Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಸೋಮವಾರ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧ್ಯಕ್ಷ ಸುರೇಶ್ ಕುಯಿಲಾಡಿ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್, ದೇವಸ್ಥಾನದ ಆಡಳಿತಾಧಿಕಾರಿ ಮಂಜು ಬಿಲ್ಲವ, ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ ಹಾಗೂ ಇನ್ನಿತರರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇತ್ತೀಚೆಗೆ ಬಹಳಷ್ಟು ಜನಪ್ರಿಯತೆ ಪಡೆದಿರುವ ‘ಮನಿಕೆ ಮಾಗೆ ಹಿತೆ’ ಎಂಬ ಶ್ರೀಲಂಕನ್ ಹಾಡೊಂದರ ಕವರ್ ವರ್ಷನ್ ಅನ್ನು ಆಳ್ವಾಸ್ ಪದವಿ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಅಸೀಮ ದೋಳ ಅವರು ಹಾಡುವ ಮೂಲಕ ಯೂಟ್ಯೂಬ್ ನಲ್ಲಿ ಹೆಚ್ಚಿನ ವೀಕ್ಷಣೆ ಪಡೆದಿದ್ದಾರೆ. ಇತ್ತೀಚೆಗೆ ಯೋಹಾನಿ ಹಾಗೂ ಸತೀಶನ್ ಎಂಬುವವರು ಇದೇ ಹಾಡಿನ ಕವರ್ ವರ್ಷನ್ ಹಾಡಿ 80 ಮಿಲಿಯನ್ಗೂ ಅಧಿಕ ವೀಕ್ಷಕರನ್ನು ಸೆಳೆದಿದ್ದರು. ಇದೀಗ ಅಸೀಮ ಅವರಿಂದ ಪ್ರೇರೇಪಿತರಾಗಿ ಈ ಹಾಡನ್ನು ಹಾಡಿದ್ದಾರೆ. ಅಸೀಮ ಅವರ ಶ್ರೀಲಂಕಾದ ಸ್ನೇಹಿತೆಯರಾದ ತತ್ ಸರಣಿ ಮೆಂಡಿಸ್ ಹಾಗೂ ನಿಪುಣಿ ತಾರುಕ ಅವರ ಸಹಕಾರದೊಂದಿಗೆ ಹಾಡಿನ ಸಾಹಿತ್ಯವನ್ನು ಕಲಿತಿದ್ದಾರೆ. ಕವರ್ ಹಾಡಿನ ನಿರ್ದೇಶನವನ್ನು ಪ್ರಿಯಾಂಕ ಪೂಜಾರ್ ಅವರು ಮಾಡಿದ್ದು, ಗುಣೇಶ್ ಭಾರತೀಯ ಹಾಗೂ ಗ್ರೇಶಲ್ ಕಳಿಯಾಂಡ ಅವರು ಹಾಡಿನ ರೆಕಾರ್ಡಿಂಗ್ ಮತ್ತು ಚಿತ್ರೀಕರಣ ಮಾಡಿದ್ದಾರೆ. ಯೂಟ್ಯೂಬ್ ಅಪ್ಲೋಡ್ ಆದ ಎರಡೇ ದಿನದಲ್ಲಿ 12 ಸಾವಿರ ವೀಕ್ಷಣೆ ಪಡೆದ ಹಾಡಿನ ಈ ಸಾಧನೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇಲ್ಲಿನ ಪರಂಪರಾ ಕಲ್ಚರಲ್ ಫೌಂಡೇಶನ್ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ದೇಶಭಕ್ತಿ ಗೀತೆಗಳ ವಾಚನಾ ಸ್ಪರ್ಧೆಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 6ನೇ ತರಗತಿಯ ಕುಮಾರಿ ರಿಷಿಕಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಅವರು ಶಿಕ್ಷಕ ದಂಪತಿಗಳಾದ ಬೈಂದೂರಿನ ರೂಪ ಮತ್ತು ರಾಮ ದೇವಾಡಿಗರ ಪುತ್ರಿ. ಆಗಸ್ಟ್ 3ರಿಂದ 10ರವರೆಗೆ ನಡೆದ ಈ ದೇಶಭಕ್ತಿ ಗೀತೆಗಳ ವಾಚನಾ ಸ್ಪರ್ಧೆಯಲ್ಲಿ ಹೊರರಾಜ್ಯ ಮತ್ತು ಹೊರದೇಶಗಳ ಮಕ್ಕಳುಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹೆಸ್ಕತ್ತೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸ್ಕತ್ತೂರು ಒಕ್ಕೂಟ ಇವುಗಳ ವತಿಯಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ. , ಜಯರಾಮ ಶೆಟ್ಟಿ, ವಿಜಯಾ ಅರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ ನಾಯಕ್ , ಅಂಗನವಾಡಿ ಶಿಕ್ಷಕಿ ಶರ್ಮಿಳಾ ಅವರನ್ನು ಸನ್ಮಾನಿಸಲಾಯಿತು. ಹಾಗೂ ಹುಣಸೆಮಕ್ಕಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಕೊರ್ಗಿ ಗ್ರಾಮ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷರಾದ ಗಂಗೆ ಕುಲಾಲ ಅವರನ್ನು ಗೌರವಿಸಲಾಯಿತು. ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ವಿನುತಾ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹೆಸ್ಕತ್ತೂರು ಒಕ್ಕೂಟದ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಭಾನುವಾರ ನಾವುಂದದ ಸ್ಕಂದ ಸಭಾಭವನದಲ್ಲಿ ಬೈಂದೂರು ವಲಯ ಶಿಕ್ಷಕರ ದಿನಾಚರಣೆಯ ನಡೆಯಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಬೋಧನಾ ಕೌಶಲ, ಅನುಕರಣೀಯ ವ್ಯಕ್ತಿತ್ವ, ಮಾನವೀಯ ಅನುಕಂಪದೊಂದಿಗೆ ಕರ್ತವ್ಯನಿಷ್ಠೆ ಹೊಂದಿರುವ ಶಿಕ್ಷಕರನ್ನು ವಿದ್ಯಾರ್ಥಿಗಳು ಮೆಚ್ಚಿಕೊಳ್ಳುತ್ತಾರೆ ಮತ್ತು ಎಂದಿಗೂ ಮರೆಯುವುದಿಲ್ಲ. ಎಲ್ಲ ಶಿಕ್ಷಕರೂ ಹಾಗಾಗಲು ಪ್ರಯತ್ನಿಸಬೇಕು ಎಂದು ಹೇಳಿದರು. ಕೋವಿಡ್ ಕಾರಣದಿಂದ ಭೌತಿಕ ತರಗತಿಗಳು ನಡೆಯದೆ, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗಿದೆ. ಶಾಲೆ ಆರಂಭವಾದ ಒಂದು ವರ್ಷದೊಳಗೆ ಅದನ್ನು ಸಹಜ ಸ್ಥಿತಿಗೆ ತರಲು ಎಲ್ಲ ಶಿಕ್ಷಕರೂ ಶ್ರಮಿಸಬೇಕು ಎಂದು ಅವರು ಹೇಳಿದರು. ಶಿಕ್ಷಕರ ಮನವಿಗೆ ಸ್ಪಂದಿಸಿದ ಶಾಸಕರು, ಬೈಂದೂರಿನಲ್ಲಿ ಗುರು ಭವನ ನಿರ್ಮಿಸಲು ಕ್ಷೇತ್ರಾಭಿವೃದ್ಧಿ ನಿಧಿಯಿಂದ ಅನುದಾನ ನೀಡುವುದರ ಜತೆಗೆ ರೂ 50 ಸಾವಿರ ವೈಯಕ್ತಿಕ ದೇಣಿಗೆ ನೀಡುವುದಾಗಿ ಪ್ರಕಟಿಸಿದರು. ಕಳೆದ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ ಶಾಲಾ ಶಿಕ್ಷಕರಾದ ಆನಂದ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವಕ್ಕೆ ಪಾತ್ರರಾದ ಬರೆಗುಂಡಿ ಶ್ರೀನಿವಾಸ ಚಾತ್ರ (76 ) ಆನಾರೋಗ್ಯದ ಕಾರಣದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರರರಾಗಿದ್ದರು. ದೀರ್ಘಕಾಲದಿಂದ ಕೆಲ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅಗತ್ಯದ ಕಾಯಕ-ಕರ್ಮಗಳು ಯಥಾವತ್ತಾಗಿ ನೇರವೇರುವಂತೆ ನೋಡಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂ.ಕಾಮ್ ಜನರಲ್ ಹಾಗೂ ಐಬಿಎಮ್ ವಿಭಾಗದ ವತಿಯಿಂದ ತೃತೀಯ ವರ್ಷದ ಬಿ.ಕಾಂ. ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ನಡೆದ ರಾಷ್ಟ್ರೀಯ ಮಟ್ಟದ ನಾಲೆಜ್ ಕ್ವಿಝ್ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭರತ್ ಗಜಾನನ ಹೆಗ್ಡೆ ಪ್ರಥಮ ಬಹುಮಾನ ಪಡೆದಿದ್ದಾರೆ, ದ್ವಿತೀಯ ಸ್ಥಾನವನ್ನು ಮಣಿಪಾಲದ ಉಡುಪಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಟೂರಿಸಮ್ ಸಯನ್ಸ್‌ನ ಸುಮುಖ ಕೆ, ತೃತೀಯ ಸ್ಥಾನವನ್ನು ಆಳ್ವಾಸ್ ಕಾಲೇಜಿನ ಸೌಜನ್ಯ ಜೈನ್ ಪಡೆದಿದ್ದಾರೆ. ಕ್ವಿಝ್ ಸ್ಪರ್ಧೆಗೆ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿಭಾಗ ಸಂಯೋಜಕಿ ರೇಖಾ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಗುಜ್ಜಾಡಿಯ ಪತ್ರಿಕಾ ವಿತರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಹಿರಿಯ ಸದಸ್ಯರಾದ ಜನಾದನ ಪೂಜಾರಿ, ವಾಸುದೇವ ಶೇರುಗಾರ್ ಮತ್ತು ರೋಟರಿ ಸದಸ್ಯರು ಚಂದ್ರಶೇಖರ್ ಅವರನ್ನು ಸನ್ಮಾನಿಸಿದರು. ರೋಟರಿ ಸದಸ್ಯ ವಿಜಯ್ ಪೂಜಾರಿ ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ನ ಅಧ್ಯಕ್ಷ ರಾಜೇಶ್ ಎಂ. ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ‘ಜನರಲ್ ಕೆ ಎಸ್ ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬಹುದಾಗಿದೆಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.04: ಇಲ್ಲಿನ ಶ್ರೀ ಮೂಕಾಂಬಿಕಾ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳು ಇಂದಿನಿಂದ ಆಧಾರ್ ಕಾರ್ಡ್ ಹೊಂದಿರುವುದು ಹಾಗೂ ಕೇರಳ ರಾಜ್ಯದ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋವಿಡ್ 19 ಹಿನ್ನಲೆಯಲ್ಲಿ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಿರುವ ಸೂಚನೆ ಮೇರೆಗೆ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದಲ್ಲಿ ಸೆ.4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದ ವರೆಗೆ ದೇವಸ್ಥಾನದ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳ ಆಧರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲು ಹಾಗೂ ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ.

Read More