Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಾಹಿತ್ಯ ಸಮ್ಮೇಳನಗಳಲ್ಲಿ ಕುಂದಾಪ್ರ ಕನ್ನಡಕ್ಕೆ ಆದ್ಯತೆ ನೀಡಿದಾಗ ಭಾಷೆ ಉಳಿಯುವುದಕ್ಕೆ ಸಹಕಾರಿ ಆಗುತ್ತದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕುಂದಾಪ್ರ ಕನ್ನಡ ಭಾಷೆಯನ್ನು ಬಳಸಿ–ಬೆಳೆಸುವ ಮತ್ತು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮದು. ಭಾಷೆಯಲ್ಲಿನ ಸ್ಥಿತ್ಯಂತರಗಳ ಅಧ್ಯಯನಕ್ಕೆ ಭಾಷೆಯನ್ನು ಲಿಖಿತವಾಗಿ ದಾಖಲಿಸಬೇಕು’ ಎಂದರು. ಕುಂದಾಪ್ರ ಕನ್ನಡದ ರಾಯಭಾರಿ ಮನು ಹಂದಾಡಿ ಆಸಾಡಿ ಹಬ್ಬದ ಆಚರಣೆ ಮತ್ತು ನೆಲಮೂಲ ಸಂಸ್ಕೃತಿಯ ಆರಾಧಾನೆಯಲ್ಲಿ ಅದರ ಪ್ರಾಮುಖ್ಯದ ಕುರಿತು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ದೀಪಕ್ ಶೆಟ್ಟಿ ಬಾರ್ಕೂರು, ಉದಯ ಶೆಟ್ಟಿ ಪಡುಕೆರೆ, ಹರೀಶ್ ಕಿರಣ್ ತುಂಗ, ಪ್ರವೀಣ್ ಯಕ್ಷೀಮಠ, ಸಫಲ್ ಶೆಟ್ಟಿ, ಸುನೀಲ್ ಪಾಂಡೇಶ್ವರ್ ಮತ್ತು ಅಶ್ವೀತ್ ಶೆಟ್ಟಿ ಕೊಡ್ಲಾಡಿ, ವಸಂತ ಗಿಳಿಯಾರ್ ಇದ್ದರು. ಆಸಾಡಿ ಸಂಪ್ರದಾಯ ಸಾಸ್ತಾನದ ದಿ.ರಾಮಚಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.20ರ ಸೋಮವಾರ 98 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 36, ಉಡುಪಿ ತಾಲೂಕಿನ 56 ಹಾಗೂ ಕಾರ್ಕಳ ತಾಲೂಕಿನ 6 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 53 ಪುರುಷರು, 36 ಮಹಿಳೆಯರು, 10 ಮಕ್ಕಳು ಸೇರಿದ್ದಾರೆ. ಇವರಲ್ಲಿ 3 ಮಂದಿ ಮಂಗಳೂರು, ಓರ್ವ ವ್ಯಕ್ತಿ ಬೆಂಗಳೂರು, 2 ಮಂದಿ ಮಸ್ಕತ್, ಓರ್ವ ಸೌದಿ ಅರೆಬಿಯಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 2 ಪ್ರಕರಣ, ILI 23 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ.  ಇಂದು 22 ಮಂದಿ ಬಿಡುಗಡೆಗೊಂಡಿದ್ದಾರೆ. 251 ನೆಗೆಟಿವ್: ಈ ತನಕ ಒಟ್ಟು 24,891 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,357 ನೆಗೆಟಿವ್, 2,321 ಪಾಸಿಟಿವ್ ಬಂದಿದ್ದು, 661 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 251 ನೆಗೆಟಿವ್, 99 ಪಾಸಿಟಿವ್ ಬಂದಿದೆ. ಒಟ್ಟು 2,094 ಮಂದಿ…

Read More

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ ಎಲ್ಲೆಲ್ಲಿದ್ರೋ ಅಲ್ಲಲ್ಲೇ ಭಾಷಿ  ಉಳ್ಸಿ-ಬೆಳ್ಸು ಬಗ್ಗ್ ಒಂಚೂರಾರೂ ನಿಗಾ ವಯ್ಸ್ಲಿ ಅಂದೇಳಿ ಆಟಿ ಅಮಾಸಿ ದಿನವೇ ’ವಿಶ್ವ ಕುಂದಾಪ್ರ ಕನ್ನಡ ದಿನ ‘ ಅಂದೇಳಿ ಮಾಡ್ತಿದ್ರ್. ಕಳ್ದ್ ವರ್ಷು ಕುಂದಾಪ್ರ ಕನ್ನಡ ದಿನು ಅಂದಂದೆ ಸೈ, ಬ್ರಹ್ಮಾವರದಿಂದ್ ಬೈಂದೂರು ಶಿರೂರ್ ತನಕ್ , ದೇಶ-ವಿದೇಶದಂಗೆಲ್ಲಾ ಕಾರ್ಯಕ್ರಮ ಮಾಡಿರ್. ಈ ಸರ್ತಿ ಕೊರೋನಾ ಇತ್ತಲಾ ಜನು ಸೇರ್ಸುಕಾತಿಲ್ಲ. ಆರೆ ಸೋಶಿಯಲ್ ಮೀಡಿಯಾದಗಂತೂ ಭಾರಿ ಸದ್ದ್ ಮಾಡ್ತಿತ್. ಬೇರ್ ಬೇರೆ ಬಗಿ ಸರ್ಧೆ, ಕಾರ್ಯಕ್ರಮ ಹಮ್ಮಕಂಡಿರ್. ದೂರ್ದಂಗ್ ಆಯ್ಕಂಡ್ ಏನೆಲ್ಲಾ ಮಾಡ್ಲಾಕೋ ಎಲ್ಲಾ ಮಾಡ್ತಿದ್ರ್. ವಿಶ್ವ ಕುಂದಾಪ್ರ ಕನ್ನಡ ದಿನ: ಕುಂದಾಪ್ರ ಕನ್ನಡ ಭಾಷೆಗೆ ತನ್ನದೇ ಆದ ಹಿರಿಮೆ-ಗರಿಮೆ ಇದೆ. ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ಕುಂದಾಪ್ರ ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.19ರ ಭಾನುವಾರ 134 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 52, ಉಡುಪಿ ತಾಲೂಕಿನ 59 ಹಾಗೂ ಕಾರ್ಕಳ ತಾಲೂಕಿನ 23 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 70 ಪುರುಷರು, 54 ಮಹಿಳೆಯರು, 10 ಮಕ್ಕಳು ಸೇರಿದ್ದಾರೆ. ಇವರಲ್ಲಿ 4 ಮಂದಿ ಬೆಂಗಳೂರು, 3 ಮಂದಿ ಮಂಗಳೂರು, ತಲಾ ಓರ್ವ ವ್ಯಕ್ತಿ ಮುಂಬೈ, ಚೆನೈ ಹಾಗೂ ದುಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 5 ಪ್ರಕರಣ, ILI 31 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. 42 ಮಂದಿ ಬಿಡುಗಡೆಯಾಗಿದ್ದಾರೆ. 349 ನೆಗೆಟಿವ್: ಈ ತನಕ ಒಟ್ಟು 24,837 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,106 ನೆಗೆಟಿವ್, 2,222 ಪಾಸಿಟಿವ್ ಬಂದಿದ್ದು, 509 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 349 ನೆಗೆಟಿವ್, 134 ಪಾಸಿಟಿವ್ ಬಂದಿದೆ. ಒಟ್ಟು 2,087 ಮಂದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ) ಆಟೋಮೊಬೈಲ್ ಕೌಶಲ್ಯಾಧಾರಿತ ವಿಷಯದಲ್ಲಿ ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಶೇ.100 ಅಂಕಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಿಷ್ಣು ಪ್ರಸಾದ್, ವಿನೀತ್ ಪೂಜಾರಿ, ಕಾರ್ತಿಕ್ ಆಚಾರ್ಯ, ಶ್ರೇಯಸ್ ಶೇಟ್ ಆಟೋಮೊಬೈಲ್ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳು. ಪ್ರಸಕ್ತ ಸಾಲಿನಲ್ಲಿ.ಎಸ್.ಕ್ಯೂ.ಎಫ್ ಯೋಜನೆಯಡಿ ಆಟೋಮೊಬೈಲ್ ವಿಷಯದಲ್ಲಿ ರಾಜ್ಯದಲ್ಲಿ 510 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ಇದರಲ್ಲಿ ಕುಂದಾಪುರ ಸರಕಾರಿ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳ ಸೇರಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಭುಜಂಗ ಶೆಟ್ಟಿ, ಉಪಪ್ರಾಂಶುಪಾಲ ಮೋಹನ ರಾವ್ ಎಂ.ಜೆ, ಆಟೋಮೊಬೈಲ್ ತರಬೇತುದಾರ ಅರುಣ್ ಶೆಟ್ಟಿ ಉಳ್ತೂರು ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2020-21 ನೇ ಸಾಲಿನಲ್ಲಿ ಕೇಂದ್ರಿಯ ವಿದ್ಯಾಲಯದ 1 ರಿಂದ 10ನೇ ತರಗತಿಗಳಿಗೆ ಪ್ರವೇಶ ಪಡೆಯುವ ಬಗ್ಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದ್ರಿ ಸಂಸ್ಥೆಯಲ್ಲಿ 1 ನೇ ತರಗತಿಗೆ ಪ್ರವೇಶ ಪಡೆಯುವ ಬಗ್ಗೆ ದಿನಾಂಕ 17.07.2020 ಬೆಳಿಗ್ಗೆ 10 ಗಂಟೆಯಿಂದ ದಿನಾಂಕ 07.08.2020 ರ ಸಂಜೆ 7 ಗಂಟೆಯವರೆಗೆ ಮತ್ತು 2ನೇ ತರಗತಿಯಿಂದ 10 ನೇ ತರಗತಿಯವರೆಗೆ ಪ್ರವೇಶ ಪಡೆಯುವ ಬಗ್ಗೆ ದಿನಾಂಕ 20.07.2020 ರಿಂದ 25.07.2020ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2 ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ಪಡೆಯುಲು ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ದಿನಾಂಕ 29.07.2020ರ ಸಂಜೆ 4.00 ಗಂಟೆಗೆ ಪ್ರಕಟಿಸಲಾಗುವುದು.ಸದ್ರಿ ತರಗತಿಗಳಿಗೆ ದಾಖಲಾತಿಯನ್ನು ದಿನಾಂಕ 30.07.2020. ರಿಂದ 07.08.2020ರ ವರೆಗೆ ಮಾಡಿಕೊಳ್ಳಲಾಗುವುದು. ಕೇಂದ್ರಿಯ ವಿದ್ಯಾಲಯದ 9ನೇ ತರಗತಿಗೆ ದಾಖಲಾತಿಯನ್ನು 10 ನೇ ತರಗತಿಯ ಫಲಿತಾಂಶ ಬಂದ 2 ವಾರದೊಳಗೆ ಮಾಡಿಕೊಳ್ಳಲಾಗುವುದು. ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಹೊರತ ಪಡಿಸಿ ಇತರರಿಗೆ 9ನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಸೃಷ್ಟಿ ಕಲಾ ವಿದ್ಯಾಲಯ ಈಚೆಗೆ ನಡೆಸಿದ ಮುಕ್ತ ಆನ್‌ಲೈನ್ ಸಂಗೀತ ಸ್ಪರ್ಧೆಯ ಹಿರಿಯರ ಭಾವಗೀತೆ ವಿಭಾಗದಲ್ಲಿ ಇಲ್ಲಿನ ರಂಜನಾ ಭಟ್ ದ್ವಿತೀಯ ಸ್ಥಾನ ಗಳಿಸಿರುವರು. ಸ್ಪರ್ಧೆಯಲ್ಲಿ ರಾಜ್ಯ, ಹೊರರಾಜ್ಯ ಮತ್ತು ವಿದೇಶಗಳಿಂದ 725 ಜನ ಭಾಗವಹಿಸಿದ್ದರು. ರಂಜನಾ ಭಟ್ ಇಲ್ಲಿನ ಎಸ್. ಹರ್ಷ ಭಟ್ – ರೇವತಿ ಭಟ್ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ ಪ್ರಕರಣ ಎರಡು ಸಾವಿರದ ಗಡಿ ಮೀರಿದ್ದು ಜು.18ರ ಶನಿವಾರ 109 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 40, ಉಡುಪಿ ತಾಲೂಕಿನ 58 ಹಾಗೂ ಕಾರ್ಕಳ ತಾಲೂಕಿನ 11 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 63 ಪುರುಷರು, 39 ಮಹಿಳೆಯರು, 7 ಮಕ್ಕಳು ಸೇರಿದ್ದಾರೆ. ಇವರಲ್ಲಿ 2 ಮಂದಿ ಬೆಂಗಳೂರು, ತಲಾ ಓರ್ವ ವ್ಯಕ್ತಿ ದಾವಣಗೆರೆ ಹಾಗೂ ಮಂಗಳೂರು, ಓರ್ವ ವ್ಯಕ್ತಿ ದುಬೈ ಹಾಗೂ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 5 ಪ್ರಕರಣ, ILI 34 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿರಿಮಂಜೇಶ್ವರ ಮೂಲದ 80 ವರ್ಷದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದು, ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ತೀವ್ರ ಉಸಿರಾಟ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೈಲ್ವೆ ಸಾರಿಗೆ ವ್ಯವಸ್ಥೆಯನ್ನು ಜಗತ್ತಿನ ಯಾವ ದೇಶದಲ್ಲೂ ಲಾಭದಾಯಕ ಉದ್ಯಮ ಎಂದು ನಡೆಸಲಾಗುತ್ತಿಲ್ಲ. ಅದು ಸಾರ್ವಜನಿಕ ಸೇವಾ ವಲಯ ಎಂದೇ ಪರಿಗಣಿತವಾಗಿದೆ. ಆದರೆ ನಮ್ಮ ಕೇಂದ್ರದ ಮೋದಿ ಸರ್ಕಾರ ಅದನ್ನು ತನ್ನ ಖಾಸಗೀಕರಣದ ಸರಣಿಗೆ ಸೇರಿಸಿಕೊಂಡು ಮಾರಾಟಕ್ಕೆ ಹೊರಟಿದೆ. ಇದನ್ನು ಸಿಐಟಿಯು ಬಲವಾಗಿ ವಿರೋಧಿಸುತ್ತದೆ ಎಂದು ಕೃಷಿಕೂಲಿ ಕಾರ್ಮಿಕರ ಮುಖಂಡ ವೆಂಕಟೇಶ ಕೋಣಿ ಹೇಳಿದರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ನೀಡಿದ ದೇಶವ್ಯಾಪಿ ಪ್ರತಿಭಟನೆ ಕರೆಯನ್ವಯ ಅದರ ಬೈಂದೂರು ತಾಲ್ಲೂಕು ಘಟಕ ಶುಕ್ರವಾರ ಇಲ್ಲಿನ ಮೂಕಾಂಬಿಕಾ ರೋಡ್ ರೈಲ್ವೆ ಸ್ಟೇಷನ್ ಎದುರು ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭಾರತೀಯ ರೈಲ್ವೆ ದೇಶದ ಜನತೆಯ ಅಮೂಲ್ಯ ಆಸ್ತಿ. ಇದನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ದೇಶ ಮತ್ತು ಜನ ವಿರೋಧಿ ಕೃತ್ಯ. ದೇಶ ಎದುರಿಸುತ್ತಿರುವ ಕೋವಿಡ್-೧೯ ಸಂಕಷ್ಟದ ಕಾಲವನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡು ಈ ವ್ಯವಹಾರಕ್ಕೆ ಮುಂದಾಗಿದೆ. ಕಾರ್ಮಿಕ ಸಂಘಟನೆಗಳು ಮಾತ್ರವಲ್ಲ; ದೇಶದ ಎಲ್ಲ ಪ್ರಜ್ಞಾವಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ)ದಿಂದ ಸವಿತಾ ಸಮಾಜಕ್ಕೆ ಸೇರಿದ (ಪರಿಯಾಳ, ಅಂಬಟ್ಟನ್, ಬಜಂತ್ರಿ, ಭಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ನಾಡಿಗ್, ಕ್ಷೌರಿಕ್, ಕ್ಷೌರಿಕ) ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರಾದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.karnataka.gov.in ನಲ್ಲಿ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಆಗಸ್ಟ್ 3…

Read More