ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಪಡುವರಿಯಲ್ಲಿ ವಾಸವಾಗಿರುವ ಉಪ್ಪಿನಕುದ್ರು ವಾಸನಮನೆಯ ರತ್ನಾಕರ ಶೇರೆಗಾರ್ ಮತ್ತು ಶ್ರೀದೇವಿ ದಂಪತಿಗಳ ಪುತ್ರ ವಿಪಿನ್ ಆರ್. ಶೇರೆಗಾರ್ಗೆ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಅಗತ್ಯವಾದ ರೂ. ೪೮,೦೦೦ ಮೌಲ್ಯದ ಲ್ಯಾಪ್ಟಾಪ್ನ್ನು ಟ್ರಸ್ಟ್ನ ಪರವಾಗಿ ಶ್ರೀ ರಾಮ ಶೈಕ್ಷಣಿಕ ದತ್ತು ಯೋಜನೆಯಡಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮ ವಿವಿಧೋದ್ಧೇಶ ಟ್ರಸ್ಟ್ಟ್ನ ಆಡಳಿತ ಟ್ರಸ್ಟಿಗಳಾದ ಬಿ. ರಾಮಕೃಷ್ಣ ಶೇರೆಗಾರ್, ಟ್ರಸ್ಟಿಗಳಾದ ಕೆ. ಜಿ. ನಾಗಪ್ಪ ಶೇರೆಗಾರ್, ವೆಂಕಟ್ರಮಣ ಬಿಜೂರು ಹಾಗೂ ಸಂಚಾಲಕರಾದ ಆನಂದ ಮದ್ದೋಡಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.1ರ ಮಂಗಳವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ 57ಕುಂದಾಪುರ ತಾಲೂಕಿನ, ಉಡುಪಿ ತಾಲೂಕಿನ 85 ಹಾಗೂ 13 ಕಾರ್ಕಳ ತಾಲೂಕಿನ ಮಂದಿಗೆ ಪಾಸಿಟಿವ್ ಬಂದಿದೆ. ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 97 ಸಿಂಥಮೇಟಿವ್ ಹಾಗೂ 64 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 43, ILI 81, ಸಾರಿ 3 ಪ್ರಕರಣವಿದ್ದು, 26 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 8 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 65 ಮಂದಿ ಆಸ್ಪತ್ರೆಯಿಂದ ಹಾಗೂ 185 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 78 ವರ್ಷದ ವೃದ್ಧೆ, ಕಾರ್ಕಳದ 58 ವರ್ಷದ ಪುರುಷ ಇಂದು ಮೃತಪಟ್ಟಿದ್ದಾರೆ. 2,307 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 11757 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9351 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2307 ಸಕ್ರಿಯ ಪ್ರಕರಣಗಳಲ್ಲಿ 1097 ಮಂದಿ ಉಡುಪಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.31ರ ಸೋಮವಟರ 83 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 35, ಉಡುಪಿ ತಾಲೂಕಿನ 28 ಹಾಗೂ ಕಾರ್ಕಳ ತಾಲೂಕಿನ 18 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 30 ಸಿಂಥಮೇಟಿವ್ ಹಾಗೂ 53 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 21, ILI 32, ಸಾರಿ 3 ಪ್ರಕರಣವಿದ್ದು, 27 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 81 ಮಂದಿ ಆಸ್ಪತ್ರೆಯಿಂದ ಹಾಗೂ 222 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 43 & 40 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ. 2,398 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 11596 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9101 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2398 ಸಕ್ರಿಯ ಪ್ರಕರಣಗಳಲ್ಲಿ 1125 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗೋವಿಗಾಗಿ ಮೇವು ಅಭಿಯಾನದ ಅಂಗವಾಗಿ ನೀಲಾವರದ ಪೇಜಾವರ ಮಠದ ಗೋಶಾಲೆಗೆ ಹಸಿ ಹುಲ್ಲು ನೀಡಲಾಯಿತು. ಹಸಿ ಹುಲ್ಲುಗಳ ಕೊಡುಗೆ ಸ್ವೀಕರಿಸಿದ ಪೇಜಾವರ ಮಠದ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ಆಶೀರ್ವಚನ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಕುಂದಾಪುರ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಪ್ರಧಾನ ಕಾರ್ಯದರ್ಶಿ ಅನಿತಾ ಶ್ರೀಧರ್, ಕೋಶಾಧಿಕಾರಿ ಆಶಾ ಗೋವಿಂದ ಮೊಗವೀರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪಿ.ಗುಣರತ್ನಾ, ಪುಷ್ಪಾ ಶೇಟ್, ಇಂದಿರಾ, ಶಾಂತಾ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಸಬ್ಲಾಡಿ ಶೀನಪ್ಪ ಶೆಟ್ಟಿ ಮೆಮೇರಿಯಲ್ ಚಾರಿಟೆಬಲ್ ಟ್ರಸ್ಟ್ ಕುಂದಾಪುರ ಇದರ ವತಿಯಿಂದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಪೂರಕವಾದ ಒಂದು ಲಕ್ಷ ಮೌಲ್ಯದ ವೈದ್ಯಕೀಯ ಸಿಬ್ಬಂದಿ ಧರಿಸುವ ಸ್ಕೃಬ್ ಸೂಟ್ ನೀಡಲಾಯಿತು. ಈ ಸಂದರ್ಭದಲ್ಲಿ ಕೊಡುಗೆ ಸ್ವೀಕರಿಸಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಅವರು, ಸಾರ್ವಜನಿಕರ ಈ ಕೊಡುಗೆ ಕೊರೋನಾ ವಾರಿಯರ್ಸ್ರಲ್ಲಿ ತೊಡಗಿಸಿಕೊಂಡ ವೈದ್ಯರುಗಳಿಗೆ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಇನ್ನಷ್ಟು ಉತ್ಸಾಹ ತರಲಿದೆ. ಅವರ ಹಗಲಿರುಳು ಸೇವೆ ಸಾರ್ವಜನಿಕರು ಗುರುತಿಸಿದಂತಾಗುತ್ತದೆ ಎಂದು ಹೇಳಿದ ಅವರು ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ಟ್ರಸ್ಟಿನ ಪರವಾಗಿ ಎನ್.ಜಯರಾಮ ಶೆಟ್ಟಿ ಸಬ್ಲಾಡಿ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೋವಿಡ್ಕೇರ್ ಆಸ್ಪತ್ರೆಯ ನೋಡಲ್ ವೈದ್ಯಾಧಿಕಾರಿ ಡಾ|ನಾಗೇಶ್ ಮಾತನಾಡಿ, ಕುಂದಾಪುರ ತಾಲೂಕಿನ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸಬ್ಲಾಡಿ ಶೀನಪ್ಪ ಶೆಟ್ಟಿ ಟ್ರಸ್ಟಿನ ಈ ಕೊಡುಗೆ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಅನುಕೂಲವಾಗಲಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.30ರ ಭಾನುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 61, ಉಡುಪಿ ತಾಲೂಕಿನ 145 ಹಾಗೂ ಕಾರ್ಕಳ ತಾಲೂಕಿನ 40 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 105 ಸಿಂಥಮೇಟಿವ್ ಹಾಗೂ 149 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 102, ILI 92, ಸಾರಿ 4 ಪ್ರಕರಣವಿದ್ದು, 47 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 4 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 82 ಮಂದಿ ಆಸ್ಪತ್ರೆಯಿಂದ ಹಾಗೂ 113 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 735 ನೆಗೆಟಿವ್: ಈ ತನಕ ಒಟ್ಟು 71120 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 59367 ನೆಗೆಟಿವ್, 11513 ಪಾಸಿಟಿವ್ ಬಂದಿದ್ದು, 240 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 735 ನೆಗೆಟಿವ್, 254 ಪಾಸಿಟಿವ್ ಬಂದಿದೆ. 2,620…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಉಡುಪಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರತಿನಿಧಿಯಾಗಿ ವೆಂಕಟ ಪೂಜಾರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ ಇತ್ತಿಚಿಗೆ ಆಯ್ಕೆಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ಮಕ್ಕಳಲ್ಲಿ ಅಗಾಧ ಪ್ರತಿಭೆ ಇದ್ದು, ಶಿಕ್ಷಣ ಪಡೆಯಲು ಹೆಚ್ಚು ಆಸಕ್ತಿ ತೋರಿದರೆ ಉತ್ತಮ ಸಾಧನೆ ಮಾಡಬಹುದಾಗಿದೆ. ಪ್ರತಿಭೆ ಇದ್ದವರಿಗೆ ಒಂದಿಲ್ಲೊಂದು ರೂಪದಲ್ಲಿ ಸಹಕಾರದ ದೊರೆಯುತ್ತದೆ ಎಂದು ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಹೇಳಿದರು. ಇಲ್ಲಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ ವಿದ್ಯಾವಂತರಾದಾಗಲೇ ಜಗತ್ತಿನೆದುರು ತಲೆಯೆತ್ತೆ ನಡೆಯಲು ಸಾಧ್ಯ. ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರದಿಂದ ನೀಡುವ ಉಚಿತ ಪಡಿತರ ಅಕ್ಕಿಯನ್ನು ಜನರಿಂದ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಉಡುಪಿ ಡಿಸಿಐಬಿ ಪೊಲೀಸರು ಪತ್ತೆ ಹಚ್ಚಿದ್ದು, ಗುರುವಾರ ಸಂಜೆ ಕೋಟೇಶ್ವರದ ಕಟ್ಕೆರೆ ಸಮೀಪದ ಮೇಪು ಎಂಬಲ್ಲಿ ಅಕ್ರಮ ದಾಸ್ತಾನು ಇರಿಸಲಾಗಿದ್ದ ಗೋದಾಮಿಗೆ ದಾಳಿ ನಡೆಸಿ ಒಟ್ಟು 9 ಮಂದಿ ಆರೋಪಿಗಳು, ವಾಹನ, ಪೋನ್ಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಗೋದಾಮಿನಲ್ಲಿದ್ದ ಒಟ್ಟು 50 ಟನ್ಗೂ ಅಧಿಕ ಪಡಿತರ ಅಕ್ಕಿ, ಸಾಗಾಟಕ್ಕೆ ಬಳಸುವ ಎರಡು ಲಾರಿ, ಮೂರು ಕಾರುಗಳು, ಬೈಕುಗಳು ಹಾಗೂ ಎರಡು ಲಕ್ಷಕ್ಕೂ ಅಧಿಕ ನಗದು, ಮೊಬೈಲ್ ಪೋನುಗಳು, ಇಲೆಕ್ಟ್ರಿಕಲ್ ತೂಕಮಾಪಕ, ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್, ಅಬ್ದುಲ್ ಸತ್ತಾರ್ ಮತ್ತು ಅಬ್ದುಲ್ ಅಜೀಜ್ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ. ತಾಲೂಕಿನಲ್ಲಿ ಪಡಿತರ ಅಕ್ಕಿಯನ್ನು ಬಡವರಿಂದ ಖರೀದಿಸಿ ಇತರೆಡೆಗೆ ಮಾರಾಟ ಮಾಡುವ ವ್ಯವಸ್ಥಿತ ಜಾಲ ಕಾರ್ಯಾಚರಿಸುತ್ತಿರುವ ಬಗ್ಗೆ ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಜಿಲ್ಲಾ ಪ್ರಾಜೆಕ್ಟ್ ರೈತಬಂಧು ಕಾರ್ಯಕ್ರಮದ ಅಂಗವಾಗಿ ರೈತರಿಗೆ ರಾಸಾಯನಿಕ ಗೊಬ್ಬರ ವಿತರಣಾ ಕಾರ್ಯಕ್ರಮ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಅವರು ರೈತರಿಗೆ ಸಹಾಯಕವಾಗುವ ಉದ್ದೇಶದಿಂದ ಸ್ಥಳೀಯ ಕೃಷಿಕರಾದ ಗೋವಿಂದ ಪೂಜಾರಿ ಮತ್ತು ಶ್ರೀನಿವಾಸ ಶೇರುಗರ್ ಅವರಿಗೆ ರಾಸಾಯನಿಕ ಗೊಬ್ಬರ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ನ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಪೆರಾಜೆ, ಸದಸ್ಯರಾದ ವಿಜಯ ಪೂಜಾರಿ, ನಾರಾಯಣ ಇ.ನಾಯ್ಕ್, ವಿಷ್ಣು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
