ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.5ರ ಭಾನುವಾರ 45 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 518 ನೆಗೆಟಿವ್: ಈ ತನಕ ಒಟ್ಟು 17,824 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,074 ನೆಗೆಟಿವ್, 1,322 ಪಾಸಿಟಿವ್ ಬಂದಿದ್ದು, 1,428 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 273 ನೆಗೆಟಿವ್, 16 ಪಾಸಿಟಿವ್ ಬಂದಿದೆ. ಒಟ್ಟು 1057 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 183 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,322 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1136 ಮಂದಿ ಬಿಡುಗಡೆಯಾಗಿದ್ದು, 183 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್. ಠಾಣೆ ಸೀಲ್ ಡೌನ್ – https://kundapraa.com/?p=39255 . ► ಬಿಜೆಪಿ ಬೈಂದೂರು ಮಂಡಲ: ವಿವಿಧ ಮೋರ್ಚಾಗಳ ಅಧ್ಯಕ್ಷ-ಕಾರ್ಯದರ್ಶಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತಿದೆ. ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರಿಗೆ ಕೋವಿಡ್-19 ತಪಾಸಣೆ ನಡೆಸಲಾಗಿತ್ತು. ವರದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಿ, ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹದಿನೈದು ದಿನಗಳ ಕಾಲ ಹೋಂ ಕ್ವಾರೆಂಟೈನ್ ಮಾಡಲಾಗುತ್ತದೆ. ಹೆಡ್ ಕಾನ್ಸ್ಟೇಬಲ್ ವಾಸವಿದ್ದ ಪೊಲೀಸ್ ಕ್ವಾಟ್ರಸ್ ಕೂಡ ಸೀಲ್ ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ತಾತ್ಕಾಲಿಕ ಠಾಣೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂದಾಪುರ ಉಪವಿಭಾಗ ಎಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆದಿದೆ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆಯಂತೆ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರ ಸಹಕಾರದೊಂದಿಗೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟ ಅವರು ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಯುವ ಮೋರ್ಚಾ: ಅಧ್ಯಕ್ಷ – ಸಂತೋಷ್ ಮಡಿವಾಳ ಬೈಂದೂರು ಪ್ರಧಾನ ಕಾರ್ಯದರ್ಶಿ – ಅನುಕ್ ಮೆಂಡನ್ ಹಿಂದುಳಿದ ಮೋರ್ಚಾ: ಅಧ್ಯಕ್ಷ- ಸಂತೋಷ್ ಪೂಜಾರಿ ಕರ್ಕುಂಜೆ ಪ್ರಧಾನ ಕಾರ್ಯದರ್ಶಿ – ಗಣೇಶ್ ದೇವಾಡಿಗ ಹೆರಂಜಾಲು /ಕುಂದಾಪ್ರ ಡಾಟ್ ಕಾಂ/ ಮಹಿಳಾ ಮೋರ್ಚಾ: ಅಧ್ಯಕ್ಷೆ – ಭಾಗೀರಥಿ ಸುರೇಶ್ ಪ್ರಧಾನ ಕಾರ್ಯದರ್ಶಿ – ಶಾಂತಿ ಖಾರ್ವಿ ಗಂಗೊಳ್ಳಿ ರೈತ ಮೋರ್ಚಾ: ಅಧ್ಯಕ್ಷ – ಸುಧಾಕರ ಕುಲಾಲ್ ಶಂಕರನಾರಾಯಣ ಪ್ರಧಾನ ಕಾರ್ಯದರ್ಶಿ – ರಾಜು ದೇವಾಡಿಗ ಕಿರಿಮಂಜೇಶ್ವರ ಎಸ್.ಸಿ ಮೋರ್ಚಾ:…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ತರುವ ಸಲುವಾಗಿ ರಾಜ್ಯ ಸರಕಾರ ಭಾನುವಾರ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದು ಅದರಂತೆ ಉಡುಪಿ ಜಿಲ್ಲೆಯಲ್ಲಿಯೂ ಅಗತ್ಯ ಸೇವೆ ಹೊರತುಪಡಿಸಿ ಬೇರೆ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಹೇಳಿದ್ದಾರೆ. ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಆದರೆ 50 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಸರಿಯಾದ ಮುಂಜಾಗೃತ ಕ್ರಮಗಳೊಂದಿಗೆ, ತಹಶೀಲ್ದಾರರ ಅನುಮತಿ ಪಡೆದು, ಕಾರ್ಯಕ್ರಮ ನಡೆಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್ ಗಳಿಗೆ ಅವಕಾಶವಿದೆ. ಈ ಕುರಿತು ಮಾಹಿತಿ ನೀಡಿದ ಅವರು, ಭಾನುವಾರ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ.ತರಕಾರಿ ಮೀನು-ಮಾಂಸ ಸೇರಿದಂತೆ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುತ್ತದೆ. ಅನವಶ್ಯಕವಾಗಿ ತಿರುಗಾಟವವರ ಮೇಲೆ ವಾಹನ ಮುಟ್ಟುಗೋಲು ಹಾಕಿ ಪ್ರಕರಣ ದಾಖಲಿಸುವ ಬಗ್ಗೆ ಜಿಲ್ಲಾಡಳಿತ ಎಚ್ಚರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.4ರ ಶನಿವಾರ 19 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 733 ನೆಗೆಟಿವ್: ಈ ತನಕ ಒಟ್ಟು 17,545 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 14,556 ನೆಗೆಟಿವ್, 1,277 ಪಾಸಿಟಿವ್ ಬಂದಿದ್ದು, 1,712 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 273 ನೆಗೆಟಿವ್, 16 ಪಾಸಿಟಿವ್ ಬಂದಿದೆ. ಒಟ್ಟು 1034 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 160 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,277 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1114 ಮಂದಿ ಬಿಡುಗಡೆಯಾಗಿದ್ದು, 160 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಶನಿವಾರ ಜರಗಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದು, ಸಿಕ್ಕ ಸಿಕ್ಕಲ್ಲಿ ವಿಲೇವಾಡಿ ಮಾಡುವುದು ಕಾನೂನುಬಾಹಿರವಾಗಿದ್ದು ಇಂತಹ ಕೃತ್ಯ ನಡೆಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ತ್ಯಾಜ್ಯ ನಿರ್ವಹಣೆಗೆ ಗ್ರಾಮದಲ್ಲಿ ಎಸ್ಎಲ್ಆರ್ಎಂ ಘಟಕ ಕಾರ್ಯನಿರ್ವಹಿಸುತ್ತಿದ್ದು, ಜನರು ಸಹಕಾರ ನೀಡಬೇಕು ಎಂದು ಹೇಳಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಗ್ರಾಪಂ ಸದಸ್ಯರು, ಸಿಬ್ಬಂದಿಗಳು, ಎಸ್ಎಲ್ಆರ್ಎಂ ಘಟಕದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೇಂದ್ರ ಜಂಟಿ ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಪ್ರತಿಭಟನೆಯ ಕರೆಯ ಮೇರೆಗೆ ಬೈಂದೂರು ತಾಲ್ಲೂಕು ಸಿಐಟಿಯು ಕಾರ್ಮಿಕ ಸಂಘದ ನೇತೃತ್ವದಲ್ಲಿ ಶುಕ್ರವಾರ ಇಲ್ಲಿನ ಸಿಐಟಿಯು ಕಚೇರಿಯಲ್ಲಿ ಕಾರ್ಮಿಕರ ಪ್ರತಿಭಟನಾ ಸಭೆ ನಡೆಯಿತು. ಬೈಂದೂರು ತಾಲ್ಲೂಕು ಸಿಐಟಿಯು ಮುಖಂಡರಾದ ಗಣೇಶ್ ತೊಂಡೆಮಕ್ಕಿ, ವೆಂಕಟೇಶ್ ಕೋಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲ ಕುಟುಂಬಗಳಿಗೆ ಆರು ತಿಂಗಳ ವರೆಗೆ ಮಾಸಿಕ ರೂ.೭೫೦೦ ಕೊರೊನಾ ಪರಿಹಾರ ನೀಡಬೇಕು, ಎಲ್ಲ ಕಾರ್ಮಿಕರಿಗೆ ಕನಿಷ್ಠ ೬ ತಿಂಗಳು ಉಚಿತ ಪಡಿತರ ವಿತರಿಸಬೇಕು, ಕೇಂದ್ರ ನೌಕರರಿಗೆ ಮತ್ತು ಪಿಂಚಣಿದಾರಿಗೆ ತುಟ್ಟಿಭತ್ಯೆ ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಕಾರ್ಮಿಕ ಕಾನೂನು ಬದಲಾವಣೆ, ವಿದ್ಯುತ್ ತಿದ್ದುಪಡಿ ಮಸೂದೆ-೨೦೨೦, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಕಾರ್ಪರೇಟ್ ಭೂಮಾಲೀಕರಿಗೆ ಅನುಕೂಲವಾಗುವ ರೈತ ವಿರೋಧಿ ನೀತಿ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗಳಿಗೆ ವಿರೋಧ ವ್ಯಕ್ತಪಡಿಸಿದರು. ಕೋವಿಡ್-೧೯ ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಪರಿಗಣಿಸಬೇಕು, ಮುಂಚೂಣಿ ಕೊರೊನಾ ವಾರಿಯರ್ಸ್ ಸೇವೆ ಖಾಯಂಗೊಳಿಸಿ ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ತಿರ್ಮಾನ ಕೈಗೊಂಡಂತೆ ಬೈಂದೂರು ಪಟ್ಟಣ ಪಂಚಾಯತ್ ಘೋಷಿಸಿದರೂ ಈ ವರೆಗೂ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಣೆ ಆಗಿಲ್ಲ. ಪಟ್ಟಣ ಪಂಚಾಯತ್ಗೆ ಅಗತ್ಯ ಕಾರ್ಯವನ್ನು ಶೀಘ್ರ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಬೈಂದೂರು ಶಾಸಕ ಬಿ ಎಮ್ ಸುಕುಮಾರ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಶಾಸಕರು ಪ್ರತಿಕ್ರಿಯಿಸಿ ಇನ್ನು ಕೆಲವೇ ದಿನಗಳಲ್ಲಿ ಸರಕಾರ ಅಧಿಸೂಚನೆ ಹೊರಡಿಸಲಿದೆ. ಅಲ್ಲದೇ ಅಗ್ನಿಶಾಮಕ ಠಾಣೆಗೆ ಬೈಂದೂರಿನಲ್ಲಿ ಈ ಹಿಂದೆ ಸ್ಥಳ ಗುರುತಿಸಿದ್ದು, ಶೀಘ್ರ ಆರಂಭಿಸುವುದು, ಮಿನಿವಿಧಾನ ಸೌಧ, ತಾಲೂಕು ಪಂಚಾಯತ್, ನ್ಯಾಯಾಲಯಗಳಿಗೆ ಸ್ಥಳವನ್ನು ಗುರುತಿಸಲಾಗಿದ್ದು ಎಲ್ಲಾ ಕೆಲಗಳು ಶೀಘ್ರ ಆಗಲಿದೆ ಎಂದು ಭರವಸೆ ನೀಡಿದ್ದಾರೆ. ಈ ನಿಯೋಗದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಗದೀಶ್ ಪಟವಾಲ್, ಕಾರ್ಯದರ್ಶಿ ಪ್ರಕಾಶ್ ಬೈಂದೂರು, ಸದಸ್ಯರಾದ ಸುಬ್ರಹ್ಮಣ್ಯ ಶೇಟ್, ನಾಗರಾಜ್ ಕಾರಂತ್ ಬಿ. ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.3ರ ಶುಕ್ರವಾರ 16 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 273 ನೆಗೆಟಿವ್: ಈ ತನಕ ಒಟ್ಟು 16,498 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 13,823 ನೆಗೆಟಿವ್, 1,258 ಪಾಸಿಟಿವ್ ಬಂದಿದ್ದು, 1,417 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 273 ನೆಗೆಟಿವ್, 16 ಪಾಸಿಟಿವ್ ಬಂದಿದೆ. ಒಟ್ಟು 1034 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 151 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,258 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1104 ಮಂದಿ ಬಿಡುಗಡೆಯಾಗಿದ್ದು, 151 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರಿಗೆ ಶುಕ್ರವಾರ ಕೋರೊನಾ ಪಾಸಿಟಿವ್ ದೃಢವಾಗಿದ್ದು, ಪಂಚಾಯತಿಯನ್ನು ಸೀಲ್ಡೌನ್ ಮಾಡಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಇಂದು ಪಾಸಿಟಿವ್ ದೃಢಪಟ್ಟಿದ್ದು, ಪಂಚಾಯತಿ ಸೀಲ್ಡೌನ್ ಮಾಡಿ ಎಲ್ಲಾ ಸಿಬ್ಬಂದಿಗಳಿಗೆ ಸಿಬ್ಬಂದಿಗಳಿಗೆ ಹೋಂ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಸೋಂಕಿನ ಮೂಲ ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡುವ ಕಾರ್ಯದಲ್ಲಿ ಆರೋಗ್ಯ ಸಿಬ್ಬಂದಿಗಳು ನಿರತರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ. ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಪಂಚಾಯತಿಯನ್ನು ಸ್ಯಾನಿಟೈನ್ ಮಾಡಿ ಮೂರು ದಿನಗಳ ಬಳಿಕ ಪುನರಾರಂಭಿಸಲಾಗುತ್ತದೆ ಎನ್ನಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಕುಂದಾಪುರ ತಾಲೂಕಿನ 44 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39187 . ► ಬೈಂದೂರು ತಾಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39183 .
