ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರುದ್ಧ, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಸಿಗದಿರುವುದು ಹಾಗೂ ಆಡಳಿತ ವೈದ್ಯಾಧಿಕಾರಿ ಕರ್ತವ್ಯ ಲೋಪ ಎಸಗುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದ ಎದುರುಗಡೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿದ ಶ್ರೀಧರ ಬಿಜೂರು, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಎರಡು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದರೆ ಅವರನ್ನು ಇವರ ಖಾಸಗಿ ಆಸ್ಪತ್ರೆಗೆ ಚೀಟಿ ಕೊಡುತ್ತಾರೆ. ರಾಜಕೀಯ ಪ್ರಭಾವ ಹೊಂದಿರುವ ಇವರು ಇತರ ವೈದ್ಯರಿಗೆ ಇಲ್ಲಿಗೆ ಬರಲು ಬಿಡುತ್ತಿಲ್ಲ. ತಮ್ಮ ಕರ್ತವ್ಯವನ್ನು ಸರಿಯಾಗಿ ಮಾಡುವುದಿಲ್ಲ ಎಂದಾದರೆ ಕೆಲಸಕ್ಕೆ ರಾಜನಾಮೆ ಕೊಟ್ಟು ಅಥವಾ ವರ್ಗಾವಣೆಯಾಗಿ ಹೋಗಲಿ. ಜನಸಾಮಾನ್ಯರಿಗೆ ಸೇವೆ ನೀಡಲು ಹಿಂದೇಟು ಹಾಕುವ ಇಂತಹ ವೈದ್ಯರು ನಮಗೆ ಬೇಕಿಲ್ಲ ಎಂದ ಅವರು, ಈ ಬಗ್ಗೆ 10 ದಿನಗಳೊಳಗೆ ಹಿರಿಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಡಿ.3: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಸ್ವಾಗತಿಸಲಾಯಿತು. ರಾಜ್ಯಪಾಲರು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಿಗೆ ತುಪ್ಪದ ದೀಪ ಆರತಿ ಬೆಳಗಿದ ರಾಜ್ಯಪಾಲರು ಬ್ರಹ್ಮಾರ್ಪಣ ನೆರವೇರಿಸಿದರು. ದೇವಾಲಯದ ಆವರಣದಲ್ಲಿನ ಶ್ರೀ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ.ಮೂಕಾಂಬಿಕಾ ದೇವಾಲಯದ ಪ್ರದಕ್ಷಿಣೆ ಮಾಡಿ, ದೇವಿಯ ಚಿನ್ನದ ರಥ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮಿ, ಎಎಸ್ಪಿ ಕುಮಾರ ಚಂದ್ರ, ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮ:ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.kvcdcl.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸವಿತಾ ಸಮಾಜ ಅಭಿವೃದ್ಧಿ ನಿಗಮ:ಜಿಲ್ಲಾ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ಸವಿತಾ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಸಮಾಜವನ್ನು ಜೋಡಿಸುವ ಕಾರ್ಯ ಇಂದಿನ ಜರೂರಾಗಿದೆ. ಬಣ್ಣ, ಕಲಾಪ್ರಪಂಚ, ಕ್ರೀಡೆಯಲ್ಲಿ ಯಾವುದೇ ಪರಿಬೇಧಗಳಿಲ್ಲದ ಸಮಾಜ ಒಗ್ಗೂಡಿಸುವ ತಾಕತ್ತಿದೆ. ಸಣ್ಣ ಗೆರೆಗಳ ಕಾರ್ಟೂನಿಗೂ ಸಮಾಜ ತಿದ್ದುವ ಅಪಾರವಾದ ಶಕ್ತಿಯಿದೆ ಎಂದು ಚಿತ್ರ ನಟ ಡಾಲಿ ಧನಂಜಯ ಹೇಳಿದರು. ಅವರು ಕುಂದಾಪುರದ ಅಥರ್ವ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ‘ಭಾರತ ಮುಂದಿನ 75 ವರ್ಷಗಳು ಥೀಮ್ನೊಂದಿಗೆ ನಡೆಯುತ್ತಿರುವ ಮೂರು ದಿನಗಳ ಕಾರ್ಟೂನ್ ಹಬ್ಬ ಉದ್ಘಾಟಿಸಿ ಮಾತನಾಡಿ ಕಲಾವಿದ ಸ್ವತಂತ್ರವಾಗಿ ತನ್ನ ಕಲ್ಪನೆಯಲ್ಲಿ ಸಮಾಜದ ಆಗುಹೋಗುಗಳನ್ನು ಚಿತ್ರಿಸಿದರೆ, ಅಭಿನಯದಲ್ಲಿ ಬೇರೆ ಬೇರೆ ಮಜಗಳ ಮೂಲಕ ಅಭಿವ್ಯಕ್ತಿ ಸಾಧ್ಯ. ಯಾವುದೇ ಕಲಾವಿದರಾದರೂ ಅವರಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಶಕ್ತಿಯಿದೆ ಎಂದರು. ಕಲಾವಿದ ಬಾದಲ್ ನಂಜುಂಡ ಸ್ವಾಮಿ ರಚಿಸಿದ ಪುನೀತ್ ರಾಜಕುಮಾರ್ ಚಿತ್ರಕ್ಕೆ ಸಹಿ ಹಾಕುವ ಮೂಲಕ ಡಾಲಿ ಧನಂಜಯ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸದ, ಲೇಖಕ ಶಶಿ ತರೂರು, ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ವೀಡಿಯೋ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ3: ಕುಂದಾಪುರದ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯನ್ನು ಕಚೇರಿಯ ಎಲ್ಲಾ ದಿನಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ವರೆಗೆ ಮಾಡಲಾಗುವುದು ಹಾಗೂ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಸಹ ಪುನಃ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಭಾರತೀಯ ರೆಡ್ ಕ್ರಾಸ್ನ ಖಜಾಂಚಿ ಶಿವರಾಮ ಶೆಟ್ಟಿ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ಮಾತನಾಡಿ ರಕ್ತದಾನವೇ ಮಹಾದಾನ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ವಿಧ್ಯಾರ್ಥಿಗಳನ್ನು ಹುರಿದುಂಬಿಸಿದರು. ಯೂತ್ ರೆಡ್ ಕ್ರಾಸ್ ವತಿಯಿಂದ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಮ್ಯಾನೇಜಿಂಗ್ ಕಮಿಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ಅಡ್ಡಪರಿಣಾಮವಿಲ್ಲದ ಚಿಕಿತ್ಸೆ ಆಯುರ್ವೇದದಿಂದ ಸಾಧ್ಯ. ಶಾಸ್ತ್ರೀಯವಾಗಿ ಆಯುರ್ವೇದವನ್ನು ಕಲಿಯುವವರು ತಮ್ಮ ವೃತ್ತಿಯನ್ನು ಭಗವಂತನ ಸೇವೆಯೆಂದು ತಿಳಿಯಬೇಕು ಎಂದು ಕುಡುಪುಕಟ್ಟೆ ಇಸ್ಕಾನ್ ಜಗನ್ನಾಥ ಮಂದಿರದ ಅಧ್ಯಕ್ಷ ಸ್ಮಿತಕೃಷ್ಣ ದಾಸ್ ಹೇಳಿದರು. ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಆಯೋಜಿಸಿದ ಧನ್ವಂತರಿ ಪೂಜಾ ಮಹೋತ್ಸವದಲ್ಲಿ ಮಾತಾನಾಡಿದ ಅವರು, ಆಧುನಿಕ ಕಾಲದ ಔಷಧ ವ್ಯವಸ್ಥೆಗೆ ಸಮಾನವಾಗಿರುವ ಆಯುರ್ವೇದ ಔಷಧವು ಪ್ರಸ್ತುತ ಜಾರಿಯಲ್ಲಿರುವ ಅತ್ಯಂತ ಪುರಾತನ ಪದ್ಧತಿಯಾಗಿದೆ. ಇಂದಿನ ಯುವ ಪೀಳಿಗೆಯಲ್ಲಿ ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸಿ, ಸಮಾಜದಲ್ಲಿ ಈ ಚಿಕಿತ್ಸಾ ತತ್ವವನ್ನು ಉತ್ತೇಜಿಸಿದಾಗ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮನ್ನಣೆ ಪ್ರಾಪ್ತಿಯಾಗುತ್ತದೆ ಎಂದು ಅವರು ಹೇಳಿದರು. ನಮ್ಮ ಜೀವನದಲ್ಲಿ ವಿನಯ, ಕೃತಜ್ಞತೆ ಮತ್ತು ದಯಾಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಮೌಲ್ಯಯುತ ಜೀವನ ನಡೆಸಿದಾಗ ಸಂಪತ್ತು, ಪ್ರಸಿದ್ಧಿ ಅಭಿಸುತ್ತದೆ. ಜೀವನದ ಉದ್ದೇಶ ಅರಿತಾಗ ಮಾತ್ರ ಅರ್ಥಪೂರ್ಣ, ಶಾಂತಿಯುತವಾಗಿ ಬಾಳಲು ಸಾಧ್ಯ ಎಂದರು. ಆಯುರ್ವೇದ ದಿನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್ನ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ ವ್ಯಾಪಕವಾಗಿ ಹರಡಿದ್ದು, ವಿದೇಶಿ ಪ್ರಯಾಣಿಕರಿಂದ ರಾಜ್ಯದಲ್ಲಿ ಸಹ ಹರಡುವ ಸಾಧ್ಯತೆಗಳಿದ್ದು, ಹೊಸ ತಳಿಯು ಹರಡುವ ವೇಗವು ಹೆಚ್ಚಿರುವ ಹಿನ್ನಲೆ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅವಶ್ಯವಾಗಿದೆ ಎಂದರು. ಓಮಿಕ್ರಾನ್ ದೃಡಪಟ್ಟ ರಾಷ್ಟçಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪ್ಪದೇ ಪರೀಕ್ಷೆಗೆ ಒಳಪಡಿಸಬೇಕು. ಒಂದೊಮ್ಮೆ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಲ್ಲಿ ಅವರನ್ನು 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು. ಪಾಸಿಟಿವ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳು ಡಿಸೆಂಬರ್ 4 ರಂದು ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ, ಡಿಸೆಂಬರ್ 5 ರಂದು ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಡಿಸೆಂಬರ್ 19 ರಂದು ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಸದರಿ ಪರೀಕ್ಷಾ ಕೇಂದ್ರಗಳ ವಿವರ ಹೀಗಿದೆ: ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜು, ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಮಿಷನ್ ಕಂಪೌAಡ್ ಬಳಿಯ ಕ್ರಿಶ್ಚಿಯನ್ ಪ್ರೌಢಶಾಲೆ, ಕುಂಜಿಬೆಟ್ಟು ಎಂ.ಜಿ.ಎA ಕಾಲೇಜು, ನಗರದ ಸರ್ವೀಸ್ ಬಸ್ ಸ್ಟ್ಯಾಂಡ್ ಬಳಿಯ ಸರಕಾರಿ ಪದವಿ ಪೂರ್ವ ಕಾಲೇಜು, ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆ ಹಾಗೂ ಬ್ರಹ್ಮಗಿರಿಯ ಸೆಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸಪ್ರತಿಭೆಗಳು ಹೊರ ಹೊಮ್ಮಲು ಸಾದ್ಯವಿದ್ದು, ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕುಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೆಳಿದರು. ಅವರು ಇಂದು ನಗರದ ಚಂದು ಮೈದಾನದಲ್ಲಿ ,ಉಡುಪಿ ಗೃಹರಕ್ಷಕದಳದ ವತಿಯಿಂದ ನಡೆದ ಪಶ್ಚಿಮವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ 2021 ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ದೈಹಿಕ ಚಟುವಟಿಕೆಗಳು ಆಗಲಿದ್ದು, ಇದು ಆರೊಗ್ಯದ ದೃಷ್ಠಿಯಿಂದ ಅತ್ಯಂತ ಉತ್ತಮವಾದುದು , ಕೋವಿಡ್ ನಿಂದ ರಕ್ಷಿಸಿಕೊಳ್ಳಲು ಉತ್ತಮ ಆರೋಗ್ಯ ಹೊಂದುವುದು ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಕೂರ್ಮಾರಾವ್ ಎಂ ಹೇಳಿದರು. ಕಾರ್ಯಕ್ರಮದಲ್ಲಿ ಎಎಸ್ಪಿ ಕುಮಾರಚಂದ್ರ, ಕೆಎಂಸಿ ಡೀನ್ ಡಾ. ಶರತ್ ಕೆ ರಾವ್, ಅಸೋಸಿಯೇಷನ್ ಆಫ್ ಕನ್ಸ್ಲ್ಟಿಂಗ್ ಸಿವಿಲ್ ಇಂಜಿನಿರ್ಸ್ ಮತ್ತು ಆರ್ಕಿಟೆಕ್ಟ÷್ರ್ಸ,ಉಡುಪಿಯ ಅಧ್ಯಕ್ಷ ಎಂ.ಗೋಪಾಲಭಟ್ ಮತ್ತಿತರರು ಉಪಸ್ಥಿತರಿದ್ದರು. ಗೃಹರಕ್ಷಕ ಸಿಬ್ಬಂದಿಯಿಂದ ಆಕರ್ಷಕ ಪೆರೇಡ್ ನಡೆಯಿತು. ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…
