ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪಿ. ಜಿ. ಸೆಮಿನಾರ್ ಹಾಲ್‌ನಲ್ಲಿ ವೃತ್ತಿಪರ ವಾಣಿಜ್ಯ ವಿಭಾಗ ಆಯೋಜಿಸಿದ ’ಗಾಂಧಿ ಬೆಳಕಲ್ಲಿ ವರ್ತಮಾನ’ ಉದ್ಘಾಟನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ’ಗಾಂಧಿ ಹೇಳಿರುವ ಹಾಗೆ ಆರ್ಥಿಕ ಸ್ವಾವಲಂಬನೆಯ ಜೊತೆಗೆ ಮಾನಸಿಕ ಸ್ವಾವಲಂಬನೆ ಕೂಡ ಆಗಬೇಕು. ಪ್ರಾಯೋಗಿಕವಾಗಿ ಸರಳ ಜೀವನ ನಡೆಸುವ ಬಗ್ಗೆ ಚಿಂತನೆಯಾಗಬೇಕು’ ಗಾಂಧಿಯವರು ಬದುಕಿನಲ್ಲಿ ಅಳವಡಿಸಿದ್ದ ಸರಳತೆ, ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತಾ, ಮಹಾತ್ಮನನ್ನು ಮತ್ತೊಂದು ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಬೇಕು. ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ತನಗಾಗಿ ಏನನ್ನೂ ಕೂಡಿಡದೆ ಮಾನವೀಯತೆಗಾಗಿ ಬದುಕಿದ ಗಾಂಧಿ ನಮ್ಮೆಲ್ಲರ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುತ್ತಾರೆ. ವರ್ತಮಾನದಲ್ಲೂ ಅವರ ಮಾತುಗಳು, ಅವರು ನಡೆದು ಬಂದ ರೀತಿ ಎಲ್ಲರಿಗೂ ಆದರ್ಶ ಎಂದು ತಿಳಿಸಿದರು. ಹಸಿರು ಆವರಣ ಯೋಜನೆ: ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾವ್ರಾಡಿ ಮುಳ್ಳುಗುಡ್ಡೆ, ಬಸ್ರೂರು ಮತ್ತು ಕುಂದಾಪುರ ರೈಲ್ವೆ ನಿಲ್ದಾಣದ ವಸತಿ ಗೃಹದ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರ ತಾಲೂಕು ಮಂಕಿ ನಿವಾಸಿ ವಿಲ್ಸನ್ ಪಿಯಾದಾಸ್ ಲೋಪಿಸ್ (29) ಮತ್ತು ತೆಕ್ಕಟ್ಟೆ ನಿವಾಸಿ ಗಂಗಾಧರ (40) ಬಂಧಿತ ಆರೋಪಿಗಳು. 2019 ಮೇ ತಿಂಗಳಿನಲ್ಲಿ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಮುಳ್ಳುಗುಡ್ಡೆಯಲ್ಲಿರುವ ನಾಗರಾಜ್ ಅವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಯ ಮಾಡಿನ ಹಂಚನ್ನು ತೆಗೆದು ಮನೆಯೊಳಗೆ ಪ್ರವೇಶಿಸಿ ಕಪಾಟನ್ನು ಒಡೆದು ಮನೆಯೊಳಗಿದ್ದ ಚಿನ್ನ ಮತ್ತು ಬೆಳ್ಳಿ ಆಭರಣ, ಇಸ್ತ್ರಿಪೆಟ್ಟಿಗೆ ನಗದು ಸೇರಿ ಒಟ್ಟು 64,900 ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದರು. 2019 ಜೂನ್ ತಿಂಗಳಿನಲ್ಲಿ ಬಸ್ರೂರು ಗ್ರಾಮದ ಕೊಳ್ಕೇರಿ ಮಹಾಲಿಂಗ ಹಾಗೂ ಅವರ ಹೆಂಡತಿ ಮಕ್ಕಳು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಯ ಮಾಡಿನ ಹಂಚನ್ನು ತೆಗೆದು ಒಳಗೆ ಪ್ರವೇಶಿಸಿ ಮನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ಬೈಂದೂರು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರೀರಥಿ ಸುರೇಶ ಗಂಗೊಳ್ಳಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಮಂಡಲ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಸಾಮ್ರಾಟ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ, ಮಹಿಳಾ ಮೋರ್ಚಾ ಉಪಾದ್ಯಕ್ಷರಾದ ಜಯಂತಿ ಪೂಜಾರಿ, ದೀಪಾ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಆರ್. ಕೆ., ಮಾಲತಿ ನಾಯ್ಕ್, ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಸರಿತಾ ನಾಯ್ಕ್, ಸುಮಿತಾ ಶೇರುಗಾರ್, ಜ್ಯೋತಿ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ. ಲಕ್ಷ್ಮೀಕಾಂತ ಮಡಿವಾಳ, ಬಿ. ರಾಘವೇಂದ್ರ ಪೈ, ಶೇಕ್ ಪರ್ವಿನ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ದೀವಗಿಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದ ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಲಾರಿ ಹಾಗೂ ಬೈಂದೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಂಜುನಾಥ ಆಚಾರ್ಯ ಕಾಲ್ತೋಡು (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಹಪ್ರಯಾಣಿಕ ರವಿಕಾಂತ್ ಆಚಾರ್ಯ (30) ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ : ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿರುವ ಕಾರಂತ ಸಿರಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸ್ಥಾಪಿಸಲಾಗಿರುವ ಪುಸ್ತಕ ಮಳಿಗೆಯಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಡಾ. ಶಿವರಾಮ ಕಾರಂತರು, ನಾಡೋಜ ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ , ಸೇರಿದಂತೆ ಇನ್ನಿತರ ಸಾಹಿತಿಗಳ ಕಾದಂಬರಿ , ಮಕ್ಕಳ ಕಥೆ ಪುಸ್ತಕ, ಧಾರ್ಮಿಕ ಸಂಬಂಧಿಸಿದ ಹಾಗೂ ವ್ಯಕ್ತಿತ್ವ ವಿಕಸನದ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿತವಾದ ಪುಸ್ತಕಗಳನ್ನು ವಿಶೇಷ ಸಂದರ್ಭಗಳಾದ ಗಣರಾಜ್ಯೋತ್ಸವ, ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನಡೆಯುವ ಜನವರಿ , ಆಗಸ್ಟ್ ಹಾಗೂ ನವೆಂಬರ್ ಮಾಹೆಗಳಲ್ಲಿ ಅಲ್ಲದೆ ರಾಜ್ಯದಲ್ಲಿ ವಿಶೇಷವಾಗಿ ನಡೆಯುವ ವಿಶ್ವ ಕನ್ನಡ ಸಮ್ಮೇಳನ, ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ 50 % ರಿಯಾಯಿತಿ ದರದಲ್ಲಿ ಉಳಿದ ದಿನಗಳಲ್ಲಿ 15% ರಿಯಾಯಿತಿ ದರದಲ್ಲಿ ಪುಸ್ತಕಗಳು ದೊರೆಯಲಿದೆ ಎಂದು ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ , ಕಾರ್ಯದರ್ಶಿ ನರೇಂದ್ರ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾ.ಪಂ. ಉಪಾಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ಮಾತನಾಡಿ, ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಹೆಮ್ಮೆಯ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ. ಹೀಗಾಗಿ ಹುಟ್ಟೂರಿನಲ್ಲಿ ಅವರ ನೆನಪುಗಳು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಕೋಟ – ಸಾಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆಗೆ ಅವರ ಹೆಸರಿಡಬೇಕು ಎನ್ನುವ ಬೇಡಿಕೆಯನ್ನು ಬ್ರಹ್ಮಾವರ ಪತ್ರಕರ್ತರ ಸಂಘದವರು ಮುಂದಿರಿಸಿದ್ದು ಇದು ಅತ್ಯಂತ ಸಮಂಜಸವಾಗಿದೆ. ಈ ಕುರಿತು ತಾ.ಪಂ. ವತಿಯಿಂದ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಜಿ. ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿ, ವಡ್ಡರ್ಸೆಯವರ ಹೆಸರಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಜಟ್ಟಿಗ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮ ಇತ್ತೀಚೆಗೆ ನೆಡೆಯಿತು ಕಾರ್ಯಕ್ರಮದಲ್ಲಿ ಶಾಸಕ ಬಿ. ಎಂ . ಸುಕುಮಾರ ಶೆಟ್ಟಿ ಮಾತನಾಡಿ, ಮರವಂತೆ ಮೀನುಗಾರಿಕಾ ಹೊರಬಂದರು ದ್ವಿತೀಯ ಹಂತದ ಕಾಮಗಾರಿಗೆ ರೂ 85 ಕೋಟಿ ಮಂಜೂರಾಗಿದ್ದು ಶೀಘ್ರವೇ ಕಾಮಗಾರಿ ಆರಂಭವಾಗುವುದು ರೂ 80 ಲಕ್ಷ ವೆಚ್ಚದಲ್ಲಿ ನಡೆಯುವ ಮರವಂತೆ ಜಟ್ಟಿಗ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಡೆದ ಭೂಮಿಪೂಜೆ ಸಂದರ್ಭದಲ್ಲಿ ಹೇಳಿದರು. ಕ್ಷೇತ್ರದ ಕುಡಿಯುವ ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರೂ 550 ಕೋಟಿ ಬಿಡುಗಡೆಯಾಗಲಿದೆ. ಅದರಿಂದ ಎಲ್ಲ ಮನೆಗಳಿಗೆ ನೀರು ಪೂರೈಸಲಾಗುವುದು. ಗ್ರಾಮದ ಕೆಟ್ಟು ಹೋಗಿರುವ ಎಲ್ಲ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಜಗದೀಶ ದೇವಾಡಿಗ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಅನಿತಾ ಆರ್. ಕೆ, ಮಾಜಿ ಸದಸ್ಯರಾದ ಪ್ರಭಾಕರ ಖಾರ್ವಿ, ನಾಗರಾಜ ಖಾರ್ವಿ, ಲೋಕೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌತ್ ಕೆನಾರ ಪೋಟೋಗ್ರಾಫರ್ ಅಸೋಸಿಯೇಶನ್ ರಿ. ಕುಂದಾಪುರ ವಲಯ ಇದರ ವತಿಯಿಂದ ಕುಂದಾಪುರ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿರುವ ಗಾಂಧೀಜಿ ಪ್ರತಿಮೆ ಹಾಗೂ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜನ್ಮ ದಿನಾಚರಣೆ ಆಚರಿಸಲಾಯಿತು. ಸೌತ್ ಕೆನಾರ ಪೋಟೋಗ್ರಾಫರ್ ಅಸೋಸಿಯೇಶನ್ ದ, ಕ ಉಡುಪಿ ಇದರ ಉಪಾಧ್ಯಕ್ಷರಾದ ನಾಗರಾಜ ರಾಯಪ್ಪನ ಮಠ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಾಜಾ ಮಠದ ಬೆಟ್ಟು, ಸಂಚಾಲಕರಾದ ಗಿರೀಶ್ ಜಿ, ಕೆ, ಪ್ರಧಾನ ಕಾರ್ಯದರ್ಶಿ ಅಮೃತ ಬೀಜಾಡಿ, ಉಪಾಧ್ಯಕ್ಷರಾದ ಪ್ರಕಾಶ ಕುಂದೇಶ್ವರ, ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಗೋಪಾಲ್ ಕಾಂಚನ್, ಮಾಜಿ ಅಧ್ಯಕ್ಷರಾದ ಸುರೇಶ್ ಸುರಭಿ, ದಿನೇಶ ಗೋಡೆ, ಪ್ರಮೋದ್ ಚಂದನ್, ಜೊತೆ ಕಾರ್ಯದರ್ಶಿ ಸುರೇಶ ಮೊಳಹಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರ್ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಿಂದ ಆಯೋಜಿಸಲ್ಪಟ್ಟ ಒಂದು ದಿನದ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಮ್- “ಹೇಗೆ ಬೋಧನಾ- ಕಲಿಕಾ ಪ್ರಕ್ರಿಯೆಯಲ್ಲಿ ಗುಣಮಟ್ಟದ ಬದಲಾವಣೆ ಸಾಧ್ಯ” ಎಂಬ ವಿಷಯದ ಕುರಿತು ಉದ್ಘಾಟನಾ ಕಾರ್ಯಕ್ರಮ ನಡೆಯಿತು ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಲಹಾಬಾದ ಐಐಐಟಿಯ ನಿರ್ದೇಶಕ ಪ್ರೋ ಪಿ. ನಾಗಭೂಷಣ್, ಪ್ರತಿಯೊಬ್ಬ ಶಿಕ್ಷಕನೂ ತನ್ನ ಮುಂದಿರುವ ಸವಾಲುಗಳನ್ನ ಮೀರಿ ಯೋಚಿಸಿ, ಕಾರ‍್ಯ ಪ್ರವೃತ್ತನಾದಾಗ ಶಿಕ್ಷಣದ ಮೂಲ ಧ್ಯೇಯ – ಸರ್ವಾಂಗೀಣ ಪ್ರಗತಿ ವಿದ್ಯಾರ್ಥಿಯಲ್ಲಿ ಮೂಡಲು ಸಾಧ್ಯ ನಮ್ಮ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾನಿಲಯಗಳ ಅಧೀನದಲ್ಲಿ ಕಾರ‍್ಯ ನಿರ್ವಹಿಸುವ ಹಿನ್ನಲೆಯಲ್ಲಿ ಅನೇಕ ನಿರ್ಬಂಧಗಳು ತಮ್ಮನ್ನು ಸೀಮಿತಗೊಳಿಸಿದರೂ ಅದನ್ನು ಮೀರಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರೂ ದುಡಿಯುವ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಕಾರ‍್ಯರೂಪಕ್ಕೆ ಬರಲಿರುವ ಹೊಸ ಶಿಕ್ಷಣ ನೀತಿ ಶೈಕ್ಷಣಿಕ ಸ್ವಾಯತ್ತತೆಗೆ ಹೆಚ್ಚು ಒತ್ತು ನೀಡಲಿದ್ದು ಶಿಕ್ಷಕರು ಇನ್ನೂ ಹೆಚ್ಚಿನ ಜವಾಬ್ದಾರಿ ಹಾಗೂ ಕಾರ‍್ಯ ಕ್ಷಮತೆಯನ್ನು ಪ್ರದರ್ಶಿಸಬೇಕು ಎಂದರು. ಶಿಕ್ಷಕನು ತಾನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ರೆಡ್ ಕ್ರಾಸ್ ಸೊಸೈಟಿಯಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಲಯನ್ಸ್‌ನ ಪ್ರಮುಖರಾದ ರಾಜೀವ ಕೋಟ್ಯಾನ್, ನವೀನ್ ಶೆಟ್ಟಿ, ಗೋಪಾಲ ಕೃಷ್ಣ ಶೇಟ್, ಕಿರಣ್ ಕುಮಾರ್, ಸಾತ್ವಿಕ್ ಕಲ್ಪತರು ಮುಂತಾದವರು ಉಪಸ್ಥಿತರಿದ್ದರು.
