ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್– 19 ಸಂಕಷ್ಟದಲ್ಲಿ ಜನರಿರುವಾಗ ತೆರಿಗೆ ಏರಿಕೆ ಮಾಡಿರುವುದು ಜನ ವಿರೋಧಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷದ ಕಾಂಗ್ರೆಸ್ ಸದಸ್ಯರು, ಯಾವುದೇ ಕಾರಣಕ್ಕೂ ತೆರಿಗೆ ಏರಿಕೆ ಮಾಡಬಾರದು, ಒಂದು ವೇಳೆ ಏರಿಕೆ ಮಾಡಿದಲ್ಲಿ, ಜನರೊಂದಿಗೆ ಸೇರಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಸಭಾತ್ಯಾಗ ಮಾಡಿದ ಮಾಡಿದ ಘಟನೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಕುಂದಾಪುರದ ಪುರಸಭೆಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆ ಸಭೆಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ದಶಕದಿಂದ ಶಾಸ್ತ್ರಿ ಸರ್ಕಲ್ ಬಳಿ ಫ್ಲೈಓವರ್ ಕಾಮಗಾರಿ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆ ಕಂಪನಿಯ ಅಧಿಕಾರಿ ಇದೇ 31 ರೊಳಗೆ ಒಳಗೆ ಕಾಮಗಾರಿ ಮುಗಿಸಿ ಕೊಡುವ ಭರವಸೆ ವ್ಯಕ್ತಪಡಿಸಿದರು. ಫ್ಲೈಓವರ್ ಕಾಮಗಾರಿ ಹಾಗೂ ಜಲಸಿರಿ ಯೋಜನೆಗಳನ್ನು ಅವಧಿಯೊಳಗೆ ಪೂರೈಸದೇ ಇದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಜತೆಗೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗುತ್ತದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಆಯೋಜಿಸಿದ ‘ಪೋಕ್ಸೊ’ ಖಾಯಿದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೋಟ ಪೊಲೀಸ್ ಠಾಣೆಯ ಎ.ಎಸ್.ಐ ಮುಕ್ತಾ ಬಾಯಿ ಹಾಗೂ ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ ವಿವಿಧ ಖಾಯಿದೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಸೌತ್ ರೋಟರಿಯ ಉಪಾಧ್ಯಕ್ಷ ಕೆ.ಪಿ. ಭಟ್, ಯುವ ಪ್ರವರ್ತಕ ನರಸಿಂಹ ಗಾಣಿಗ, ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಅವಿತಾ ಕೊರೆಯಾ, ಡಾ. ದೀಪಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ ಸ್ವಾಗತಿಸಿ, ಶ್ವೇತಾ ವಂದಿಸಿ, ಕಾವ್ಯ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪೂರಕ ಕಲಿಕಾ ವಾತಾವರಣ ಕಲ್ಪಿಸಿದರೆ ಅವರು ಸಿಎ ಪರೀಕ್ಷೆಯನ್ನೂ ಅನಾಯಾಸವಾಗಿ ತೇರ್ಗಡೆ ಹೊಂದಬಲ್ಲರು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕಾಮರ್ಸ್ ಪ್ರೊಫೆಶನಲ್ ವಿಭಾಗದ ವತಿಯಿಂದ ಕುವೆಂಪು ಸಭಾಂಗಣದಲ್ಲಿ ನಡೆದ ಸಿಎ ಫೌಂಡೇಶನ್ ಹಾಗೂ ಸಿಎ ಇಂಟರ್ಮೀಡಿಯೇಟ್ ಕೋರ್ಸ್‌ಗಳ ಒರಿಯೆಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಂಡಾಗ ಉನ್ನತ ಕೋರ್ಸ್‌ಗಳ ಪಡೆಯಲು ಸಾಧ್ಯ ಈ ಮೂಲಕ ಔದ್ಯೋಗಿಕ ಅವಕಾಶಗಳು ಹೆಚ್ಚಾಗುತ್ತದೆ. ಜೀವನದಲ್ಲಿ ಉದ್ದೇಶವಿಲ್ಲದೆ ಶಿಕ್ಷಣ ಕಲಿಯಲು ಸಾಧ್ಯವಿಲ್ಲ ಕಠಿಣ ಪರಿಶ್ರಮವಿದ್ದಾಗ ಯಶಸ್ಸು ಸಾದ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ ಅಧ್ಯಕ್ಷ ಸಿಎ ಕೆ ಸುಬ್ರಮಣ್ಯ ಕಾಮತ್ ಮಾತನಾಡಿ, ಮನಸ್ಸಿನಲ್ಲಿ ಧೃಢವಾದ ಸಂಕಲ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ಪಟ್ಟಣ ಪಂಚಾಯತ್ ಗೆಜೆಟ್ ನೋಟಿಫಿಕೇಶನ್ ಆಗಿ ಆರು ತಿಂಗಳು ಕಳೆದಿದೆ. ಇದುವರೆಗೂ ನೂತನ ಪಟ್ಟಣ ಪಂಚಾಯತ್ ಗಡಿ ಗುರುತು ಕಾರ್ಯ ಪೂರ್ಣಗೊಳ್ಳಲಿಲ್ಲ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಏಕೆ ಗಮನ ಹರಿಸುತ್ತಿಲ್ಲ? ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನಾ ಪ್ರಾಧಿಕಾರದ 60-70ಕ್ಕೂ ಕಡತಗಳು ವಿಲೇವಾರಿಯಾಗದ ಹಿನ್ನೆಲೆಯಲ್ಲಿ ಜನರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗದೇ ಸಂಕಷ್ಟ ಎದುರಿಸುವಂತಾಗಿದೆ. ನೀವೇನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಟ್ಟಣ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೊಲ್ಲೂರಿನ ಅಮ್ಮ ವಸತಿ ಗೃಹದಲ್ಲಿ ಬುಧವಾರ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಯೋಜನಾ ಪ್ರಾಧಿಕಾರದ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ಶೀಘ್ರ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಮಹಿಳಾ ವೇದಿಕೆ ಮತು ಕುಂದಾಪುರದ ಪ್ರದಾನಮಂತ್ರಿ ಜನೌಷಧಿ ಕೇಂದ್ರ ಕುಂದಾಪುರ ರೆಡ್‌ಕ್ರಾಸ್‌ಘಟಕದ ಸಹಯೋಗದಲ್ಲಿಸುವಿಧಾ ಪ್ಯಾಡ್‌ಕ್ರಾಂತಿ ಆಚರಣೆ ಪ್ರಯುಕ್ತ ಉಚಿನ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕುಂದಾಪುರ ರೆಡ್‌ಕ್ರಾಸ್ ಘಟಕ ಸಭಾಪತಿಗಳಾದ ಕೆ.ಜಯಕರ ಶೆಟ್ಟಿ, ಮಹಿಳೆಯರಲ್ಲಿ ಪ್ಯಾಡ್ ಬಳಕೆ ಮುಖ್ಯವಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಅದರ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು. ಕುಂದಾಪುರದ ರೆಡ್‌ಕ್ರಾಸ್ ಘಟಕದ ಸದಸ್ಯೆ ಡಾ. ಸೋನಿ ಡಿಕೋಸ್ತಾ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಪ್ಯಾಡ್ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿಕಾಲೇಜಿನ ಮಹಿಳಾ ವೇದಿಕೆಯ ಸಂಚಾಲಕರಾದಡಾ.ಯಶವಂತಿ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಯಜುಶಾ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕೆಗಾ೯ಲ್ ಗ್ರಾಮದ ಮೊಗೇರಿಯ ಭಟ್ಟರ್ ಹಿತ್ಲ್ ಪ್ರದೇಶದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿಯ ಸ್ಥಳಕ್ಕೆ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾಯ೯ದಶಿ೯ ವೆಂಕಟೇಶ್ ಕೋಣಿ ಭೇಟಿ ನೀಡಿದರು ಅವರು ಮಾಚ್೯ 31ರಂದು ನಡೆಯುವ ಕೂಲಿಕಾರರ ‘ಬೇಡಿಕಾ ದಿನಾಚರಣೆ’ ರಾಜ್ಯವ್ಯಾಪಿ ಹೋರಾಟ ಕಾಯ೯ಕ್ರಮದ ಅಂಗವಾಗಿ ಬೈಂದೂರು ತಾಲೂಕು ಪಂಚಾಯತ್ ಕಚೇರಿ ಮುತ್ತಿಗೆ ಹೋರಾಟದಲ್ಲಿ ಕೂಲಿಕಾರರೆಲ್ಲರೂ ಭಾಗವಹಿಸಿ, ಯಶಸ್ವಗೊಳಿಸಬೇಕು ಎಂದು ಕರೆ ನೀಡಿದರು. ಏಳಜೀತ್ ಗ್ರಾಮದ ಕೃಷಿಕೂಲಿಕಾರರ ಸಂಘದ ಮುಖಂಡರಾದ ಸೀತಕ್ಕ ಭಾಗವಹಿಸಿ ಕೂಲಿಕಾರರಿಗೆ ಸಲಹೆ, ಮಾಗ೯ದಶ೯ನ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಈಚೆಗೆ ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ ಶ್ರಮದಾನ ನಡೆಸಿದರು. ಸಂಘದ ಉಪಾಧ್ಯಕ್ಷ ಸತೀಶ ಪೂಜಾರಿ ಗಂಗೊಳ್ಳಿ ಅವರ ಮನೆ, ಆವರಣ ಸಮತಟ್ಟು ಮಾಡಿ ಪೈಪ್ ಅಳವಡಿಸಲು ಜೆಸಿಬಿ ಯಂತ್ರ ಒದಗಿಸಿದ್ದರು. ವಿಶ್ವನಾಥ್ ಶ್ಯಾನುಬಾಗ್ ಸಹಕರಿಸಿದರು. ಸಂಘದ ಗೌರವಾಧ್ಯಕ್ಷ ದಯಾನಂದ ಬಳೆಗಾರ್, ಅಧ್ಯಕ್ಷ ರವಿ ಮಡಿವಾಳ, ಸದಸ್ಯರಾದ ಸೋಮಯ್ಯ ಬಿಲ್ಲವ, ಯೋಗೇಶ ಆಚಾರ್ಯ, ರಾಜು ಗಾಂಧಿನಗರ, ಅಣ್ಣಪ್ಪ ಖಾರ್ವಿ, ಗ್ರಾಮ ಪಂಚಾಯಿತಿ ಸದಸ್ಯೆ ಸುಜಾತಾ, ಇತರ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಅವರು ಶ್ರಮದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತ ಕಲಾರಂಗ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಪ್ರಭಾ ವಾರಪತ್ರಿಕೆ ಸಂಪಾದಕರಾದ ಯು.ಎಸ್.ಶೆಣೈ ಮಾತನಾಡಿ, ಅಂಕಗಳಿಕೆಯೊಂದೇ ವಿದ್ಯಾರ್ಥಿಗಳ ಸಾಧನೆಯಾಗಿರದೆ ಲಲಿತಕಲೆಗಳೊಂದಿಗೆ ಬದುಕನ್ನು ಸಂಭ್ರಮಿಸಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ಮಾತನಾಡಿ, ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಭವಿಷ್ಯದ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್ ಹಾಗೂ ಲಲಿತ ಕಲಾರಂಗದ ಸಂಘಟಕ ಡಾ.ಸಂದೀಪ್ ಕುಮಾರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಕಾವ್ಯಾ ಸ್ವಾಗತಿಸಿ, ವಿದ್ಯಾರ್ಥಿನಿ ಸಾಯಿಮಾ ವಂದಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಸಂಸ್ಥೆ ಹಾಗೂ ಸಾಲಿಗ್ರಾಮದ ವೀರಮಾರುತಿ ಜಿಮ್ ಸಹಯೋಗದಲ್ಲಿ ನಡೆದ 24 ನೇ ರಾಜ್ಯಮಟ್ಟದ ಜೂನಿಯರ್ ಮತ್ತು ಸಬ್ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು ಪ್ರಥಮ ಸ್ಥಾನ ಪಡೆದರೆ, ಪುರುಷರ ವಿಭಾಗದಲ್ಲಿ ರನ್ನರ್‌ಅಪ್ ಸ್ಥಾನ ಗಳಿಸಿದೆ. ಈ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆಯ ಪ್ರಸನ್ನ ಹೆಗ್ಡೆ ಹಾಗೂ ಶ್ರೇಯಾ ದಂಪತಿ ಪುತ್ರ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿರುವ ಇವರ ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್‌ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
