Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದೂಧರ ದೇವಸ್ಥಾನ 75 ವರ್ಷಗಳಿಂದ ಗಂಗೊಳ್ಳಿ ಪರಿಸರದಲ್ಲಿ ಧರ್ಮ ಜಾಗೃತಿ ಮೂಡಿಸುತ್ತಾ ಬಂದಿದೆ. ಈಗ ಸರ್ಕಾರದ ಅನುದಾನ ಮತ್ತು ದಾನಿಗಳ ನೆರವು ಕ್ರೋಢೀಕರಿಸಿಕೊಂಡು ಸುಂದರವಾದ ಸಭಾಭವನ ನಿರ್ಮಿಸಿದೆ. ಇದಕ್ಕೆ ನಿವೇಶನ ದಾನ ಮಾಡಿರುವ ಉದ್ಯಮಿ ಎಚ್. ಗಣೇಶ ಕಾಮತ್ ಅಭಿನಂದನಾರ್ಹರು ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯಲ್ಲಿ ನಡೆದ ಇಂದೂಧರ ದೇವಸ್ಥಾನದ ಅಮೃತ ಮಹೋತ್ಸವ ವರ್ಷದ ಸಮಾರೋಪ ಸಮಾರಂಭ ಮತ್ತು ನೂತನ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಚ್.ಗಣೇಶ ಕಾಮತ್ ನೂತನ ಸಭಾಭವನ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಉಪಾದ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ, ನಿವೃತ್ತ ಮುಖ್ಯ ಶಿಕ್ಷಕ ಮುಡೂರ, ಗ್ರಾಮ ಪಂಚಾಯಿತಿ ಸದಸ್ಯ ಬಿ. ಗಣೇಶ ಶೆಣೈ, ಬಿ. ರಾಘವೇಂದ್ರ ಪೈ, ದೇವು ಶಿಪಾ, ಬಿ. ಲಕ್ಷ್ಮೀಕಾಂತ ಮಡಿವಾಳ, ಭಜನಾ ತರಬೇತಿದಾರ ಜಗದೀಶ ನಾಯಕವಾಡಿ, ಇಂದೂಧರ ಯುವಕ ಮಂಡಲದ ಗೌರವ ಅಧ್ಯಕ್ಷ ಗುರುರಾಜ್ ಬಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಶ್ವಿ ಚೆಸ್ ಸ್ಕೂಲ್‌ನಲ್ಲಿ ರ‍್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಿತು. ಮುಕ್ತ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಕಾರ್ತಿಕ್ ಪ್ರಥಮ, ಸೇಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ನಿಶಾಂತ್ ಡಿಸೋಜ್ ದ್ವಿತೀಯ ಸ್ಥಾನ, ದಾವಣಗೆರೆಯ ಯುರೋ ಆಂಗ್ಲ ಮಾಧ್ಯಮ ಶಾಲೆಯ ನಿಶ್ಚಲ್.ಜಿ.ಎಸ್ ತ್ರತೀಯ ಸ್ಥಾನಗಳಿಸಿದರು. ಗೋಲ್ಡನ್ ಮತ್ತು ಸಿಲ್ವರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ತೀರ್ಥಹಳ್ಳಿ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಪಾವನಿ.ಆರ್ ಪ್ರಥಮ ಸ್ಥಾನ, ಬೆಂಗಳೂರಿನ ದಿ ರಿಜೇನ್ಸಿ ಆಂಗ್ಲ ಮಾಧ್ಯಮ ಶಾಲೆಯ ಭುವನ್.ಜಿ.ಎಸ್ ದ್ವಿತೀಯ ಸ್ಥಾನ, ತೀರ್ಥಹಳ್ಳಿ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಗಾನವಿ. ಆರ್ ತೃತೀಯ ಸ್ಥಾನಗಳಿಸಿದರು. ಹಾಗೂ ಸ್ಟಾರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ದಾವಣಗೆರೆಯ ಆರೆಂಜ್ ಟೋಟ್ಸ್ ಇಂಟರನ್ಯಾಷನಲ್ ಪ್ರೀ ಸ್ಕೂಲ್‌ನ ಆಕಾಶ್.ಜಿ.ಎಸ್ ಪ್ರಥಮ ಸ್ಥಾನ, ಮಹಾರಾಷ್ಟ್ರದ ಪವರ್ ಪಬ್ಲಿಕ್ ಸ್ಕೂಲ್‌ನ ಸ್ವಸ್ತಿಕ್ ಶೇರೆಗಾರ್ ದ್ವಿತೀಯ ಸ್ಥಾನ, ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ ರಿ. ಇದರ ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ನಗರದಲ್ಲಿರುವ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ವಿಠಲವಾಡಿ, ಕೋಶಾಧಿಕಾರಿ ಶಿವಾನಂದ ಪೂಜಾರಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ಬಿಲ್ಲವ ವಹಿಸಿದ್ದು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ ಸ್ವಾಗತಿಸಿ, ನಿಕಟಪೂರ್ವ ಕೋಶಾಧಿಕಾರಿ ಟಿ.ಕೆ. ಕೋಟ್ಯಾನ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ದೇಶದಲ್ಲಿ ಶಾಂತಿಯ ವಾತಾವರಣ ಸ್ಥಾಪಿತವಾದರೆ ಉನ್ನತಿ ಸಾಧ್ಯ ಎಂದು ಗುಜರಾತ್‌ನ ರಾಕಥಾ ಶಿಬಿರದ ಮುಖ್ಯ ಅಯೋಜಕ ಸ್ವಾಮಿ ಧರ್ಮ ಬಂಧುಜಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಕಾಮರ್ಸ್ ಪ್ರೊಫೆ?ನಲ್ ವಿಭಾಗದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ಚಾಣಕ್ಯ-2021ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು. ಭಾರತದಲ್ಲಿ ಬೌತಿಕ ಸುರಕ್ಷತೆ ಹಾಗೂ ಆರ್ಥಿಕ ಸುರಕ್ಷತೆಯಿಂದ ಶಾಂತಿ ಸ್ಥಾಪಿಸಲು ಸಾಧ್ಯ. ಆರ್ಥಿಕವಾಗಿ ಭಾರತದಲ್ಲಿ ಯಾವುದೇ ಆಪತ್ತು ಬಂದೊದಗಿದರೆ ಆರ್ಥಿಕ ಕ್ಷೇತ್ರಕ್ಕೆ ಹೆಚ್ಚಿನ ನವುಂಟಾಗುತ್ತದೆ. ದೇಶದ ಉನ್ನತಿಯಗಬೇಕಾದರೆ ಸುರಕ್ಷತೆ ಮತ್ತು ಆರ್ಥಿಕ ಭದ್ರತೆಗೆ ಪ್ರಾಧಾನ್ಯತೆ ನೀಡಬೇಕು. ಪ್ರಸ್ತುತ ಜಾಗತಿಕವಾಗಿ ನಸಿಂಗ್, ಪ್ಲಂಬಿಂಗ್ ಹಾಗೂ ಕಾಪೆಂಟರ್ ವೃತ್ತಿಗಳಿಗೆ ದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಸ್ಟೀಲ್, ಟೆಕ್ಸ್ ಟೈಲ್ಸ್, ರಿಯಲ್ ಎಸ್ಟೇಟ್ ಮತ್ತು ವಜ್ರದ ವ್ಯಾಪರಗಳು ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿದೆ. ಜಾಗತೀಕರಣ ಖಾಸಗೀಕರಣ, ನಗರೀಕರಣ ಹಾಗೂ ಉದಾರೀಕರಣದೊಂದಿಗೆ ಭವಿ?ದಲ್ಲಿ ಒದಗಿ ಬರಬಹುದಾದ ಸೈಬರ್ ದಾಳಿ, ಜೈವಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಳದ ಆವರಣದಲ್ಲಿಯೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ತೆಕ್ಕಟ್ಟೆಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂಬ ಯುವಕ ತೆಕ್ಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಪೂಜಾರಿ ನಿತ್ಯವೂ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದ ಎನ್ನಲಾಗುತ್ತಿದೆ. ದೇವಸ್ಥಾನದ ಧಾರ್ಮಿಕ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದ್ದ ಎನ್ನಲಾಗಿದೆ. ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದು ಚಂದ್ರ ಪೂಜಾರಿ ಕಳೆದ ಕೆಲ ಸಮಯದಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ದೇವಸ್ಥಾನದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾವಿಯ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಘಟನೆ ಬೆಳಕಿಗೆ ಬಂದಿದೆ. ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಶನಿವಾರ ಸಾಧಕರಿಗೆ ಉತ್ತಮ ಸಾಧಕ ಪ್ರಶಸ್ತಿ ನೀಡಲಾಯಿತು. ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ (ಗೋಲ್ಡನ್ ಗ್ರೂಪ್), ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸನಾ ಶೆಟ್ಟಿ (ಡೈಮಂಡ್ ಗ್ರೂಪ್), ಅವರುಗಳ ಪರಿಶ್ರಮವನ್ನು ಮತ್ತು ಚೆಸ್ ಆಟವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೇಸಿಐ ಬೈಂದೂರು ಸಿಟಿ ಜೇಸಿರೆಟ್ ವಿಭಾಗ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮಹಿಳಾ ಸದಸ್ಯರಿಗೆ ಆಟೋಟ ಸ್ಪರ್ಧೆ ಶನಿವಾರ ಸಂಜೆ ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಐ ವಸಂತ ಕುಮಾರಿ ಕಲಾಂಗಣದಲ್ಲಿ ನಡೆಯಿತು. ಜೇಸಿಐ ಬೈಂದೂರು ಸಿಟಿಯ ಜೇಸಿರೆಟ್ ಅಧ್ಯಕ್ಷೆ ಜೇಸಿರೆಟ್ ಅನಿತಾ ಆರ್ ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಹಿಳೆಯರಾಗಲಿ, ಪುರುಷರಾಗಲಿ ಅಹಂ ಬಿಟ್ಟಾಗ ಸಮಾಜ ಸುಧಾರಣೆಯಾಗಲು ಸಾಧ್ಯ ಹೊರತು ಮಹಿಳಾ ಮೀಸಲಾತಿಯ ಹೋರಾಟದಿಂದ ಸಮಾನತೆಗಳಿಸಲು ಸಾಧ್ಯವಿಲ್ಲ. ಪ್ರತಿ ಮನೆಯಲ್ಲೂ ಸಮಾನತೆ ಆರಂಭಗೊಂಡರೆ ಮಾತ್ರ ಇದು ಯಶಸ್ಸುಗೊಳ್ಳಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಜೇಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷ ಜೇಸಿ ಎಚ್.ಜಿ.ಎಫ್ ಶ್ರೀಧರ ಆಚಾರ್ಯ, ವಲಯಾಧಿಕಾರಿ ಜೇಸಿ ಎಚ್.ಜಿ.ಎಫ್ ಮಣಿಕಂಠ ಎಸ್, ಘಟಕದ ಕಾರ್ಯದರ್ಶಿ ಜೇಸಿ ಎಚ್.ಜಿ.ಎಫ್ ಸವಿತಾ ದಿನೇಶ್ ಗಾಣಿಗ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ ಸಂಸ್ಥೆಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿಯಲ್ಲಿ ಪತ್ರಕರ್ತ ರಾಮ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪುಂದ ಜೇಸಿಯ ಅಧ್ಯಕ್ಷರಾದ ಪುರುಷೋತ್ತಮ್ ದೇವಾಡಿಗ, ಉಪಾಧ್ಯಕ್ಷರಾದ ಜಗದೀಶ್ ದೇವಾಡಿಗ, ಸದಸ್ಯರಾದ ಮಂಜುನಾಥ್ ದೇವಾಡಿಗ, ಶ್ರೀ ಗಣೇಶ್ ಗಾಣಿಗ, ಶಿವಾನಂದ ಗಾಣಿಗ, ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ರಾಮಕೃಷ್ಣ ಖಾರ್ವಿ, ಜಯಂತಿ ರಾಮ ಬಿಜೂರು ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ಎರಡುವರೆ ವರ್ಷದಲ್ಲಿ ಬೈಂದೂರು ಕ್ಷೇತ್ರಕ್ಕೆ ಸುಮಾರು 1680 ಕೋಟಿ ಅನುದಾನ ಬಂದಿದ್ದು, ಅಭಿವೃದ್ಧಿಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಬಹು ನಿರೀಕ್ಷಿತ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಸಮರ್ಪಕ ಸೇವೆ ದೊರೆತಿದೆ. ಈಗ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಮುಂದಿನ ಒಂದೂವರೆ ವರ್ಷದೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದ ಶಾಸಕ ಬಿ. ಎಂ. ಸುಮಾರ ಶೆಟ್ಟಿ ಹೇಳಿದರು. ಅವರು ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇವರಿಂದ ಈ ಹಿಂದೆ ಶಿಲಾನ್ಯಾಸಗೊಂಡಿರುವ ಸುಮಾರು 8.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ನೂತನ ಮಿನಿ ವಿಧಾನಸೌಧ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಬೈಂದೂರು, ಕೊಲ್ಲೂರು, ಮರವಂತೆಯನ್ನು ಗಮನದಲಿಟ್ಟುಕೊಂಡು ಪ್ರವಾಸೋದ್ಯಮಕ್ಕೆ ಯೋಜನೆಯನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ಬೈಂದೂರನ್ನು ಮಾದರಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾಡಲಾಗುತ್ತದೆ. ಕೇಂದ್ರ ಸರಕಾರದ ಜಲಜೀವನ ಯೋಜನೆಯಡಿ ಹಾಗೂ ರಾಜ್ಯ ಸರಕಾರದ ಸಹಾಯದೊಂದಿಗೆ ರೂ.550 ಕೋಟಿ ವೆಚ್ಚದಲ್ಲಿ ಬೈಂದೂರು ಕ್ಷೇತ್ರ ಪ್ರತಿ ಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುತ್ತದೆ. ಮಾನ್ಯ ಮುಖ್ಯಮಂತ್ರಿಗಳ ಹಾಗೂ ಸಂಸದರ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹನ್ನೊಂದು ವರ್ಷಗಳ ಹಿಂದೆ ಬೈಂದೂರಿನಲ್ಲಿ ಜನ್ಮ ತಾಳಿದ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋಪರೇಟಿವ್ ಬೈಂದೂರು ಪ್ರಧಾನ ಕಚೇರಿ ಮತ್ತು ವಿವಿಧ ಶಾಖೆಗಳ ಮೂಲಕ ತಾಲ್ಲೂಕು ವ್ಯಾಪ್ತಿಗೆ ತನ್ನ ಸೇವೆ ವಿಸ್ತರಿಸಿಕೊಂಡಿದೆ. ಇದಕ್ಕೆ ಅದರ ಸದಸ್ಯರು ಮತ್ತು ಗ್ರಾಹಕರು ಇರಿಸಿದ ವಿಶ್ವಾಸ ಮತ್ತು ನೀಡಿದ ಬೆಂಬಲ ಕಾರಣ ಎಂದು ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ನಾವುಂದದಲ್ಲಿ ನಡೆದ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋಪರೇಟಿವ್‌ನ ನಾವುಂದ ಶಾಖೆಯ ಗ್ರಾಹಕರ ಸಮಾವೇಶದಲ್ಲಿ ಎಸ್. ರಾಜು ಪೂಜಾರಿ ಮಾತನಾಡಿದರು. ಮೂರು ವರ್ಷಗಳ ಹಿಂದೆ ಆರಂಭವಾದ ನಾವುಂದ ಶಾಖೆ ರೂ 3 ಕೋಟಿ ಠೇವಣಿ ಸಂಗ್ರಹಿಸಿ, ರೂ 3.5 ಕೋಟಿ ಸಾಲ ನೀಡಿದೆ. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಆರ್ಥಿಕ ಉನ್ನತಿಗೆ ಶ್ರಮಿಸುತ್ತಿದೆ. ಅಗತ್ಯ ಇರುವವರಿಗೆ ಕ್ಷಿಪ್ರ ಸಾಲ ನೀಡಲಾಗುತ್ತಿದೆ. ಗ್ರಾಹಕ ಸೇವೆಗೆ ಆದ್ಯತೆ ನೀಡುತ್ತಿರುವುದರಿಂದ ಅವರ ಒಲವು ಗಳಿಸಿದೆ. ಇವೆಲ್ಲ ಕಾರಣಗಳಿಂದ ಸಂಸ್ಥೆ ಏರುಗತಿಯ ಬೆಳವಣಿಗೆ…

Read More