ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.15ರ ಶನಿವಾರ 241 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 70, ಉಡುಪಿ ತಾಲೂಕಿನ 138 ಹಾಗೂ ಕಾರ್ಕಳ ತಾಲೂಕಿನ 30 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 191 ಸಿಂಥಮೇಟಿವ್ ಹಾಗೂ 50 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 127 ಪುರುಷರು, 114 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 130, ILI 40 ಪ್ರಕರಣವಿದ್ದು, 71 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 102 ಮಂದಿ ಆಸ್ಪತ್ರೆಯಿಂದ ಹಾಗೂ 127 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 65 ಹಾಗೂ 43 ವರ್ಷದ ಉಡುಪಿ ತಾಲೂಕಿನ ಇಬ್ಬರು ಪುರುಷರು ಇಂದು ಮೃತಪಟ್ಟಿದ್ದಾರೆ. 1,556 ನೆಗೆಟಿವ್: ಈ ತನಕ ಒಟ್ಟು 54794 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 45581 ನೆಗೆಟಿವ್, 7738 ಪಾಸಿಟಿವ್ ಬಂದಿದ್ದು, 1475 ಮಂದಿಯ ವರದಿ ಬರುವುದು ಬಾಕಿ ಇದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಟ್ಕೇರೆ ಯುವಶಕ್ತಿ ಯುವಕ ಮಂಡಲದ ಆಶ್ರಯದಲ್ಲಿ ೭೪ನೇ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಆಗಿ ಶ್ರಮಿಸಿದ ಸ್ಥಳೀಯ ಆಶಾ ಕಾರ್ಯಕರ್ತೆ ಸುಮಿತ್ರಾ ಶೇಟ್, ಪಂಚಾಯತ್ನ ಪೌರ ಕಾರ್ಮಿಕ ಶ್ರೀ ನಾರಾಯಣ ಹಾಗೂ ಅಣ್ಣಪ್ಪ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಅಡಿಗಾಸ್ ಯಾತ್ರಾದ ಚೇರ್ಮೆನ್ ನಾಗರಾಜ್ ಅಡಿಗ ಆಗಮಿಸಿದ್ದರು. ಜಯಪ್ರಕಾಶ್ ಶೆಟ್ಟಿ ಕಟ್ಕೇರೆ, ಲಕ್ಷ್ಮಣ್ ಶೆಟ್ಟಿ ಕಟ್ಕೇರೆ, ಪ್ರಶಾಂತ್ ಶೆಟ್ಟಿ ಕಟ್ಕೇರೆ, ಗೌರವಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಕಟ್ಕೇರೆ, ಕಾರ್ಯದರ್ಶಿ ಸಂತೋಷ ಪೂಜಾರಿ ಕಟ್ಕೇರೆ, ಮಹೇಶ್ ಭಟ್ ಕಟ್ಕೇರೆ, ಮಧುಕರ್ ಕಟ್ಕೇರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಟ್ಕೇರೆ ಯುವಶಕ್ತಿ ಯುವಕ ಮಂಡಲದ ಅಧ್ಯಕ್ಷರಾದ ಗಣೇಶ ಶೆಟ್ಟಿ ಕಟ್ಕೇರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಜುನಾಥ್ ಪೂಜಾರಿ ಕಟ್ಕೇರೆ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂದಿ ಮೈದಾನದಲ್ಲಿ ಉಪವಿಭಾಗಾಧಿಕಾರಿ ರಾಜು ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶವಿತ್ತರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಈ ಸಂದರ್ಭ ಕೊರೋನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ, ಉಪಾಧ್ಯಕ್ಷ ಕಿಶನ್ ಹೆಗ್ಡೆ, ಎಎಸ್ಪಿ ಹರಿರಾಂ ಶಂಕರ್, ಕುಂದಾಪುರ ತಹಶೀಲ್ದಾರ್ ಕೆ.ಬಿ. ಆನಂದಪ್ಪ, ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹಾಗೂ ಪುರಸಭಾ ಸದಸ್ಯರು ಇದ್ದರು. ಕುಂದಾಪುರ ಪೊಲೀಸ್ ಎಸ್ಪೈ ಹರೀಶ್ ಆರ್. ನಾಯ್ಕ್ ಅವರ ಮುಂದಾಳತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬೈಂದೂರು ತಹಶಿಲ್ದಾರ್ ಬಸಪ್ಪ ಪಿ. ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಾಲಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ ೨೦೧೯- ೨೦ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ವಂದನಾ ಆರ್ ಹೆಗಡೆ ೬೦೫, ರಶ್ಮಿತಾ ಎನ್ ೬೦೪ ಮತ್ತು ಪೃಥ್ವಿನ್ ೬೦೩ ಅಂಕಗಳೊಂದಿಗೆ ಶಾಲೆಗೆ ಟಾಪರ್ ಆಗಿದ್ದು ಅವರನ್ನು ಸನ್ಮಾನಿಸಲಾಯಿತು. ಪೃಥ್ವಿನ್ ಅವರ ಪರವಾಗಿ ಅವರ ತಾಯಿ ಮಮತಾ ಅವರು ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ನವಶಕ್ತಿ ಮಹಿಳಾ ವೇದಿಕೆಯ ಸದಸ್ಯರಾದ ಶಾರದಾ ಸುಷ್ಮಾ ಸುಗುಣ ಜಯಲಕ್ಷ್ಮಿ ಸೀತಾ ಜ್ಯೋತಿ ರಾಘವೇಂದ್ರ ಜಯಲಕ್ಷ್ಮಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿ, ಗಂಗೊಳ್ಳಿ ಮೀನುಗಾರಿಕಾ ಬಂದರು ದುರಸ್ತಿ ಹಾಗೂ ಕೊಡೇರಿ ಮೀನುಗಾರಿಕಾ ಬಂದರು ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಒಟ್ಟು 93.8 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಅನುದಾನ, ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಡಯಾಫ್ರಾಮ್ ಗೋಡೆ ಹಾಗೂ ಜೆಟ್ಟಿಯನ್ನು ಮರುನಿರ್ಮಿಸುವ ಕಾಮಗಾರಿಗಾಗಿ 4 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಕೊಡೇರಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಾಗಿ ರೂ. 2 ಕೋಟಿ ಅನುದಾನ ಮತ್ತು ಕೊಡೇರಿ ನದಿದಂಡೆ ಸಂರಕ್ಷಣೆ ಹಾಗೂ ನೇವಿಗೇಷನ್ ಚಾನೆಲ್ ಕಾಮಗಾರಿಗಾಗಿ 2.80 ಕೋಟಿ ರೂ. ಅನುದಾನ ಮಂಜೂರು ಮಾಡಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಹಾಗೂ ನಾಗರಿಕರ ಮನವಿಯಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ವಿಧಾನಸಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರಕಾರದ ತೆರವು ಮಾರ್ಗಸೂಚಿ ಅಗಸ್ಟ್ 31ರ ತನಕ ಜಾರಿಯಲ್ಲಿದ್ದು, ಯಾವುದೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ಇಲ್ಲದಿರುವುದರಿಂದ ಗಣೇಶ ಚತುರ್ಥಿ ಹಬ್ಬವನ್ನು ಸಾರ್ವಜನಿಕವಾಗಿ ನಡೆಸುವಂತಿಲ್ಲ. ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಸರಳವಾಗಿ ಸರಕಾರದ ಮಾರ್ಗಸೂಚಿ ಅನ್ವಯ ಆಚರಿಸಲು ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಮಾರ್ಗಸೂಚಿ: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ. ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ಉದಾ-ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಳಲ್ಲಿ ಪ್ರತಿಷ್ಠಾಪಿಸಬಾರದು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡತಕ್ಕದ್ದಲ್ಲ. ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ/ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು. ಗಣೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.14ರ ಶುಕ್ರವಾರ 322 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 186 ಹಾಗೂ ಕಾರ್ಕಳ ತಾಲೂಕಿನ 36ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 88 ಸಿಂಥಮೇಟಿವ್ ಹಾಗೂ 234 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 175 ಪುರುಷರು, 147 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 110, ILI 88 ಪ್ರಕರಣ, ಸಾರಿ 4 ಪ್ರಕರಣವಿದ್ದು, 117 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 3 ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 333 ಮಂದಿ ಆಸ್ಪತ್ರೆಯಿಂದ ಹಾಗೂ 281 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 86, 48, 48, 55 ವರ್ಷದ ಕುಂದಾಪುರದ ತಾಲೂಕಿನ ನಾಲ್ವರು ಪುರಷರು, 63 ವರ್ಷದ ಉಡುಪಿ ತಾಲೂಕು ಪುರುಷ ಇಂದು ಮೃತಪಟ್ಟಿದ್ದಾರೆ. 2,262 ನೆಗೆಟಿವ್: ಈ ತನಕ ಒಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ತರುವ ಅಧಿಸೂಚನೆ ಬುಧವಾರದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಅದರೊಂದಿಗೆ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಿದೆ. ಕಳೆದ ವರ್ಷ ಡಿ. 31ರಂದು ಸಚಿವಾಲಯವು ಪಟ್ಟಣ ಪಂಚಾಯಿತಿ ರಚನೆ ಪ್ರಸ್ತಾವನೆಯನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಈಗ ಏಳು ತಿಂಗಳ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ಇಂದಿನ ನಡೆಯಿಂದ ತಾಲ್ಲೂಕು ಕೇಂದ್ರವಾಗಿರುವ ಬೈಂದೂರು ಪ್ರದೇಶದ ಅಭಿವೃದ್ಧಿಗೆ ವೇಗ ಸಿಗುತ್ತದೆ ಎಂದು ಕನಸು ಕಂಡವರಿಗೆ ಸಂತಸವಾಗಿದೆ. 1971ರಲ್ಲಿ ಬೈಂದೂರು, ಯಡ್ತರೆ ಗ್ರಾಮ ಪಂಚಾಯಿತಿಗಳು ಸೇರಿ ಪುರಸಭೆಯಾಯಿತು. ಅದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ನಡೆದಿದ್ದುವು. ಆದರೆ ಗ್ರಾಮೀಣ ಪ್ರದೇಶಕ್ಕೆ ಸಿಗುವ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ ಎಂದು ಭಾವಿಸಿದ ಇಲ್ಲಿನ ಜನರ ಆಗ್ರಹಕ್ಕೆ ಮಣಿದ ಸರ್ಕಾರ ಅವುಗಳನ್ನು 1997ರಲ್ಲಿ ಪೂರ್ವ ಸ್ಥಿತಿಗೆ ಮರಳಿಸಿತು. ಈಚಿನ ದಿನಗಳಲ್ಲಿ ಪ್ರದೇಶದ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಅ.13: ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಡಿ ಅರ್ಜಿ ನಮೂನೆಯನ್ನು ನಿಗಮದ http://adcl.karnataka.gov.in ನಲ್ಲಿ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿ http://adijambava.karnataka.gov.in ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಿಂದ ಪ್ರಸ್ತುತ ಸಾಲಿನ ಡಿಪ್ಲೊಮ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ www.jsspda.org ವೆಬ್ಸೈಟ್ನ್ನು ವೀಕ್ಷಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 0821-2548315ಗೆ ಸಂಪರ್ಕಿಸಬಹುದು. ಎಂದು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಕಲಚೇತನರ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40280 .
