವಜನಿಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಎಲ್ಲಾ ತಾಲೂಕುಗಳು ತಹಸೀಲ್ದಾರುಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬಂದಪಟ್ಟ ಗ್ರಾಮ ಪಂಚಾಯತ್ನ ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್(ರಿ.) ಇವರು ಬೆಂಗಳೂರಿನ ಡಿ ಕ್ಯೂಬ್ ಈಜುಕೊಳದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ ನಾಗರಾಜ ಖಾರ್ವಿ, 50 ಮೀ ಬಟರ್ ಪ್ಲೈನಲ್ಲಿ ಚಿನ್ನದ ಪದಕ, 100 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ನಾಗರಾಜ ಖಾರ್ವಿ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಮಂಗಳೂರಿನ ತಣ್ಣೀರು ಬಾವಿಯ ಅರಬ್ಬೀ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು ಒಂದು ಕಿ.ಮೀ. ದೂರವನ್ನು ಕೇವಲ 25 ನಿಮಿಷ 16 ಸೆಕೆಂಡಿನಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದಿದ್ದರು. ಸಾಹಿತ್ಯದಲ್ಲೂ ಆಸಕ್ತಿ ಹೊಂದಿರುವ ಇವರು ನಾಖಾರ್ವಿ ಕಾವ್ಯನಾಮದಲ್ಲಿ ಇಬ್ಬನಿಯ ಮೆರವಣಿಗೆ, ಕಮಲ ತನಯನ ಷಟ್ಪದಿ ಎಂಬೆರಡು ಪುಸ್ತಕಗಳನ್ನು, ಪಾರ್ಥೇಶ್ವರನ ಅಂಕಿತದಲ್ಲಿ 450ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಅವರು ಬಂಟ್ವಾಳ ತಾಲೂಕಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಸಮಾಜದ ಏಳಿಗೆಗೆ ಸಹಕಾರಿಯಾಗಬೇಕು. ಜನಪರ ಕಾರ್ಯಕ್ರಮಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಕಳೆದ37 ವರ್ಷಗಳಿಂದ ಎಲ್ಲಾ ರಂಗದಲ್ಲೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುವುದು ಹೆಮ್ಮೆಯ ವಿಷಯ ಎಂದು ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಶಿಶಂಕರ ಎಚ್.ಎಂ. ಹೇಳಿದರು. ಗಂಗೊಳ್ಳಿಯ ಕೆಎಫ್‌ಡಿಸಿ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್‌ನ 37ನೇ ವಾರ್ಷಿಕೋತ್ಸವ ಮತ್ತು ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆಯ 20ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವ ಸಹಾಯ ಸಂಘದ ಅಧ್ಯಕ್ಷ ನಾರಾಯಣ ಖಾರ್ವಿ, ಗಂಗೊಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2021-22ನೇ ಸಾಲಿಗೆ ತೆರಿಗೆ ದರವನ್ನು ಜನರಿಗೆ ಹೊರೆಯಾಗದಂತೆ, ಮಾರುಕಟ್ಟೆ ದರದ ಅನ್ವಯ ಪರಿಷ್ಕರಿಸಲು ಪುರಸಭೆಯ ವಿಶೇಷ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು. ತೆರಿಗೆ ಏರಿಕೆ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ ಘಟನೆಯೂ ನಡೆಯಿತು. ಸೋಮವಾರ ನಡೆದ  ಸಭೆಯಲ್ಲಿ, ಸರ್ಕಾರದ ಸುತ್ತೋಲೆ, ಪುರಸಭೆ ಕೈಗೊಳ್ಳಬಹುದಾದ ನಿರ್ಧಾರಗಳ ಕುರಿತು ಮಾಹಿತಿ ನೀಡಿದ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರು, ಸುತ್ತೋಲೆಯನ್ನು ನಿರ್ಲಕ್ಷ್ಯ ಮಾಡಿದರೆ ಅನುದಾನಗಳಿಗೆ ತೊಡಕಾಗಬಹುದು ಎಂದರು. ದರ ಪರಿಷ್ಕರಣೆಯ ಸಂದರ್ಭದಲ್ಲಿ ಪ್ರಾದೇಶಿಕ ಮೌಲ್ಯಮಾಪನ ಆಧರಿಸಿ ವಾಣಿಜ್ಯ, ವಸತಿ, ಖಾಲಿ ನಿವೇಶನಗಳನ್ನು ಪ್ರತ್ಯೇಕವಾಗಿ ಪರಿಗಣಿಸಲು ಅವಕಾಶವಿದೆ ಎಂದರು. ‘ಕೋವಿಡ್ ಕಾಲಘಟ್ಟದಲ್ಲಿ ಜನರಿಗೆ ಹೊರೆಯನ್ನು ಹೇರುವುದು ಇಷ್ಟವಿಲ್ಲ’ ಎಂದ ಕೆ.ಮೋಹನ್ದಾಸ್ ಶೆಣೈ, ‘ಆಡಳಿತ ಹಾಗೂ ವಿಪಕ್ಷ ಸದಸ್ಯರು ಒಟ್ಟಾಗಿ ಚರ್ಚೆ ಮಾಡಬೇಕಿತ್ತು. ಆದರೆ, ಅವರ ಅನುಪಸ್ಥಿತಿಯಲ್ಲಿ ತೀರ್ಮಾನ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಸರ್ಕಾರದ ಸಲಹೆ ಹಾಗೂ ಜನ ಸಾಮಾನ್ಯರ ಜೀವನ ನಿರ್ವಹಣೆ ಎರಡನ್ನೂ ಗಮನದಲ್ಲಿ ಇರಿಸಿಕೊಂಡು ದರ ಪರಿಷ್ಕರಣೆ ಮಾಡಬೇಕಾಗಿದೆ’…

Read More