Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ ಕುಂದಾಪುರದ ಸ್ವಾತಿ ಪೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 594 (99%) ಅಂಕ ಪಡೆದು ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸ್ವಾತಿ ಪೈ ಕುಂದಾಪುರ ಹೊಸ ಬಸ್ ನಿಲ್ದಾಣ ಬಳಿ ಜವಳಿ ಉದ್ಯಮಿ ನಡೆಸುತ್ತಿರುವ ಶಿವಾನಂದ ಪೈ ಮತ್ತು ಶಿಲ್ಪಾ ಪೈ ಅವರ ಪುತ್ರಿ. ರ‍್ಯಾಂಕ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾತಿ, ರ‍್ಯಾಂಕ್ ಬರಲು ಕಾಲೇಜು ಹಾಗೂ ಮನೆಯವರಿಂದ ಉತ್ತಮ ಪ್ರೋತ್ಸಾಹ ಕಾರಣ. ನಿರಂತರವ ಅಭ್ಯಾಸ ಮಾಡಿದ್ದೆ. ಮುಂದೆ ನಾನು ಸಿ.ಎ ಮಾಡುವ ಹಂಬಲವಿದೆ ಎಂದಿದ್ದಾರೆ. ಇದನ್ನೂ ಓದಿ: ► ಜುಲೈ 15ರಿಂದ ಉಡುಪಿ ಜಿಲ್ಲೆಯ ಗಡಿ ಸೀಲ್‌ಡೌನ್: ಯಾವುದಕ್ಕೆಲ್ಲಾ ನಿರ್ಬಂಧ-ವಿನಾಯಿತಿ ನೋಡಿ – https://kundapraa.com/?p=39538 . ► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 72 ಪಾಸಿಟಿವ್ ದೃಢ – https://kundapraa.com/?p=39547 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.14ರ ಮಂಗಳವಾರ 72 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 41 ಹಾಗೂ ಕಾರ್ಕಳ ತಾಲೂಕಿನ 15 ಮಂದಿಗೆ ಪಾಸಿಟಿವ್ ಬಂದಿದ್ದು, ಒಟ್ಟು ಪ್ರಕರಣದಲ್ಲಿ 51 ಪುರುಷರು, 19 ಮಹಿಳೆಯರು ಹಾಗೂ 2 ಮಕ್ಕಳು ಇದ್ದಾರೆ. ಇಂದು 80 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಪೈಕಿ 7 ಮಂದಿ ಬೆಂಗಳೂರು ಪ್ರಯಾಣದ ಹಿನ್ನೆಲೆ, ಇಬ್ಬರು ಮಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದು, ಉಳಿದ ಪ್ರಕರಣಗಳು ಪ್ರಾಥಮಿಕ ಸಂಕರ್ಪದಿಂದ ಬಂದಿದೆ. 712 ನೆಗೆಟಿವ್: ಈ ತನಕ ಒಟ್ಟು 22,648 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 19,835 ನೆಗೆಟಿವ್, 1,733 ಪಾಸಿಟಿವ್ ಬಂದಿದ್ದು, 1,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 712 ನೆಗೆಟಿವ್, 72 ಪಾಸಿಟಿವ್ ಬಂದಿದೆ. ಒಟ್ಟು 1,559 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 370 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,733 ಕೊರೋನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಗಳನ್ನು ಜುಲೈ 15ರ ಬುಧವಾದಿಂದ 14 ದಿನಗಳ ಕಾಲ ಸೀಲ್‌ಡೌನ್ ಮಾಡುವ ತೀರ್ಮಾನವನ್ನು ಉಡುಪಿ ಜಿಲ್ಲಾಡಳಿಯ ಕೈಗೊಂಡಿದ್ದು , ಕೆಲವೊಂದು ನಿರ್ಬಂಧಗಳನ್ನು ವಿಧಿಸಿ ಕೆಲವೊಂದು ವಿನಾಯಿತಿ ನೀಡಿದೆ. ಸೀಲ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕ ಬಸ್ ಸಂಚಾರ ಇರುವುದಿಲ್ಲ. ಹಾಗೆಯೇ ಯಾವುದೇ ಸಂತೆಗಳು ಕೂಡಾ ಇರುವುದಿಲ್ಲ. ಯಾವುದೇ ಧಾರ್ಮಿಕ, ರಾಜಕೀಯ, ಸಾಮಾಜಿಕ ಸಭೆ, ಸಮಾರಂಭಗಳು ಕೂಡಾ ನಡೆಸಲು ಅನುಮತಿ ಇಲ್ಲ. ಸಾರ್ವಜನಿಕವಾಗಿ ಹಬ್ಬ ಆಚರಣೆಗಳಿಗೂ ಅವಕಾಶವಿಲ್ಲ. ಮೊದಲೇ ನಿರ್ಧರಿಸಲಾಗಿರುವ ವಿವಾಹ ಕಾರ್ಯಕ್ರಮಕ್ಕಾಗಿ ತಹಶೀಲ್ದಾರರಿಂದ ಕಡ್ಡಾಯವಾಗಿ ಅನುಮತಿ ಪಡೆದು 50ಕ್ಕೂ ಅಧಿಕ ಮಂದಿ ಸೇರದೆ ಕಾರ್ಯಕ್ರಮ ನಡೆಸಬಹುದಾಗಿದೆ. ಹಾಗೆಯೇ ಈಗಾಗಲೇ ಸರ್ಕಾರ ನೀಡಿರುವ ಆದೇಶದಂತೆ ಅಂತ್ಯ ಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗವಹಿಸಬಹುದಾಗಿದೆ. ಹೊರ ರಾಜ್ಯ ಅಥವಾ ಜಿಲ್ಲೆಯಿಂದ ಬರುವವರಿಗೆ ಹಾಗೂ ಹೋಗುವವರಿಗೆ ಜುಲೈ 15ರ ಸಂಜೆ 8 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ಒಳಗೆ ಎಲ್ಲಾ ಆರ್ಥಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕುಂದಾಪುರದ ಸಮಾನ ಮನಸ್ಕ ವರ್ತಕರು ಸ್ವಯಂಪ್ರೇರಿತವಾಗಿ ಮಧ್ಯಾಹ್ನ 2 ಗಂಟೆಯ ಬಳಿಕ ಮಾಡುತ್ತಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಭಾಗದಲ್ಲಿ ಒಂದಷ್ಟು ಅಂಗಡಿಗಳು ಮುಚ್ಚಿದ್ದು, ಉಳಿದ ಅಂಗಡಿಗಳು ಎಂದಿನಂತೆಯೇ ಕಾರ್ಯಾಚರಿಸುತ್ತಿದೆ. ಜೊತೆಗೆ ಬೆಳಗಿನ ಹೊತ್ತು ಜನಸಂಚಾರ ಹೆಚ್ಚಿದ್ದು, ಸಾಮಾಜಿಕ ಅಂತರ ಗಾಳಿಗೆ ತೂರಲಾಗಿದೆ. ಜುಲೈ 13ರಿಂದ ಎಲ್ಲ ದಿನಸಿ, ತರಕಾರಿ, ಹಣ್ಣು, ಎಲೆಕ್ಟ್ರಿಕಲ್ ಶೋ ರೂಂ, ಮೊಬೈಲ್, ಬಟ್ಟೆ, ಬೇಕರಿ, ಜೂಸ್ ಪಾರ್ಲರ್, ಸೆಲೂನ್, ಬೂಟಿ ಪಾರ್ಲರ್ಗಳು, ಚಿನ್ನದ ಮಳಿಗೆಗಳು ಸೇರಿದಂತೆ ಎಲ್ಲಾ ಅಂಗಡಿಗಳು ಜುಲೈ ಅಂತ್ಯದವರೆಗೆ ಮಧ್ಯಾಹ್ನ ೨ ಗಂಟೆಯ ತನಕ ತೆರೆದಿರಲಿದೆ. ತುರ್ತು ಅಗತ್ಯತೆಯಾದ ಮೆಡಿಕಲ್, ಅಧಿಕೃತ ಹಾಲು ಮಾರಾಟ ಅಂಗಡಿ, ಎಲ್ಲ ಹೋಟೆಲ್‌ಗಳು ಎಂದಿನಂತೆ ತೆರೆಯಲಿದೆ ಎಂದು ವರ್ತಕರು ಈ ಮೊದಲು ತಿಳಿಸಿದ್ದರು. ಬೆಳಗಿನ ಹೊತ್ತು ಹೆಚ್ಚಿದ ಜನದಟ್ಟಣೆ: ಸೋಮವಾರದಿಂದ ಬೆಳಗಿನ ಹೊತ್ತು ಕುಂದಾಪುರ ಪೇಟೆಯಲ್ಲಿ ಜನ ದಟ್ಟಣೆ ಹೆಚ್ಚಿದ್ದು, ಅಂಗಡಿಗಳ ಮುಂಭಾಗದಲ್ಲಿ ಸಾಮಾಜಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟಿ ಅಮವಾಸ್ಯೆಯಂದು ಆಚರಿಸಲಾಗುತ್ತಿರುವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಕಲಾಕ್ಷೇತ್ರ – ಕುಂದಾಪುರ ಸಂಸ್ಥೆಯು ನೇತೃತ್ವದಲ್ಲಿ ಜುಲೈ 20ರಂದು ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಆಚರಿಸಲಾಗುತ್ತಿದೆ. ಅಂದು ಸಂಜೆ ನಾಲ್ಕು ಗಂಟೆಗೆ ಯಕ್ಷಗಾನದ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ, ರೊಟರಿ ಮಾಜಿ ಗವರ್ನರ್ ಎ.ಎಸ್.ಎನ್. ಹೆಬ್ಬಾರ್ ಅವರು ಕುಂದಾಪ್ರ ಕನ್ನಡದ ಇತಿಹಾಸ ಹಾಗೂ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಲಿಕ್ಕಿದ್ದಾರೆ. ಬಹಿರಂಗ ಸಭೆಗೆ ಅವಕಾಶವಿಲ್ಲದ ಕಾರಣ ಪ್ರಮುಖ ಆಹ್ವಾನಿತರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದ ನೇರಪ್ರಸಾರವನ್ನು ಕಲಾಕ್ಷೇತ್ರ ಕುಂದಾಪುರ ಹಾಗೂ ಕುಂದಾಪ್ರ ಡಾಟ್ ಕಾಂ ಫೇಸ್ಬುಕ್ ಪೇಜ್ ಮೂಲಕ ವೀಕ್ಷಿಸಬಹುದಾಗಿದೆ. ಪ್ರಬಂಧ ಸ್ಪರ್ಧೆ: ನೆರ‍್ಮನಿ ಹಾಳಾರೆ ಕರಿನ ಕಟ್ಟುಕೆ ಜಾಗ ಆಯ್ತ್ ಅಂದಿನಂಬ್ರ್ ಎಂಬ ಕುಂದಾಪ್ರ ಕನ್ನಡ ಚಾಟೋಕ್ತಿಯ ಮೇಲೆ ಎ4 ಅಳತೆಯ ಹಾಳೆಯಲ್ಲಿ ಒಂದು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಕೈ ಬರಹದ ಮೂಲಕ ಬರೆದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಧ್ಯಾರ್ಥಿ ಗೋಳಿಹೊಳೆಯ ಮಹೇಶ್ ಎಂ. ಪೂಜಾರಿ ಹುಂಡಿಮಕ್ಕಿ ಶೇ 90.33% (542) ಅಂಕದೊಂದಿಗೆ ತೆರ್ಗಡೆ ಹೊಂದಿದ್ದಾರೆ. ಈತ ಮಾಧವ ಹಾಗೂ ಮೂಕಾಂಬಿಕಾ ದಂಪತಿಯವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಜು14: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲಿಗೆ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸೀಲ್ಡೌನ್ ಮಾಡುವ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಗಡಿಭಾಗದಿಂದ ಹೊರಗೆ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಜು. 15 ರ ಬುಧವಾರ ರಾತ್ರಿ 8:00 ಗಂಟೆಯವರೆಗೆ ಅವಕಾಶ ಕಲ್ಪಿಸಲು ಹಾಗೂ ಬುಧವಾರದಿಂದ ಬಸ್ ಸಹಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ತೀರ್ಮನಿಸಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರದ ಹಿಂದಿನ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ಡೌನ್ ಯಥಾಸ್ಥಿತಿ ಮುಂದುವರೆಯಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸಭೆಯಲ್ಲಿ ಕುಂದಾಪುರ ಶಾಸಕರಾದ ಶ್ರೀನಿವಾಸ್ ಶೆಟ್ಟಿ, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಕಾರ್ಕಳ ಶಾಸಕರಾದ ಸುನೀಲ್ ಕುಮಾರ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ  ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ – ದಕ್ಷಿಣ ಕನ್ನಡ ಶೇ. 90.71  ಫಲಿತಾಂಶದೊಂದಿದೆ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದು, ಮೂರನೇ ಸ್ಥಾನದಲ್ಲಿರುವ ಕೊಡಗು ಜಿಲ್ಲೆಯಲ್ಲಿ 81.53% ಉತ್ತರ ಕನ್ನಡ ಜಿಲ್ಲೆಯಲ್ಲಿ 80;97 % ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 79.11 % ಫಲಿತಾಂಶ ದಾಖಲಿಸುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕೊನೆಯ ಸ್ಥಾನದಲ್ಲಿರುವ ವಿಜಯಪುರದಲ್ಲಿ 54.22% ಫಲಿತಾಂಶ ದಾಖಲಾಗಿದೆ. ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಸ್ಥೆಯು ಲಾಭದ ಹಾದಿಯಲ್ಲಿ ಮುನ್ನಡೆದು, ಆರ್ಥಿಕ ದೃಢತೆ ಸಾಧಿಸಿ ಉತ್ತಮ ಸೇವಾ ದಾಖಲೆ ಹೊಂದಬೇಕಾದರೆ ಆಡಳಿತ ಮಂಡಳಿ, ಸಿಬ್ಬಂದಿ, ಸದಸ್ಯರ ಮತ್ತು ಸಾರ್ವಜನಿಕರ ಬೆಂಬಲ ಅಗತ್ಯ. ಇಪ್ಪತ್ತೈದು ವರ್ಷಗಳಿಂದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹುದ್ದೆಯಲ್ಲಿ ಅಂತಹ ಸಹಕಾರ ದೊರೆತ ಕಾರಣ ಅದನ್ನು ಜಿಲ್ಲೆಯ ಯಶಸ್ವೀ ಸಹಕಾರಿ ಸಂಸ್ಥೆಯಾಗಿ ರೂಪಿಸಲು ಸಾಧ್ಯವಾಗಿದೆ ಎಂದು ಎಸ್. ರಾಜು ಪೂಜಾರಿ ಹೇಳಿದರು. ಸೋಮವಾರ ನಡೆದ ಸಂಘದ ಮರವಂತೆ ಶಾಖೆಯ ನೂತನ ಕಚೇರಿ ಕಟ್ಟಡ ನಿರ್ಮಾಣದ ಶಂಕು ಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸಂಘದ ನಾವುಂದದ ಪ್ರಧಾನ ಕಚೇರಿ ಮತ್ತು ಹೇರೂರು ಶಾಖಾ ಕಚೇರಿ ಸಾಲ ಪಡೆದು ನಿರ್ವಹಿಸಿದ್ದರೆ, ಬಡಾಕೆರೆ ಕಚೇರಿ ಮತ್ತು ಮರವಂತೆ ಪ್ರಸಕ್ತ ಕಟ್ಟಡವನ್ನು ಸಂಘದ ಕಟ್ಟಡ ನಿಧಿಯಿಂದ ಮಾಡಲು ಸಾಧ್ಯವಾಗಿದೆ. ಇದು ಸಂಘ ಸಾಧಿಸಿದ ಬೆಳವಣಿಗೆ ಮತ್ತು ದೃಢತೆಯ ದ್ಯೋತಕ ಎಂದ ಅವರು ಮರವಂತೆಯ ನಿವೇಶನವನ್ನು ಉಚಿತವಾಗಿ ನೀಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ, ತಿರುಗಾಡುತ್ತಿದ್ದ ವ್ಯಕ್ತಿಯ ವಿರುದ್ಧ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ 163 ಬಾರಿ ಹೊರಗೆ ಬಂದಿರುವ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ. ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪಿ. ಈತ ಕುಂದಾಪುರದಲ್ಲಿ ಗ್ಲಾಸ್ ಮತ್ತು ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಜೂ.29 ರಂದು ಕೋಟೇಶ್ವರದ ಬೈಪಾಸ್ ಬಳಿಯ ಬಾಡಿಗೆ ಮನೆಗೆ ಬಂದಿದ್ದು, ಆತನಿಗೆ ಜು.13 ರವರೆಗೆ ಹೋಂ ಕ್ವಾರಂಟೈನ್ ನೀಡಲಾಗಿತ್ತು. ಆದರೆ ಆತ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್ಗಳಿಗೆ ತಿರುಗಾಡುತ್ತಿರುವ ಬಗ್ಗೆ 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ. ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಜಿ. ಭಟ್ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್…

Read More