ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಹಾರದಲ್ಲಿ ಗುಣಮಟ್ಟ, ಗ್ರಾಹಕರ ಬಗೆಗೆ ಕಾಳಜಿ, ಸ್ವಚ್ಛತೆ ಹಾಗೂ ಕೈಗೆಟಕುವ ದರ ಈ ಸೂತ್ರಗಳಿಂದ ಕಳೆದ 45 ವರ್ಷಗಳಿಂದ ಆಹಾರೋದ್ಯಮ ಕ್ಷೇತ್ರದಲ್ಲಿ ಗೋಪಾಡಿ ಶ್ರೀನಿವಾಸ ರಾವ್ ಅವರು ಯಶಸ್ಸು ಕಾಣಲು ಸಾಧ್ಯವಾಗಿದೆ. ಕುಂದಾಪುರದಲ್ಲಿಯೂ ಆರಂಭಿಸಲಾಗಿರುವ ಅವರ ಉದ್ಮವೂ ಯಶಸ್ಸು ಗಳಿಸಲಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಭಿಪ್ರಾಯ ಪಟ್ಟರು. ಮಯೂರ ಸಮೂಹ ಸಂಸ್ಥೆಗಳು ಕುಂದಾಪುರ ಪುರಸಭಾ ರಸ್ತೆಯಲ್ಲಿರುವ ಜಿ.ಎಸ್.ಆರ್ ಸ್ಕ್ವೇರ್ನ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಆರಂಭಿಸಿದ ಕೇಕ್‌ವಾಲ ಮತ್ತು ಈಶಾನ್ಯ ಸ್ಟ್ರೀಟ್ ಫುಡ್ ಕೆಫೆ ಸಂಸ್ಥೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಜಿ.ಎಸ್.ಆರ್ ಸ್ಕ್ವೇರ್ ನಾಮಫಲಕ ಅನಾವರಣಗೊಳಿಸಿದರು. ಕುಂದಾಪುರ ವಿನಯ ಆಸ್ಪತ್ರೆಯ ಡಾ|ಎನ್.ವಿಶ್ವನಾಥ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಶುಭಹಾರೈಸಿದರು. ಮಯೂರ ಗ್ರೂಫ್ನ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕರಾದ ಗೋಪಾಡಿ ಶ್ರೀನಿವಾಸ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಆಹಾರೋತ್ಪಾದನೆಯಲ್ಲಿ ಅಂತರಾಷ್ಟ್ರೀಯ ಗುಣಮಟ್ಟ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ 9 ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಘವೇಂದ್ರ, ನಿಖಿಲ್, ಮಂಜುನಾಥ್ ಶೆಟ್ಟಿ, ವಿನಯ್ ಚಿನ್ನದ ಪದಕ, ಸುಶಾಂತ್, ತನ್ಮಯ್ ಗಡಿಯಾರ್, ಕಾರ್ತಿಕ್ ಭಟ್, ದಿಶಾನ್ ಡಿ ಶೆಟ್ಟಿ, ಕೌಶಿಕ್ ಮೇರ್ಡಿ ಬೆಳ್ಳಿ ಪದಕ, ಸೂರಜ್ ಆರ್., ಶ್ರೀವತ್ಸ ಕಾಮತ್,ಸುದೀಪ್, ವರುಣ್ ಹೇರಂಭ ಆರ್ ನಾಕ್ ಕಂಚಿನ ಪದಕವನ್ನು ಗಳಿಸುವುದರ ಮೂಲಕ 14 ಪದಕಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ತಂಡದೊಂದಿಗೆ ಕಾಲೇಜಿನ ಪ್ರಾಶುಂಪಾಲರಾದ ಗಣೇಶ ಮೊಗವೀರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಗಾಣಿಗ, ತರಬೇತುದಾರ ಕೃಷ್ಣ ಮೊಗವೀರ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ‘ಪರೀಕ್ಷಾ ಪೇ ಚರ್ಚಾ’ ಸಂವಾದಕ್ಕೆ ಆಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಅನುಷಾ ಆಯ್ಕೆ ಆಗಿದ್ದಾರೆ. ದೇಶಾದ್ಯಂತ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದು, ಅಂತಿಮವಾಗಿ 1500 ವಿದ್ಯಾರ್ಥಿಗಳ ಆಯ್ಕೆಯಾಗಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 30 ವಿದ್ಯಾರ್ಥಿಗಳು ಪ್ರಧಾನಮಂತ್ರಿ ಜೊತೆ ನೇರ ಸಂವಾದ ನಡೆಸಲಿದ್ದಾರೆ. ಮಡಾಮಕ್ಕಿ ನಿವಾಸಿ ಕೃಷ್ಣ ಕುಲಾಲ ಮತ್ತು ಜಯಲಕ್ಷ್ಮೀ ಕುಲಾಲರ ನಾಲ್ವರು ಹೆಣ್ಣು ಮಕ್ಕಳಲ್ಲಿ ಅನುಷಾ ಕೊನೆಯವಳು. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದಾಳೆ. ತಂದೆ ಗಾರೆ ಕೆಲಸ ಮಾಡಿಕೊಂಡಿದ್ದರೆ, ತಾಯಿ ಗೇರು ಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಗಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಅವರದ್ದು. ಇದೀಗ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ ಮಗಳು ಆಯ್ಕೆಯಾಗಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ. ಕೆಲ ದಿನಗಳ ಹಿಂದಷ್ಟೇ ಚಾರಮಕ್ಕಿ ನಾರಾಯಣ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಮಲಶಿಲೆ ಪಾರೆಯಲ್ಲಿ ಕಲಾವಿದ ಚೇತನ್ ಕುಮಾರ್ ಹಳ್ಳಿಹೊಳೆ ನಿರ್ಮಿಸಿರುವ ಶಬ್ದ ಗ್ರಹಿಸುವಿಕೆಯ ಭಂಗಿಯ ಕಬ್ಬಿಣದ ಕಡವೆ ಕಲಾಕೃತಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಕಮಲಶಿಲೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಪಾರೆಯಲ್ಲಿ ನಿರ್ಮಿಸಲಾಗಿರುವ ಸುಮಾರು ಹತ್ತು ಅಡಿ ಎತ್ತರ ಹಾಗೂ ನಾಲ್ಕೂವರೆ ಅಡಿ ಅಗರ ಕಡವೆ ಕಲಾಕೃತಿಯನ್ನು ಕಲಾವಿದ ಚೇತನ್ ಐದು ದಿನದಲ್ಲಿ ನಿರ್ಮಿಸಿದ್ದು, ವೆಲ್ಡರ್ ಅಶೋಕ್ ಕುಲಾಲ್ ಅವರ ಸಹಕಾರ ಪಡೆದುಕೊಂಡಿದ್ದಾರೆ. ಕಲಾಕೃತಿ ನಿರ್ಮಾಣಕ್ಕೆ 14 ಲೆಂಥ್ ಕಬ್ಬಿಣದ ರಾಡ್ ಹಾಗೂ ಬೇಸ್’ಗೆ ಒಂದು ಇಂಚ್ ಅಗಲದ ಒಂದು ಲೆಂಥ್ ಕಬ್ಬಿಣ ಬಳಸಲಾಗಿದೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಾದ ಚೇತನ್ ಲಾಕ್ ಡೌನ್ ಅವಧಿಯಲ್ಲಿ ಮನೆಯಲ್ಲಿಯೇ ಹಲವು ಕಲಾಕೃತಿಗಳನ್ನು ರಚಿಸಿ ಗಮನ ಸೆಳೆದಿದ್ದರು. ಇತ್ತಿಚಿಗೆ ಹಳ್ಳೆಹೊಳೆಗೆ ತೆರಳುವ ಮಾರ್ಗದಲ್ಲಿ ರಚಿಸಿದ್ದ ಮಂಡೂಕದ ಕಲಾಕೃತಿಯೂ ಗಮನ ಸೆಳೆದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಗುಳ್ಳಾಡಿ ಗ್ರಾಮದ ಮಂಜಿ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ3 ತಿಂಗಳ ಗರ್ಭ ಧರಿಸಿದ್ದ ಗೋವನ್ನು ರಾತ್ರಿ ಸಮಯದಲ್ಲಿ ಕೊಟ್ಟಿಗೆ ನುಗ್ಗಿ ಹಗ್ಗವನ್ನು ಕೊಯ್ದು ಗೋ ಕಳ್ಳರು ಕದ್ದೊಯ್ದಿದ್ದಾರೆ . ಮಂಜಿಯವರು ತೀರ ಬಡ ಕುಟುಂಬ ದವರಾಗಿದ್ದು ತಮ್ಮ ಸೊಸೆ ಮತ್ತು ಮೊಮ್ಮಗಳೊಂದಿದೆಗೆ ವಾಸವಿದ್ದು ತಮ್ಮ ಜೀವನೋಪಾಯಕ್ಕೆ ಹೈನುಗಾರಿಕೆಯನ್ನು ನಂಬಿಕೊಂಡಿದ್ದು ಇಗ ಇದ್ದೋಂದ ಗೋವು ಕಳ್ಳತನವಾದುದರಿಂದ ತಂಬಾ ನೊಂದಿದ್ದಾರೆ, ಈ ಕುರಿತು ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಒಟ್ಟು ಒಂದು ಕೋಟಿ ರೂ. ಸಹಾಯಧನ ನೀಡಲು ಕರ್ನಾಟಕ ರಾಜ್ಯ ಸರಕಾರದ ಆದೇಶಿಸಿದೆ. ಕಂಬಳ ಕ್ರೀಡೆಗೆ ಪ್ರೋತ್ಸಾಹ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಮಗದ ಮೂಲಕ ಅನುದಾನ ಬಿಡುಗಡೆಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷದಂತೆ ಒಟ್ಟು 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಎರಡು ದಿನಗಳ ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೀದರ್ ಜಿಲ್ಲೆಯ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾ ವೇದಿಕೆ ಕೊಡಮಾಡುವ 2021ನೇ ಸಾಲಿನ ಕಾಯಕ ಚೂಡಾಮಣಿ ರತ್ನ ಪ್ರಶಸ್ತಿಗೆ ಕೊಲ್ಲೂರಿನ ಮಾವಿನಕಾರು ಗ್ರಾಮದ ಭರತ್‌ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯ ಹಲವಾರು ಊರುಗಳಲ್ಲಿ ನಿರ್ಗತಿಕರ, ವಿಶೇಷಚೇತನರ ಆಶ್ರಮಗಳಿಗೆ ದುಡಿಮೆಯ ಹಣದಲ್ಲಿ ಊಟೋಪಚಾರ, ಬಟ್ಟೆ ಔಷಧ ಹಾಗೂ ಕೆಲವೊಮ್ಮೆ ಆಸ್ಪತ್ರೆ ಖರ್ಚನ್ನೂ ಭರಿಸಿದ್ದಾರೆ. ಈಗಲೂ ಹಲವಾರು ನಿರ್ಗತಿಕರು, ವೃದ್ಧರು ಇವರ ಆಶ್ರಯದಲ್ಲಿದ್ದಾರೆ. ಫಲಾಪೇಕ್ಷೆಯಿಲ್ಲದ ಇವರ ಈ ಸಮಾಜಸೇವೆ ಗುರುತಿಸಿ ಈ ಪ್ರಶಸ್ತಿಯನ್ನು ಬೀದರ್‌ನಲ್ಲಿ ಭಾನುವಾರ ನಡೆಯುವ ಸಮಾರಂಭದಲ್ಲಿ ಪ್ರಧಾನಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಜಿ. ದೇಶಪಾಂಡೆ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಚಿಸಿದ ಪರೀಕ್ಷಾ ಪೇ ಚರ್ಚಾ ವಿಡಿಯೋ ದೇಶಾದ್ಯಂತ ಸದ್ದು ಮಾಡಿದೆ. ಪ್ರಧಾನಿ ಮೋದಿ ಅವರ ಮಹಾತ್ವಕಾಂಕ್ಷೆಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಪ್ರೇರಣೆ ನೀಡುವ ಪ್ರಮೋಶನಲ್ ವಿಡಿಯೋಕ್ಕೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ದೊರೆತಿದೆ. 2.52 ನಿಮಿಷಗಳಿರುವ ಈ ವಿಡಿಯೋವನ್ನು ಮುಖ್ಯ ಶಿಕ್ಷಕ ಶೇಖರ ಶೆಟ್ಟಿಗಾರ್ ಅವರ ಮಾರ್ಗದರ್ಶನದಲ್ಲಿ ಮಾಡಲಾಗಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುರೇಶ್ ಮರಕಾಲ ಸೈಬರಕಟ್ಟೆ ಅವರ ನಿರ್ದೇಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಐದು ವಿದ್ಯಾರ್ಥಿನಿಯರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ವಿಡಿಯೋ ಮೂಲಕ ಅರ್ಜಿ ಸಲ್ಲಿಸಲು ವೀಕ್ಷಕರಿಗೆ ಸ್ಪೂರ್ತಿಯ ಸಂದೇಶ ನೀಡಿದ್ದಾರೆ. ಈ ವಿಡಿಯೋ ಈಗಾಗಲೇ ಡಿಡಿ ಇಂಡಿಯಾ ಸೇರಿದಂತೆ ಡಿಡಿ ನ್ಯೂಸ್, ಡಿಡಿ ಚಂದನ ಟಿ.ವಿ, ಡಿಡಿ ನ್ಯೂಸ್ ಟ್ವಿಟ್ಟರ್ನಲ್ಲಿ ಪ್ರಸಾರ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಶಾಲೆಯ ಶಿಕ್ಷಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರು ವಿದ್ಯಾನಗರದಲ್ಲಿ ಮಾ.13, 14ರಂದು ನಡೆದ 2ನೇ ರಾಜ್ಯ ಮಟ್ಟದ ಮಾಸ್ಟರ್ಸ್ಸ್ಪೋಟ್ಸ್ 2021 ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿ ಬಿಜೂರು ಶಂಕರ ಪೂಜಾರಿ ಕಾಡಿನತಾರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಂಕರ ಪೂಜಾರಿ ಅವರು 40ರಿಂದ 45 ವರ್ಷದೊಳಗಿನ ವಯೋಮಿತಿಯಲ್ಲಿ ನಡೆದ 100ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ 2 ಬೆಳ್ಳಿ ಪದಕ ಪಡೆದುಕೊಂಡು ಹೈದರಬಾದ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮೂಲತಃ ಬಿಜೂರಿನವರಾದ ಶಂಕರ ಪೂಜಾರಿ ಅವರು ಪ್ರಸ್ತುತ ಯಡ್ತಾಡಿ ಸೈಬ್ರಕಟ್ಟೆಯಲ್ಲಿ ವಾಸಿಸುತ್ತಿದ್ದಾರೆ. ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಅವರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದ ಜನಸಂಖ್ಯೆಯ ಶೇಕಡಾ 50 ಭಾಗ ಮಹಿಳೆಯರು ಇದ್ದು, ಸಮಾಜದಲ್ಲಿ ಆಥಿ೯ಕ, ಸಮಾಜಿಕ,ದೌಜ೯ನ್ಯ ಲೈಂಗಿಕ ಕಿರುಕುಳ ಇತ್ಯಾದಿ ಶೋಷಣೆಗೆ ಒಳಗಾಗುತ್ತಿದ್ದು ಇಂತಹ ದೌಜ೯ನ್ಯಗಳವಿರುದ್ಧ ಮಹಿಳೆಯರು ಸಂಘಟಿತ ಹೋರಾಟಕ್ಕೆ ಮುಂದಾಗ ಬೇಕು ಎಂದು ಜನವಾದಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ದೇವಿ ಅಭಿಪ್ರಾಯ ಪಟ್ಟರು. ಅವರು ಬೈಂದೂರು ಸಿಐಟಿಯು ಕಚೇರಿ ಸಭಾಂಗಣದಲ್ಲಿ ಜರಗಿದ ತಾಲೂಕು ಜನವಾದಿ ಮಹಿಳಾ ಸಂಘಟನೆಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿಐಟಿಯು ತಾಲೂಕು ಸಂಚಾಲಕಿ ಸಿಂಗಾರಿ ನಾವುಂದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಶೀಲಾವತಿ ಹಡವು,ಜಯಶ್ರೀ ಪಡುವರಿ,ನಾಗರತ್ನ ನಾಡ, ನಾಗರತ್ನ ಪಡುವರಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಸಂಚಾಲಕ ಸಮಿತಿಗೆ ನಾಗರತ್ನ ನಾಡ, ಮನೋರಮ ಭಂಡಾರಿ, ನಾಗರತ್ನ ಪಡುವರಿ, ಜಯಶ್ರೀ ಪಡುವರಿ, ವಸಂತಿ ಯಡ್ತರೆ, ಸಾವಿತ್ರಿ ಹೆಮ್ಮಾಡಿ, ಸರಸ್ವತಿಬೈಂದೂರು,ಸಿಂಗಾರಿ ನಾವುಂದ, ಶೋಭಾ.ವಿ.ನಾಯಕ್ ಮುಬಾರಕ್ ಶಿರೂರು ಇವರನ್ನು ನವಾ೯ನುಮತದಿಂದ ಆಯ್ಕೆ ಮಾಡಲಾಯಿತು.
