Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದೇಶದ ಪ್ರತಿಷ್ಠಿತ ಬಹುಆಯಾಮಗಳ ಸಂಶೋಧನೆಯಲ್ಲಿ ತೊಡಗಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ನಡುವೆ ನೂತನ ಒಡಂಬಡಿಕೆಗೆ ಸಹಿ ಹಾಕಲಾಯಿತು. ಆಳ್ವಾಸ್ ಸಂಸ್ಥೆಯ ಪರವಾಗಿ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾದ ಡಾ. ಶೈಲೇಶ್ ನಾಯಕ್, ಎನ್‌ಐಎಎಸ್ ಇಸ್ರೋ ಚೇರ್ ಪ್ರೊಫೆಸರ್ ಡಾ. ಪಿ.ಜಿ.ದಿವಾಕರ್ ಮತ್ತು ಎನ್‌ಐಎಎಸ್ ಆಡಳಿತ ಮುಖ್ಯಸ್ಥರು ಪಿ. ಶ್ರೀನಿವಾಸ್ ಐತಾಳ್ ಸಮ್ಮುಖದಲ್ಲಿ ಬೆಂಗಳೂರಿನ ಎನ್‌ಐಎಎಸ್ ಕೇಂದ್ರ ಕಚೇರಿಯಲ್ಲಿ ಒಡಂಬಡಿಕೆಯ ಒಪ್ಪಂದಕ್ಕೆ ಬರಲಾಯಿತು. ಐದು ವರ್ಷಗಳ ಈ ಒಪ್ಪಂದವು, ವಿವಿಧ ಆಯಾಮಗಳಲ್ಲಿ ಎರಡು ಸಂಸ್ಥೆಗಳ ನಡುವೆ ಪರಸ್ಪರ ಸಹಕಾರವನ್ನು ಒದಗಿಸಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪಾಂಡಿತ್ಯವನ್ನು ಉತ್ತೇಜಿಸಲು ಎರಡೂ ಸಂಸ್ಥೆಗಳ ನಡುವೆ ಸಹಯೋಗ ಮತ್ತು ತಾಂತ್ರಿಕ ವಿನಿಮಯ ಮಾಡುವುದು, ಎನ್‌ಐಎಎಸ್ ಹಾಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಸಂಶೋಧನೆಯಲ್ಲಿ ತೊಡಗಿಕೊಳ್ಳುವುದು, ಶಿಕ್ಷಣ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುತ್ತೂರಿನಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ 17 ರ ವಯೋಮಾನದ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ದ್ವೀತಿಯ ಸ್ಥಾನ ಪಡೆದ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿನಿ ಮಾನಸ ಕೋಟೇಶ್ವರ, ಜುಲೈನಲ್ಲಿ ಒಡಿಶಾದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ► ರಾಜ್ಯ ಮಟ್ಟದ ಚೆಸ್ ಪಂದ್ಯಾಟ: ಮೂವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ – https://kundapraa.com/?p=60216 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹೆರಂಜಾಲಿನ ಪ್ರಗತಿಪರ ಕೃಷಿಕರಾದ ಗಣಪ ದೇವಾಡಿಗ ಅವರ ಕೃಷಿಭೂಮಿಯಲ್ಲಿ ಸ್ವಯಂ ಪ್ರೇರಿತರಾಗಿ ತುಂತುರು ಮಳೆಯಲ್ಲಿ ಭತ್ತದ ಪೈರುಗಳನ್ನು ನಾಟಿಮಾಡಿ ಕೃಷಿ ಕಾಯಕದ ಅನುಭವ ಪಡೆದುಕೊಂಡರು. ಕೃಷಿಭೂಮಿಯ ಮಾಲಕರಿಂದ ಭತ್ತದ ನೇಜಿ ಹಾಗೂ ಕೃಷಿ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಆರ್ ಕೆ ಬಿಲ್ಲವ, ಶಿಕ್ಷಕಿಯರಾದ ರೋಸಮ್ಮ, ಗಾಯತ್ರಿ , ಪ್ರೀತಮ್ ಶೆಟ್ಟಿ, ಅನಿತಾ ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ, ಕತಾರ್: ದೋಹಾ ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ, ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗೌರವ ಅತಿಥಿಗಳಾದ ದೋಹಾ, ಕತಾರ್ ಸಂಸ್ಕೃತಿ ಮತ್ತು ಕಲಾ ಇಲಾಖೆಯ ಸಾಂಸ್ಕೃತಿಕ ಸಮಾಲೋಚಕ ಜಮಾಲ್ ಫಯೇಜ್ ಅವರು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಕತಾರ್ನಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ನ ಕನ್ನಡಿಗ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಸಮುದಾಯದಲ್ಲಿ ಹೆಸರುವಾಸಿಯಾಗಿದ್ದಾರೆ. ಕೋವಿಡ್ -19 ರ ಸವಾಲಿನ ಸಮಯದಲ್ಲಿ ಭಾರತೀಯ ಸಮುದಾಯಗಳನ್ನು ತಾಯ್ನಾಡಿಗೆ ಮರುಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಕಾರ್ಯದ ಜೊತೆಗೆ, ಅವರು ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕೆಲಸ ಮಾಡುವ ಇತರ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತಮ್ಮ ಸಾಂಸ್ಕೃತಿಕ ಸೇವೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾ ಮಟ್ಟದ ’ಸ್ವಚ್ಛ್ ವಿದ್ಯಾಲಯ ಪುರಸ್ಕಾರ 2021-22’ ಪ್ರಶಸ್ತಿಗೆ ಭಾಜನವಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪ್ರಶಸ್ತಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತೀ ಕ್ಷೇತ್ರದಲ್ಲೂ ಜ್ಞಾನ ವೃದ್ಧಿಯನ್ನು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರೂ ಸಹ ಸರಿಯಾದ ಮಾರ್ಗದರ್ಶನ ನೀಡುತ್ತಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳಾದ ಸುಧಾಕರ ಶೆಟ್ಟಿ, ಡಾ. ಜಯಕರ ಶೆಟ್ಟಿ, ಡಾ. ಕುಸುಮಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಜಯರಾಜ್ ಹೆಗ್ಡೆ, ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಸ್ವಾಗತಿಸಿ ಕಾರ‍್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.29: ರಾಜ್ಯದ ಯುವಜನತೆಗೆ ಅವರ ಕನಸಿನ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಅಗತ್ಯ ಮಾಹಿತಿ ಹಾಗೂ ನೆರವು ನೀಡುವ ಸ್ಕಿಲ್ ಕನೆಕ್ಟ್ ಪರಿಷ್ಕೃತ ಪೋರ್ಟಲ್ ಅನ್ನು ಜುಲೈ 15 ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃಧ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಅಶ್ವಥ್ ನಾರಾಯಣ ಹೇಳಿದರು. ಅವರು ಇಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಾಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉದ್ಯೋಗ ವಿನಿಮಯ ಕಚೇರಿ ಉಡುಪಿ ಹಾಗೂ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತ ಯುವ ಜನತೆ ಕರ್ನಾಟಕದಲ್ಲಿದ್ದಾರೆ. ಆದರೆ ಅವರಿಗೆ ಅವರ ಕನಸಿನ ಉದ್ಯೋಗ ಪಡೆಯಲು ಬೇಕಾದ ಅಗತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲಿನಲ್ಲಿ ಇತ್ತೀಚಿಗೆ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಂಚಾಲಕ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್ (624), ಅನಿರುದ್ದ್ ಎಸ್ ಹತ್ವಾರ್ (624), ಅಭಿಷೇಕ್ ಅಡಿಗ (623), ಆದಿತ್ಯ ಎಮ್ (623) ಸಿಂಧೂ ಕೆ.ಟಿ (622), ಛಾಯಾ (622,) ರಿಯಾ ಎಚ್ ಶೆಟ್ಟಿ (622), ಎಮ್ ಸೃಜನ್ (621), ಬಿ ಸುನಿಧಿ ಉಡುಪ ( 621), ಹರ್ಷಿತ ಡಿ.ಎಸ್ (620), ಅರ್ಪಿತ ಎನ್ (620), ಶಾನ್ವಿನ್ ರೋಯ್ಸ್ ಪಿರೇರಾ (620) ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಅವರು ಒಂದು ಒಳ್ಳೆಯ ಶೈಕ್ಷಣಿಕ ವಾತಾವರಣ ಜೊತೆಗೆ ಗುರಿಯ ಹಿಂದೆ ಗುರುವಿನ ಮಾರ್ಗದರ್ಶನದಿಂದ ತಮ್ಮನ್ನು ತಾವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್ ಪಡೆದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿಜ್ಞಾನ ವಿಭಾಗದಲ್ಲಿ ಮೈತ್ರೆಯಿ ೫ ನೇ ರ‍್ಯಾಂಕ್, ಮನೀಷ್ ಆರ್ ಹೆಬ್ಬಾರ್ ೭ ನೇ ರ‍್ಯಾಂಕ್, ಪ್ರಾಚಿ ಎನ್. ೯ನೇ ರ‍್ಯಾಂಕ್, ಯು. ಕಾರ್ತಿಕ್ ಐತಾಳ್ ೧೦ ನೇ ರ‍್ಯಾಂಕ್, ವಾಣಿಜ್ಯ ವಿಭಾಗದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ ೫ ನೇ ರ‍್ಯಾಂಕ್, ಶ್ರೀಶ ೬ ನೇ ರ‍್ಯಾಂಕ್, ಕೃತಿಕಾ ೭ ನೇ ರ‍್ಯಾಂಕ್, ಅದಿತಿ ಮತ್ತು ಶೃದ್ಧಾ ಬಿ ಸಾಲಿಯಾನ್ ೮ ನೇ ರ‍್ಯಾಂಕ್, ದೇವಾಡಿಗ ಅಂಜಲಿ ಚಂದ್ರ ಮತ್ತು ರಕ್ಷಿತಾ ಆನಂದ ಪೂಜಾರಿ ೯ ನೇ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಅಭಿನಂದನಾಪೂರ್ವಕವಾಗಿ ಶಾಲು ಹೊದಿಸಿ, ಫಲಪುಷ್ಪ, ಬೆಳ್ಳಿಲೋಟ, ಬೆಳ್ಳಿ ನಾಣ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ, ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲ್‌ಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೋಟ್೯ಗೇಟ್ ಎಜ್ಯುಕೇಶನ್‌ನ ಕಾಯ೯ದಶಿ೯ ನೀತಾ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಚಂದ್ರಾ ನಾಯಕ್ ಸ್ವಾಗತಿಸಿ , ವಂದಿಸಿದರು.

Read More