ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ದೇವಾಡಿಗರ ಸಮಾಜ ಸೇವಾ ಸಂಘ ಇದರ ಕಛೇರಿ ಕಟ್ಟಡಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಮುಂಬೈ ಉದ್ಯಮಿ ಸುರೇಶ ಡಿ ಪಡುಕೋಣೆ ಶಿಲಾನ್ಯಾಸ ನೆರವೇರಿಸಿದರು ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಸಾಪ್ಟ್ವೇರ್ ಇಂಜಿನಿಯರ್ ಗಣೇಶ ದೇವಾಡಿಗ, ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ರಾಯಪ್ಪನ ಮಠ, ಗೌರವಾಧ್ಯಕ್ಷರಾದ ಚಂದ್ರಶೇಖರ ದೇವಾಡಿಗ, ಉಪಾಧ್ಯಕ್ಷರಾದ ರಾಜಾ ದೇವಾಡಿಗ, ಕರುಣಾಕರ ಬಳ್ಕೂರು, ಕಾರ್ಯದರ್ಶಿ ಉದಯ ಹೇರಿಕೇರಿ, ಕೋಶಾಧಿಕಾರಿ ಆನಂದ ಕೆ ಎನ್, ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ದೇವಾಡಿಗ, ನಾರಾಯಣ ದೇವಾಡಿಗ, ದಿನೇಶ ದೇವಾಡಿಗ ಪ್ರಮುಖರಾದ ನಿತ್ಯಾನಂದ ಸುರಭಿ, ಕೃಷ್ಣ ಭಟ್ರಹಾಡಿ, ಗಿರಿಜ, ರಾಮ ದೇವಾಡಿಗ, ಕೃಷ್ಣ ದೇವಾಡಿಗ, ಜಯರಾಮ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ವುಮೆನ್ ಡೆವಲಪ್ಮೆಂಟ್ ಸೆಲ್ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ‘ಮಹಿ-2021’ ಮಹಿಳಾ ಸಪ್ತಾಹದಲ್ಲಿ ಮಹಿಳಾ ಆರೋಗ್ಯದ ಕುರಿತು ಅತಿಥಿ ಉಪನ್ಯಾಸ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ.ಸ್ವಾತಿ ಪಿ.ಎಸ್., ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಪಿಸಿಒಸ್ (ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್) ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಹುಡುಗಿಯರು ತಮ್ಮ ದೇಹದ ಆರೋಗ್ಯ ಹಾಗೂ ಋತುಚಕ್ರದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು. ಪಿಸಿಒಎಸ್ ಸಮಸ್ಯೆ ಇರುವ ಮಹಿಳೆಯರ ಹಾರ್ಮೋನ್ ಸ್ರವಿಕೆಯಲ್ಲಿ ಏರಿಳಿತಗಳಿದ್ದು ಅದು ಸಮಸ್ಯೆಗಳನ್ನು ಸೃಷ್ಟಿಸಬಹುದು. ಇಂತಹ ಸಂದರ್ಭಗಳಲ್ಲಿ ಹುಡುಗಿಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದ ಅವರು ಪಿಸಿಒಎಸ್ನ ಲಕ್ಷಣಗಳನ್ನು ವಿವರಿಸಿದರು. ಪಿಸಿಒಎಸ್ನಂತಹ ಸಮಸ್ಯೆಗಳುಂಟಾದಾಗ ವಹಿಸಬೇಕಾದ ಎಚ್ಚರಿಕೆಯ ಕ್ರಮಗಳ ಬಗ್ಗೆ ಹೇಳಿದ ಅವರು ಮಹಿಳಾ ಆರೋಗ್ಯದ ಪಂಚತಂತ್ರಗಳನ್ನು ವಿವರಿಸಿದರು. ದಿನನಿತ್ಯ ಯೋಗ-ವ್ಯಾಯಾಮ-ಧ್ಯಾನ, ಪ್ರಾರ್ಥನೆ, ನಿಯಮಿತ ನೀರು ಸೇವನೆ, ನಿಗದಿತ ಆಹಾರ ಹಾಗೂ ವಾರದಲ್ಲೊಂದು ದಿನ ಉಪವಾಸ ದೇಹಾರೋಗ್ಯವನ್ನು ಸರಿಯಾಗಿಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೇರಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಾಯಂದಿರ ಪಾದ ಪೂಜೆ ನೆರವೇರಿಸುವ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಐತಾಳ್, ಗ್ರಾ.ಪಂ. ಸದಸ್ಯೆ ಜಲಜಾಕ್ಷಿ ಗಾಣಿಗ, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕ ಜಯಾನಂದ ಪಟಗಾರ್, ಶಿಕ್ಷಕಿ ಗೀತಾ, ಗೌರವ ಶಿಕ್ಷಕಿಯರಾದ ಸುಮನಾ, ಚೈತನ್ಯ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2k21’ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ರೋಟರಿ, ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್3182 RC ಅಸಿಸ್ಟೆಂಟ್ ಗವರ್ನರ್ ಡಾ. ಬಾಲಕೃಷ್ಣ ಮದ್ದೋಡಿ, ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು, ಜೊತೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ದಶರಥರಾಜ್ ಕೆ. ಶೆಟ್ಟಿ, ಅಸೋಸಿಯೇಟ್ ಪ್ರೊಫೆಸರ್, ಎಂ.ಐ.ಟಿ., ಮಣಿಪಾಲ ಇವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ, ಸಿ.ವಿ. ರಾಮನ್ ಕುರಿತು ಹಲವಾರು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆಗೆ ಶುಭಹಾರೈಸಿ, ಅನ್ವೇಷಣೆ ಬಗ್ಗೆ ವಿವರಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ವನಿತಾ ಜಿ., ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಲ್ಲಿ ಯುವಜನರು ಮತ್ತು ಅಪ್ರಾಪ್ತ ವಯಸ್ಸಿನವರು ಸಾವುನೋವಿಗೆ ಒಳಗಾಗುತ್ತಿದ್ದಾರೆ. ನಿಯಂತ್ರಣ ಮೀರಿದ ವೇಗ ಮತ್ತು ನಿಯಮ ಮೀರಿದ ಚಾಲನೆ ಇದಕ್ಕೆ ಕಾರಣ. ಪೋಷಕರು ಈ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ನಿಯಂತ್ರಿಸಬೇಕು ಎಂದು ಬೈಂದೂರು ಎಸ್ಐ ಸಂಗೀತಾ ಹೇಳಿದರು. ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ನ ನಾವುಂದ ಶಾಖೆಯಲ್ಲಿ ಈಚೆಗೆ ಆಯೋಜಿಸಿದ್ದ ಮಾಹಿತಿ ಶಿಬಿರದಲ್ಲಿ ಅವರು ರಸ್ತೆ ಅಪಘಾತ ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕೆಲವು ಅಪಘಾತಗಳನ್ನು ಉದಾಹರಿಸಿದ ಅವರು, ಹೆಚ್ಚು ಅಪಘಾತಗಳಲ್ಲಿ ದ್ವಿಚಕ್ರ ವಾಹನ ಚಾಲಕರು ಅಪಾಯಕ್ಕೀಡಾಗಿದ್ದಾರೆ. ಚಾಲನೆ ಪರವಾನಿಗೆ ಪಡೆಯಲು ಅನರ್ಹರಾದ ಅಪ್ರಾಪ್ತ ವಯೋಮಾನದವರೂ ಇದರಲ್ಲಿ ಸೇರಿರುವುದಕ್ಕೆ ಪೋಷಕರ ನಿರ್ಲಕ್ಷ್ಯವೇ ಕಾರಣ. ಇದಕ್ಕೆ ಕಡಿವಾಣ ಹಾಕಬೇಕು ಎಂದರು. ಆರೋಗ್ಯ ಮಾಹಿತಿ ನೀಡಿದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಜ್ವರ ಕಾಣಿಸಿಕೊಂಡಾಗ ವಹಿಸಬೇಕಾದ ಎಚ್ಚರ, ಕೋವಿಡ್ ನಿಯಂತ್ರಕ ಲಸಿಕೆ ಪಡೆಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯದಿಂದ ‘ಟೈಲರ್ಸ್ ದಿನಾಚರಣೆ’ ಕಾರ್ಯಕ್ರಮವು ಇಲ್ಲಿನ ಸೇವಾ ಸಂಗಮ ಶಿಶು ಮಂದಿರದಲ್ಲಿ ನಡೆಯಿತು. ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನವೀನ್ ಟೈಲರ್ ಕೊಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ನಾವು ಜೀವನದಲ್ಲಿ ಕ್ರೀಯಾಶೀಲರಾಗಿರಬೇಕಾದರೆ ಇಂತಹ ಸಂಘ ಸಂಸ್ಥೆಗಳನ್ನು ಸೇರಿಕೊಂಡು ನಮ್ಮ ಪ್ರತಿಭೆಯನ್ನು ಮತ್ತು ಪರಿಶ್ರಮವನ್ನು ಪ್ರಾಮಾಣಿಕವಾಗಿ ತೋರಿಸಿಕೊಂಡಾಗ ಸಂಘ ಬೆಳೆಯುವುದರೊಂದಿಗೆ ನಾವು ಸಾಮಾಜಿಕವಾಗಿ ಬೆಳೆದು ಪ್ರಜ್ಞಾವಂತ ಪ್ರಜೆಯಾಗುವುದಕ್ಕೆ ಆಗುತ್ತದೆ. ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಂದು ಸಂಘಟನೆ ಬೇಕು. ಅದುವೇ ನಮ್ಮ ಶಕ್ತಿ ಎಂದು ಹೇಳಿದರು. ಹಾಗೂ ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಒಂದು ಹೊಲಿಗೆ ಯಂತ್ರವನ್ನು ಕೊಡುವುದಾಗಿ ಹೇಳಿದರು. ಕ್ಷೇತ್ರದ ಕಾರ್ಯದರ್ಶಿ ಲಕ್ಷ್ಮೀ ರಾಘವೇಂದ್ರ ಬಂಕೇಶ್ವರ ಒಂದು ಹೊಲಿಗೆ ಯಂತ್ರ ಕೊಡುವುದಾಗಿ ಹೇಳಿದರು. ಕೋಶಾಧಿಕಾರಿ ಆಶಾ ದಿನೇಶ ಪ್ರಾಸ್ತಾವಿಕ ಮಾತನಾಡಿದರು. ಬೈಂದೂರು ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಮಹಾಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಾಕಲಾಗುವುದು. ನೋಂದಾಯಿತ 14 ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರ ಪಾವತಿಸಿ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಸಂಪೂರ್ಣ ಉಚಿತವಾಗಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಡೋಸ್ಗೆ ₹250 ನೀಡಬೇಕು. ಫಲಾನುಭವಿಗಳು ಲಸಿಕೆ ಪಡೆಯಲು ಆನ್ಲೈನ್ ಮೂಲಕ ದಿನಾಂಕ ಆಯ್ಕೆಮಾಡಿಕೊಳ್ಳಬಹುದು. ಲಸಿಕೆ ಪಡೆಯಲು ವಬ್ಸೈಟ್: https://selfregistration.cowin.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು. ನೆಟ್ವರ್ಕ್ ಸಮಸ್ಯೆ ಇರುವ ಗ್ರಾಮೀಣ ಭಾಗಗಳಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ತೋರಿಸಿ ಲಸಿಕಾ ಕೆಂದ್ರಕ್ಕೆ ಬಂದು ನೋಂದಣಿ ಮಾಡಿಸಿಕೊಂಡು ಅದೇ ದಿನ ಲಸಿಕೆ ಪಡೆಯಬಹುದು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ರಿಂದ 59 ವಯಸ್ಸಿನ 1,51,557 ಮಂದಿಗೆ ಲಸಿಕೆ ಹಾಕುವ ಗುರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮೀಸಲಿರಿಸಲಾಗಿದೆ. ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆರಿಸಲು ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ರೂ ಹಾಗೂ ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಸಲಾಗಿದೆ. ಇದನ್ನೂ ಓದಿ ► ರಾಜ್ಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ದೊರಕಿದ್ದೇನು? ಇಲ್ಲಿದೆ ವಿವರ – https://kundapraa.com/?p=45818 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಿಳಾ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಸದಸ್ಯೆ ಪ್ರಮಿಳಾ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವೈದ್ಯರು ಹಾಗೂ ಪ್ರೇರಣಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಸುಬ್ರಹ್ಮಣ್ಯ ಭಟ್ ಮಾತನಾಡಿ, ಮಹಿಳೆಯರ ಆರೋಗ್ಯ, ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಬದುಕು, ದೇಶಕ್ಕೆ ಮಹಿಳೆಯರ ಕೊಡುಗೆ ಮತ್ತು ಮಹಿಳೆಯರ ಕರ್ತವ್ಯ ಸ್ಥಾನಮಾನದ ಕುರಿತು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಮಹಿಳೆ ಗೀತಾ ಇವರ ಪಾದಪೂಜೆ ನಡೆಯಿತು. ಸ್ಯಾಕ್ಸೋಫೋನ್ ವಾದನದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ವೀಣಾ ದೇವಾಡಿಗ ಉಪ್ಪುಂದ ಇವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಡೆದ ಗ್ರಾಮ್ ಪಂಚಾಯತ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಮಹಿಳೆಯರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೌರಿ ದೇವಾಡಿಗ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತಿ ಪಡುವರಿ, ಕಾರ್ಯದರ್ಶಿ ಶಾಂತಿ, ಹಾಗೂ ಅನೇಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ಕರ್ನಾಟಕ ಬಜೆಟ್ನ ಒಟ್ಟು ಗಾತ್ರ 2.43 ಕೋಟಿ ರೂ.ಗಳಾಗಿದೆ. ಕಳೆದ ವರ್ಷ 2,33,137 ಕೋಟಿ ರೂ. ಗಾತ್ರದ ಬಜೆಟ್ನ್ನು ಮಂಡಿಸಿದ್ದರು. ಈ ಬಾರಿ ಅದಕ್ಕೆ 10,600 ಕೋಟಿ ರೂ.ಗಳಷ್ಟು ಹೆಚ್ಚುವರಿ ಸೇರ್ಪಡೆಯಾಗಿದೆ. ಇದರಲ್ಲಿ ಕರಾವಳಿ ಹಾಗೂ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ರಿಸಲು 10 ಕೋಟಿ ರೂ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ರಚನೆಗೆ ವಿಧೇಯಕ…
